< תְהִלִּים 107 >
הֹד֣וּ לַיהוָ֣ה כִּי־ט֑וֹב כִּ֖י לְעוֹלָ֣ם חַסְדּֽוֹ׃ | 1 |
ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.
יֹ֭אמְרוּ גְּאוּלֵ֣י יְהוָ֑ה אֲשֶׁ֥ר גְּ֝אָלָ֗ם מִיַּד־צָֽר׃ | 2 |
ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ
וּֽמֵאֲרָצ֗וֹת קִ֫בְּצָ֥ם מִמִּזְרָ֥ח וּמִֽמַּעֲרָ֑ב מִצָּפ֥וֹן וּמִיָּֽם׃ | 3 |
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.
תָּע֣וּ בַ֭מִּדְבָּר בִּישִׁימ֣וֹן דָּ֑רֶךְ עִ֥יר מ֝וֹשָׁ֗ב לֹ֣א מָצָֽאוּ׃ | 4 |
ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.
רְעֵבִ֥ים גַּם־צְמֵאִ֑ים נַ֝פְשָׁ֗ם בָּהֶ֥ם תִּתְעַטָּֽף׃ | 5 |
ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು.
וַיִּצְעֲק֣וּ אֶל־יְ֭הוָה בַּצַּ֣ר לָהֶ֑ם מִ֝מְּצֽוּקוֹתֵיהֶ֗ם יַצִּילֵֽם׃ | 6 |
ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.
וַ֭יַּֽדְרִיכֵם בְּדֶ֣רֶךְ יְשָׁרָ֑ה לָ֝לֶ֗כֶת אֶל־עִ֥יר מוֹשָֽׁב׃ | 7 |
ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು.
יוֹד֣וּ לַיהוָ֣ה חַסְדּ֑וֹ וְ֝נִפְלְאוֹתָ֗יו לִבְנֵ֥י אָדָֽם׃ | 8 |
ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
כִּי־הִ֭שְׂבִּיעַ נֶ֣פֶשׁ שֹׁקֵקָ֑ה וְנֶ֥פֶשׁ רְ֝עֵבָה מִלֵּא־טֽוֹב׃ | 9 |
ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.
יֹ֭שְׁבֵי חֹ֣שֶׁךְ וְצַלְמָ֑וֶת אֲסִירֵ֖י עֳנִ֣י וּבַרְזֶֽל׃ | 10 |
ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.
כִּֽי־הִמְר֥וּ אִמְרֵי־אֵ֑ל וַעֲצַ֖ת עֶלְי֣וֹן נָאָֽצוּ׃ | 11 |
ಅವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತರ ಯೋಜನೆಯ ಬಗ್ಗೆ ಹೀನೈಯಿಸಿದ್ದರಿಂದ ಅವರಿಗೆ ಹಾಗಾಯಿತು.
וַיַּכְנַ֣ע בֶּעָמָ֣ל לִבָּ֑ם כָּ֝שְׁל֗וּ וְאֵ֣ין עֹזֵֽר׃ | 12 |
ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.
וַיִּזְעֲק֣וּ אֶל־יְ֭הוָה בַּצַּ֣ר לָהֶ֑ם מִ֝מְּצֻֽקוֹתֵיהֶ֗ם יוֹשִׁיעֵֽם׃ | 13 |
ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.
יֽ֭וֹצִיאֵם מֵחֹ֣שֶׁךְ וְצַלְמָ֑וֶת וּמוֹסְר֖וֹתֵיהֶ֣ם יְנַתֵּֽק׃ | 14 |
ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.
יוֹד֣וּ לַיהוָ֣ה חַסְדּ֑וֹ וְ֝נִפְלְאוֹתָ֗יו לִבְנֵ֥י אָדָֽם׃ | 15 |
ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
כִּֽי־שִׁ֭בַּר דַּלְת֣וֹת נְחֹ֑שֶׁת וּבְרִיחֵ֖י בַרְזֶ֣ל גִּדֵּֽעַ׃ | 16 |
ದೇವರು ಕಂಚಿನ ಕದಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದುಬಿಟ್ಟಿದ್ದಾರೆ.
אֱ֭וִלִים מִדֶּ֣רֶךְ פִּשְׁעָ֑ם וּֽ֝מֵעֲוֹֽנֹתֵיהֶ֗ם יִתְעַנּֽוּ׃ | 17 |
ಮೂಢರು ತಮ್ಮ ದ್ರೋಹದಿಂದಲೂ ಕೆಲವರು ತಮ್ಮ ಅಕ್ರಮಗಳಿಂದಲೂ ಶ್ರಮೆ ಪಡುತ್ತಾರೆ.
כָּל־אֹ֭כֶל תְּתַעֵ֣ב נַפְשָׁ֑ם וַ֝יַּגִּ֗יעוּ עַד־שַׁ֥עֲרֵי מָֽוֶת׃ | 18 |
ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.
וַיִּזְעֲק֣וּ אֶל־יְ֭הוָה בַּצַּ֣ר לָהֶ֑ם מִ֝מְּצֻֽקוֹתֵיהֶ֗ם יוֹשִׁיעֵֽם׃ | 19 |
ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.
יִשְׁלַ֣ח דְּ֭בָרוֹ וְיִרְפָּאֵ֑ם וִֽ֝ימַלֵּ֗ט מִשְּׁחִיתוֹתָֽם׃ | 20 |
ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.
יוֹד֣וּ לַיהוָ֣ה חַסְדּ֑וֹ וְ֝נִפְלְאוֹתָ֗יו לִבְנֵ֥י אָדָֽם׃ | 21 |
ಅವರು ಯೆಹೋವ ದೇವರನ್ನು ಒಡಂಬಡಿಕೆಯ ಕುಂದದ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
וְ֭יִזְבְּחוּ זִבְחֵ֣י תוֹדָ֑ה וִֽיסַפְּר֖וּ מַעֲשָׂ֣יו בְּרִנָּֽה׃ | 22 |
ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.
יוֹרְדֵ֣י הַ֭יָּם בָּאֳנִיּ֑וֹת עֹשֵׂ֥י מְ֝לָאכָ֗ה בְּמַ֣יִם רַבִּֽים׃ | 23 |
ಕೆಲವರು ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗುತ್ತಾರೆ. ಅವರು ಜಲರಾಶಿಯಲ್ಲಿ ವ್ಯಾಪಾರ ಮಾಡುವವರು,
הֵ֣מָּה רָ֭אוּ מַעֲשֵׂ֣י יְהוָ֑ה וְ֝נִפְלְאוֹתָ֗יו בִּמְצוּלָֽה׃ | 24 |
ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ.
וַיֹּ֗אמֶר וַֽ֭יַּעֲמֵד ר֣וּחַ סְעָרָ֑ה וַתְּרוֹמֵ֥ם גַּלָּֽיו׃ | 25 |
ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.
יַעֲל֣וּ שָׁ֭מַיִם יֵרְד֣וּ תְהוֹמ֑וֹת נַ֝פְשָׁ֗ם בְּרָעָ֥ה תִתְמוֹגָֽג׃ | 26 |
ಅವರು ಆಕಾಶದವರೆಗೆ ಏರುತ್ತಾರೆ, ತಿರುಗಿ ಅಗಾಧಗಳವರೆಗೆ ಇಳಿಯುತ್ತಾರೆ; ಅಪಾಯದಲ್ಲಿ ಅವರ ಪ್ರಾಣವು ಕಳವಳದಿಂದ ಕರಗಿ ಹೋಗುತ್ತದೆ.
יָח֣וֹגּוּ וְ֭יָנוּעוּ כַּשִּׁכּ֑וֹר וְכָל־חָ֝כְמָתָ֗ם תִּתְבַּלָּֽע׃ | 27 |
ಅವರು ಅತ್ತಿತ್ತ ತೂಗಾಡಿ ಕುಡುಕರಂತೆ ಓಲಾಡುತ್ತಿದ್ದರು. ಅವರ ಜ್ಞಾನವೆಲ್ಲಾ ಮುಗಿದು ಹೋಯಿತು.
וַיִּצְעֲק֣וּ אֶל־יְ֭הוָה בַּצַּ֣ר לָהֶ֑ם וּֽ֝מִמְּצֽוּקֹתֵיהֶ֗ם יוֹצִיאֵֽם׃ | 28 |
ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.
