< מִשְׁלֵי 12 >
אֹהֵ֣ב מ֭וּסָר אֹ֣הֵֽב דָּ֑עַת וְשֹׂנֵ֖א תוֹכַ֣חַת בָּֽעַר׃ | 1 |
ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.
ט֗וֹב יָפִ֣יק רָ֭צוֹן מֵיְהוָ֑ה וְאִ֖ישׁ מְזִמּ֣וֹת יַרְשִֽׁיעַ׃ | 2 |
ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.
לֹא־יִכּ֣וֹן אָדָ֣ם בְּרֶ֑שַׁע וְשֹׁ֥רֶשׁ צַ֝דִּיקִ֗ים בַּל־יִמּֽוֹט׃ | 3 |
ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.
אֵֽשֶׁת־חַ֭יִל עֲטֶ֣רֶת בַּעְלָ֑הּ וּכְרָקָ֖ב בְּעַצְמוֹתָ֣יו מְבִישָֽׁה׃ | 4 |
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.
מַחְשְׁב֣וֹת צַדִּיקִ֣ים מִשְׁפָּ֑ט תַּחְבֻּל֖וֹת רְשָׁעִ֣ים מִרְמָֽה׃ | 5 |
ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.
דִּבְרֵ֣י רְשָׁעִ֣ים אֱרָב־דָּ֑ם וּפִ֥י יְ֝שָׁרִ֗ים יַצִּילֵֽם׃ | 6 |
ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.
הָפ֣וֹךְ רְשָׁעִ֣ים וְאֵינָ֑ם וּבֵ֖ית צַדִּיקִ֣ים יַעֲמֹֽד׃ | 7 |
ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು.
לְֽפִי־שִׂ֭כְלוֹ יְהֻלַּל־אִ֑ישׁ וְנַעֲוֵה־לֵ֝֗ב יִהְיֶ֥ה לָבֽוּז׃ | 8 |
ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.
ט֣וֹב נִ֭קְלֶה וְעֶ֣בֶד ל֑וֹ מִ֝מְּתַכַּבֵּ֗ד וַחֲסַר־לָֽחֶם׃ | 9 |
ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.
יוֹדֵ֣עַ צַ֭דִּיק נֶ֣פֶשׁ בְּהֶמְתּ֑וֹ וְֽרַחֲמֵ֥י רְ֝שָׁעִ֗ים אַכְזָרִֽי׃ | 10 |
ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.
עֹבֵ֣ד אַ֭דְמָתוֹ יִֽשְׂבַּֽע־לָ֑חֶם וּמְרַדֵּ֖ף רֵיקִ֣ים חֲסַר־לֵֽב׃ | 11 |
ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.
חָמַ֣ד רָ֭שָׁע מְצ֣וֹד רָעִ֑ים וְשֹׁ֖רֶשׁ צַדִּיקִ֣ים יִתֵּֽן׃ | 12 |
ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ; ಆದರೆ ನೀತಿವಂತರ ಬೇರು ಫಲವನ್ನು ಕೊಡುತ್ತದೆ.
בְּפֶ֣שַׁע שְׂ֭פָתַיִם מוֹקֵ֣שׁ רָ֑ע וַיֵּצֵ֖א מִצָּרָ֣ה צַדִּֽיק׃ | 13 |
ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.
מִפְּרִ֣י פִי־אִ֭ישׁ יִשְׂבַּע־ט֑וֹב וּגְמ֥וּל יְדֵי־אָ֝דָ֗ם יָשִׁ֥יב לֽוֹ׃ | 14 |
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.
דֶּ֣רֶךְ אֱ֭וִיל יָשָׁ֣ר בְּעֵינָ֑יו וְשֹׁמֵ֖עַ לְעֵצָ֣ה חָכָֽם׃ | 15 |
ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.
אֱוִ֗יל בַּ֭יּוֹם יִוָּדַ֣ע כַּעְס֑וֹ וְכֹסֶ֖ה קָל֣וֹן עָרֽוּם׃ | 16 |
ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.
יָפִ֣יחַ אֱ֭מוּנָה יַגִּ֣יד צֶ֑דֶק וְעֵ֖ד שְׁקָרִ֣ים מִרְמָֽה׃ | 17 |
ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.
יֵ֣שׁ בּ֭וֹטֶה כְּמַדְקְר֣וֹת חָ֑רֶב וּלְשׁ֖וֹן חֲכָמִ֣ים מַרְפֵּֽא׃ | 18 |
ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.
שְֽׂפַת־אֱ֭מֶת תִּכּ֣וֹן לָעַ֑ד וְעַד־אַ֝רְגִּ֗יעָה לְשׁ֣וֹן שָֽׁקֶר׃ | 19 |
ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.
מִ֭רְמָה בְּלֶב־חֹ֣רְשֵׁי רָ֑ע וּֽלְיֹעֲצֵ֖י שָׁל֣וֹם שִׂמְחָֽה׃ | 20 |
ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
לֹא־יְאֻנֶּ֣ה לַצַּדִּ֣יק כָּל־אָ֑וֶן וּ֝רְשָׁעִ֗ים מָ֣לְאוּ רָֽע׃ | 21 |
ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.
תּוֹעֲבַ֣ת יְ֭הוָה שִׂפְתֵי־שָׁ֑קֶר וְעֹשֵׂ֖י אֱמוּנָ֣ה רְצוֹנֽוֹ׃ | 22 |
ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.
אָדָ֣ם עָ֭רוּם כֹּ֣סֶה דָּ֑עַת וְלֵ֥ב כְּ֝סִילִ֗ים יִקְרָ֥א אִוֶּֽלֶת׃ | 23 |
ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.
יַד־חָרוּצִ֥ים תִּמְשׁ֑וֹל ו֝רְמִיָּ֗ה תִּהְיֶ֥ה לָמַֽס׃ | 24 |
ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.
דְּאָגָ֣ה בְלֶב־אִ֣ישׁ יַשְׁחֶ֑נָּה וְדָבָ֖ר ט֣וֹב יְשַׂמְּחֶֽנָּה׃ | 25 |
ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.
יָתֵ֣ר מֵרֵעֵ֣הוּ צַדִּ֑יק וְדֶ֖רֶךְ רְשָׁעִ֣ים תַּתְעֵֽם׃ | 26 |
ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.
לֹא־יַחֲרֹ֣ךְ רְמִיָּ֣ה צֵיד֑וֹ וְהוֹן־אָדָ֖ם יָקָ֣ר חָרֽוּץ׃ | 27 |
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.
בְּאֹֽרַח־צְדָקָ֥ה חַיִּ֑ים וְדֶ֖רֶךְ נְתִיבָ֣ה אַל־מָֽוֶת׃ | 28 |
ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.