< שֹׁפְטִים 4 >

וַיֹּסִ֙פוּ֙ בְּנֵ֣י יִשְׂרָאֵ֔ל לַעֲשׂ֥וֹת הָרַ֖ע בְּעֵינֵ֣י יְהוָ֑ה וְאֵה֖וּד מֵֽת׃ 1
ಏಹೂದನು ಮರಣಹೊಂದಿದ ನಂತರ ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾಗಿದ್ದರು.
וַיִּמְכְּרֵ֣ם יְהוָ֗ה בְּיַד֙ יָבִ֣ין מֶֽלֶךְ־כְּנַ֔עַן אֲשֶׁ֥ר מָלַ֖ךְ בְּחָצ֑וֹר וְשַׂר־צְבָאוֹ֙ סִֽיסְרָ֔א וְה֥וּא יוֹשֵׁ֖ב בַּחֲרֹ֥שֶׁת הַגּוֹיִֽם׃ 2
ಯೆಹೋವನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ಒಪ್ಪಿಸಿಕೊಟ್ಟನು. ಹರೋಷೆತ್ ಹಗೊಯಿಮ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಧಿಪತಿಯಾಗಿದ್ದನು.
וַיִּצְעֲק֥וּ בְנֵֽי־יִשְׂרָאֵ֖ל אֶל־יְהוָ֑ה כִּ֠י תְּשַׁ֨ע מֵא֤וֹת רֶֽכֶב־בַּרְזֶל֙ ל֔וֹ וְ֠הוּא לָחַ֞ץ אֶת־בְּנֵ֧י יִשְׂרָאֵ֛ל בְּחָזְקָ֖ה עֶשְׂרִ֥ים שָׁנָֽה׃ ס 3
ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
וּדְבוֹרָה֙ אִשָּׁ֣ה נְבִיאָ֔ה אֵ֖שֶׁת לַפִּיד֑וֹת הִ֛יא שֹׁפְטָ֥ה אֶת־יִשְׂרָאֵ֖ל בָּעֵ֥ת הַהִֽיא׃ 4
ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.
וְ֠הִיא יוֹשֶׁ֨בֶת תַּֽחַת־תֹּ֜מֶר דְּבוֹרָ֗ה בֵּ֧ין הָרָמָ֛ה וּבֵ֥ין בֵּֽית־אֵ֖ל בְּהַ֣ר אֶפְרָ֑יִם וַיַּעֲל֥וּ אֵלֶ֛יהָ בְּנֵ֥י יִשְׂרָאֵ֖ל לַמִּשְׁפָּֽט׃ 5
ಆಕೆ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರ ವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಕುಳಿತುಕೊಂಡಿರುತ್ತಿದ್ದಳು. ಇಸ್ರಾಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.
וַתִּשְׁלַ֗ח וַתִּקְרָא֙ לְבָרָ֣ק בֶּן־אֲבִינֹ֔עַם מִקֶּ֖דֶשׁ נַפְתָּלִ֑י וַתֹּ֨אמֶר אֵלָ֜יו הֲלֹ֥א צִוָּ֣ה ׀ יְהוָ֣ה אֱלֹהֵֽי־יִשְׂרָאֵ֗ל לֵ֤ךְ וּמָֽשַׁכְתָּ֙ בְּהַ֣ר תָּב֔וֹר וְלָקַחְתָּ֣ עִמְּךָ֗ עֲשֶׂ֤רֶת אֲלָפִים֙ אִ֔ישׁ מִבְּנֵ֥י נַפְתָּלִ֖י וּמִבְּנֵ֥י זְבֻלֽוּן׃ 6
ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.
וּמָשַׁכְתִּ֨י אֵלֶ֜יךָ אֶל־נַ֣חַל קִישׁ֗וֹן אֶת־סִֽיסְרָא֙ שַׂר־צְבָ֣א יָבִ֔ין וְאֶת־רִכְבּ֖וֹ וְאֶת־הֲמוֹנ֑וֹ וּנְתַתִּ֖יהוּ בְּיָדֶֽךָ׃ 7
ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.
וַיֹּ֤אמֶר אֵלֶ֙יהָ֙ בָּרָ֔ק אִם־תֵּלְכִ֥י עִמִּ֖י וְהָלָ֑כְתִּי וְאִם־לֹ֥א תֵלְכִ֛י עִמִּ֖י לֹ֥א אֵלֵֽךְ׃ 8
ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ” ಅನ್ನಲು
וַתֹּ֜אמֶר הָלֹ֧ךְ אֵלֵ֣ךְ עִמָּ֗ךְ אֶ֚פֶס כִּי֩ לֹ֨א תִֽהְיֶ֜ה תִּֽפְאַרְתְּךָ֗ עַל־הַדֶּ֙רֶךְ֙ אֲשֶׁ֣ר אַתָּ֣ה הוֹלֵ֔ךְ כִּ֣י בְֽיַד־אִשָּׁ֔ה יִמְכֹּ֥ר יְהוָ֖ה אֶת־סִֽיסְרָ֑א וַתָּ֧קָם דְּבוֹרָ֛ה וַתֵּ֥לֶך עִם־בָּרָ֖ק קֶֽדְשָׁה׃ 9
ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.
