< יְהוֹשֻעַ 10 >

וַיְהִי֩ כִשְׁמֹ֨עַ אֲדֹֽנִי־צֶ֜דֶק מֶ֣לֶךְ יְרוּשָׁלִַ֗ם כִּֽי־לָכַ֨ד יְהוֹשֻׁ֣עַ אֶת־הָעַי֮ וַיַּחֲרִימָהּ֒ כַּאֲשֶׁ֨ר עָשָׂ֤ה לִֽירִיחוֹ֙ וּלְמַלְכָּ֔הּ כֵּן־עָשָׂ֥ה לָעַ֖י וּלְמַלְכָּ֑הּ וְכִ֨י הִשְׁלִ֜ימוּ יֹשְׁבֵ֤י גִבְעוֹן֙ אֶת־יִשְׂרָאֵ֔ל וַיִּֽהְי֖וּ בְּקִרְבָּֽם׃ 1
ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.
וַיִּֽירְא֣וּ מְאֹ֔ד כִּ֣י עִ֤יר גְּדוֹלָה֙ גִּבְע֔וֹן כְּאַחַ֖ת עָרֵ֣י הַמַּמְלָכָ֑ה וְכִ֨י הִ֤יא גְדוֹלָה֙ מִן־הָעַ֔י וְכָל־אֲנָשֶׁ֖יהָ גִּבֹּרִֽים׃ 2
ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.
וַיִּשְׁלַ֨ח אֲדֹנִי־צֶ֜דֶק מֶ֣לֶךְ יְרוּשָׁלִַ֗ם אֶל־הוֹהָ֣ם מֶֽלֶךְ־חֶ֠בְרוֹן וְאֶל־פִּרְאָ֨ם מֶֽלֶךְ־יַרְמ֜וּת וְאֶל־יָפִ֧יעַ מֶֽלֶךְ־לָכִ֛ישׁ וְאֶל־דְּבִ֥יר מֶֽלֶךְ־עֶגְל֖וֹן לֵאמֹֽר׃ 3
ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು:
עֲלֽוּ־אֵלַ֣י וְעִזְרֻ֔נִי וְנַכֶּ֖ה אֶת־גִּבְע֑וֹן כִּֽי־הִשְׁלִ֥ימָה אֶת־יְהוֹשֻׁ֖עַ וְאֶת־בְּנֵ֥י יִשְׂרָאֵֽל׃ 4
“ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು.
וַיֵּאָסְפ֨וּ וַֽיַּעֲל֜וּ חֲמֵ֣שֶׁת ׀ מַלְכֵ֣י הָאֱמֹרִ֗י מֶ֣לֶךְ יְרוּשָׁלִַ֜ם מֶֽלֶךְ־חֶבְר֤וֹן מֶֽלֶךְ־יַרְמוּת֙ מֶֽלֶךְ־לָכִ֣ישׁ מֶֽלֶךְ־עֶגְל֔וֹן הֵ֖ם וְכָל־מַֽחֲנֵיהֶ֑ם וַֽיַּחֲנוּ֙ עַל־גִּבְע֔וֹן וַיִּֽלָּחֲמ֖וּ עָלֶֽיהָ׃ 5
ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.
וַיִּשְׁלְח֣וּ אַנְשֵׁי֩ גִבְע֨וֹן אֶל־יְהוֹשֻׁ֤עַ אֶל־הַֽמַּחֲנֶה֙ הַגִּלְגָּ֣לָה לֵאמֹ֔ר אַל־תֶּ֥רֶף יָדֶ֖יךָ מֵֽעֲבָדֶ֑יךָ עֲלֵ֧ה אֵלֵ֣ינוּ מְהֵרָ֗ה וְהוֹשִׁ֤יעָה לָּ֙נוּ֙ וְעָזְרֵ֔נוּ כִּ֚י נִקְבְּצ֣וּ אֵלֵ֔ינוּ כָּל־מַלְכֵ֥י הָאֱמֹרִ֖י יֹשְׁבֵ֥י הָהָֽר׃ 6
ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
וַיַּ֨עַל יְהוֹשֻׁ֜עַ מִן־הַגִּלְגָּ֗ל ה֚וּא וְכָל־עַ֤ם הַמִּלְחָמָה֙ עִמּ֔וֹ וְכֹ֖ל גִּבּוֹרֵ֥י הֶחָֽיִל׃ פ 7
ಆಗ ಯೆಹೋಶುವನು ಗಿಲ್ಗಾಲಿನಿಂದ, ಸಮಸ್ತ ಯುದ್ಧವೀರರೂ ಉಳಿದ ಪರಾಕ್ರಮಶಾಲಿಗಳ ಸಮೇತ ಹೊರಟನು.
