< בְּמִדְבַּר 28 >

וַיְדַבֵּ֥ר יְהוָ֖ה אֶל־מֹשֶׁ֥ה לֵּאמֹֽר׃ 1
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
צַ֚ו אֶת־בְּנֵ֣י יִשְׂרָאֵ֔ל וְאָמַרְתָּ֖ אֲלֵהֶ֑ם אֶת־קָרְבָּנִ֨י לַחְמִ֜י לְאִשַּׁ֗י רֵ֚יחַ נִֽיחֹחִ֔י תִּשְׁמְר֕וּ לְהַקְרִ֥יב לִ֖י בְּמוֹעֲדֽוֹ׃ 2
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’
וְאָמַרְתָּ֣ לָהֶ֔ם זֶ֚ה הָֽאִשֶּׁ֔ה אֲשֶׁ֥ר תַּקְרִ֖יבוּ לַיהוָ֑ה כְּבָשִׂ֨ים בְּנֵֽי־שָׁנָ֧ה תְמִימִ֛ם שְׁנַ֥יִם לַיּ֖וֹם עֹלָ֥ה תָמִֽיד׃ 3
ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು.
אֶת־הַכֶּ֥בֶשׂ אֶחָ֖ד תַּעֲשֶׂ֣ה בַבֹּ֑קֶר וְאֵת֙ הַכֶּ֣בֶשׂ הַשֵּׁנִ֔י תַּעֲשֶׂ֖ה בֵּ֥ין הָֽעַרְבָּֽיִם׃ 4
ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.
וַעֲשִׂירִ֧ית הָאֵיפָ֛ה סֹ֖לֶת לְמִנְחָ֑ה בְּלוּלָ֛ה בְּשֶׁ֥מֶן כָּתִ֖ית רְבִיעִ֥ת הַהִֽין׃ 5
ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.
עֹלַ֖ת תָּמִ֑יד הָעֲשֻׂיָה֙ בְּהַ֣ר סִינַ֔י לְרֵ֣יחַ נִיחֹ֔חַ אִשֶּׁ֖ה לַֽיהוָֽה׃ 6
ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
וְנִסְכּוֹ֙ רְבִיעִ֣ת הַהִ֔ין לַכֶּ֖בֶשׂ הָאֶחָ֑ד בַּקֹּ֗דֶשׁ הַסֵּ֛ךְ נֶ֥סֶךְ שֵׁכָ֖ר לַיהוָֽה׃ 7
ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.
וְאֵת֙ הַכֶּ֣בֶשׂ הַשֵּׁנִ֔י תַּעֲשֶׂ֖ה בֵּ֣ין הָֽעַרְבָּ֑יִם כְּמִנְחַ֨ת הַבֹּ֤קֶר וּכְנִסְכּוֹ֙ תַּעֲשֶׂ֔ה אִשֵּׁ֛ה רֵ֥יחַ נִיחֹ֖חַ לַיהוָֽה׃ פ 8
ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
וּבְיוֹם֙ הַשַּׁבָּ֔ת שְׁנֵֽי־כְבָשִׂ֥ים בְּנֵֽי־שָׁנָ֖ה תְּמִימִ֑ם וּשְׁנֵ֣י עֶשְׂרֹנִ֗ים סֹ֧לֶת מִנְחָ֛ה בְּלוּלָ֥ה בַשֶּׁ֖מֶן וְנִסְכּֽוֹ׃ 9
“‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
עֹלַ֥ת שַׁבַּ֖ת בְּשַׁבַּתּ֑וֹ עַל־עֹלַ֥ת הַתָּמִ֖יד וְנִסְכָּֽהּ׃ ס 10
ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.
וּבְרָאשֵׁי֙ חָדְשֵׁיכֶ֔ם תַּקְרִ֥יבוּ עֹלָ֖ה לַיהוָ֑ה פָּרִ֨ים בְּנֵֽי־בָקָ֤ר שְׁנַ֙יִם֙ וְאַ֣יִל אֶחָ֔ד כְּבָשִׂ֧ים בְּנֵי־שָׁנָ֛ה שִׁבְעָ֖ה תְּמִימִֽם׃ 11
“‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
וּשְׁלֹשָׁ֣ה עֶשְׂרֹנִ֗ים סֹ֤לֶת מִנְחָה֙ בְּלוּלָ֣ה בַשֶּׁ֔מֶן לַפָּ֖ר הָאֶחָ֑ד וּשְׁנֵ֣י עֶשְׂרֹנִ֗ים סֹ֤לֶת מִנְחָה֙ בְּלוּלָ֣ה בַשֶּׁ֔מֶן לָאַ֖יִל הָֽאֶחָֽד׃ 12
ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಹಿಟ್ಟನ್ನೂ,
וְעִשָּׂרֹ֣ן עִשָּׂר֗וֹן סֹ֤לֶת מִנְחָה֙ בְּלוּלָ֣ה בַשֶּׁ֔מֶן לַכֶּ֖בֶשׂ הָאֶחָ֑ד עֹלָה֙ רֵ֣יחַ נִיחֹ֔חַ אִשֶּׁ֖ה לַיהוָֽה׃ 13
ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
וְנִסְכֵּיהֶ֗ם חֲצִ֣י הַהִין֩ יִהְיֶ֨ה לַפָּ֜ר וּשְׁלִישִׁ֧ת הַהִ֣ין לָאַ֗יִל וּרְבִיעִ֥ת הַהִ֛ין לַכֶּ֖בֶשׂ יָ֑יִן זֹ֣את עֹלַ֥ת חֹ֙דֶשׁ֙ בְּחָדְשׁ֔וֹ לְחָדְשֵׁ֖י הַשָּׁנָֽה׃ 14
ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.
