< וַיִּקְרָא 20 >
וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ | 1 |
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
וְאֶל־בְּנֵ֣י יִשְׂרָאֵ֘ל תֹּאמַר֒ אִ֣ישׁ אִישׁ֩ מִבְּנֵ֨י יִשְׂרָאֵ֜ל וּמִן־הַגֵּ֣ר ׀ הַגָּ֣ר בְּיִשְׂרָאֵ֗ל אֲשֶׁ֨ר יִתֵּ֧ן מִזַּרְע֛וֹ לַמֹּ֖לֶךְ מ֣וֹת יוּמָ֑ת עַ֥ם הָאָ֖רֶץ יִרְגְּמֻ֥הוּ בָאָֽבֶן׃ | 2 |
“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
וַאֲנִ֞י אֶתֵּ֤ן אֶת־פָּנַי֙ בָּאִ֣ישׁ הַה֔וּא וְהִכְרַתִּ֥י אֹת֖וֹ מִקֶּ֣רֶב עַמּ֑וֹ כִּ֤י מִזַּרְעוֹ֙ נָתַ֣ן לַמֹּ֔לֶךְ לְמַ֗עַן טַמֵּא֙ אֶת־מִקְדָּשִׁ֔י וּלְחַלֵּ֖ל אֶת־שֵׁ֥ם קָדְשִֽׁי׃ | 3 |
ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
וְאִ֡ם הַעְלֵ֣ם יַעְלִימֽוּ֩ עַ֨ם הָאָ֜רֶץ אֶת־עֵֽינֵיהֶם֙ מִן־הָאִ֣ישׁ הַה֔וּא בְּתִתּ֥וֹ מִזַּרְע֖וֹ לַמֹּ֑לֶךְ לְבִלְתִּ֖י הָמִ֥ית אֹתֽוֹ׃ | 4 |
ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,
וְשַׂמְתִּ֨י אֲנִ֧י אֶת־פָּנַ֛י בָּאִ֥ישׁ הַה֖וּא וּבְמִשְׁפַּחְתּ֑וֹ וְהִכְרַתִּ֨י אֹת֜וֹ וְאֵ֣ת ׀ כָּל־הַזֹּנִ֣ים אַחֲרָ֗יו לִזְנ֛וֹת אַחֲרֵ֥י הַמֹּ֖לֶךְ מִקֶּ֥רֶב עַמָּֽם׃ | 5 |
ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
וְהַנֶּ֗פֶשׁ אֲשֶׁ֨ר תִּפְנֶ֤ה אֶל־הָֽאֹבֹת֙ וְאֶל־הַיִּדְּעֹנִ֔ים לִזְנ֖וֹת אַחֲרֵיהֶ֑ם וְנָתַתִּ֤י אֶת־פָּנַי֙ בַּנֶּ֣פֶשׁ הַהִ֔וא וְהִכְרַתִּ֥י אֹת֖וֹ מִקֶּ֥רֶב עַמּֽוֹ׃ | 6 |
“‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
וְהִ֨תְקַדִּשְׁתֶּ֔ם וִהְיִיתֶ֖ם קְדֹשִׁ֑ים כִּ֛י אֲנִ֥י יְהוָ֖ה אֱלֹהֵיכֶֽם׃ | 7 |
“‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
וּשְׁמַרְתֶּם֙ אֶת־חֻקֹּתַ֔י וַעֲשִׂיתֶ֖ם אֹתָ֑ם אֲנִ֥י יְהוָ֖ה מְקַדִּשְׁכֶֽם׃ | 8 |
ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.
כִּֽי־אִ֣ישׁ אִ֗ישׁ אֲשֶׁ֨ר יְקַלֵּ֧ל אֶת־אָבִ֛יו וְאֶת־אִמּ֖וֹ מ֣וֹת יוּמָ֑ת אָבִ֧יו וְאִמּ֛וֹ קִלֵּ֖ל דָּמָ֥יו בּֽוֹ׃ | 9 |
“‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.
וְאִ֗ישׁ אֲשֶׁ֤ר יִנְאַף֙ אֶת־אֵ֣שֶׁת אִ֔ישׁ אֲשֶׁ֥ר יִנְאַ֖ף אֶת־אֵ֣שֶׁת רֵעֵ֑הוּ מֽוֹת־יוּמַ֥ת הַנֹּאֵ֖ף וְהַנֹּאָֽפֶת׃ | 10 |
“‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
וְאִ֗ישׁ אֲשֶׁ֤ר יִשְׁכַּב֙ אֶת־אֵ֣שֶׁת אָבִ֔יו עֶרְוַ֥ת אָבִ֖יו גִּלָּ֑ה מֽוֹת־יוּמְת֥וּ שְׁנֵיהֶ֖ם דְּמֵיהֶ֥ם בָּֽם׃ | 11 |
“‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
וְאִ֗ישׁ אֲשֶׁ֤ר יִשְׁכַּב֙ אֶת־כַּלָּת֔וֹ מ֥וֹת יוּמְת֖וּ שְׁנֵיהֶ֑ם תֶּ֥בֶל עָשׂ֖וּ דְּמֵיהֶ֥ם בָּֽם׃ | 12 |
“‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು.
וְאִ֗ישׁ אֲשֶׁ֨ר יִשְׁכַּ֤ב אֶת־זָכָר֙ מִשְׁכְּבֵ֣י אִשָּׁ֔ה תּוֹעֵבָ֥ה עָשׂ֖וּ שְׁנֵיהֶ֑ם מ֥וֹת יוּמָ֖תוּ דְּמֵיהֶ֥ם בָּֽם׃ | 13 |
“‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.
וְאִ֗ישׁ אֲשֶׁ֨ר יִקַּ֧ח אֶת־אִשָּׁ֛ה וְאֶת־אִמָּ֖הּ זִמָּ֣ה הִ֑וא בָּאֵ֞שׁ יִשְׂרְפ֤וּ אֹתוֹ֙ וְאֶתְהֶ֔ן וְלֹא־תִהְיֶ֥ה זִמָּ֖ה בְּתוֹכְכֶֽם׃ | 14 |
“‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.
וְאִ֗ישׁ אֲשֶׁ֨ר יִתֵּ֧ן שְׁכָבְתּ֛וֹ בִּבְהֵמָ֖ה מ֣וֹת יוּמָ֑ת וְאֶת־הַבְּהֵמָ֖ה תַּהֲרֹֽגוּ׃ | 15 |
“‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು.
וְאִשָּׁ֗ה אֲשֶׁ֨ר תִּקְרַ֤ב אֶל־כָּל־בְּהֵמָה֙ לְרִבְעָ֣ה אֹתָ֔הּ וְהָרַגְתָּ֥ אֶת־הָאִשָּׁ֖ה וְאֶת־הַבְּהֵמָ֑ה מ֥וֹת יוּמָ֖תוּ דְּמֵיהֶ֥ם בָּֽם׃ | 16 |
“‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.
וְאִ֣ישׁ אֲשֶׁר־יִקַּ֣ח אֶת־אֲחֹת֡וֹ בַּת־אָבִ֣יו א֣וֹ בַת־אִ֠מּוֹ וְרָאָ֨ה אֶת־עֶרְוָתָ֜הּ וְהִֽיא־תִרְאֶ֤ה אֶת־עֶרְוָתוֹ֙ חֶ֣סֶד ה֔וּא וְנִ֨כְרְת֔וּ לְעֵינֵ֖י בְּנֵ֣י עַמָּ֑ם עֶרְוַ֧ת אֲחֹת֛וֹ גִּלָּ֖ה עֲוֹנ֥וֹ יִשָּֽׂא׃ | 17 |
“‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.
וְ֠אִישׁ אֲשֶׁר־יִשְׁכַּ֨ב אֶת־אִשָּׁ֜ה דָּוָ֗ה וְגִלָּ֤ה אֶת־עֶרְוָתָהּ֙ אֶת־מְקֹרָ֣הּ הֶֽעֱרָ֔ה וְהִ֕יא גִּלְּתָ֖ה אֶת־מְק֣וֹר דָּמֶ֑יהָ וְנִכְרְת֥וּ שְׁנֵיהֶ֖ם מִקֶּ֥רֶב עַמָּֽם׃ | 18 |
“‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.
וְעֶרְוַ֨ת אֲח֧וֹת אִמְּךָ֛ וַאֲח֥וֹת אָבִ֖יךָ לֹ֣א תְגַלֵּ֑ה כִּ֧י אֶת־שְׁאֵר֛וֹ הֶעֱרָ֖ה עֲוֹנָ֥ם יִשָּֽׂאוּ׃ | 19 |
“‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.
וְאִ֗ישׁ אֲשֶׁ֤ר יִשְׁכַּב֙ אֶת־דֹּ֣דָת֔וֹ עֶרְוַ֥ת דֹּד֖וֹ גִּלָּ֑ה חֶטְאָ֥ם יִשָּׂ֖אוּ עֲרִירִ֥ים יָמֻֽתוּ׃ | 20 |
“‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು.
וְאִ֗ישׁ אֲשֶׁ֥ר יִקַּ֛ח אֶת־אֵ֥שֶׁת אָחִ֖יו נִדָּ֣ה הִ֑וא עֶרְוַ֥ת אָחִ֛יו גִּלָּ֖ה עֲרִירִ֥ים יִהְיֽוּ׃ | 21 |
“‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.
וּשְׁמַרְתֶּ֤ם אֶת־כָּל־חֻקֹּתַי֙ וְאֶת־כָּל־מִשְׁפָּטַ֔י וַעֲשִׂיתֶ֖ם אֹתָ֑ם וְלֹא־תָקִ֤יא אֶתְכֶם֙ הָאָ֔רֶץ אֲשֶׁ֨ר אֲנִ֜י מֵבִ֥יא אֶתְכֶ֛ם שָׁ֖מָּה לָשֶׁ֥בֶת בָּֽהּ׃ | 22 |
“‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.
וְלֹ֤א תֵֽלְכוּ֙ בְּחֻקֹּ֣ת הַגּ֔וֹי אֲשֶׁר־אֲנִ֥י מְשַׁלֵּ֖חַ מִפְּנֵיכֶ֑ם כִּ֤י אֶת־כָּל־אֵ֙לֶּה֙ עָשׂ֔וּ וָאָקֻ֖ץ בָּֽם׃ | 23 |
ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.
וָאֹמַ֣ר לָכֶ֗ם אַתֶּם֮ תִּֽירְשׁ֣וּ אֶת־אַדְמָתָם֒ וַאֲנִ֞י אֶתְּנֶ֤נָּה לָכֶם֙ לָרֶ֣שֶׁת אֹתָ֔הּ אֶ֛רֶץ זָבַ֥ת חָלָ֖ב וּדְבָ֑שׁ אֲנִי֙ יְהוָ֣ה אֱלֹֽהֵיכֶ֔ם אֲשֶׁר־הִבְדַּ֥לְתִּי אֶתְכֶ֖ם מִן־הָֽעַמִּֽים׃ | 24 |
ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
וְהִבְדַּלְתֶּ֞ם בֵּֽין־הַבְּהֵמָ֤ה הַטְּהֹרָה֙ לַטְּמֵאָ֔ה וּבֵין־הָע֥וֹף הַטָּמֵ֖א לַטָּהֹ֑ר וְלֹֽא־תְשַׁקְּצ֨וּ אֶת־נַפְשֹֽׁתֵיכֶ֜ם בַּבְּהֵמָ֣ה וּבָע֗וֹף וּבְכֹל֙ אֲשֶׁ֣ר תִּרְמֹ֣שׂ הָֽאֲדָמָ֔ה אֲשֶׁר־הִבְדַּ֥לְתִּי לָכֶ֖ם לְטַמֵּֽא׃ | 25 |
“‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು.
וִהְיִ֤יתֶם לִי֙ קְדֹשִׁ֔ים כִּ֥י קָד֖וֹשׁ אֲנִ֣י יְהוָ֑ה וָאַבְדִּ֥ל אֶתְכֶ֛ם מִן־הָֽעַמִּ֖ים לִהְי֥וֹת לִֽי׃ | 26 |
ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.
וְאִ֣ישׁ אֽוֹ־אִשָּׁ֗ה כִּֽי־יִהְיֶ֨ה בָהֶ֥ם א֛וֹב א֥וֹ יִדְּעֹנִ֖י מ֣וֹת יוּמָ֑תוּ בָּאֶ֛בֶן יִרְגְּמ֥וּ אֹתָ֖ם דְּמֵיהֶ֥ם בָּֽם׃ פ | 27 |
“‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’”