< תְהִלִּים 28 >
לְדָוִ֡ד אֵ֘לֶ֤יךָ יְהוָ֨ה ׀ אֶקְרָ֗א צוּרִי֮ אַֽל־תֶּחֱרַ֪שׁ מִ֫מֶּ֥נִּי פֶּן־תֶּֽחֱשֶׁ֥ה מִמֶּ֑נִּי וְ֝נִמְשַׁ֗לְתִּי עִם־י֥וֹרְדֵי בֽוֹר׃ | 1 |
ದಾವೀದನ ಕೀರ್ತನೆ. ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.
שְׁמַ֤ע ק֣וֹל תַּ֭חֲנוּנַי בְּשַׁוְּעִ֣י אֵלֶ֑יךָ בְּנָשְׂאִ֥י יָ֝דַ֗י אֶל־דְּבִ֥יר קָדְשֶֽׁךָ׃ | 2 |
ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.
אַל־תִּמְשְׁכֵ֣נִי עִם־רְשָׁעִים֮ וְעִם־פֹּ֪עֲלֵ֫י אָ֥וֶן דֹּבְרֵ֣י שָׁ֭לוֹם עִם־רֵֽעֵיהֶ֑ם וְ֝רָעָ֗ה בִּלְבָבָֽם׃ | 3 |
ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.
תֶּן־לָהֶ֣ם כְּפָעֳלָם֮ וּכְרֹ֪עַ מַֽעַלְלֵ֫יהֶ֥ם כְּמַעֲשֵׂ֣ה יְ֭דֵיהֶם תֵּ֣ן לָהֶ֑ם הָשֵׁ֖ב גְּמוּלָ֣ם לָהֶֽם׃ | 4 |
ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.
כִּ֤י לֹ֤א יָבִ֡ינוּ אֶל־פְּעֻלֹּ֣ת יְ֭הוָה וְאֶל־מַעֲשֵׂ֣ה יָדָ֑יו יֶ֝הֶרְסֵ֗ם וְלֹ֣א יִבְנֵֽם׃ | 5 |
ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.
בָּר֥וּךְ יְהוָ֑ה כִּי־שָׁ֝מַע ק֣וֹל תַּחֲנוּנָֽי׃ | 6 |
ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.
יְהוָ֤ה ׀ עֻזִּ֥י וּמָגִנִּי֮ בּ֤וֹ בָטַ֥ח לִבִּ֗י וְֽנֶ֫עֱזָ֥רְתִּי וַיַּעֲלֹ֥ז לִבִּ֑י וּֽמִשִּׁירִ֥י אֲהוֹדֶֽנּוּ׃ | 7 |
ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.
יְהוָ֥ה עֹֽז־לָ֑מוֹ וּמָ֘ע֤וֹז יְשׁוּע֖וֹת מְשִׁיח֣וֹ הֽוּא׃ | 8 |
ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.
הוֹשִׁ֤יעָה ׀ אֶת־עַמֶּ֗ךָ וּבָרֵ֥ךְ אֶת־נַחֲלָתֶ֑ךָ וּֽרְעֵ֥ם וְ֝נַשְּׂאֵ֗ם עַד־הָעוֹלָֽם׃ | 9 |
ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.