< וַיִּקְרָא 17 >
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ | 1 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
דַּבֵּ֨ר אֶֽל־אַהֲרֹ֜ן וְאֶל־בָּנָ֗יו וְאֶל֙ כָּל־בְּנֵ֣י יִשְׂרָאֵ֔ל וְאָמַרְתָּ֖ אֲלֵיהֶ֑ם זֶ֣ה הַדָּבָ֔ר אֲשֶׁר־צִוָּ֥ה יְהוָ֖ה לֵאמֹֽר׃ | 2 |
“ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ.
אִ֥ישׁ אִישׁ֙ מִבֵּ֣ית יִשְׂרָאֵ֔ל אֲשֶׁ֨ר יִשְׁחַ֜ט שׁ֥וֹר אוֹ־כֶ֛שֶׂב אוֹ־עֵ֖ז בַּֽמַּחֲנֶ֑ה א֚וֹ אֲשֶׁ֣ר יִשְׁחַ֔ט מִח֖וּץ לַֽמַּחֲנֶֽה׃ | 3 |
ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,
וְאֶל־פֶּ֜תַח אֹ֣הֶל מוֹעֵד֮ לֹ֣א הֱבִיאוֹ֒ לְהַקְרִ֤יב קָרְבָּן֙ לַֽיהוָ֔ה לִפְנֵ֖י מִשְׁכַּ֣ן יְהוָ֑ה דָּ֣ם יֵחָשֵׁ֞ב לָאִ֤ישׁ הַהוּא֙ דָּ֣ם שָׁפָ֔ךְ וְנִכְרַ֛ת הָאִ֥ישׁ הַה֖וּא מִקֶּ֥רֶב עַמּֽוֹ׃ | 4 |
ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
לְמַעַן֩ אֲשֶׁ֨ר יָבִ֜יאוּ בְּנֵ֣י יִשְׂרָאֵ֗ל אֶֽת־זִבְחֵיהֶם֮ אֲשֶׁ֣ר הֵ֣ם זֹבְחִים֮ עַל־פְּנֵ֣י הַשָּׂדֶה֒ וֶֽהֱבִיאֻ֣ם לַֽיהוָ֗ה אֶל־פֶּ֛תַח אֹ֥הֶל מוֹעֵ֖ד אֶל־הַכֹּהֵ֑ן וְזָ֨בְח֜וּ זִבְחֵ֧י שְׁלָמִ֛ים לַֽיהוָ֖ה אוֹתָֽם׃ | 5 |
ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
וְזָרַ֨ק הַכֹּהֵ֤ן אֶת־הַדָּם֙ עַל־מִזְבַּ֣ח יְהוָ֔ה פֶּ֖תַח אֹ֣הֶל מוֹעֵ֑ד וְהִקְטִ֣יר הַחֵ֔לֶב לְרֵ֥יחַ נִיחֹ֖חַ לַיהוָֽה׃ | 6 |
ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.
וְלֹא־יִזְבְּח֥וּ עוֹד֙ אֶת־זִבְחֵיהֶ֔ם לַשְּׂעִירִ֕ם אֲשֶׁ֛ר הֵ֥ם זֹנִ֖ים אַחֲרֵיהֶ֑ם חֻקַּ֥ת עוֹלָ֛ם תִּֽהְיֶה־זֹּ֥את לָהֶ֖ם לְדֹרֹתָֽם׃ | 7 |
ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’
וַאֲלֵהֶ֣ם תֹּאמַ֔ר אִ֥ישׁ אִישׁ֙ מִבֵּ֣ית יִשְׂרָאֵ֔ל וּמִן־הַגֵּ֖ר אֲשֶׁר־יָג֣וּר בְּתוֹכָ֑ם אֲשֶׁר־יַעֲלֶ֥ה עֹלָ֖ה אוֹ־זָֽבַח׃ | 8 |
“ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,
וְאֶל־פֶּ֜תַח אֹ֤הֶל מוֹעֵד֙ לֹ֣א יְבִיאֶ֔נּוּ לַעֲשׂ֥וֹת אֹת֖וֹ לַיהוָ֑ה וְנִכְרַ֛ת הָאִ֥ישׁ הַה֖וּא מֵעַמָּֽיו׃ | 9 |
ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.