וַיֹּ֨אמֶר יְהוָ֤ה אֶל־יְהוֹשֻׁ֙עַ֙ אַל־תִּירָ֣א מֵהֶ֔ם כִּ֥י בְיָדְךָ֖ נְתַתִּ֑ים לֹֽא־יַעֲמֹ֥ד אִ֛ישׁ מֵהֶ֖ם בְּפָנֶֽיךָ׃ 8
ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.
וַיָּבֹ֧א אֲלֵיהֶ֛ם יְהוֹשֻׁ֖עַ פִּתְאֹ֑ם כָּל־הַלַּ֕יְלָה עָלָ֖ה מִן־הַגִּלְגָּֽל׃ 9
ಆದ್ದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣಮಾಡಿ, ತಕ್ಷಣವೇ ಅವರ ಮೇಲೆ ದಾಳಿಮಾಡಿದನು.
וַיְהֻמֵּ֤ם יְהוָה֙ לִפְנֵ֣י יִשְׂרָאֵ֔ל וַיַּכֵּ֥ם מַכָּֽה־גְדוֹלָ֖ה בְּגִבְע֑וֹן וַֽיִּרְדְּפֵ֗ם דֶּ֚רֶךְ מַעֲלֵ֣ה בֵית־חוֹרֹ֔ן וַיַּכֵּ֥ם עַד־עֲזֵקָ֖ה וְעַד־מַקֵּדָֽה׃ 10
ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.
וַיְהִ֞י בְּנֻסָ֣ם ׀ מִפְּנֵ֣י יִשְׂרָאֵ֗ל הֵ֞ם בְּמוֹרַ֤ד בֵּית־חוֹרֹן֙ וַֽיהוָ֡ה הִשְׁלִ֣יךְ עֲלֵיהֶם֩ אֲבָנִ֨ים גְּדֹל֧וֹת מִן־הַשָּׁמַ֛יִם עַד־עֲזֵקָ֖ה וַיָּמֻ֑תוּ רַבִּ֗ים אֲשֶׁר־מֵ֙תוּ֙ בְּאַבְנֵ֣י הַבָּרָ֔ד מֵאֲשֶׁ֥ר הָרְג֛וּ בְּנֵ֥י יִשְׂרָאֵ֖ל בֶּחָֽרֶב׃ ס 11
ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
אָ֣ז יְדַבֵּ֤ר יְהוֹשֻׁעַ֙ לַֽיהוָ֔ה בְּי֗וֹם תֵּ֤ת יְהוָה֙ אֶת־הָ֣אֱמֹרִ֔י לִפְנֵ֖י בְּנֵ֣י יִשְׂרָאֵ֑ל וַיֹּ֣אמֶר ׀ לְעֵינֵ֣י יִשְׂרָאֵ֗ל שֶׁ֚מֶשׁ בְּגִבְע֣וֹן דּ֔וֹם וְיָרֵ֖חַ בְּעֵ֥מֶק אַיָּלֽוֹן׃ 12
ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”
וַיִּדֹּ֨ם הַשֶּׁ֜מֶשׁ וְיָרֵ֣חַ עָמָ֗ד עַד־יִקֹּ֥ם גּוֹי֙ אֹֽיְבָ֔יו הֲלֹא־הִ֥יא כְתוּבָ֖ה עַל־סֵ֣פֶר הַיָּשָׁ֑ר וַיַּעֲמֹ֤ד הַשֶּׁ֙מֶשׁ֙ בַּחֲצִ֣י הַשָּׁמַ֔יִם וְלֹא־אָ֥ץ לָב֖וֹא כְּי֥וֹם תָּמִֽים׃ 13
ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರ್ ಪುಸ್ತಕದಲ್ಲಿ ಬರೆದಿದೆ. ಹೀಗೆ ಸೂರ್ಯ ಅಸ್ತಮಿಸಲು ತ್ವರೆಮಾಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿತು.
וְלֹ֨א הָיָ֜ה כַּיּ֤וֹם הַהוּא֙ לְפָנָ֣יו וְאַחֲרָ֔יו לִשְׁמֹ֥עַ יְהוָ֖ה בְּק֣וֹל אִ֑ישׁ כִּ֣י יְהוָ֔ה נִלְחָ֖ם לְיִשְׂרָאֵֽל׃ פ 14
ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.
וַיָּ֤שָׁב יְהוֹשֻׁ֙עַ֙ וְכָל־יִשְׂרָאֵ֣ל עִמּ֔וֹ אֶל־הַֽמַּחֲנֶ֖ה הַגִּלְגָּֽלָה׃ 15
ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿದನು.
וַיָּנֻ֕סוּ חֲמֵ֖שֶׁת הַמְּלָכִ֣ים הָאֵ֑לֶּה וַיֵּחָבְא֥וּ בַמְּעָרָ֖ה בְּמַקֵּדָֽה׃ 16
ಆದರೆ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.
וַיֻּגַּ֖ד לִיהוֹשֻׁ֣עַ לֵאמֹ֑ר נִמְצְאוּ֙ חֲמֵ֣שֶׁת הַמְּלָכִ֔ים נֶחְבְּאִ֥ים בַּמְּעָרָ֖ה בְּמַקֵּדָֽה׃ 17
ಆ ಐದು ಮಂದಿ ಅರಸರು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಯಿತು.
וַיֹּ֣אמֶר יְהוֹשֻׁ֔עַ גֹּ֛לּוּ אֲבָנִ֥ים גְּדֹל֖וֹת אֶל־פִּ֣י הַמְּעָרָ֑ה וְהַפְקִ֧ידוּ עָלֶ֛יהָ אֲנָשִׁ֖ים לְשָׁמְרָֽם׃ 18
ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.
וְאַתֶּם֙ אַֽל־תַּעֲמֹ֔דוּ רִדְפוּ֙ אַחֲרֵ֣י אֹֽיְבֵיכֶ֔ם וְזִנַּבְתֶּ֖ם אוֹתָ֑ם אַֽל־תִּתְּנ֗וּם לָבוֹא֙ אֶל־עָ֣רֵיהֶ֔ם כִּ֧י נְתָנָ֛ם יְהוָ֥ה אֱלֹהֵיכֶ֖ם בְּיֶדְכֶֽם׃ 19
ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.
וַיְהִי֩ כְּכַלּ֨וֹת יְהוֹשֻׁ֜עַ וּבְנֵ֣י יִשְׂרָאֵ֗ל לְהַכּוֹתָ֛ם מַכָּ֥ה גְדוֹלָֽה־מְאֹ֖ד עַד־תֻּמָּ֑ם וְהַשְּׂרִידִים֙ שָׂרְד֣וּ מֵהֶ֔ם וַיָּבֹ֖אוּ אֶל־עָרֵ֥י הַמִּבְצָֽר׃ 20
ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು.
וַיָּשֻׁבוּ֩ כָל־הָעָ֨ם אֶל־הַמַּחֲנֶ֧ה אֶל־יְהוֹשֻׁ֛עַ מַקֵּדָ֖ה בְּשָׁל֑וֹם לֹֽא־חָרַ֞ץ לִבְנֵ֧י יִשְׂרָאֵ֛ל לְאִ֖ישׁ אֶת־לְשֹׁנֽוֹ׃ 21
ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ.
וַיֹּ֣אמֶר יְהוֹשֻׁ֔עַ פִּתְח֖וּ אֶת־פִּ֣י הַמְּעָרָ֑ה וְהוֹצִ֣יאוּ אֵלַ֗י אֶת־חֲמֵ֛שֶׁת הַמְּלָכִ֥ים הָאֵ֖לֶּה מִן־הַמְּעָרָֽה׃ 22
ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.
