< תְהִלִּים 36 >
לַמְנַצֵּ֬חַ ׀ לְעֶֽבֶד־יְהוָ֬ה לְדָוִֽד׃ נְאֻֽם־פֶּ֣שַׁע לָ֭רָשָׁע בְּקֶ֣רֶב לִבִּ֑י אֵֽין־פַּ֥חַד אֱ֝לֹהִ֗ים לְנֶ֣גֶד עֵינָֽיו׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆಹೋವ ದೇವರ ಸೇವಕನಾದ ದಾವೀದನ ಕೀರ್ತನೆ. ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.
כִּֽי־הֶחֱלִ֣יק אֵלָ֣יו בְּעֵינָ֑יו לִמְצֹ֖א עֲוֹנ֣וֹ לִשְׂנֹֽא׃ | 2 |
ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.
דִּבְרֵי־פִ֭יו אָ֣וֶן וּמִרְמָ֑ה חָדַ֖ל לְהַשְׂכִּ֣יל לְהֵיטִֽיב׃ | 3 |
ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.
אָ֤וֶן ׀ יַחְשֹׁ֗ב עַֽל־מִשְׁכָּ֫ב֥וֹ יִ֭תְיַצֵּב עַל־דֶּ֣רֶךְ לֹא־ט֑וֹב רָ֝֗ע לֹ֣א יִמְאָֽס׃ | 4 |
ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.
יְ֭הוָה בְּהַשָּׁמַ֣יִם חַסְדֶּ֑ךָ אֱ֝מֽוּנָתְךָ֗ עַד־שְׁחָקִֽים׃ | 5 |
ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ.
צִדְקָֽתְךָ֨ ׀ כְּֽהַרְרֵי־אֵ֗ל מִ֭שְׁפָּטֶךָ תְּה֣וֹם רַבָּ֑ה אָ֤דָֽם־וּבְהֵמָ֖ה תוֹשִׁ֣יעַ יְהוָֽה׃ | 6 |
ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.
מַה־יָּקָ֥ר חַסְדְּךָ֗ אֱלֹ֫הִ֥ים וּבְנֵ֥י אָדָ֑ם בְּצֵ֥ל כְּ֝נָפֶ֗יךָ יֶחֱסָיֽוּן׃ | 7 |
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.
יִ֭רְוְיֻן מִדֶּ֣שֶׁן בֵּיתֶ֑ךָ וְנַ֖חַל עֲדָנֶ֣יךָ תַשְׁקֵֽם׃ | 8 |
ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ.
כִּֽי־עִ֭מְּךָ מְק֣וֹר חַיִּ֑ים בְּ֝אוֹרְךָ֗ נִרְאֶה־אֽוֹר׃ | 9 |
ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.
מְשֹׁ֣ךְ חַ֭סְדְּךָ לְיֹדְעֶ֑יךָ וְ֝צִדְקָֽתְךָ֗ לְיִשְׁרֵי־לֵֽב׃ | 10 |
ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.
אַל־תְּ֭בוֹאֵנִי רֶ֣גֶל גַּאֲוָ֑ה וְיַד־רְ֝שָׁעִ֗ים אַל־תְּנִדֵֽנִי׃ | 11 |
ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.
שָׁ֣ם נָ֭פְלוּ פֹּ֣עֲלֵי אָ֑וֶן דֹּ֝ח֗וּ וְלֹא־יָ֥כְלוּ קֽוּם׃ | 12 |
ಕೇಡು ಮಾಡುವವರು ಬಿದ್ದಿದ್ದಾರೆ. ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ.