< אִיּוֹב 36 >
וַיֹּ֥סֶף אֱלִיה֗וּא וַיֹּאמַֽר׃ | 1 |
ಎಲೀಹು ಮುಂದುವರಿದು ಹೇಳಿದ್ದೇನೆಂದರೆ:
כַּתַּר־לִ֣י זְ֭עֵיר וַאֲחַוֶּ֑ךָּ כִּ֤י ע֖וֹד לֶאֱל֣וֹהַּ מִלִּֽים׃ | 2 |
“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.
אֶשָּׂ֣א דֵ֭עִי לְמֵרָח֑וֹק וּ֝לְפֹעֲלִ֗י אֶֽתֵּֽן־צֶֽדֶק׃ | 3 |
ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು.
כִּֽי־אָ֭מְנָם לֹא־שֶׁ֣קֶר מִלָּ֑י תְּמִ֖ים דֵּע֣וֹת עִמָּֽךְ׃ | 4 |
ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ.
הֶן־אֵ֣ל כַּ֭בִּיר וְלֹ֣א יִמְאָ֑ס כַּ֝בִּ֗יר כֹּ֣חַֽ לֵֽב׃ | 5 |
“ನೋಡು, ದೇವರು ಸರ್ವಶಕ್ತರು, ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ.
לֹא־יְחַיֶּ֥ה רָשָׁ֑ע וּמִשְׁפַּ֖ט עֲנִיִּ֣ים יִתֵּֽן׃ | 6 |
ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ.
לֹֽא־יִגְרַ֥ע מִצַּדִּ֗יק עֵ֫ינָ֥יו וְאֶת־מְלָכִ֥ים לַכִּסֵּ֑א וַיֹּשִׁיבֵ֥ם לָ֝נֶ֗צַח וַיִּגְבָּֽהוּ׃ | 7 |
ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.
וְאִם־אֲסוּרִ֥ים בַּזִּקִּ֑ים יִ֝לָּכְד֗וּן בְּחַבְלֵי־עֹֽנִי׃ | 8 |
ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,
וַיַּגֵּ֣ד לָהֶ֣ם פָּעֳלָ֑ם וּ֝פִשְׁעֵיהֶ֗ם כִּ֣י יִתְגַּבָּֽרוּ׃ | 9 |
ದೇವರು ಅವರ ಕೃತ್ಯವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು.
וַיִּ֣גֶל אָ֭זְנָם לַמּוּסָ֑ר וַ֝יֹּ֗אמֶר כִּֽי־יְשֻׁב֥וּן מֵאָֽוֶן׃ | 10 |
ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.
אִֽם־יִשְׁמְע֗וּ וְֽיַ֫עֲבֹ֥דוּ יְכַלּ֣וּ יְמֵיהֶ֣ם בַּטּ֑וֹב וּ֝שְׁנֵיהֶ֗ם בַּנְּעִימִֽים׃ | 11 |
ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.
וְאִם־לֹ֣א יִ֭שְׁמְעוּ בְּשֶׁ֣לַח יַעֲבֹ֑רוּ וְ֝יִגְוְע֗וּ כִּבְלִי־דָֽעַת׃ | 12 |
ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.
וְֽחַנְפֵי־לֵ֭ב יָשִׂ֣ימוּ אָ֑ף לֹ֥א יְ֝שַׁוְּע֗וּ כִּ֣י אֲסָרָֽם׃ | 13 |
“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.
תָּמֹ֣ת בַּנֹּ֣עַר נַפְשָׁ֑ם וְ֝חַיָּתָ֗ם בַּקְּדֵשִֽׁים׃ | 14 |
ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.
יְחַלֵּ֣ץ עָנִ֣י בְעָנְי֑וֹ וְיִ֖גֶל בַּלַּ֣חַץ אָזְנָֽם׃ | 15 |
ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.
