< אִיּוֹב 42 >
וַיַּ֖עַן אִיּ֥וֹב אֶת־יְהוָ֗ה וַיֹּאמַֽר׃ | 1 |
ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:
יָ֭דַעְתִּי כִּי־כֹ֣ל תּוּכָ֑ל וְלֹא־יִבָּצֵ֖ר מִמְּךָ֣ מְזִמָּֽה׃ | 2 |
“ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.
מִ֤י זֶ֨ה ׀ מַעְלִ֥ים עֵצָ֗ה בְּֽלִ֫י דָ֥עַת לָכֵ֣ן הִ֭גַּדְתִּי וְלֹ֣א אָבִ֑ין נִפְלָא֥וֹת מִ֝מֶּ֗נִּי וְלֹ֣א אֵדָֽע׃ | 3 |
‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ.
שְֽׁמַֽע־נָ֭א וְאָנֹכִ֣י אֲדַבֵּ֑ר אֶ֝שְׁאָלְךָ֗ וְהוֹדִיעֵֽנִי׃ | 4 |
“ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ.
לְשֵֽׁמַע־אֹ֥זֶן שְׁמַעְתִּ֑יךָ וְ֝עַתָּ֗ה עֵינִ֥י רָאָֽתְךָ׃ | 5 |
ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.
עַל־כֵּ֭ן אֶמְאַ֣ס וְנִחַ֑מְתִּי עַל־עָפָ֥ר וָאֵֽפֶר׃ פ | 6 |
ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.
וַיְהִ֗י אַחַ֨ר דִּבֶּ֧ר יְהוָ֛ה אֶת־הַדְּבָרִ֥ים הָאֵ֖לֶּה אֶל־אִיּ֑וֹב וַיֹּ֨אמֶר יְהוָ֜ה אֶל־אֱלִיפַ֣ז הַתֵּֽימָנִ֗י חָרָ֨ה אַפִּ֤י בְךָ֙ וּבִשְׁנֵ֣י רֵעֶ֔יךָ כִּ֠י לֹ֣א דִבַּרְתֶּ֥ם אֵלַ֛י נְכוֹנָ֖ה כְּעַבְדִּ֥י אִיּֽוֹב׃ | 7 |
ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.
וְעַתָּ֡ה קְחֽוּ־לָכֶ֣ם שִׁבְעָֽה־פָרִים֩ וְשִׁבְעָ֨ה אֵילִ֜ים וּלְכ֣וּ ׀ אֶל־עַבְדִּ֣י אִיּ֗וֹב וְהַעֲלִיתֶ֤ם עוֹלָה֙ בַּֽעַדְכֶ֔ם וְאִיּ֣וֹב עַבְדִּ֔י יִתְפַּלֵּ֖ל עֲלֵיכֶ֑ם כִּ֧י אִם־פָּנָ֣יו אֶשָּׂ֗א לְבִלְתִּ֞י עֲשׂ֤וֹת עִמָּכֶם֙ נְבָלָ֔ה כִּ֠י לֹ֣א דִבַּרְתֶּ֥ם אֵלַ֛י נְכוֹנָ֖ה כְּעַבְדִּ֥י אִיּֽוֹב׃ | 8 |
ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.
וַיֵּלְכוּ֩ אֱלִיפַ֨ז הַתֵּֽימָנִ֜י וּבִלְדַּ֣ד הַשּׁוּחִ֗י צֹפַר֙ הַנַּ֣עֲמָתִ֔י וַֽיַּעֲשׂ֔וּ כַּאֲשֶׁ֛ר דִּבֶּ֥ר אֲלֵיהֶ֖ם יְהוָ֑ה וַיִּשָּׂ֥א יְהוָ֖ה אֶת־פְּנֵ֥י אִיּֽוֹב׃ | 9 |
ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು.