וּשְׂעִ֨יר עִזִּ֥ים אֶחָ֛ד לְחַטָּ֖את לַיהוָ֑ה עַל־עֹלַ֧ת הַתָּמִ֛יד יֵעָשֶׂ֖ה וְנִסְכּֽוֹ׃ ס 15
ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.
וּבַחֹ֣דֶשׁ הָרִאשׁ֗וֹן בְּאַרְבָּעָ֥ה עָשָׂ֛ר י֖וֹם לַחֹ֑דֶשׁ פֶּ֖סַח לַיהוָֽה׃ 16
“‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.
וּבַחֲמִשָּׁ֨ה עָשָׂ֥ר י֛וֹם לַחֹ֥דֶשׁ הַזֶּ֖ה חָ֑ג שִׁבְעַ֣ת יָמִ֔ים מַצּ֖וֹת יֵאָכֵֽל׃ 17
ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
בַּיּ֥וֹם הָרִאשׁ֖וֹן מִקְרָא־קֹ֑דֶשׁ כָּל־מְלֶ֥אכֶת עֲבֹדָ֖ה לֹ֥א תַעֲשֽׂוּ׃ 18
ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.
וְהִקְרַבְתֶּ֨ם אִשֶּׁ֤ה עֹלָה֙ לַֽיהוָ֔ה פָּרִ֧ים בְּנֵי־בָקָ֛ר שְׁנַ֖יִם וְאַ֣יִל אֶחָ֑ד וְשִׁבְעָ֤ה כְבָשִׂים֙ בְּנֵ֣י שָׁנָ֔ה תְּמִימִ֖ם יִהְי֥וּ לָכֶֽם׃ 19
ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.
וּמִ֨נְחָתָ֔ם סֹ֖לֶת בְּלוּלָ֣ה בַשָּׁ֑מֶן שְׁלֹשָׁ֨ה עֶשְׂרֹנִ֜ים לַפָּ֗ר וּשְׁנֵ֧י עֶשְׂרֹנִ֛ים לָאַ֖יִל תַּעֲשֽׂוּ׃ 20
ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.
עִשָּׂר֤וֹן עִשָּׂרוֹן֙ תַּעֲשֶׂ֔ה לַכֶּ֖בֶשׂ הָאֶחָ֑ד לְשִׁבְעַ֖ת הַכְּבָשִֽׂים׃ 21
ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು.
וּשְׂעִ֥יר חַטָּ֖את אֶחָ֑ד לְכַפֵּ֖ר עֲלֵיכֶֽם׃ 22
ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.
מִלְּבַד֙ עֹלַ֣ת הַבֹּ֔קֶר אֲשֶׁ֖ר לְעֹלַ֣ת הַתָּמִ֑יד תַּעֲשׂ֖וּ אֶת־אֵֽלֶּה׃ 23
ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.
כָּאֵ֜לֶּה תַּעֲשׂ֤וּ לַיּוֹם֙ שִׁבְעַ֣ת יָמִ֔ים לֶ֛חֶם אִשֵּׁ֥ה רֵֽיחַ־נִיחֹ֖חַ לַיהוָ֑ה עַל־עוֹלַ֧ת הַתָּמִ֛יד יֵעָשֶׂ֖ה וְנִסְכּֽוֹ׃ 24
ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.
וּבַיּוֹם֙ הַשְּׁבִיעִ֔י מִקְרָא־קֹ֖דֶשׁ יִהְיֶ֣ה לָכֶ֑ם כָּל־מְלֶ֥אכֶת עֲבֹדָ֖ה לֹ֥א תַעֲשֽׂוּ׃ ס 25
ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.
וּבְי֣וֹם הַבִּכּוּרִ֗ים בְּהַקְרִ֨יבְכֶ֜ם מִנְחָ֤ה חֲדָשָׁה֙ לַֽיהוָ֔ה בְּשָׁבֻעֹ֖תֵיכֶ֑ם מִֽקְרָא־קֹ֙דֶשׁ֙ יִהְיֶ֣ה לָכֶ֔ם כָּל־מְלֶ֥אכֶת עֲבֹדָ֖ה לֹ֥א תַעֲשֽׂוּ׃ 26
“‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.
וְהִקְרַבְתֶּ֨ם עוֹלָ֜ה לְרֵ֤יחַ נִיחֹ֙חַ֙ לַֽיהוָ֔ה פָּרִ֧ים בְּנֵי־בָקָ֛ר שְׁנַ֖יִם אַ֣יִל אֶחָ֑ד שִׁבְעָ֥ה כְבָשִׂ֖ים בְּנֵ֥י שָׁנָֽה׃ 27
ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
וּמִנְחָתָ֔ם סֹ֖לֶת בְּלוּלָ֣ה בַשָּׁ֑מֶן שְׁלֹשָׁ֤ה עֶשְׂרֹנִים֙ לַפָּ֣ר הָֽאֶחָ֔ד שְׁנֵי֙ עֶשְׂרֹנִ֔ים לָאַ֖יִל הָאֶחָֽד׃ 28
ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ
עִשָּׂרוֹן֙ עִשָּׂר֔וֹן לַכֶּ֖בֶשׂ הָאֶחָ֑ד לְשִׁבְעַ֖ת הַכְּבָשִֽׂים׃ 29
ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ,
שְׂעִ֥יר עִזִּ֖ים אֶחָ֑ד לְכַפֵּ֖ר עֲלֵיכֶֽם׃ 30
ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು.
מִלְּבַ֞ד עֹלַ֧ת הַתָּמִ֛יד וּמִנְחָת֖וֹ תַּעֲשׂ֑וּ תְּמִימִ֥ם יִהְיוּ־לָכֶ֖ם וְנִסְכֵּיהֶֽם׃ פ 31
ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.

< בְּמִדְבַּר 28 >