< אֵיכָה 5 >
זְכֹ֤ר יְהוָה֙ מֶֽה־הָ֣יָה לָ֔נוּ הַבִּ֖יטָה וּרְאֵ֥ה אֶת־חֶרְפָּתֵֽנוּ׃ | 1 |
ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.
נַחֲלָתֵ֙נוּ֙ נֶֽהֶפְכָ֣ה לְזָרִ֔ים בָּתֵּ֖ינוּ לְנָכְרִֽים׃ | 2 |
ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.
יְתוֹמִ֤ים הָיִ֙ינוּ֙ וְאֵ֣ין אָ֔ב אִמֹּתֵ֖ינוּ כְּאַלְמָנֽוֹת׃ | 3 |
ನಾವು ಅನಾಥರು, ತಂದೆ ಇಲ್ಲದವರು, ನಮ್ಮ ತಾಯಂದಿರು ವಿಧವೆಯರು.
מֵימֵ֙ינוּ֙ בְּכֶ֣סֶף שָׁתִ֔ינוּ עֵצֵ֖ינוּ בִּמְחִ֥יר יָבֹֽאוּ׃ | 4 |
ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.
עַ֤ל צַוָּארֵ֙נוּ֙ נִרְדָּ֔פְנוּ יָגַ֖עְנוּ וְלֹ֥א הֽוּנַֽח לָֽנוּ׃ | 5 |
ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.
מִצְרַ֙יִם֙ נָתַ֣נּוּ יָ֔ד אַשּׁ֖וּר לִשְׂבֹּ֥עַֽ לָֽחֶם׃ | 6 |
ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.
אֲבֹתֵ֤ינוּ חָֽטְאוּ֙ וְאֵינָ֔ם וַאֲנַ֖חְנוּ עֲוֹנֹתֵיהֶ֥ם סָבָֽלְנוּ׃ | 7 |
ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
עֲבָדִים֙ מָ֣שְׁלוּ בָ֔נוּ פֹּרֵ֖ק אֵ֥ין מִיָּדָֽם׃ | 8 |
ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.
בְּנַפְשֵׁ֙נוּ֙ נָבִ֣יא לַחְמֵ֔נוּ מִפְּנֵ֖י חֶ֥רֶב הַמִּדְבָּֽר׃ | 9 |
ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.
עוֹרֵ֙נוּ֙ כְּתַנּ֣וּר נִכְמָ֔רוּ מִפְּנֵ֖י זַלְעֲפ֥וֹת רָעָֽב׃ | 10 |
ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
נָשִׁים֙ בְּצִיּ֣וֹן עִנּ֔וּ בְּתֻלֹ֖ת בְּעָרֵ֥י יְהוּדָֽה׃ | 11 |
ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.
שָׂרִים֙ בְּיָדָ֣ם נִתְל֔וּ פְּנֵ֥י זְקֵנִ֖ים לֹ֥א נֶהְדָּֽרוּ׃ | 12 |
ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.
בַּחוּרִים֙ טְח֣וֹן נָשָׂ֔אוּ וּנְעָרִ֖ים בָּעֵ֥ץ כָּשָֽׁלוּ׃ | 13 |
ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.
זְקֵנִים֙ מִשַּׁ֣עַר שָׁבָ֔תוּ בַּחוּרִ֖ים מִנְּגִינָתָֽם׃ | 14 |
ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.
שָׁבַת֙ מְשׂ֣וֹשׂ לִבֵּ֔נוּ נֶהְפַּ֥ךְ לְאֵ֖בֶל מְחֹלֵֽנוּ׃ | 15 |
ನಮ್ಮ ಹೃದಯಾನಂದವು ತೀರಿತು. ನಮ್ಮ ನರ್ತನವು ಶೋಕವಾಗಿ ಮಾರ್ಪಟ್ಟಿತು.
נָֽפְלָה֙ עֲטֶ֣רֶת רֹאשֵׁ֔נוּ אֽוֹי־נָ֥א לָ֖נוּ כִּ֥י חָטָֽאנוּ׃ | 16 |
ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.
עַל־זֶ֗ה הָיָ֤ה דָוֶה֙ לִבֵּ֔נוּ עַל־אֵ֖לֶּה חָשְׁכ֥וּ עֵינֵֽינוּ׃ | 17 |
ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
עַ֤ל הַר־צִיּוֹן֙ שֶׁשָּׁמֵ֔ם שׁוּעָלִ֖ים הִלְּכוּ־בֽוֹ׃ פ | 18 |
ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.
אַתָּ֤ה יְהוָה֙ לְעוֹלָ֣ם תֵּשֵׁ֔ב כִּסְאֲךָ֖ לְדֹ֥ר וָדֽוֹר׃ | 19 |
ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು.
לָ֤מָּה לָנֶ֙צַח֙ תִּשְׁכָּחֵ֔נוּ תַּֽעַזְבֵ֖נוּ לְאֹ֥רֶךְ יָמִֽים׃ | 20 |
ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?
הֲשִׁיבֵ֨נוּ יְהוָ֤ה ׀ אֵלֶ֙יךָ֙ וְֽנָשׁ֔וּבָה חַדֵּ֥שׁ יָמֵ֖ינוּ כְּקֶֽדֶם׃ | 21 |
ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.
כִּ֚י אִם־מָאֹ֣ס מְאַסְתָּ֔נוּ קָצַ֥פְתָּ עָלֵ֖ינוּ עַד־מְאֹֽד׃ | 22 |
ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?