וַֽיהוָ֗ה שָׁ֚ב אֶת־שְׁב֣וּת אִיּ֔וֹב בְּהִֽתְפַּֽלְל֖וֹ בְּעַ֣ד רֵעֵ֑הוּ וַ֧יֹּסֶף יְהוָ֛ה אֶת־כָּל־אֲשֶׁ֥ר לְאִיּ֖וֹב לְמִשְׁנֶֽה׃ | 10 |
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.
וַיָּבֹ֣אוּ אֵ֠לָיו כָּל־אֶחָ֨יו וְכָל־אַחְיוֹתָ֜יו וְכָל־יֹדְעָ֣יו לְפָנִ֗ים וַיֹּאכְל֨וּ עִמּ֣וֹ לֶחֶם֮ בְּבֵיתוֹ֒ וַיָּנֻ֤דוּ לוֹ֙ וַיְנַחֲמ֣וּ אֹת֔וֹ עַ֚ל כָּל־הָ֣רָעָ֔ה אֲשֶׁר־הֵבִ֥יא יְהוָ֖ה עָלָ֑יו וַיִּתְּנוּ־ל֗וֹ אִ֚ישׁ קְשִׂיטָ֣ה אֶחָ֔ת וְאִ֕ישׁ נֶ֥זֶם זָהָ֖ב אֶחָֽד׃ ס | 11 |
ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.
וַֽיהוָ֗ה בֵּרַ֛ךְ אֶת־אַחֲרִ֥ית אִיּ֖וֹב מֵרֵאשִׁת֑וֹ וַֽיְהִי־ל֡וֹ אַרְבָּעָה֩ עָשָׂ֨ר אֶ֜לֶף צֹ֗אן וְשֵׁ֤שֶׁת אֲלָפִים֙ גְּמַלִּ֔ים וְאֶֽלֶף־צֶ֥מֶד בָּקָ֖ר וְאֶ֥לֶף אֲתוֹנֽוֹת׃ | 12 |
ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.
וַֽיְהִי־ל֛וֹ שִׁבְעָ֥נָה בָנִ֖ים וְשָׁל֥וֹשׁ בָּנֽוֹת׃ | 13 |
ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು.
וַיִּקְרָ֤א שֵׁם־הָֽאַחַת֙ יְמִימָ֔ה וְשֵׁ֥ם הַשֵּׁנִ֖ית קְצִיעָ֑ה וְשֵׁ֥ם הַשְּׁלִישִׁ֖ית קֶ֥רֶן הַפּֽוּךְ׃ | 14 |
ಯೋಬನು ಮೊದಲನೆಯವಳಿಗೆ ಯೆಮೀಮಳೆಂದೂ ಎರಡನೆಯವಳಿಗೆ ಕೆಚೀಯಳೆಂದೂ ಮೂರನೆಯವಳಿಗೆ ಕೆರೆನ್ ಹಪ್ಪೂಕ್ ಎಂದೂ ಹೆಸರಿಟ್ಟನು.
וְלֹ֨א נִמְצָ֜א נָשִׁ֥ים יָפ֛וֹת כִּבְנ֥וֹת אִיּ֖וֹב בְּכָל־הָאָ֑רֶץ וַיִּתֵּ֨ן לָהֶ֧ם אֲבִיהֶ֛ם נַחֲלָ֖ה בְּת֥וֹךְ אֲחֵיהֶֽם׃ ס | 15 |
ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು.
וַיְחִ֤י אִיּוֹב֙ אַֽחֲרֵי־זֹ֔את מֵאָ֥ה וְאַרְבָּעִ֖ים שָׁנָ֑ה וַיִּרְאֶ֗ה אֶת־בָּנָיו֙ וְאֶת־בְּנֵ֣י בָנָ֔יו אַרְבָּעָ֖ה דֹּרֽוֹת׃ | 16 |
ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.
וַיָּ֣מָת אִיּ֔וֹב זָקֵ֖ן וּשְׂבַ֥ע יָמִֽים׃ | 17 |
ಅನಂತರ ಯೋಬನು, ದಿನತುಂಬಿದ ಮುದುಕನಾಗಿ ಸತ್ತನು.