וַיַּ֣עֲשׂוּ כֵ֔ן וַיֹּצִ֣יאוּ אֵלָ֗יו אֶת־חֲמֵ֛שֶׁת הַמְּלָכִ֥ים הָאֵ֖לֶּה מִן־הַמְּעָרָ֑ה אֵ֣ת ׀ מֶ֣לֶךְ יְרוּשָׁלִַ֗ם אֶת־מֶ֤לֶךְ חֶבְרוֹן֙ אֶת־מֶ֣לֶךְ יַרְמ֔וּת אֶת־מֶ֥לֶךְ לָכִ֖ישׁ אֶת־מֶ֥לֶךְ עֶגְלֽוֹן׃ 23
ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
וַ֠יְהִי כְּֽהוֹצִיאָ֞ם אֶת־הַמְּלָכִ֣ים הָאֵלֶּה֮ אֶל־יְהוֹשֻׁעַ֒ וַיִּקְרָ֨א יְהוֹשֻׁ֜עַ אֶל־כָּל־אִ֣ישׁ יִשְׂרָאֵ֗ל וַ֠יֹּאמֶר אֶל־קְצִינֵ֞י אַנְשֵׁ֤י הַמִּלְחָמָה֙ הֶהָלְכ֣וּא אִתּ֔וֹ קִרְב֗וּ שִׂ֚ימוּ אֶת־רַגְלֵיכֶ֔ם עַֽל־צַוְּארֵ֖י הַמְּלָכִ֣ים הָאֵ֑לֶּה וַֽיִּקְרְב֔וּ וַיָּשִׂ֥ימוּ אֶת־רַגְלֵיהֶ֖ם עַל־צַוְּארֵיהֶֽם׃ 24
ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.
וַיֹּ֤אמֶר אֲלֵיהֶם֙ יְהוֹשֻׁ֔עַ אַל־תִּֽירְא֖וּ וְאַל־תֵּחָ֑תּוּ חִזְק֣וּ וְאִמְצ֔וּ כִּ֣י כָ֗כָה יַעֲשֶׂ֤ה יְהוָה֙ לְכָל־אֹ֣יְבֵיכֶ֔ם אֲשֶׁ֥ר אַתֶּ֖ם נִלְחָמִ֥ים אוֹתָֽם׃ 25
ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು.
וַיַּכֵּ֨ם יְהוֹשֻׁ֤עַ אַֽחֲרֵי־כֵן֙ וַיְמִיתֵ֔ם וַיִּתְלֵ֕ם עַ֖ל חֲמִשָּׁ֣ה עֵצִ֑ים וַיִּֽהְי֛וּ תְּלוּיִ֥ם עַל־הָעֵצִ֖ים עַד־הָעָֽרֶב׃ 26
ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.
וַיְהִ֞י לְעֵ֣ת ׀ בּ֣וֹא הַשֶּׁ֗מֶשׁ צִוָּ֤ה יְהוֹשֻׁ֙עַ֙ וַיֹּֽרִידוּם֙ מֵעַ֣ל הָעֵצִ֔ים וַיַּ֨שְׁלִכֻ֔ם אֶל־הַמְּעָרָ֖ה אֲשֶׁ֣ר נֶחְבְּאוּ־שָׁ֑ם וַיָּשִׂ֜מוּ אֲבָנִ֤ים גְּדֹלוֹת֙ עַל־פִּ֣י הַמְּעָרָ֔ה עַד־עֶ֖צֶם הַיּ֥וֹם הַזֶּֽה׃ פ 27
ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
וְאֶת־מַקֵּדָה֩ לָכַ֨ד יְהוֹשֻׁ֜עַ בַּיּ֣וֹם הַה֗וּא וַיַּכֶּ֣הָ לְפִי־חֶרֶב֮ וְאֶת־מַלְכָּהּ֒ הֶחֱרִ֣ם אוֹתָ֗ם וְאֶת־כָּל־הַנֶּ֙פֶשׁ֙ אֲשֶׁר־בָּ֔הּ לֹ֥א הִשְׁאִ֖יר שָׂרִ֑יד וַיַּ֙עַשׂ֙ לְמֶ֣לֶךְ מַקֵּדָ֔ה כַּאֲשֶׁ֥ר עָשָׂ֖ה לְמֶ֥לֶךְ יְרִיחֽוֹ׃ 28
ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.
