< בְּמִדְבַּר 27 >

וַתִּקְרַ֜בְנָה בְּנ֣וֹת צְלָפְחָ֗ד בֶּן־חֵ֤פֶר בֶּן־גִּלְעָד֙ בֶּן־מָכִ֣יר בֶּן־מְנַשֶּׁ֔ה לְמִשְׁפְּחֹ֖ת מְנַשֶּׁ֣ה בֶן־יוֹסֵ֑ף וְאֵ֙לֶּה֙ שְׁמ֣וֹת בְּנֹתָ֔יו מַחְלָ֣ה נֹעָ֔ה וְחָגְלָ֥ה וּמִלְכָּ֖ה וְתִרְצָֽה׃ 1
ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.
וַֽתַּעֲמֹ֜דְנָה לִפְנֵ֣י מֹשֶׁ֗ה וְלִפְנֵי֙ אֶלְעָזָ֣ר הַכֹּהֵ֔ן וְלִפְנֵ֥י הַנְּשִׂיאִ֖ם וְכָל־הָעֵדָ֑ה פֶּ֥תַח אֹֽהֶל־מוֹעֵ֖ד לֵאמֹֽר׃ 2
ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,
אָבִינוּ֮ מֵ֣ת בַּמִּדְבָּר֒ וְה֨וּא לֹא־הָיָ֜ה בְּת֣וֹךְ הָעֵדָ֗ה הַנּוֹעָדִ֛ים עַל־יְהוָ֖ה בַּעֲדַת־קֹ֑רַח כִּֽי־בְחֶטְא֣וֹ מֵ֔ת וּבָנִ֖ים לֹא־הָ֥יוּ לֽוֹ׃ 3
“ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.
לָ֣מָּה יִגָּרַ֤ע שֵׁם־אָבִ֙ינוּ֙ מִתּ֣וֹךְ מִשְׁפַּחְתּ֔וֹ כִּ֛י אֵ֥ין ל֖וֹ בֵּ֑ן תְּנָה־לָּ֣נוּ אֲחֻזָּ֔ה בְּת֖וֹךְ אֲחֵ֥י אָבִֽינוּ׃ 4
ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.
וַיַּקְרֵ֥ב מֹשֶׁ֛ה אֶת־מִשְׁפָּטָ֖ן לִפְנֵ֥י יְהוָֽה׃ ס 5
ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು.
וַיֹּ֥אמֶר יְהוָ֖ה אֶל־מֹשֶׁ֥ה לֵּאמֹֽר׃ 6
ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
כֵּ֗ן בְּנ֣וֹת צְלָפְחָד֮ דֹּבְרֹת֒ נָתֹ֨ן תִּתֵּ֤ן לָהֶם֙ אֲחֻזַּ֣ת נַחֲלָ֔ה בְּת֖וֹךְ אֲחֵ֣י אֲבִיהֶ֑ם וְהַֽעֲבַרְתָּ֛ אֶת־נַחֲלַ֥ת אֲבִיהֶ֖ן לָהֶֽן׃ 7
ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು.
וְאֶל־בְּנֵ֥י יִשְׂרָאֵ֖ל תְּדַבֵּ֣ר לֵאמֹ֑ר אִ֣ישׁ כִּֽי־יָמ֗וּת וּבֵן֙ אֵ֣ין ל֔וֹ וְהַֽעֲבַרְתֶּ֥ם אֶת־נַחֲלָת֖וֹ לְבִתּֽוֹ׃ 8
“ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು.
וְאִם־אֵ֥ין ל֖וֹ בַּ֑ת וּנְתַתֶּ֥ם אֶת־נַחֲלָת֖וֹ לְאֶחָיו׃ 9
ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.
וְאִם־אֵ֥ין ל֖וֹ אַחִ֑ים וּנְתַתֶּ֥ם אֶת־נַחֲלָת֖וֹ לַאֲחֵ֥י אָבִֽיו׃ 10
ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ,
וְאִם־אֵ֣ין אַחִים֮ לְאָבִיו֒ וּנְתַתֶּ֣ם אֶת־נַחֲלָת֗וֹ לִשְׁאֵר֞וֹ הַקָּרֹ֥ב אֵלָ֛יו מִמִּשְׁפַּחְתּ֖וֹ וְיָרַ֣שׁ אֹתָ֑הּ וְֽהָ֨יְתָ֜ה לִבְנֵ֤י יִשְׂרָאֵל֙ לְחֻקַּ֣ת מִשְׁפָּ֔ט כַּאֲשֶׁ֛ר צִוָּ֥ה יְהוָ֖ה אֶת־מֹשֶֽׁה׃ ס 11
ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’” ಎಂದು ಹೇಳಿದರು.
