< תְהִלִּים 41 >
לַמְנַצֵּ֗חַ מִזְמ֥וֹר לְדָוִֽד׃ אַ֭שְׁרֵי מַשְׂכִּ֣יל אֶל־דָּ֑ל בְּי֥וֹם רָ֝עָ֗ה יְֽמַלְּטֵ֥הוּ יְהוָֽה׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.
יְהוָ֤ה ׀ יִשְׁמְרֵ֣הוּ וִֽ֭יחַיֵּהוּ וְאֻשַּׁ֣ר בָּאָ֑רֶץ וְאַֽל־תִּ֝תְּנֵ֗הוּ בְּנֶ֣פֶשׁ אֹיְבָֽיו׃ | 2 |
ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.
יְֽהוָ֗ה יִ֭סְעָדֶנּוּ עַל־עֶ֣רֶשׂ דְּוָ֑י כָּל־מִ֝שְׁכָּב֗וֹ הָפַ֥כְתָּ בְחָלְיֽוֹ׃ | 3 |
ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.
אֲֽנִי־אָ֭מַרְתִּי יְהוָ֣ה חָנֵּ֑נִי רְפָאָ֥ה נַ֝פְשִׁ֗י כִּי־חָטָ֥אתִי לָֽךְ׃ | 4 |
“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.
אוֹיְבַ֗י יֹאמְר֣וּ רַ֣ע לִ֑י מָתַ֥י יָ֝מ֗וּת וְאָבַ֥ד שְׁמֽוֹ׃ | 5 |
“ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.
וְאִם־בָּ֤א לִרְא֨וֹת ׀ שָׁ֤וְא יְדַבֵּ֗ר לִבּ֗וֹ יִקְבָּץ־אָ֥וֶן ל֑וֹ יֵצֵ֖א לַח֣וּץ יְדַבֵּֽר׃ | 6 |
ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.
יַ֗חַד עָלַ֣י יִ֭תְלַחֲשׁוּ כָּל־שֹׂנְאָ֑י עָלַ֓י ׀ יַחְשְׁב֖וּ רָעָ֣ה לִֽי׃ | 7 |
ನನ್ನ ಶತ್ರುಗಳೆಲ್ಲರೂ ಸೇರಿ ನನ್ನ ಮೇಲೆ ಪಿಸುಗುಟ್ಟುತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ.
דְּֽבַר־בְּ֭לִיַּעַל יָצ֣וּק בּ֑וֹ וַאֲשֶׁ֥ר שָׁ֝כַ֗ב לֹא־יוֹסִ֥יף לָקֽוּם׃ | 8 |
“ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ.
גַּם־אִ֤ישׁ שְׁלוֹמִ֨י ׀ אֲשֶׁר־בָּטַ֣חְתִּי ב֭וֹ אוֹכֵ֣ל לַחְמִ֑י הִגְדִּ֖יל עָלַ֣י עָקֵֽב׃ | 9 |
ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.
וְאַתָּ֤ה יְהוָ֗ה חָנֵּ֥נִי וַהֲקִימֵ֑נִי וַֽאֲשַׁלְּמָ֥ה לָהֶֽם׃ | 10 |
ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು.
בְּזֹ֣את יָ֭דַעְתִּי כִּֽי־חָפַ֣צְתָּ בִּ֑י כִּ֤י לֹֽא־יָרִ֖יעַ אֹיְבִ֣י עָלָֽי׃ | 11 |
ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.
וַאֲנִ֗י בְּ֭תֻמִּי תָּמַ֣כְתָּ בִּ֑י וַתַּצִּיבֵ֖נִי לְפָנֶ֣יךָ לְעוֹלָֽם׃ | 12 |
ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.
בָּ֘ר֤וּךְ יְהוָ֨ה ׀ אֱלֹ֘הֵ֤י יִשְׂרָאֵ֗ל מֵֽ֭הָעוֹלָם וְעַ֥ד הָעוֹלָ֗ם אָ֘מֵ֥ן ׀ וְאָמֵֽן׃ | 13 |
ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ.