< תְהִלִּים 44 >
לַמְנַצֵּ֬חַ לִבְנֵי־קֹ֬רַח מַשְׂכִּֽיל׃ אֱלֹהִ֤ים ׀ בְּאָזְנֵ֬ינוּ שָׁמַ֗עְנוּ אֲבוֹתֵ֥ינוּ סִפְּרוּ־לָ֑נוּ פֹּ֥עַל פָּעַ֥לְתָּ בִֽ֝ימֵיהֶ֗ם בִּ֣ימֵי קֶֽדֶם׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಮಕ್ಕಳ ಮಾಸ್ಕಿಲ ಪದ್ಯ. ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.
אַתָּ֤ה ׀ יָדְךָ֡ גּוֹיִ֣ם ה֭וֹרַשְׁתָּ וַתִּטָּעֵ֑ם תָּרַ֥ע לְ֝אֻמִּ֗ים וַֽתְּשַׁלְּחֵֽם׃ | 2 |
ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.
כִּ֤י לֹ֪א בְחַרְבָּ֡ם יָ֥רְשׁוּ אָ֗רֶץ וּזְרוֹעָם֮ לֹא־הוֹשִׁ֪יעָ֫ה לָּ֥מוֹ כִּֽי־יְמִֽינְךָ֣ וּ֭זְרוֹעֲךָ וְא֥וֹר פָּנֶ֗יךָ כִּ֣י רְצִיתָֽם׃ | 3 |
ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.
אַתָּה־ה֣וּא מַלְכִּ֣י אֱלֹהִ֑ים צַ֝וֵּ֗ה יְשׁוּע֥וֹת יַעֲקֹֽב׃ | 4 |
ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ. ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ.
בְּ֭ךָ צָרֵ֣ינוּ נְנַגֵּ֑חַ בְּ֝שִׁמְךָ֗ נָב֥וּס קָמֵֽינוּ׃ | 5 |
ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
כִּ֤י לֹ֣א בְקַשְׁתִּ֣י אֶבְטָ֑ח וְ֝חַרְבִּ֗י לֹ֣א תוֹשִׁיעֵֽנִי׃ | 6 |
ನಾನು ನನ್ನ ಬಿಲ್ಲಿನಲ್ಲಿ ಭರವಸೆ ಇಡುವುದಿಲ್ಲ; ನನ್ನ ಖಡ್ಗವು ನನಗೆ ಜಯ ತರುವುದಿಲ್ಲ.
כִּ֣י ה֭וֹשַׁעְתָּנוּ מִצָּרֵ֑ינוּ וּמְשַׂנְאֵ֥ינוּ הֱבִישֽׁוֹתָ׃ | 7 |
ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ.
בֵּֽ֭אלֹהִים הִלַּלְ֣נוּ כָל־הַיּ֑וֹם וְשִׁמְךָ֓ ׀ לְעוֹלָ֖ם נוֹדֶ֣ה סֶֽלָה׃ | 8 |
ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ; ನಿಮ್ಮ ಹೆಸರನ್ನು ಯುಗಯುಗಕ್ಕೂ ಕೊಂಡಾಡುವೆವು.
אַף־זָ֭נַחְתָּ וַתַּכְלִימֵ֑נוּ וְלֹא־תֵ֝צֵ֗א בְּצִבְאוֹתֵֽינוּ׃ | 9 |
ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.
תְּשִׁיבֵ֣נוּ אָ֭חוֹר מִנִּי־צָ֑ר וּ֝מְשַׂנְאֵ֗ינוּ שָׁ֣סוּ לָֽמוֹ׃ | 10 |
ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.
תִּ֭תְּנֵנוּ כְּצֹ֣אן מַאֲכָ֑ל וּ֝בַגּוֹיִ֗ם זֵרִיתָֽנוּ׃ | 11 |
ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.
תִּמְכֹּֽר־עַמְּךָ֥ בְלֹא־ה֑וֹן וְלֹ֥א־רִ֝בִּ֗יתָ בִּמְחִירֵיהֶֽם׃ | 12 |
ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.
תְּשִׂימֵ֣נוּ חֶ֭רְפָּה לִשְׁכֵנֵ֑ינוּ לַ֥עַג וָ֝קֶ֗לֶס לִסְבִיבוֹתֵֽינוּ׃ | 13 |
ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ.