וַיֹּ֤אמֶר יְהוָה֙ אֶל־מֹשֶׁ֔ה עֲלֵ֛ה אֶל־הַ֥ר הָעֲבָרִ֖ים הַזֶּ֑ה וּרְאֵה֙ אֶת־הָאָ֔רֶץ אֲשֶׁ֥ר נָתַ֖תִּי לִבְנֵ֥י יִשְׂרָאֵֽל׃ 12
ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು.
וְרָאִ֣יתָה אֹתָ֔הּ וְנֶאֱסַפְתָּ֥ אֶל־עַמֶּ֖יךָ גַּם־אָ֑תָּה כַּאֲשֶׁ֥ר נֶאֱסַ֖ף אַהֲרֹ֥ן אָחִֽיךָ׃ 13
ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ.
כַּאֲשֶׁר֩ מְרִיתֶ֨ם פִּ֜י בְּמִדְבַּר־צִ֗ן בִּמְרִיבַת֙ הָֽעֵדָ֔ה לְהַקְדִּישֵׁ֥נִי בַמַּ֖יִם לְעֵינֵיהֶ֑ם הֵ֛ם מֵֽי־מְרִיבַ֥ת קָדֵ֖שׁ מִדְבַּר־צִֽן׃ פ 14
ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.
וַיְדַבֵּ֣ר מֹשֶׁ֔ה אֶל־יְהוָ֖ה לֵאמֹֽר׃ 15
ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,
יִפְקֹ֣ד יְהוָ֔ה אֱלֹהֵ֥י הָרוּחֹ֖ת לְכָל־בָּשָׂ֑ר אִ֖ישׁ עַל־הָעֵדָֽה׃ 16
“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.
אֲשֶׁר־יֵצֵ֣א לִפְנֵיהֶ֗ם וַאֲשֶׁ֤ר יָבֹא֙ לִפְנֵיהֶ֔ם וַאֲשֶׁ֥ר יוֹצִיאֵ֖ם וַאֲשֶׁ֣ר יְבִיאֵ֑ם וְלֹ֤א תִהְיֶה֙ עֲדַ֣ת יְהוָ֔ה כַּצֹּ֕אן אֲשֶׁ֥ר אֵין־לָהֶ֖ם רֹעֶֽה׃ 17
ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.
וַיֹּ֨אמֶר יְהוָ֜ה אֶל־מֹשֶׁ֗ה קַח־לְךָ֙ אֶת־יְהוֹשֻׁ֣עַ בִּן־נ֔וּן אִ֖ישׁ אֲשֶׁר־ר֣וּחַ בּ֑וֹ וְסָמַכְתָּ֥ אֶת־יָדְךָ֖ עָלָֽיו׃ 18
ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,
וְהַֽעֲמַדְתָּ֣ אֹת֗וֹ לִפְנֵי֙ אֶלְעָזָ֣ר הַכֹּהֵ֔ן וְלִפְנֵ֖י כָּל־הָעֵדָ֑ה וְצִוִּיתָ֥ה אֹת֖וֹ לְעֵינֵיהֶֽם׃ 19
ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು.
וְנָתַתָּ֥ה מֵהֽוֹדְךָ֖ עָלָ֑יו לְמַ֣עַן יִשְׁמְע֔וּ כָּל־עֲדַ֖ת בְּנֵ֥י יִשְׂרָאֵֽל׃ 20
ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.
וְלִפְנֵ֨י אֶלְעָזָ֤ר הַכֹּהֵן֙ יַעֲמֹ֔ד וְשָׁ֥אַל ל֛וֹ בְּמִשְׁפַּ֥ט הָאוּרִ֖ים לִפְנֵ֣י יְהוָ֑ה עַל־פִּ֨יו יֵצְא֜וּ וְעַל־פִּ֣יו יָבֹ֗אוּ ה֛וּא וְכָל־בְּנֵי־יִשְׂרָאֵ֥ל אִתּ֖וֹ וְכָל־הָעֵדָֽה׃ 21
ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.
וַיַּ֣עַשׂ מֹשֶׁ֔ה כַּאֲשֶׁ֛ר צִוָּ֥ה יְהוָ֖ה אֹת֑וֹ וַיִּקַּ֣ח אֶת־יְהוֹשֻׁ֗עַ וַיַּֽעֲמִדֵ֙הוּ֙ לִפְנֵי֙ אֶלְעָזָ֣ר הַכֹּהֵ֔ן וְלִפְנֵ֖י כָּל־הָעֵדָֽה׃ 22
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ,
וַיִּסְמֹ֧ךְ אֶת־יָדָ֛יו עָלָ֖יו וַיְצַוֵּ֑הוּ כַּאֲשֶׁ֛ר דִּבֶּ֥ר יְהוָ֖ה בְּיַד־מֹשֶֽׁה׃ פ 23
ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

< בְּמִדְבַּר 27 >