< וַיִּקְרָא 15 >

וַיְדַבֵּ֣ר יְהוָ֔ה אֶל־מֹשֶׁ֥ה וְאֶֽל־אַהֲרֹ֖ן לֵאמֹֽר׃ 1
ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
דַּבְּרוּ֙ אֶל־בְּנֵ֣י יִשְׂרָאֵ֔ל וַאֲמַרְתֶּ֖ם אֲלֵהֶ֑ם אִ֣ישׁ אִ֗ישׁ כִּ֤י יִהְיֶה֙ זָ֣ב מִבְּשָׂר֔וֹ זוֹב֖וֹ טָמֵ֥א הֽוּא׃ 2
“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.
וְזֹ֛את תִּהְיֶ֥ה טֻמְאָת֖וֹ בְּזוֹב֑וֹ רָ֣ר בְּשָׂר֞וֹ אֶת־זוֹב֗וֹ אֽוֹ־הֶחְתִּ֤ים בְּשָׂרוֹ֙ מִזּוֹב֔וֹ טֻמְאָת֖וֹ הִֽוא׃ 3
ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ:
כָּל־הַמִּשְׁכָּ֗ב אֲשֶׁ֨ר יִשְׁכַּ֥ב עָלָ֛יו הַזָּ֖ב יִטְמָ֑א וְכָֽל־הַכְּלִ֛י אֲשֶׁר־יֵשֵׁ֥ב עָלָ֖יו יִטְמָֽא׃ 4
“‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.
וְאִ֕ישׁ אֲשֶׁ֥ר יִגַּ֖ע בְּמִשְׁכָּב֑וֹ יְכַבֵּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 5
ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
וְהַיֹּשֵׁב֙ עַֽל־הַכְּלִ֔י אֲשֶׁר־יֵשֵׁ֥ב עָלָ֖יו הַזָּ֑ב יְכַבֵּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 6
ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು.
וְהַנֹּגֵ֖עַ בִּבְשַׂ֣ר הַזָּ֑ב יְכַבֵּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 7
“‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು.
וְכִֽי־יָרֹ֛ק הַזָּ֖ב בַּטָּה֑וֹר וְכִבֶּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 8
“‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
וְכָל־הַמֶּרְכָּ֗ב אֲשֶׁ֨ר יִרְכַּ֥ב עָלָ֛יו הַזָּ֖ב יִטְמָֽא׃ 9
“‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು.
וְכָל־הַנֹּגֵ֗עַ בְּכֹל֙ אֲשֶׁ֣ר יִהְיֶ֣ה תַחְתָּ֔יו יִטְמָ֖א עַד־הָעָ֑רֶב וְהַנּוֹשֵׂ֣א אוֹתָ֔ם יְכַבֵּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 10
ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು.
וְכֹ֨ל אֲשֶׁ֤ר יִגַּע־בּוֹ֙ הַזָּ֔ב וְיָדָ֖יו לֹא־שָׁטַ֣ף בַּמָּ֑יִם וְכִבֶּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 11
“‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
וּכְלִי־חֶ֛רֶשׂ אֲשֶׁר־יִגַּע־בּ֥וֹ הַזָּ֖ב יִשָּׁבֵ֑ר וְכָל־כְּלִי־עֵ֔ץ יִשָּׁטֵ֖ף בַּמָּֽיִם׃ 12
“‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.
וְכִֽי־יִטְהַ֤ר הַזָּב֙ מִזּוֹב֔וֹ וְסָ֨פַר ל֜וֹ שִׁבְעַ֥ת יָמִ֛ים לְטָהֳרָת֖וֹ וְכִבֶּ֣ס בְּגָדָ֑יו וְרָחַ֧ץ בְּשָׂר֛וֹ בְּמַ֥יִם חַיִּ֖ים וְטָהֵֽר׃ 13
“‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು.