וַיַּזְעֵ֨ק בָּרָ֜ק אֶת־זְבוּלֻ֤ן וְאֶת־נַפְתָּלִי֙ קֶ֔דְשָׁה וַיַּ֣עַל בְּרַגְלָ֔יו עֲשֶׂ֥רֶת אַלְפֵ֖י אִ֑ישׁ וַתַּ֥עַל עִמּ֖וֹ דְּבוֹרָֽה׃ 10
೧೦ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಯಿಸಿದನು. ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು, ದೆಬೋರಳೂ ಅವರೊಂದಿಗೆ ಹೋದಳು.
וְחֶ֤בֶר הַקֵּינִי֙ נִפְרָ֣ד מִקַּ֔יִן מִבְּנֵ֥י חֹבָ֖ב חֹתֵ֣ן מֹשֶׁ֑ה וַיֵּ֣ט אָהֳל֔וֹ עַד־אֵל֥וֹן בְּצַעֲנַנִּ֖ים אֲשֶׁ֥ר אֶת־קֶֽדֶשׁ׃ 11
೧೧(ಕೇನ್ಯನಾದ) ಹೆಬೆರನು ಉಳಿದ ಕೇನ್ಯರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು. ಕೇನ್ಯರು ಮೋಶೆಯ ಮಾವನಾದ ಹೋಬಾಬನ ವಂಶದವರು. ಹೆಬೆರನು ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದ ವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.
וַיַּגִּ֖דוּ לְסִֽיסְרָ֑א כִּ֥י עָלָ֛ה בָּרָ֥ק בֶּן־אֲבִינֹ֖עַם הַר־תָּבֽוֹר׃ ס 12
೧೨ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
וַיַּזְעֵ֨ק סִֽיסְרָ֜א אֶת־כָּל־רִכְבּ֗וֹ תְּשַׁ֤ע מֵאוֹת֙ רֶ֣כֶב בַּרְזֶ֔ל וְאֶת־כָּל־הָעָ֖ם אֲשֶׁ֣ר אִתּ֑וֹ מֵחֲרֹ֥שֶׁת הַגּוֹיִ֖ם אֶל־נַ֥חַל קִישֽׁוֹן׃ 13
೧೩ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ, ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಅನ್ಯಜನರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.
וַתֹּאמֶר֩ דְּבֹרָ֨ה אֶל־בָּרָ֜ק ק֗וּם כִּ֣י זֶ֤ה הַיּוֹם֙ אֲשֶׁר֩ נָתַ֨ן יְהוָ֤ה אֶת־סִֽיסְרָא֙ בְּיָדֶ֔ךָ הֲלֹ֥א יְהוָ֖ה יָצָ֣א לְפָנֶ֑יךָ וַיֵּ֤רֶד בָּרָק֙ מֵהַ֣ר תָּב֔וֹר וַעֲשֶׂ֧רֶת אֲלָפִ֛ים אִ֖ישׁ אַחֲרָֽיו׃ 14
೧೪ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.
וַיָּ֣הָם יְ֠הוָה אֶת־סִֽיסְרָ֨א וְאֶת־כָּל־הָרֶ֧כֶב וְאֶת־כָּל־הַֽמַּחֲנֶ֛ה לְפִי־חֶ֖רֶב לִפְנֵ֣י בָרָ֑ק וַיֵּ֧רֶד סִֽיסְרָ֛א מֵעַ֥ל הַמֶּרְכָּבָ֖ה וַיָּ֥נָס בְּרַגְלָֽיו׃ 15
೧೫ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.
וּבָרָ֗ק רָדַ֞ף אַחֲרֵ֤י הָרֶ֙כֶב֙ וְאַחֲרֵ֣י הַֽמַּחֲנֶ֔ה עַ֖ד חֲרֹ֣שֶׁת הַגּוֹיִ֑ם וַיִּפֹּ֞ל כָּל־מַחֲנֵ֤ה סִֽיסְרָא֙ לְפִי־חֶ֔רֶב לֹ֥א נִשְׁאַ֖ר עַד־אֶחָֽד׃ 16
೧೬ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.