וְאִ֨ישׁ אִ֜ישׁ מִבֵּ֣ית יִשְׂרָאֵ֗ל וּמִן־הַגֵּר֙ הַגָּ֣ר בְּתוֹכָ֔ם אֲשֶׁ֥ר יֹאכַ֖ל כָּל־דָּ֑ם וְנָתַתִּ֣י פָנַ֗י בַּנֶּ֙פֶשׁ֙ הָאֹכֶ֣לֶת אֶת־הַדָּ֔ם וְהִכְרַתִּ֥י אֹתָ֖הּ מִקֶּ֥רֶב עַמָּֽהּ׃ | 10 |
“‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
כִּ֣י נֶ֣פֶשׁ הַבָּשָׂר֮ בַּדָּ֣ם הִוא֒ וַאֲנִ֞י נְתַתִּ֤יו לָכֶם֙ עַל־הַמִּזְבֵּ֔חַ לְכַפֵּ֖ר עַל־נַפְשֹׁתֵיכֶ֑ם כִּֽי־הַדָּ֥ם ה֖וּא בַּנֶּ֥פֶשׁ יְכַפֵּֽר׃ | 11 |
ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.
עַל־כֵּ֤ן אָמַ֙רְתִּי֙ לִבְנֵ֣י יִשְׂרָאֵ֔ל כָּל־נֶ֥פֶשׁ מִכֶּ֖ם לֹא־תֹ֣אכַל דָּ֑ם וְהַגֵּ֛ר הַגָּ֥ר בְּתוֹכְכֶ֖ם לֹא־יֹ֥אכַל דָּֽם׃ ס | 12 |
ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.”
וְאִ֨ישׁ אִ֜ישׁ מִבְּנֵ֣י יִשְׂרָאֵ֗ל וּמִן־הַגֵּר֙ הַגָּ֣ר בְּתוֹכָ֔ם אֲשֶׁ֨ר יָצ֜וּד צֵ֥יד חַיָּ֛ה אוֹ־ע֖וֹף אֲשֶׁ֣ר יֵאָכֵ֑ל וְשָׁפַךְ֙ אֶת־דָּמ֔וֹ וְכִסָּ֖הוּ בֶּעָפָֽר׃ | 13 |
“‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.
כִּֽי־נֶ֣פֶשׁ כָּל־בָּשָׂ֗ר דָּמ֣וֹ בְנַפְשׁוֹ֮ הוּא֒ וָֽאֹמַר֙ לִבְנֵ֣י יִשְׂרָאֵ֔ל דַּ֥ם כָּל־בָּשָׂ֖ר לֹ֣א תֹאכֵ֑לוּ כִּ֣י נֶ֤פֶשׁ כָּל־בָּשָׂר֙ דָּמ֣וֹ הִ֔וא כָּל־אֹכְלָ֖יו יִכָּרֵֽת׃ | 14 |
ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.
וְכָל־נֶ֗פֶשׁ אֲשֶׁ֨ר תֹּאכַ֤ל נְבֵלָה֙ וּטְרֵפָ֔ה בָּאֶזְרָ֖ח וּבַגֵּ֑ר וְכִבֶּ֨ס בְּגָדָ֜יו וְרָחַ֥ץ בַּמַּ֛יִם וְטָמֵ֥א עַד־הָעֶ֖רֶב וְטָהֵֽר׃ | 15 |
“‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.
וְאִם֙ לֹ֣א יְכַבֵּ֔ס וּבְשָׂר֖וֹ לֹ֣א יִרְחָ֑ץ וְנָשָׂ֖א עֲוֹנֽוֹ׃ פ | 16 |
ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’”