וּבַיּ֣וֹם הַשְּׁמִינִ֗י יִֽקַּֽח־לוֹ֙ שְׁתֵּ֣י תֹרִ֔ים א֥וֹ שְׁנֵ֖י בְּנֵ֣י יוֹנָ֑ה וּבָ֣א ׀ לִפְנֵ֣י יְהוָ֗ה אֶל־פֶּ֙תַח֙ אֹ֣הֶל מוֹעֵ֔ד וּנְתָנָ֖ם אֶל־הַכֹּהֵֽן׃ 14
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
וְעָשָׂ֤ה אֹתָם֙ הַכֹּהֵ֔ן אֶחָ֣ד חַטָּ֔את וְהָאֶחָ֖ד עֹלָ֑ה וְכִפֶּ֨ר עָלָ֧יו הַכֹּהֵ֛ן לִפְנֵ֥י יְהוָ֖ה מִזּוֹבֽוֹ׃ ס 15
ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
וְאִ֕ישׁ כִּֽי־תֵצֵ֥א מִמֶּ֖נּוּ שִׁכְבַת־זָ֑רַע וְרָחַ֥ץ בַּמַּ֛יִם אֶת־כָּל־בְּשָׂר֖וֹ וְטָמֵ֥א עַד־הָעָֽרֶב׃ 16
“‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು.
וְכָל־בֶּ֣גֶד וְכָל־ע֔וֹר אֲשֶׁר־יִהְיֶ֥ה עָלָ֖יו שִׁכְבַת־זָ֑רַע וְכֻבַּ֥ס בַּמַּ֖יִם וְטָמֵ֥א עַד־הָעָֽרֶב׃ פ 17
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.
וְאִשָּׁ֕ה אֲשֶׁ֨ר יִשְׁכַּ֥ב אִ֛ישׁ אֹתָ֖הּ שִׁכְבַת־זָ֑רַע וְרָחֲצ֣וּ בַמַּ֔יִם וְטָמְא֖וּ עַד־הָעָֽרֶב׃ 18
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.
וְאִשָּׁה֙ כִּֽי־תִהְיֶ֣ה זָבָ֔ה דָּ֛ם יִהְיֶ֥ה זֹבָ֖הּ בִּבְשָׂרָ֑הּ שִׁבְעַ֤ת יָמִים֙ תִּהְיֶ֣ה בְנִדָּתָ֔הּ וְכָל־הַנֹּגֵ֥עַ בָּ֖הּ יִטְמָ֥א עַד־הָעָֽרֶב׃ 19
“‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
וְכֹל֩ אֲשֶׁ֨ר תִּשְׁכַּ֥ב עָלָ֛יו בְּנִדָּתָ֖הּ יִטְמָ֑א וְכֹ֛ל אֲשֶׁר־תֵּשֵׁ֥ב עָלָ֖יו יִטְמָֽא׃ 20
“‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು.
וְכָל־הַנֹּגֵ֖עַ בְּמִשְׁכָּבָ֑הּ יְכַבֵּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 21
ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.
וְכָל־הַנֹּגֵ֔עַ בְּכָל־כְּלִ֖י אֲשֶׁר־תֵּשֵׁ֣ב עָלָ֑יו יְכַבֵּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 22
ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
וְאִ֨ם עַֽל־הַמִּשְׁכָּ֜ב ה֗וּא א֧וֹ עַֽל־הַכְּלִ֛י אֲשֶׁר־הִ֥וא יֹשֶֽׁבֶת־עָלָ֖יו בְּנָגְעוֹ־ב֑וֹ יִטְמָ֖א עַד־הָעָֽרֶב׃ 23
ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.
וְאִ֡ם שָׁכֹב֩ יִשְׁכַּ֨ב אִ֜ישׁ אֹתָ֗הּ וּתְהִ֤י נִדָּתָהּ֙ עָלָ֔יו וְטָמֵ֖א שִׁבְעַ֣ת יָמִ֑ים וְכָל־הַמִּשְׁכָּ֛ב אֲשֶׁר־יִשְׁכַּ֥ב עָלָ֖יו יִטְמָֽא׃ פ 24
“‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು.
