< תְהִלִּים 48 >
שִׁ֥יר מִ֝זְמוֹר לִבְנֵי־קֹֽרַח׃ גָּ֘ד֤וֹל יְהוָ֣ה וּמְהֻלָּ֣ל מְאֹ֑ד בְּעִ֥יר אֱ֝לֹהֵ֗ינוּ הַר־קָדְשֽׁוֹ׃ | 1 |
ಒಂದು ಗೀತೆ. ಕೋರಹೀಯನ ಪುತ್ರರು ಸಂಯೋಜಿಸಿರುವ ಒಂದು ಕೀರ್ತನೆ. ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.
יְפֵ֥ה נוֹף֮ מְשׂ֪וֹשׂ כָּל־הָ֫אָ֥רֶץ הַר־צִ֭יּוֹן יַרְכְּתֵ֣י צָפ֑וֹן קִ֝רְיַ֗ת מֶ֣לֶךְ רָֽב׃ | 2 |
ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.
אֱלֹהִ֥ים בְּאַרְמְנוֹתֶ֗יהָ נוֹדַ֥ע לְמִשְׂגָּֽב׃ | 3 |
ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.
כִּֽי־הִנֵּ֣ה הַ֭מְּלָכִים נֽוֹעֲד֑וּ עָבְר֥וּ יַחְדָּֽו׃ | 4 |
ಏಕೆಂದರೆ, ಇಗೋ, ಅರಸರು ಕೂಡಿಬಂದರು. ಅವರು ಒಟ್ಟಾಗಿ ದಾಳಿಮಾಡಲು ಬಂದರು.
הֵ֣מָּה רָ֭אוּ כֵּ֣ן תָּמָ֑הוּ נִבְהֲל֥וּ נֶחְפָּֽזוּ׃ | 5 |
ಅವರು ಪಟ್ಟಣವನ್ನು ಕಂಡು, ಬೆರಗಾದರು. ಅವರು ಭಯಪಟ್ಟು ಓಡಿಹೋದರು.
רְ֭עָדָה אֲחָזָ֣תַם שָׁ֑ם חִ֝֗יל כַּיּוֹלֵֽדָה׃ | 6 |
ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು.
בְּר֥וּחַ קָדִ֑ים תְּ֝שַׁבֵּ֗ר אֳנִיּ֥וֹת תַּרְשִֽׁישׁ׃ | 7 |
ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.
כַּאֲשֶׁ֤ר שָׁמַ֨עְנוּ ׀ כֵּ֤ן רָאִ֗ינוּ בְּעִיר־יְהוָ֣ה צְ֭בָאוֹת בְּעִ֣יר אֱלֹהֵ֑ינוּ אֱלֹ֘הִ֤ים יְכוֹנְנֶ֖הָ עַד־עוֹלָ֣ם סֶֽלָה׃ | 8 |
ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.
דִּמִּ֣ינוּ אֱלֹהִ֣ים חַסְדֶּ֑ךָ בְּ֝קֶ֗רֶב הֵיכָלֶֽךָ׃ | 9 |
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.
כְּשִׁמְךָ֤ אֱלֹהִ֗ים כֵּ֣ן תְּ֭הִלָּתְךָ עַל־קַצְוֵי־אֶ֑רֶץ צֶ֝֗דֶק מָלְאָ֥ה יְמִינֶֽךָ׃ | 10 |
ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.
יִשְׂמַ֤ח ׀ הַר־צִיּ֗וֹן תָּ֭גֵלְנָה בְּנ֣וֹת יְהוּדָ֑ה לְ֝מַ֗עַן מִשְׁפָּטֶֽיךָ׃ | 11 |
ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.
סֹ֣בּוּ צִ֭יּוֹן וְהַקִּיפ֑וּהָ סִ֝פְר֗וּ מִגְדָּלֶֽיהָ׃ | 12 |
ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ.
שִׁ֤יתוּ לִבְּכֶ֨ם ׀ לְֽחֵילָ֗ה פַּסְּג֥וּ אַרְמְנוֹתֶ֑יהָ לְמַ֥עַן תְּ֝סַפְּר֗וּ לְד֣וֹר אַחֲרֽוֹן׃ | 13 |
ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.
כִּ֤י זֶ֨ה ׀ אֱלֹהִ֣ים אֱ֭לֹהֵינוּ עוֹלָ֣ם וָעֶ֑ד ה֖וּא יְנַהֲגֵ֣נוּ עַל־מֽוּת׃ | 14 |
ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.