< תְהִלִּים 73 >
מִזְמ֗וֹר לְאָ֫סָ֥ף אַ֤ךְ ט֭וֹב לְיִשְׂרָאֵ֥ל אֱלֹהִ֗ים לְבָרֵ֥י לֵבָֽב׃ | 1 |
೧ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಭ್ರಷ್ಟರಾಗಬಾರದೆಂಬ ಬೋಧನೆ ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.
וַאֲנִ֗י כִּ֭מְעַט נָטָ֣יוּ רַגְלָ֑י כְּ֝אַ֗יִן שֻׁפְּכ֥וּ אֲשֻׁרָֽי׃ | 2 |
೨ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.
כִּֽי־קִ֭נֵּאתִי בַּֽהוֹלְלִ֑ים שְׁל֖וֹם רְשָׁעִ֣ים אֶרְאֶֽה׃ | 3 |
೩ಆದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡು ಸೊಕ್ಕಿನವರ ಮೇಲೆ ಉರಿಗೊಂಡೆನು.
כִּ֤י אֵ֖ין חַרְצֻבּ֥וֹת לְמוֹתָ֗ם וּבָרִ֥יא אוּלָֽם׃ | 4 |
೪ಅವರ ಮರಣವು ನಿರ್ಬಾಧಕವಾಗಿದೆ; ಅವರ ದೇಹವು ಕೊಬ್ಬಿದೆ.
בַּעֲמַ֣ל אֱנ֣וֹשׁ אֵינֵ֑מוֹ וְעִם־אָ֝דָ֗ם לֹ֣א יְנֻגָּֽעוּ׃ | 5 |
೫ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
לָ֭כֵן עֲנָקַ֣תְמוֹ גַאֲוָ֑ה יַעֲטָף־שִׁ֝֗ית חָמָ֥ס לָֽמוֹ׃ | 6 |
೬ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.
יָ֭צָא מֵחֵ֣לֶב עֵינֵ֑מוֹ עָ֝בְר֗וּ מַשְׂכִּיּ֥וֹת לֵבָֽב׃ | 7 |
೭ಕೊಬ್ಬಿನಿಂದ ಅವರ ಕಣ್ಣುಗಳು ಉಬ್ಬಿಕೊಂಡಿವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.
יָמִ֤יקוּ ׀ וִידַבְּר֣וּ בְרָ֣ע עֹ֑שֶׁק מִמָּר֥וֹם יְדַבֵּֽרוּ׃ | 8 |
೮ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.
שַׁתּ֣וּ בַשָּׁמַ֣יִם פִּיהֶ֑ם וּ֝לְשׁוֹנָ֗ם תִּֽהֲלַ֥ךְ בָּאָֽרֶץ׃ | 9 |
೯ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ. ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.
לָכֵ֤ן ׀ יָשׁ֣וּב עַמּ֣וֹ הֲלֹ֑ם וּמֵ֥י מָ֝לֵ֗א יִמָּ֥צוּ לָֽמוֹ׃ | 10 |
೧೦ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.
וְֽאָמְר֗וּ אֵיכָ֥ה יָדַֽע־אֵ֑ל וְיֵ֖שׁ דֵּעָ֣ה בְעֶלְיֽוֹן׃ | 11 |
೧೧ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.
הִנֵּה־אֵ֥לֶּה רְשָׁעִ֑ים וְשַׁלְוֵ֥י ע֝וֹלָ֗ם הִשְׂגּוּ־חָֽיִל׃ | 12 |
೧೨ನೋಡಿರಿ, ದುಷ್ಟರು ಇಂಥವರೇ; ಅವರು ಸದಾ ಸುಖದಿಂದಿದ್ದು ಸ್ಥಿತಿವಂತರಾಗಿ ಹೋಗುತ್ತಾರೆ.
אַךְ־רִ֭יק זִכִּ֣יתִי לְבָבִ֑י וָאֶרְחַ֖ץ בְּנִקָּי֣וֹן כַּפָּֽי׃ | 13 |
೧೩ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
וָאֱהִ֣י נָ֭גוּעַ כָּל־הַיּ֑וֹם וְ֝תוֹכַחְתִּ֗י לַבְּקָרִֽים׃ | 14 |
೧೪ನಾನು ಯಾವಾಗಲೂ ವ್ಯಾಧಿಪೀಡಿತನಾಗಿದ್ದು, ಪ್ರತಿದಿನವೂ ದಂಡಿಸಲ್ಪಡುತ್ತಾ ಇದ್ದೇನಲ್ಲಾ.
אִם־אָ֭מַרְתִּי אֲסַפְּרָ֥ה כְמ֑וֹ הִנֵּ֤ה ד֭וֹר בָּנֶ֣יךָ בָגָֽדְתִּי׃ | 15 |
೧೫ನಾನು ಈ ಪ್ರಕಾರ ಬಾಯಿಬಿಡುವುದಕ್ಕೆ ಮನಸ್ಸು ಮಾಡಿಕೊಂಡಿದ್ದರೆ, ನಿನ್ನ ಭಕ್ತಕುಲಕ್ಕೆ ದ್ರೋಹಿಯಾಗುತ್ತಿದ್ದೆನು.