וְאַ֤ף הֲסִיתְךָ֨ ׀ מִפִּי־צָ֗ר רַ֭חַב לֹא־מוּצָ֣ק תַּחְתֶּ֑יהָ וְנַ֥חַת שֻׁ֝לְחָנְךָ֗ מָ֣לֵא דָֽשֶׁן׃ | 16 |
“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.
וְדִין־רָשָׁ֥ע מָלֵ֑אתָ דִּ֖ין וּמִשְׁפָּ֣ט יִתְמֹֽכוּ׃ | 17 |
ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ.
כִּֽי־חֵ֭מָה פֶּן־יְסִֽיתְךָ֣ בְסָ֑פֶק וְרָב־כֹּ֝֗פֶר אַל־יַטֶּֽךָּ׃ | 18 |
ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.
הֲיַעֲרֹ֣ךְ שׁ֭וּעֲךָ לֹ֣א בְצָ֑ר וְ֝כֹ֗ל מַאֲמַצֵּי־כֹֽחַ׃ | 19 |
ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?
אַל־תִּשְׁאַ֥ף הַלָּ֑יְלָה לַעֲל֖וֹת עַמִּ֣ים תַּחְתָּֽם׃ | 20 |
ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.
הִ֭שָּׁמֶר אַל־תֵּ֣פֶן אֶל־אָ֑וֶן כִּֽי־עַל־זֶ֝֗ה בָּחַ֥רְתָּ מֵעֹֽנִי׃ | 21 |
ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.
הֶן־אֵ֭ל יַשְׂגִּ֣יב בְּכֹח֑וֹ מִ֖י כָמֹ֣הוּ מוֹרֶֽה׃ | 22 |
“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?
מִֽי־פָקַ֣ד עָלָ֣יו דַּרְכּ֑וֹ וּמִֽי־אָ֝מַ֗ר פָּעַ֥לְתָּ עַוְלָֽה׃ | 23 |
ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?
זְ֭כֹר כִּֽי־תַשְׂגִּ֣יא פָעֳל֑וֹ אֲשֶׁ֖ר שֹׁרְר֣וּ אֲנָשִֽׁים׃ | 24 |
ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.
כָּל־אָדָ֥ם חָֽזוּ־ב֑וֹ אֱ֝נ֗וֹשׁ יַבִּ֥יט מֵרָחֽוֹק׃ | 25 |
ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ.
הֶן־אֵ֣ל שַׂ֭גִּיא וְלֹ֣א נֵדָ֑ע מִסְפַּ֖ר שָׁנָ֣יו וְלֹא־חֵֽקֶר׃ | 26 |
ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.
כִּ֭י יְגָרַ֣ע נִטְפֵי־מָ֑יִם יָזֹ֖קּוּ מָטָ֣ר לְאֵדֽוֹ׃ | 27 |
“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.
אֲשֶֽׁר־יִזְּל֥וּ שְׁחָקִ֑ים יִ֝רְעֲפ֗וּ עֲלֵ֤י ׀ אָדָ֬ם רָֽב׃ | 28 |
ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ.
אַ֣ף אִם־יָ֭בִין מִפְרְשֵׂי־עָ֑ב תְּ֝שֻׁא֗וֹת סֻכָּתֽוֹ׃ | 29 |
ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?
הֵן־פָּרַ֣שׂ עָלָ֣יו אוֹר֑וֹ וְשָׁרְשֵׁ֖י הַיָּ֣ם כִּסָּֽה׃ | 30 |
ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ.
כִּי־בָ֭ם יָדִ֣ין עַמִּ֑ים יִֽתֶּן־אֹ֥כֶל לְמַכְבִּֽיר׃ | 31 |
ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.
עַל־כַּפַּ֥יִם כִּסָּה־א֑וֹר וַיְצַ֖ו עָלֶ֣יהָ בְמַפְגִּֽיעַ׃ | 32 |
ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.
יַגִּ֣יד עָלָ֣יו רֵע֑וֹ מִ֝קְנֶ֗ה אַ֣ף עַל־עוֹלֶֽה׃ | 33 |
ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ.