< אִיּוֹב 26 >
וַיַּ֥עַן אִיּ֗וֹב וַיֹּאמַֽר׃ | 1 |
ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:
מֶה־עָזַ֥רְתָּ לְלֹא־כֹ֑חַ ה֝וֹשַׁ֗עְתָּ זְר֣וֹעַ לֹא־עֹֽז׃ | 2 |
“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?
מַה־יָּ֭עַצְתָּ לְלֹ֣א חָכְמָ֑ה וְ֝תוּשִׁיָּ֗ה לָרֹ֥ב הוֹדָֽעְתָּ׃ | 3 |
ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.
אֶת־מִ֭י הִגַּ֣דְתָּ מִלִּ֑ין וְנִשְׁמַת־מִ֝י יָצְאָ֥ה מִמֶּֽךָּ׃ | 4 |
ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು?
הָרְפָאִ֥ים יְחוֹלָ֑לוּ מִתַּ֥חַת מַ֝֗יִם וְשֹׁכְנֵיהֶֽם׃ | 5 |
“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.
עָר֣וֹם שְׁא֣וֹל נֶגְדּ֑וֹ וְאֵ֥ין כְּ֝ס֗וּת לָֽאֲבַדּֽוֹן׃ (Sheol ) | 6 |
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ. (Sheol )
נֹטֶ֣ה צָפ֣וֹן עַל־תֹּ֑הוּ תֹּ֥לֶה אֶ֝֗רֶץ עַל־בְּלִי־מָֽה׃ | 7 |
ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ.
צֹרֵֽר־מַ֥יִם בְּעָבָ֑יו וְלֹא־נִבְקַ֖ע עָנָ֣ן תַּחְתָּֽם׃ | 8 |
ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.
מְאַחֵ֥ז פְּנֵי־כִסֵּ֑ה פַּרְשֵׁ֖ז עָלָ֣יו עֲנָנֽוֹ׃ | 9 |
ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ.
חֹֽק־חָ֭ג עַל־פְּנֵי־מָ֑יִם עַד־תַּכְלִ֖ית א֣וֹר עִם־חֹֽשֶׁךְ׃ | 10 |
ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ.
עַמּוּדֵ֣י שָׁמַ֣יִם יְרוֹפָ֑פוּ וְ֝יִתְמְה֗וּ מִגַּעֲרָתֽוֹ׃ | 11 |
ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ.
בְּ֭כֹחוֹ רָגַ֣ע הַיָּ֑ם וּ֝בִתְבוּנָת֗וֹ מָ֣חַץ רָֽהַב׃ | 12 |
ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.
בְּ֭רוּחוֹ שָׁמַ֣יִם שִׁפְרָ֑ה חֹֽלֲלָ֥ה יָ֝ד֗וֹ נָחָ֥שׁ בָּרִֽיחַ׃ | 13 |
ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ.
הֶן־אֵ֤לֶּה ׀ קְצ֬וֹת דְּרָכָ֗יו וּמַה־שֵּׁ֣מֶץ דָּ֭בָר נִשְׁמַע־בּ֑וֹ וְרַ֥עַם גְּ֝בוּרוֹתָ֗יו מִ֣י יִתְבּוֹנָֽן׃ ס | 14 |
ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?”