< תְהִלִּים 139 >
לַ֭מְנַצֵּחַ לְדָוִ֣ד מִזְמ֑וֹר יְהוָ֥ה חֲ֝קַרְתַּ֗נִי וַתֵּדָֽע׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ; ನನ್ನನ್ನು ತಿಳಿದುಕೊಂಡಿದ್ದೀರಿ.
אַתָּ֣ה יָ֭דַעְתָּ שִׁבְתִּ֣י וְקוּמִ֑י בַּ֥נְתָּה לְ֝רֵעִ֗י מֵרָחֽוֹק׃ | 2 |
ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.
אָרְחִ֣י וְרִבְעִ֣י זֵרִ֑יתָ וְֽכָל־דְּרָכַ֥י הִסְכַּֽנְתָּה׃ | 3 |
ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ.
כִּ֤י אֵ֣ין מִ֭לָּה בִּלְשׁוֹנִ֑י הֵ֥ן יְ֝הוָ֗ה יָדַ֥עְתָּ כֻלָּֽהּ׃ | 4 |
ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.
אָח֣וֹר וָקֶ֣דֶם צַרְתָּ֑נִי וַתָּ֖שֶׁת עָלַ֣י כַּפֶּֽכָה׃ | 5 |
ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.
פְּלִ֣יאָֽה דַ֣עַת מִמֶּ֑נִּי נִ֝שְׂגְּבָ֗ה לֹא־א֥וּכַֽל לָֽהּ׃ | 6 |
ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.
אָ֭נָ֥ה אֵלֵ֣ךְ מֵרוּחֶ֑ךָ וְ֝אָ֗נָה מִפָּנֶ֥יךָ אֶבְרָֽח׃ | 7 |
ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ?
אִם־אֶסַּ֣ק שָׁ֭מַיִם שָׁ֣ם אָ֑תָּה וְאַצִּ֖יעָה שְּׁא֣וֹל הִנֶּֽךָּ׃ (Sheol ) | 8 |
ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ. (Sheol )
אֶשָּׂ֥א כַנְפֵי־שָׁ֑חַר אֶ֝שְׁכְּנָ֗ה בְּאַחֲרִ֥ית יָֽם׃ | 9 |
ಉದಯದ ರೆಕ್ಕೆಗಳನ್ನು ತೆಗೆದುಕೊಂಡು, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ,
גַּם־שָׁ֭ם יָדְךָ֣ תַנְחֵ֑נִי וְֽתֹאחֲזֵ֥נִי יְמִינֶֽךָ׃ | 10 |
ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.
וָ֭אֹמַר אַךְ־חֹ֣שֶׁךְ יְשׁוּפֵ֑נִי וְ֝לַ֗יְלָה א֣וֹר בַּעֲדֵֽנִי׃ | 11 |
“ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ,
גַּם־חֹשֶׁךְ֮ לֹֽא־יַחְשִׁ֪יךְ מִ֫מֶּ֥ךָ וְ֭לַיְלָה כַּיּ֣וֹם יָאִ֑יר כַּ֝חֲשֵׁיכָ֗ה כָּאוֹרָֽה׃ | 12 |
ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.
כִּֽי־אַ֭תָּה קָנִ֣יתָ כִלְיֹתָ֑י תְּ֝סֻכֵּ֗נִי בְּבֶ֣טֶן אִמִּֽי׃ | 13 |
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
אֽוֹדְךָ֗ עַ֤ל כִּ֥י נוֹרָא֗וֹת נִ֫פְלֵ֥יתִי נִפְלָאִ֥ים מַעֲשֶׂ֑יךָ וְ֝נַפְשִׁ֗י יֹדַ֥עַת מְאֹֽד׃ | 14 |
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.
לֹא־נִכְחַ֥ד עָצְמִ֗י מִ֫מֶּ֥ךָּ אֲשֶׁר־עֻשֵּׂ֥יתִי בַסֵּ֑תֶר רֻ֝קַּ֗מְתִּי בְּֽתַחְתִּיּ֥וֹת אָֽרֶץ׃ | 15 |
ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.
גָּלְמִ֤י ׀ רָ֘א֤וּ עֵינֶ֗יךָ וְעַֽל־סִפְרְךָ֮ כֻּלָּ֪ם יִכָּ֫תֵ֥בוּ יָמִ֥ים יֻצָּ֑רוּ וְל֖וֹ אֶחָ֣ד בָּהֶֽם׃ | 16 |
ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.
וְלִ֗י מַה־יָּקְר֣וּ רֵעֶ֣יךָ אֵ֑ל מֶ֥ה עָ֝צְמוּ רָאשֵׁיהֶֽם׃ | 17 |
ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!
אֶ֭סְפְּרֵם מֵח֣וֹל יִרְבּ֑וּן הֱ֝קִיצֹ֗תִי וְעוֹדִ֥י עִמָּֽךְ׃ | 18 |
ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.
אִם־תִּקְטֹ֖ל אֱל֥וֹהַּ ׀ רָשָׁ֑ע וְאַנְשֵׁ֥י דָ֝מִ֗ים ס֣וּרוּ מֶֽנִּי׃ | 19 |
ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ!
אֲשֶׁ֣ר יֹ֭אמְרֻךָ לִמְזִמָּ֑ה נָשֻׂ֖א לַשָּׁ֣וְא עָרֶֽיךָ׃ | 20 |
ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ.
הֲלֽוֹא־מְשַׂנְאֶ֖יךָ יְהוָ֥ה ׀ אֶשְׂנָ֑א וּ֝בִתְקוֹמְמֶ֗יךָ אֶתְקוֹטָֽט׃ | 21 |
ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ?
תַּכְלִ֣ית שִׂנְאָ֣ה שְׂנֵאתִ֑ים לְ֝אוֹיְבִ֗ים הָ֣יוּ לִֽי׃ | 22 |
ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ.
חָקְרֵ֣נִי אֵ֭ל וְדַ֣ע לְבָבִ֑י בְּ֝חָנֵ֗נִי וְדַ֣ע שַׂרְעַפָּֽי׃ | 23 |
ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
וּרְאֵ֗ה אִם־דֶּֽרֶךְ־עֹ֥צֶב בִּ֑י וּ֝נְחֵ֗נִי בְּדֶ֣רֶךְ עוֹלָֽם׃ | 24 |
ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.