וְסִֽיסְרָא֙ נָ֣ס בְּרַגְלָ֔יו אֶל־אֹ֣הֶל יָעֵ֔ל אֵ֖שֶּׁת חֶ֣בֶר הַקֵּינִ֑י כִּ֣י שָׁל֗וֹם בֵּ֚ין יָבִ֣ין מֶֽלֶךְ־חָצ֔וֹר וּבֵ֕ין בֵּ֖ית חֶ֥בֶר הַקֵּינִֽי׃ 17
೧೭ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.
וַתֵּצֵ֣א יָעֵל֮ לִקְרַ֣את סִֽיסְרָא֒ וַתֹּ֣אמֶר אֵלָ֗יו סוּרָ֧ה אֲדֹנִ֛י סוּרָ֥ה אֵלַ֖י אַל־תִּירָ֑א וַיָּ֤סַר אֵלֶ֙יהָ֙ הָאֹ֔הֱלָה וַתְּכַסֵּ֖הוּ בַּשְּׂמִיכָֽה׃ 18
೧೮ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
וַיֹּ֧אמֶר אֵלֶ֛יהָ הַשְׁקִינִי־נָ֥א מְעַט־מַ֖יִם כִּ֣י צָמֵ֑אתִי וַתִּפְתַּ֞ח אֶת־נֹ֧אוד הֶחָלָ֛ב וַתַּשְׁקֵ֖הוּ וַתְּכַסֵּֽהוּ׃ 19
೧೯ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ಬಾಯಾರಿಕೆಯಾಗಿದೆ” ಅಂದನು. ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಲು ಕೊಟ್ಟು ಅವನನ್ನು ಪುನಃ ಮುಚ್ಚಿದಳು.
וַיֹּ֣אמֶר אֵלֶ֔יהָ עֲמֹ֖ד פֶּ֣תַח הָאֹ֑הֶל וְהָיָה֩ אִם־אִ֨ישׁ יָב֜וֹא וּשְׁאֵלֵ֗ךְ וְאָמַ֛ר הֲיֵֽשׁ־פֹּ֥ה אִ֖ישׁ וְאָמַ֥רְתְּ אָֽיִן׃ 20
೨೦ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯನಿದ್ದಾನೆಯೇ ಎಂದು ವಿಚಾರಿಸಿದರೆ’ ಇಲ್ಲ ಎಂದು ಹೇಳು” ಎಂದು ಹೇಳಿದನು.
וַתִּקַּ֣ח יָעֵ֣ל אֵֽשֶׁת־חֶ֠בֶר אֶת־יְתַ֨ד הָאֹ֜הֶל וַתָּ֧שֶׂם אֶת־הַמַּקֶּ֣בֶת בְּיָדָ֗הּ וַתָּב֤וֹא אֵלָיו֙ בַּלָּ֔אט וַתִּתְקַ֤ע אֶת־הַיָּתֵד֙ בְּרַקָּת֔וֹ וַתִּצְנַ֖ח בָּאָ֑רֶץ וְהֽוּא־נִרְדָּ֥ם וַיָּ֖עַף וַיָּמֹֽת׃ 21
೨೧ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
וְהִנֵּ֣ה בָרָק֮ רֹדֵ֣ף אֶת־סִֽיסְרָא֒ וַתֵּצֵ֤א יָעֵל֙ לִקְרָאת֔וֹ וַתֹּ֣אמֶר ל֔וֹ לֵ֣ךְ וְאַרְאֶ֔ךָּ אֶת־הָאִ֖ישׁ אֲשֶׁר־אַתָּ֣ה מְבַקֵּ֑שׁ וַיָּבֹ֣א אֵלֶ֔יהָ וְהִנֵּ֤ה סִֽיסְרָא֙ נֹפֵ֣ל מֵ֔ת וְהַיָּתֵ֖ד בְּרַקָּתֽוֹ׃ 22
೨೨ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ಕಣ್ತಲೆಯಲ್ಲಿ ಗೂಟವು ಜಡಿದಿತ್ತು.
וַיַּכְנַ֤ע אֱלֹהִים֙ בַּיּ֣וֹם הַה֔וּא אֵ֖ת יָבִ֣ין מֶֽלֶךְ־כְּנָ֑עַן לִפְנֵ֖י בְּנֵ֥י יִשְׂרָאֵֽל׃ 23
೨೩ಆ ದಿನದಲ್ಲಿ ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದನು.
וַתֵּ֜לֶךְ יַ֤ד בְּנֵֽי־יִשְׂרָאֵל֙ הָל֣וֹךְ וְקָשָׁ֔ה עַ֖ל יָבִ֣ין מֶֽלֶךְ־כְּנָ֑עַן עַ֚ד אֲשֶׁ֣ר הִכְרִ֔יתוּ אֵ֖ת יָבִ֥ין מֶֽלֶךְ־כְּנָֽעַן׃ פ 24
೨೪ಇಸ್ರಾಯೇಲರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.

< שֹׁפְטִים 4 >