< מִשְׁלֵי 19 >

טֽוֹב־רָ֭שׁ הוֹלֵ֣ךְ בְּתֻמּ֑וֹ מֵעִקֵּ֥שׁ שְׂ֝פָתָ֗יו וְה֣וּא כְסִֽיל׃ 1
ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
גַּ֤ם בְּלֹא־דַ֣עַת נֶ֣פֶשׁ לֹא־ט֑וֹב וְאָ֖ץ בְּרַגְלַ֣יִם חוֹטֵֽא׃ 2
ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
אִוֶּ֣לֶת אָ֭דָם תְּסַלֵּ֣ף דַּרְכּ֑וֹ וְעַל־יְ֝הוָ֗ה יִזְעַ֥ף לִבּֽוֹ׃ 3
ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
ה֗וֹן יֹ֭סִיף רֵעִ֣ים רַבִּ֑ים וְ֝דָ֗ל מֵרֵ֥עהוּ יִפָּרֵֽד׃ 4
ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
עֵ֣ד שְׁ֭קָרִים לֹ֣א יִנָּקֶ֑ה וְיָפִ֥יחַ כְּ֝זָבִ֗ים לֹ֣א יִמָּלֵֽט׃ 5
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
רַ֭בִּים יְחַלּ֣וּ פְנֵֽי־נָדִ֑יב וְכָל־הָ֝רֵ֗עַ לְאִ֣ישׁ מַתָּֽן׃ 6
ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
כָּ֥ל אֲחֵי־רָ֨שׁ ׀ שְֽׂנֵאֻ֗הוּ אַ֤ף כִּ֣י מְ֭רֵעֵהוּ רָחֲק֣וּ מִמֶּ֑נּוּ מְרַדֵּ֖ף אֲמָרִ֣ים לוֹ הֵֽמָּה׃ 7
ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
קֹֽנֶה־לֵּ֭ב אֹהֵ֣ב נַפְשׁ֑וֹ שֹׁמֵ֥ר תְּ֝בוּנָ֗ה לִמְצֹא־טֽוֹב׃ 8
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
עֵ֣ד שְׁ֭קָרִים לֹ֣א יִנָּקֶ֑ה וְיָפִ֖יחַ כְּזָבִ֣ים יֹאבֵֽד׃ פ 9
ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
לֹֽא־נָאוֶ֣ה לִכְסִ֣יל תַּעֲנ֑וּג אַ֝֗ף כִּֽי־לְעֶ֤בֶד ׀ מְשֹׁ֬ל בְּשָׂרִֽים׃ 10
೧೦ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
שֵׂ֣כֶל אָ֭דָם הֶאֱרִ֣יךְ אַפּ֑וֹ וְ֝תִפאַרְתּ֗וֹ עֲבֹ֣ר עַל־פָּֽשַׁע׃ 11
೧೧ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
נַ֣הַם כַּ֭כְּפִיר זַ֣עַף מֶ֑לֶךְ וּכְטַ֖ל עַל־עֵ֣שֶׂב רְצוֹנֽוֹ׃ 12
೧೨ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
הַוֹּ֣ת לְ֭אָבִיו בֵּ֣ן כְּסִ֑יל וְדֶ֥לֶף טֹ֝רֵ֗ד מִדְיְנֵ֥י אִשָּֽׁה׃ 13
೧೩ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
בַּ֣יִת וָ֭הוֹן נַחֲלַ֣ת אָב֑וֹת וּ֝מֵיְהוָ֗ה אִשָּׁ֥ה מַשְׂכָּֽלֶת׃ 14
೧೪ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
עַ֭צְלָה תַּפִּ֣יל תַּרְדֵּמָ֑ה וְנֶ֖פֶשׁ רְמִיָּ֣ה תִרְעָֽב׃ 15
೧೫ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
שֹׁמֵ֣ר מִ֭צְוָה שֹׁמֵ֣ר נַפְשׁ֑וֹ בּוֹזֵ֖ה דְרָכָ֣יו יָמֽוּת׃ 16
೧೬ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
מַלְוֵ֣ה יְ֭הוָה ח֣וֹנֵֽן דָּ֑ל וּ֝גְמֻל֗וֹ יְשַׁלֶּם־לֽוֹ׃ 17
೧೭ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
יַסֵּ֣ר בִּ֭נְךָ כִּי־יֵ֣שׁ תִּקְוָ֑ה וְאֶל־הֲ֝מִית֗וֹ אַל־תִּשָּׂ֥א נַפְשֶֽׁךָ׃ 18
೧೮ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
גְּֽדָל חֵ֭מָה נֹ֣שֵׂא עֹ֑נֶשׁ כִּ֥י אִם־תַּ֝צִּ֗יל וְע֣וֹד תּוֹסִֽף׃ 19
೧೯ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
שְׁמַ֣ע עֵ֭צָה וְקַבֵּ֣ל מוּסָ֑ר לְ֝מַ֗עַן תֶּחְכַּ֥ם בְּאַחֲרִיתֶֽךָ׃ 20
೨೦ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
רַבּ֣וֹת מַחֲשָׁב֣וֹת בְּלֶב־אִ֑ישׁ וַעֲצַ֥ת יְ֝הוָ֗ה הִ֣יא תָקֽוּם׃ 21
೨೧ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
תַּאֲוַ֣ת אָדָ֣ם חַסְדּ֑וֹ וְטֽוֹב־רָ֝שׁ מֵאִ֥ישׁ כָּזָֽב׃ 22
೨೨ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
יִרְאַ֣ת יְהוָ֣ה לְחַיִּ֑ים וְשָׂבֵ֥עַ יָ֝לִ֗ין בַּל־יִפָּ֥קֶד רָֽע׃ 23
೨೩ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
טָ֘מַ֤ן עָצֵ֣ל יָ֭דוֹ בַּצַּלָּ֑חַת גַּם־אֶל־פִּ֝֗יהוּ לֹ֣א יְשִׁיבֶֽנָּה׃ 24
೨೪ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
לֵ֣ץ תַּ֭כֶּה וּפֶ֣תִי יַעְרִ֑ם וְהוֹכִ֥יחַ לְ֝נָב֗וֹן יָבִ֥ין דָּֽעַת׃ 25
೨೫ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
מְֽשַׁדֶּד־אָ֭ב יַבְרִ֣יחַ אֵ֑ם בֵּ֝֗ן מֵבִ֥ישׁ וּמַחְפִּֽיר׃ 26
೨೬ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
חַֽדַל־בְּ֭נִי לִשְׁמֹ֣עַ מוּסָ֑ר לִ֝שְׁג֗וֹת מֵֽאִמְרֵי־דָֽעַת׃ 27
೨೭ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
עֵ֣ד בְּ֭לִיַּעַל יָלִ֣יץ מִשְׁפָּ֑ט וּפִ֥י רְ֝שָׁעִ֗ים יְבַלַּע־אָֽוֶן׃ 28
೨೮ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
נָכ֣וֹנוּ לַלֵּצִ֣ים שְׁפָטִ֑ים וּ֝מַהֲלֻמ֗וֹת לְגֵ֣ו כְּסִילִֽים׃ 29
೨೯ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.

< מִשְׁלֵי 19 >