וַיַּעֲבֹ֣ר יְ֠הוֹשֻׁעַ וְכָֽל־יִשְׂרָאֵ֥ל עִמּ֛וֹ מִמַּקֵּדָ֖ה לִבְנָ֑ה וַיִּלָּ֖חֶם עִם־לִבְנָֽה׃ 29
ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.
וַיִּתֵּן֩ יְהוָ֨ה גַּם־אוֹתָ֜הּ בְּיַ֣ד יִשְׂרָאֵ֘ל וְאֶת־מַלְכָּהּ֒ וַיַּכֶּ֣הָ לְפִי־חֶ֗רֶב וְאֶת־כָּל־הַנֶּ֙פֶשׁ֙ אֲשֶׁר־בָּ֔הּ לֹֽא־הִשְׁאִ֥יר בָּ֖הּ שָׂרִ֑יד וַיַּ֣עַשׂ לְמַלְכָּ֔הּ כַּאֲשֶׁ֥ר עָשָׂ֖ה לְמֶ֥לֶךְ יְרִיחֽוֹ׃ ס 30
ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
וַיַּעֲבֹ֣ר יְ֠הוֹשֻׁעַ וְכָל־יִשְׂרָאֵ֥ל עִמּ֛וֹ מִלִּבְנָ֖ה לָכִ֑ישָׁה וַיִּ֣חַן עָלֶ֔יהָ וַיִּלָּ֖חֶם בָּֽהּ׃ 31
ಅಲ್ಲಿಂದ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೋಗಿ, ಅದರ ಎದುರಿಗೆ ಪಾಳೆಯ ಮಾಡಿಕೊಂಡು, ಅದರ ಮೇಲೆ ಯುದ್ಧಮಾಡಿದನು.
וַיִּתֵּן֩ יְהוָ֨ה אֶת־לָכִ֜ישׁ בְּיַ֣ד יִשְׂרָאֵ֗ל וַֽיִּלְכְּדָהּ֙ בַּיּ֣וֹם הַשֵּׁנִ֔י וַיַּכֶּ֣הָ לְפִי־חֶ֔רֶב וְאֶת־כָּל־הַנֶּ֖פֶשׁ אֲשֶׁר־בָּ֑הּ כְּכֹ֥ל אֲשֶׁר־עָשָׂ֖ה לְלִבְנָֽה׃ פ 32
ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು.
אָ֣ז עָלָ֗ה הֹרָם֙ מֶ֣לֶךְ גֶּ֔זֶר לַעְזֹ֖ר אֶת־לָכִ֑ישׁ וַיַּכֵּ֤הוּ יְהוֹשֻׁ֙עַ֙ וְאֶת־עַמּ֔וֹ עַד־בִּלְתִּ֥י הִשְׁאִֽיר־ל֖וֹ שָׂרִֽיד׃ 33
ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.
וַיַּעֲבֹ֣ר יְ֠הוֹשֻׁעַ וְכָל־יִשְׂרָאֵ֥ל עִמּ֛וֹ מִלָּכִ֖ישׁ עֶגְלֹ֑נָה וַיַּחֲנ֣וּ עָלֶ֔יהָ וַיִּֽלָּחֲמ֖וּ עָלֶֽיהָ׃ 34
ಯೆಹೋಶುವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಲಾಕೀಷಿನಿಂದ ಎಗ್ಲೋನಿಗೆ ಹೋಗಿ, ಅದಕ್ಕೆದುರಾಗಿ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.
וַֽיִּלְכְּד֜וּהָ בַּיּ֤וֹם הַהוּא֙ וַיַּכּ֣וּהָ לְפִי־חֶ֔רֶב וְאֵת֙ כָּל־הַנֶּ֣פֶשׁ אֲשֶׁר־בָּ֔הּ בַּיּ֥וֹם הַה֖וּא הֶחֱרִ֑ים כְּכֹ֥ל אֲשֶׁר־עָשָׂ֖ה לְלָכִֽישׁ׃ פ 35
ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು.