תְּשִׂימֵ֣נוּ מָ֭שָׁל בַּגּוֹיִ֑ם מְנֽוֹד־רֹ֝֗אשׁ בַּל־אֻמִּֽים׃ | 14 |
ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.
כָּל־הַ֭יּוֹם כְּלִמָּתִ֣י נֶגְדִּ֑י וּבֹ֖שֶׁת פָּנַ֣י כִּסָּֽתְנִי׃ | 15 |
ನಿಂದಕನ ಮತ್ತು ದೂಷಕನ ಮಾತುಗಳಿಗೂ ಮುಯ್ಯಿಗೆ ಮುಯ್ಯಿ ತೀರಿಸುವ ಶತ್ರುವಿನ ನಿಮಿತ್ತವೂ,
מִ֭קּוֹל מְחָרֵ֣ף וּמְגַדֵּ֑ף מִפְּנֵ֥י א֝וֹיֵ֗ב וּמִתְנַקֵּֽם׃ | 16 |
ಸದಾ ನನ್ನ ಅವಮಾನವು ನನ್ನ ಮುಂದೆ ಇದೆ; ನನ್ನ ಮುಖವು ನಾಚಿಕೆಯಿಂದ ಮುಚ್ಚಿದೆ.
כָּל־זֹ֣את בָּ֭אַתְנוּ וְלֹ֣א שְׁכַחֲנ֑וּךָ וְלֹֽא־שִׁ֝קַּ֗רְנוּ בִּבְרִיתֶֽךָ׃ | 17 |
ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಾವು ನಿಮ್ಮನ್ನು ಮರೆತುಬಿಡಲಿಲ್ಲ; ನಿಮ್ಮ ಒಡಂಬಡಿಕೆಯನ್ನು ಬಿಡಲಿಲ್ಲ.
לֹא־נָס֣וֹג אָח֣וֹר לִבֵּ֑נוּ וַתֵּ֥ט אֲשֻׁרֵ֗ינוּ מִנִּ֥י אָרְחֶֽךָ׃ | 18 |
ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿಮ್ಮ ಹಾದಿಯಿಂದ ತೊಲಗಲಿಲ್ಲ.
כִּ֣י דִ֭כִּיתָנוּ בִּמְק֣וֹם תַּנִּ֑ים וַתְּכַ֖ס עָלֵ֣ינוּ בְצַלְמָֽוֶת׃ | 19 |
ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.
אִם־שָׁ֭כַחְנוּ שֵׁ֣ם אֱלֹהֵ֑ינוּ וַנִּפְרֹ֥שׂ כַּ֝פֵּ֗ינוּ לְאֵ֣ל זָֽר׃ | 20 |
ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದ್ದರೆ,
הֲלֹ֣א אֱ֭לֹהִים יַֽחֲקָר־זֹ֑את כִּֽי־ה֥וּא יֹ֝דֵ֗עַ תַּעֲלֻמ֥וֹת לֵֽב׃ | 21 |
ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.
כִּֽי־עָ֭לֶיךָ הֹרַ֣גְנוּ כָל־הַיּ֑וֹם נֶ֝חְשַׁ֗בְנוּ כְּצֹ֣אן טִבְחָֽה׃ | 22 |
ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.
ע֤וּרָה ׀ לָ֖מָּה תִישַׁ֥ן ׀ אֲדֹנָ֑י הָ֝קִ֗יצָה אַל־תִּזְנַ֥ח לָנֶֽצַח׃ | 23 |
ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.
לָֽמָּה־פָנֶ֥יךָ תַסְתִּ֑יר תִּשְׁכַּ֖ח עָנְיֵ֣נוּ וְֽלַחֲצֵֽנוּ׃ | 24 |
ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?
כִּ֤י שָׁ֣חָה לֶעָפָ֣ר נַפְשֵׁ֑נוּ דָּבְקָ֖ה לָאָ֣רֶץ בִּטְנֵֽנוּ׃ | 25 |
ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ.
ק֭וּמָֽה עֶזְרָ֣תָה לָּ֑נוּ וּ֝פְדֵ֗נוּ לְמַ֣עַן חַסְדֶּֽךָ׃ | 26 |
ನಮಗೆ ಸಹಾಯಕರಾಗಿ ಏಳಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಗಾಗಿ ನಮ್ಮನ್ನು ವಿಮೋಚಿಸಿರಿ.