< יְהוֹשֻעַ 14 >

וְאֵ֛לֶּה אֲשֶׁר־נָחֲל֥וּ בְנֵֽי־יִשְׂרָאֵ֖ל בְּאֶ֣רֶץ כְּנָ֑עַן אֲשֶׁ֨ר נִֽחֲל֜וּ אוֹתָ֗ם אֶלְעָזָ֤ר הַכֹּהֵן֙ וִיהוֹשֻׁ֣עַ בִּן־נ֔וּן וְרָאשֵׁ֛י אֲב֥וֹת הַמַּטּ֖וֹת לִבְנֵ֥י יִשְׂרָאֵֽל׃ 1
ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
בְּגוֹרַ֖ל נַחֲלָתָ֑ם כַּאֲשֶׁ֨ר צִוָּ֤ה יְהוָה֙ בְּיַד־מֹשֶׁ֔ה לְתִשְׁעַ֥ת הַמַּטּ֖וֹת וַחֲצִ֥י הַמַּטֶּֽה׃ 2
ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
כִּֽי־נָתַ֨ן מֹשֶׁ֜ה נַחֲלַ֨ת שְׁנֵ֤י הַמַּטּוֹת֙ וַחֲצִ֣י הַמַּטֶּ֔ה מֵעֵ֖בֶר לַיַּרְדֵּ֑ן וְלַ֨לְוִיִּ֔ם לֹֽא־נָתַ֥ן נַחֲלָ֖ה בְּתוֹכָֽם׃ 3
ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
כִּֽי־הָי֧וּ בְנֵֽי־יוֹסֵ֛ף שְׁנֵ֥י מַטּ֖וֹת מְנַשֶּׁ֣ה וְאֶפְרָ֑יִם וְלֹֽא־נָתְנוּ֩ חֵ֨לֶק לַלְוִיִּ֜ם בָּאָ֗רֶץ כִּ֤י אִם־עָרִים֙ לָשֶׁ֔בֶת וּמִ֨גְרְשֵׁיהֶ֔ם לְמִקְנֵיהֶ֖ם וּלְקִנְיָנָֽם׃ 4
ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
כַּאֲשֶׁ֨ר צִוָּ֤ה יְהוָה֙ אֶת־מֹשֶׁ֔ה כֵּ֥ן עָשׂ֖וּ בְּנֵ֣י יִשְׂרָאֵ֑ל וַֽיַּחְלְק֖וּ אֶת־הָאָֽרֶץ׃ פ 5
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.
וַיִּגְּשׁ֨וּ בְנֵֽי־יְהוּדָ֤ה אֶל־יְהוֹשֻׁ֙עַ֙ בַּגִּלְגָּ֔ל וַיֹּ֣אמֶר אֵלָ֔יו כָּלֵ֥ב בֶּן־יְפֻנֶּ֖ה הַקְּנִזִּ֑י אַתָּ֣ה יָדַ֡עְתָּ אֶֽת־הַדָּבָר֩ אֲשֶׁר־דִּבֶּ֨ר יְהוָ֜ה אֶל־מֹשֶׁ֣ה אִישׁ־הָאֱלֹהִ֗ים עַ֧ל אֹדוֹתַ֛י וְעַ֥ל אֹדוֹתֶ֖יךָ בְּקָדֵ֥שׁ בַּרְנֵֽעַ׃ 6
ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
בֶּן־אַרְבָּעִ֨ים שָׁנָ֜ה אָנֹכִ֗י בִּ֠שְׁלֹחַ מֹשֶׁ֨ה עֶֽבֶד־יְהוָ֥ה אֹתִ֛י מִקָּדֵ֥שׁ בַּרְנֵ֖עַ לְרַגֵּ֣ל אֶת־הָאָ֑רֶץ וָאָשֵׁ֤ב אֹתוֹ֙ דָּבָ֔ר כַּאֲשֶׁ֖ר עִם־לְבָבִֽי׃ 7
ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
וְאַחַי֙ אֲשֶׁ֣ר עָל֣וּ עִמִּ֔י הִמְסִ֖יו אֶת־לֵ֣ב הָעָ֑ם וְאָנֹכִ֣י מִלֵּ֔אתִי אַחֲרֵ֖י יְהוָ֥ה אֱלֹהָֽי׃ 8
ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
וַיִּשָּׁבַ֣ע מֹשֶׁ֗ה בַּיּ֣וֹם הַהוּא֮ לֵאמֹר֒ אִם־לֹ֗א הָאָ֙רֶץ֙ אֲשֶׁ֨ר דָּרְכָ֤ה רַגְלְךָ֙ בָּ֔הּ לְךָ֨ תִֽהְיֶ֧ה לְנַחֲלָ֛ה וּלְבָנֶ֖יךָ עַד־עוֹלָ֑ם כִּ֣י מִלֵּ֔אתָ אַחֲרֵ֖י יְהוָ֥ה אֱלֹהָֽי׃ 9
ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
וְעַתָּ֗ה הִנֵּה֩ הֶחֱיָ֨ה יְהוָ֣ה ׀ אוֹתִי֮ כַּאֲשֶׁ֣ר דִּבֵּר֒ זֶה֩ אַרְבָּעִ֨ים וְחָמֵ֜שׁ שָׁנָ֗ה מֵ֠אָז דִּבֶּ֨ר יְהוָ֜ה אֶת־הַדָּבָ֤ר הַזֶּה֙ אֶל־מֹשֶׁ֔ה אֲשֶׁר־הָלַ֥ךְ יִשְׂרָאֵ֖ל בַּמִּדְבָּ֑ר וְעַתָּה֙ הִנֵּ֣ה אָנֹכִ֣י הַיּ֔וֹם בֶּן־חָמֵ֥שׁ וּשְׁמוֹנִ֖ים שָׁנָֽה׃ 10
೧೦ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
עוֹדֶ֨נִּי הַיּ֜וֹם חָזָ֗ק כַּֽאֲשֶׁר֙ בְּי֨וֹם שְׁלֹ֤חַ אוֹתִי֙ מֹשֶׁ֔ה כְּכֹ֥חִי אָ֖ז וּכְכֹ֣חִי עָ֑תָּה לַמִּלְחָמָ֖ה וְלָצֵ֥את וְלָבֽוֹא׃ 11
೧೧ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
וְעַתָּ֗ה תְּנָה־לִּי֙ אֶת־הָהָ֣ר הַזֶּ֔ה אֲשֶׁר־דִּבֶּ֥ר יְהוָ֖ה בַּיּ֣וֹם הַה֑וּא כִּ֣י אַתָּֽה־שָׁמַעְתָּ֩ בַיּ֨וֹם הַה֜וּא כִּֽי־עֲנָקִ֣ים שָׁ֗ם וְעָרִים֙ גְּדֹל֣וֹת בְּצֻר֔וֹת אוּלַ֨י יְהוָ֤ה אוֹתִי֙ וְה֣וֹרַשְׁתִּ֔ים כַּאֲשֶׁ֖ר דִּבֶּ֥ר יְהוָֽה׃ 12
೧೨ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
וַֽיְבָרְכֵ֖הוּ יְהוֹשֻׁ֑עַ וַיִּתֵּ֧ן אֶת־חֶבְר֛וֹן לְכָלֵ֥ב בֶּן־יְפֻנֶּ֖ה לְנַחֲלָֽה׃ 13
೧೩ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
עַל־כֵּ֣ן הָיְתָֽה־חֶ֠בְרוֹן לְכָלֵ֨ב בֶּן־יְפֻנֶּ֤ה הַקְּנִזִּי֙ לְֽנַחֲלָ֔ה עַ֖ד הַיּ֣וֹם הַזֶּ֑ה יַ֚עַן אֲשֶׁ֣ר מִלֵּ֔א אַחֲרֵ֕י יְהוָ֖ה אֱלֹהֵ֥י יִשְׂרָאֵֽל׃ 14
೧೪ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
וְשֵׁ֨ם חֶבְר֤וֹן לְפָנִים֙ קִרְיַ֣ת אַרְבַּ֔ע הָאָדָ֧ם הַגָּד֛וֹל בָּעֲנָקִ֖ים ה֑וּא וְהָאָ֥רֶץ שָׁקְטָ֖ה מִמִּלְחָמָֽה׃ פ 15
೧೫ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

< יְהוֹשֻעַ 14 >