< בְּמִדְבַּר 30 >
וַיְדַבֵּ֤ר מֹשֶׁה֙ אֶל־רָאשֵׁ֣י הַמַּטּ֔וֹת לִבְנֵ֥י יִשְׂרָאֵ֖ל לֵאמֹ֑ר זֶ֣ה הַדָּבָ֔ר אֲשֶׁ֖ר צִוָּ֥ה יְהוָֽה׃ | 1 |
೧ಮೋಶೆಯು ಇಸ್ರಾಯೇಲರ ಕುಲಾಧಿಪತಿಗಳಿಗೆ ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಆಜ್ಞಾಪಿಸಿದ್ದಾನೆ,
אִישׁ֩ כִּֽי־יִדֹּ֨ר נֶ֜דֶר לַֽיהוָ֗ה אֽוֹ־הִשָּׁ֤בַע שְׁבֻעָה֙ לֶאְסֹ֤ר אִסָּר֙ עַל־נַפְשׁ֔וֹ לֹ֥א יַחֵ֖ל דְּבָר֑וֹ כְּכָל־הַיֹּצֵ֥א מִפִּ֖יו יַעֲשֶֽׂה׃ | 2 |
೨ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.
וְאִשָּׁ֕ה כִּֽי־תִדֹּ֥ר נֶ֖דֶר לַיהוָ֑ה וְאָסְרָ֥ה אִסָּ֛ר בְּבֵ֥ית אָבִ֖יהָ בִּנְעֻרֶֽיהָ׃ | 3 |
೩“ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ
וְשָׁמַ֨ע אָבִ֜יהָ אֶת־נִדְרָ֗הּ וֶֽאֱסָרָהּ֙ אֲשֶׁ֣ר אָֽסְרָ֣ה עַל־נַפְשָׁ֔הּ וְהֶחֱרִ֥ישׁ לָ֖הּ אָבִ֑יהָ וְקָ֙מוּ֙ כָּל־נְדָרֶ֔יהָ וְכָל־אִסָּ֛ר אֲשֶׁר־אָסְרָ֥ה עַל־נַפְשָׁ֖הּ יָקֽוּם׃ | 4 |
೪ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.
וְאִם־הֵנִ֨יא אָבִ֣יהָ אֹתָהּ֮ בְּי֣וֹם שָׁמְעוֹ֒ כָּל־נְדָרֶ֗יהָ וֶֽאֱסָרֶ֛יהָ אֲשֶׁר־אָסְרָ֥ה עַל־נַפְשָׁ֖הּ לֹ֣א יָק֑וּם וַֽיהוָה֙ יִֽסְלַח־לָ֔הּ כִּי־הֵנִ֥יא אָבִ֖יהָ אֹתָֽהּ׃ | 5 |
೫ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
וְאִם־הָי֤וֹ תִֽהְיֶה֙ לְאִ֔ישׁ וּנְדָרֶ֖יהָ עָלֶ֑יהָ א֚וֹ מִבְטָ֣א שְׂפָתֶ֔יהָ אֲשֶׁ֥ר אָסְרָ֖ה עַל־נַפְשָֽׁהּ׃ | 6 |
೬“ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,
וְשָׁמַ֥ע אִישָׁ֛הּ בְּי֥וֹם שָׁמְע֖וֹ וְהֶחֱרִ֣ישׁ לָ֑הּ וְקָ֣מוּ נְדָרֶ֗יהָ וֶֽאֱסָרֶ֛הָ אֲשֶׁר־אָסְרָ֥ה עַל־נַפְשָׁ֖הּ יָקֻֽמוּ׃ | 7 |
೭ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.
וְ֠אִם בְּי֨וֹם שְׁמֹ֣עַ אִישָׁהּ֮ יָנִ֣יא אוֹתָהּ֒ וְהֵפֵ֗ר אֶת־נִדְרָהּ֙ אֲשֶׁ֣ר עָלֶ֔יהָ וְאֵת֙ מִבְטָ֣א שְׂפָתֶ֔יהָ אֲשֶׁ֥ר אָסְרָ֖ה עַל־נַפְשָׁ֑הּ וַיהוָ֖ה יִֽסְלַֽח־לָֽהּ׃ | 8 |
೮ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
וְנֵ֥דֶר אַלְמָנָ֖ה וּגְרוּשָׁ֑ה כֹּ֛ל אֲשֶׁר־אָסְרָ֥ה עַל־נַפְשָׁ֖הּ יָק֥וּם עָלֶֽיהָ׃ | 9 |
೯“ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.
וְאִם־בֵּ֥ית אִישָׁ֖הּ נָדָ֑רָה אֽוֹ־אָסְרָ֥ה אִסָּ֛ר עַל־נַפְשָׁ֖הּ בִּשְׁבֻעָֽה׃ | 10 |
೧೦“ಮುತ್ತೈದೆಯು ಅಂತಹ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ,
וְשָׁמַ֤ע אִישָׁהּ֙ וְהֶחֱרִ֣שׁ לָ֔הּ לֹ֥א הֵנִ֖יא אֹתָ֑הּ וְקָ֙מוּ֙ כָּל־נְדָרֶ֔יהָ וְכָל־אִסָּ֛ר אֲשֶׁר־אָסְרָ֥ה עַל־נַפְשָׁ֖הּ יָקֽוּם׃ | 11 |
೧೧ಅವಳ ಗಂಡನು ತಿಳಿದು ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಿಲ್ಲುವವು.
וְאִם־הָפֵר֩ יָפֵ֨ר אֹתָ֥ם ׀ אִישָׁהּ֮ בְּי֣וֹם שָׁמְעוֹ֒ כָּל־מוֹצָ֨א שְׂפָתֶ֧יהָ לִנְדָרֶ֛יהָ וּלְאִסַּ֥ר נַפְשָׁ֖הּ לֹ֣א יָק֑וּם אִישָׁ֣הּ הֲפֵרָ֔ם וַיהוָ֖ה יִֽסְלַֽח־לָֽהּ׃ | 12 |
೧೨ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಅಂಥವಳು ಯೆಹೋವನಿಗೆ ಹರಕೆ ಮಾಡಿದರೂ, ದೋಷಿಯೆಂದು ಎಣಿಸಲ್ಪಡುವುದಿಲ್ಲ.
כָּל־נֵ֛דֶר וְכָל־שְׁבֻעַ֥ת אִסָּ֖ר לְעַנֹּ֣ת נָ֑פֶשׁ אִישָׁ֥הּ יְקִימֶ֖נּוּ וְאִישָׁ֥הּ יְפֵרֶֽנּוּ׃ | 13 |
೧೩ಹೆಂಡತಿ ಮಾಡಿದ ಹರಕೆಯನ್ನೂ, ಉಪವಾಸವಾಗಿರುವೆನೆಂದು ಅವಳು ಮಾಡಿದ ಪ್ರಮಾಣವನ್ನೂ ಸ್ಥಾಪಿಸುವುದಕ್ಕಾಗಲಿ ರದ್ದುಮಾಡುವುದಕ್ಕಾಗಲಿ ಗಂಡನಿಗೆ ಅಧಿಕಾರವಿರುವುದು.
וְאִם־הַחֲרֵשׁ֩ יַחֲרִ֨ישׁ לָ֥הּ אִישָׁהּ֮ מִיּ֣וֹם אֶל־יוֹם֒ וְהֵקִים֙ אֶת־כָּל־נְדָרֶ֔יהָ א֥וֹ אֶת־כָּל־אֱסָרֶ֖יהָ אֲשֶׁ֣ר עָלֶ֑יהָ הֵקִ֣ים אֹתָ֔ם כִּי־הֶחֱרִ֥שׁ לָ֖הּ בְּי֥וֹם שָׁמְעֽוֹ׃ | 14 |
೧೪ಆದರೆ ಅವಳ ಗಂಡನು ಯಾವ ಅಡ್ಡಿಯನ್ನೂ ಮಾಡದೆ ಸುಮ್ಮನಿದ್ದರೆ ಅವನು ಅವಳ ಹರಕೆಗಳನ್ನೂ, ಪ್ರತಿಜ್ಞೆಗಳನ್ನೂ ಅವನು ನಮೂದಿಸಿದಂತೆ ಆಗುವುದು.
וְאִם־הָפֵ֥ר יָפֵ֛ר אֹתָ֖ם אַחֲרֵ֣י שָׁמְע֑וֹ וְנָשָׂ֖א אֶת־עֲוֹנָֽהּ׃ | 15 |
೧೫ಅವನು ತರುವಾಯ ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”
אֵ֣לֶּה הַֽחֻקִּ֗ים אֲשֶׁ֨ר צִוָּ֤ה יְהוָה֙ אֶת־מֹשֶׁ֔ה בֵּ֥ין אִ֖ישׁ לְאִשְׁתּ֑וֹ בֵּֽין־אָ֣ב לְבִתּ֔וֹ בִּנְעֻרֶ֖יהָ בֵּ֥ית אָבִֽיהָ׃ פ | 16 |
೧೬ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.