וְאִשָּׁ֡ה כִּֽי־יָזוּב֩ ז֨וֹב דָּמָ֜הּ יָמִ֣ים רַבִּ֗ים בְּלֹא֙ עֶת־נִדָּתָ֔הּ א֥וֹ כִֽי־תָז֖וּב עַל־נִדָּתָ֑הּ כָּל־יְמֵ֞י ז֣וֹב טֻמְאָתָ֗הּ כִּימֵ֧י נִדָּתָ֛הּ תִּהְיֶ֖ה טְמֵאָ֥ה הִֽוא׃ 25
“‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು.
כָּל־הַמִּשְׁכָּ֞ב אֲשֶׁר־תִּשְׁכַּ֤ב עָלָיו֙ כָּל־יְמֵ֣י זוֹבָ֔הּ כְּמִשְׁכַּ֥ב נִדָּתָ֖הּ יִֽהְיֶה־לָּ֑הּ וְכָֽל־הַכְּלִי֙ אֲשֶׁ֣ר תֵּשֵׁ֣ב עָלָ֔יו טָמֵ֣א יִהְיֶ֔ה כְּטֻמְאַ֖ת נִדָּתָֽהּ׃ 26
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು.
וְכָל־הַנּוֹגֵ֥עַ בָּ֖ם יִטְמָ֑א וְכִבֶּ֧ס בְּגָדָ֛יו וְרָחַ֥ץ בַּמַּ֖יִם וְטָמֵ֥א עַד־הָעָֽרֶב׃ 27
ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
וְאִֽם־טָהֲרָ֖ה מִזּוֹבָ֑הּ וְסָ֥פְרָה לָּ֛הּ שִׁבְעַ֥ת יָמִ֖ים וְאַחַ֥ר תִּטְהָֽר׃ 28
“‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.
וּבַיּ֣וֹם הַשְּׁמִינִ֗י תִּֽקַּֽח־לָהּ֙ שְׁתֵּ֣י תֹרִ֔ים א֥וֹ שְׁנֵ֖י בְּנֵ֣י יוֹנָ֑ה וְהֵבִיאָ֤ה אוֹתָם֙ אֶל־הַכֹּהֵ֔ן אֶל־פֶּ֖תַח אֹ֥הֶל מוֹעֵֽד׃ 29
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.
וְעָשָׂ֤ה הַכֹּהֵן֙ אֶת־הָאֶחָ֣ד חַטָּ֔את וְאֶת־הָאֶחָ֖ד עֹלָ֑ה וְכִפֶּ֨ר עָלֶ֤יהָ הַכֹּהֵן֙ לִפְנֵ֣י יְהוָ֔ה מִזּ֖וֹב טֻמְאָתָֽהּ׃ 30
ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
וְהִזַּרְתֶּ֥ם אֶת־בְּנֵי־יִשְׂרָאֵ֖ל מִטֻּמְאָתָ֑ם וְלֹ֤א יָמֻ֙תוּ֙ בְּטֻמְאָתָ֔ם בְּטַמְּאָ֥ם אֶת־מִשְׁכָּנִ֖י אֲשֶׁ֥ר בְּתוֹכָֽם׃ 31
“‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’”
זֹ֥את תּוֹרַ֖ת הַזָּ֑ב וַאֲשֶׁ֨ר תֵּצֵ֥א מִמֶּ֛נּוּ שִׁכְבַת־זֶ֖רַע לְטָמְאָה־בָֽהּ׃ 32
ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ.
וְהַדָּוָה֙ בְּנִדָּתָ֔הּ וְהַזָּב֙ אֶת־זוֹב֔וֹ לַזָּכָ֖ר וְלַנְּקֵבָ֑ה וּלְאִ֕ישׁ אֲשֶׁ֥ר יִשְׁכַּ֖ב עִם־טְמֵאָֽה׃ פ 33
ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ.

< וַיִּקְרָא 15 >