יָקֵ֣ם סְ֭עָרָה לִדְמָמָ֑ה וַ֝יֶּחֱשׁ֗וּ גַּלֵּיהֶֽם׃ | 29 |
ದೇವರು ಬಿರುಗಾಳಿಯನ್ನು ಶಾಂತ ಮಾಡಿದರು. ಅದರ ತೆರೆಗಳು ನಿಂತುಹೋದವು.
וַיִּשְׂמְח֥וּ כִֽי־יִשְׁתֹּ֑קוּ וַ֝יַּנְחֵ֗ם אֶל־מְח֥וֹז חֶפְצָֽם׃ | 30 |
ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.
יוֹד֣וּ לַיהוָ֣ה חַסְדּ֑וֹ וְ֝נִפְלְאוֹתָ֗יו לִבְנֵ֥י אָדָֽם׃ | 31 |
ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.
וִֽ֭ירֹמְמוּהוּ בִּקְהַל־עָ֑ם וּבְמוֹשַׁ֖ב זְקֵנִ֣ים יְהַלְלֽוּהוּ׃ | 32 |
ಜನರ ಸಭೆಯಲ್ಲಿ ದೇವರನ್ನು ಕೊಂಡಾಡಲಿ, ಹಿರಿಯರ ಸಭೆಯಲ್ಲಿ ದೇವರನ್ನು ಸ್ತುತಿಸಲಿ.
יָשֵׂ֣ם נְהָר֣וֹת לְמִדְבָּ֑ר וּמֹצָ֥אֵי מַ֝֗יִם לְצִמָּאֽוֹן׃ | 33 |
ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.
אֶ֣רֶץ פְּ֭רִי לִמְלֵחָ֑ה מֵ֝רָעַ֗ת יֹ֣שְׁבֵי בָֽהּ׃ | 34 |
ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.
יָשֵׂ֣ם מִ֭דְבָּר לַֽאֲגַם־מַ֑יִם וְאֶ֥רֶץ צִ֝יָּ֗ה לְמֹצָ֥אֵי מָֽיִם׃ | 35 |
ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.
וַיּ֣וֹשֶׁב שָׁ֣ם רְעֵבִ֑ים וַ֝יְכוֹנְנ֗וּ עִ֣יר מוֹשָֽׁב׃ | 36 |
ಆದರೆ ದೇವರು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದರು; ಆ ಜನರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿದರು.
וַיִּזְרְע֣וּ שָׂ֭דוֹת וַיִּטְּע֣וּ כְרָמִ֑ים וַ֝יַּעֲשׂ֗וּ פְּרִ֣י תְבֽוּאָה׃ | 37 |
ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.
וַיְבָרֲכֵ֣ם וַיִּרְבּ֣וּ מְאֹ֑ד וּ֝בְהֶמְתָּ֗ם לֹ֣א יַמְעִֽיט׃ | 38 |
ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.
וַיִּמְעֲט֥וּ וַיָּשֹׁ֑חוּ מֵעֹ֖צֶר רָעָ֣ה וְיָגֽוֹן׃ | 39 |
ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.
שֹׁפֵ֣ךְ בּ֭וּז עַל־נְדִיבִ֑ים וַ֝יַּתְעֵ֗ם בְּתֹ֣הוּ לֹא־דָֽרֶךְ׃ | 40 |
ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.
וַיְשַׂגֵּ֣ב אֶבְי֣וֹן מֵע֑וֹנִי וַיָּ֥שֶׂם כַּ֝צֹּ֗אן מִשְׁפָּחֽוֹת׃ | 41 |
ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.
יִרְא֣וּ יְשָׁרִ֣ים וְיִשְׂמָ֑חוּ וְכָל־עַ֝וְלָ֗ה קָ֣פְצָה פִּֽיהָ׃ | 42 |
ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.
מִי־חָכָ֥ם וְיִשְׁמָר־אֵ֑לֶּה וְ֝יִתְבּֽוֹנְנ֗וּ חַֽסְדֵ֥י יְהוָֽה׃ | 43 |
ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.