וַיַּ֣עַל יְ֠הוֹשֻׁעַ וְכָֽל־יִשְׂרָאֵ֥ל עִמּ֛וֹ מֵעֶגְל֖וֹנָה חֶבְר֑וֹנָה וַיִּֽלָּחֲמ֖וּ עָלֶֽיהָ׃ 36
ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.
וַיִּלְכְּד֣וּהָ וַיַּכּֽוּהָ־לְפִי־חֶ֠רֶב וְאֶת־מַלְכָּ֨הּ וְאֶת־כָּל־עָרֶ֜יהָ וְאֶת־כָּל־הַנֶּ֤פֶשׁ אֲשֶׁר־בָּהּ֙ לֹֽא־הִשְׁאִ֣יר שָׂרִ֔יד כְּכֹ֥ל אֲשֶׁר־עָשָׂ֖ה לְעֶגְל֑וֹן וַיַּחֲרֵ֣ם אוֹתָ֔הּ וְאֶת־כָּל־הַנֶּ֖פֶשׁ אֲשֶׁר־בָּֽהּ׃ ס 37
ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು.
וַיָּ֧שָׁב יְהוֹשֻׁ֛עַ וְכָל־יִשְׂרָאֵ֥ל עִמּ֖וֹ דְּבִ֑רָה וַיִּלָּ֖חֶם עָלֶֽיהָ׃ 38
ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು.
וַֽיִּלְכְּדָ֞הּ וְאֶת־מַלְכָּ֤הּ וְאֶת־כָּל־עָרֶ֙יהָ֙ וַיַּכּ֣וּם לְפִי־חֶ֔רֶב וַֽיַּחֲרִ֙ימוּ֙ אֶת־כָּל־נֶ֣פֶשׁ אֲשֶׁר־בָּ֔הּ לֹ֥א הִשְׁאִ֖יר שָׂרִ֑יד כַּאֲשֶׁ֨ר עָשָׂ֜ה לְחֶבְר֗וֹן כֵּן־עָשָׂ֤ה לִדְבִ֙רָה֙ וּלְמַלְכָּ֔הּ וְכַאֲשֶׁ֥ר עָשָׂ֛ה לְלִבְנָ֖ה וּלְמַלְכָּֽהּ׃ 39
ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
וַיַּכֶּ֣ה יְהוֹשֻׁ֣עַ אֶת־כָּל־הָאָ֡רֶץ הָהָר֩ וְהַנֶּ֨גֶב וְהַשְּׁפֵלָ֜ה וְהָאֲשֵׁד֗וֹת וְאֵת֙ כָּל־מַלְכֵיהֶ֔ם לֹ֥א הִשְׁאִ֖יר שָׂרִ֑יד וְאֵ֤ת כָּל־הַנְּשָׁמָה֙ הֶחֱרִ֔ים כַּאֲשֶׁ֣ר צִוָּ֔ה יְהוָ֖ה אֱלֹהֵ֥י יִשְׂרָאֵֽל׃ 40
ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.
וַיַּכֵּ֧ם יְהוֹשֻׁ֛עַ מִקָּדֵ֥שׁ בַּרְנֵ֖עַ וְעַד־עַזָּ֑ה וְאֵ֛ת כָּל־אֶ֥רֶץ גֹּ֖שֶׁן וְעַד־גִּבְעֽוֹן׃ 41
ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.
וְאֵ֨ת כָּל־הַמְּלָכִ֤ים הָאֵ֙לֶּה֙ וְאֶת־אַרְצָ֔ם לָכַ֥ד יְהוֹשֻׁ֖עַ פַּ֣עַם אֶחָ֑ת כִּ֗י יְהוָה֙ אֱלֹהֵ֣י יִשְׂרָאֵ֔ל נִלְחָ֖ם לְיִשְׂרָאֵֽל׃ 42
ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.
וַיָּ֤שָׁב יְהוֹשֻׁ֙עַ֙ וְכָל־יִשְׂרָאֵ֣ל עִמּ֔וֹ אֶל־הַֽמַּחֲנֶ֖ה הַגִּלְגָּֽלָה׃ פ 43
ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು.

< יְהוֹשֻעַ 10 >