וָֽ֭אֲחַשְּׁבָה לָדַ֣עַת זֹ֑את עָמָ֖ל ה֣וּא בְעֵינָֽי׃ | 16 |
೧೬ನಾನು ಇದನ್ನು ಗ್ರಹಿಸಿಕೊಳ್ಳಬೇಕೆಂದು ಎಷ್ಟು ಚಿಂತಿಸಿದರೂ ಅದು ಒಂದು ಕಷ್ಟಕರವಾದ ಮರ್ಮವೆಂದು ತೋಚಿತು.
עַד־אָ֭בוֹא אֶל־מִקְדְּשֵׁי־אֵ֑ל אָ֝בִ֗ינָה לְאַחֲרִיתָֽם׃ | 17 |
೧೭ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
אַ֣ךְ בַּ֭חֲלָקוֹת תָּשִׁ֣ית לָ֑מוֹ הִ֝פַּלְתָּ֗ם לְמַשּׁוּאֽוֹת׃ | 18 |
೧೮ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.
אֵ֤יךְ הָי֣וּ לְשַׁמָּ֣ה כְרָ֑גַע סָ֥פוּ תַ֝֗מּוּ מִן־בַּלָּהֽוֹת׃ | 19 |
೧೯ಅವರು ನಿಮಿಷಮಾತ್ರದಲ್ಲಿಯೇ ಹಾಳಾಗಿ ಹೋಗುತ್ತಾರೆ; ಭಯಂಕರ ರೀತಿಯಿಂದ ಸಂಹಾರವಾಗಿ ಮುಗಿದು ಹೋಗುತ್ತಾರೆ.
כַּחֲל֥וֹם מֵהָקִ֑יץ אֲ֝דֹנָי בָּעִ֤יר ׀ צַלְמָ֬ם תִּבְזֶֽה׃ | 20 |
೨೦ಎಚ್ಚರವಾದವನು ಕನಸ್ಸನ್ನು ಕಂಡ ಹಾಗೆ ಯೆಹೋವನೇ, ನೀನು ಏಳುವಾಗ ಅವರನ್ನು ಮಾಯಾರೂಪರೆಂದು ಭಾವಿಸುತ್ತೀ.
כִּ֭י יִתְחַמֵּ֣ץ לְבָבִ֑י וְ֝כִלְיוֹתַ֗י אֶשְׁתּוֹנָֽן׃ | 21 |
೨೧ನನ್ನ ಮನಸ್ಸು ನೊಂದುಹೋಗಿತ್ತು; ಆಂತರ್ಯದಲ್ಲಿ ಅಲಗು ನೆಟ್ಟಂತಿತ್ತು.
וַאֲנִי־בַ֭עַר וְלֹ֣א אֵדָ֑ע בְּ֝הֵמ֗וֹת הָיִ֥יתִי עִמָּֽךְ׃ | 22 |
೨೨ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.
וַאֲנִ֣י תָמִ֣יד עִמָּ֑ךְ אָ֝חַ֗זְתָּ בְּיַד־יְמִינִֽי׃ | 23 |
೨೩ಆದರೂ ಸದಾ ನಿನ್ನ ಸನ್ನಿಧಿಯಲ್ಲಿಯೇ ಇದ್ದೇನೆ. ನೀನು ನನ್ನ ಬಲಗೈಯನ್ನು ಹಿಡಿದು,
בַּעֲצָתְךָ֥ תַנְחֵ֑נִי וְ֝אַחַ֗ר כָּב֥וֹד תִּקָּחֵֽנִי׃ | 24 |
೨೪ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.
מִי־לִ֥י בַשָּׁמָ֑יִם וְ֝עִמְּךָ֗ לֹא־חָפַ֥צְתִּי בָאָֽרֶץ׃ | 25 |
೨೫ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
כָּלָ֥ה שְׁאֵרִ֗י וּלְבָ֫בִ֥י צוּר־לְבָבִ֥י וְחֶלְקִ֗י אֱלֹהִ֥ים לְעוֹלָֽם׃ | 26 |
೨೬ತನುಮನಗಳು ಕ್ಷಯಿಸಿದರೂ ನನ್ನ ಆತ್ಮಕ್ಕೆ ಬಲವು ನನ್ನ ಶಾಶ್ವತವಾದ ಪಾಲೂ ದೇವರೇ.
כִּֽי־הִנֵּ֣ה רְחֵקֶ֣יךָ יֹאבֵ֑דוּ הִ֝צְמַ֗תָּה כָּל־זוֹנֶ֥ה מִמֶּֽךָּ׃ | 27 |
೨೭ಇಗೋ, ನಿನ್ನನ್ನು ಬಿಟ್ಟವರು ನಾಶವಾಗುವರು; ನಿನಗೆ ದ್ರೋಹ ಮಾಡಿದವರೆಲ್ಲರನ್ನು ನಿರ್ಮೂಲ ಮಾಡುತ್ತೀ.
וַאֲנִ֤י ׀ קִֽרֲבַ֥ת אֱלֹהִ֗ים לִ֫י־ט֥וֹב שַׁתִּ֤י ׀ בַּאדֹנָ֣י יְהֹוִ֣ה מַחְסִ֑י לְ֝סַפֵּ֗ר כָּל־מַלְאֲכוֹתֶֽיךָ׃ | 28 |
೨೮ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.