< תְהִלִּים 96 >
שִׁ֣ירוּ לַ֭יהוָה שִׁ֣יר חָדָ֑שׁ שִׁ֥ירוּ לַ֝יהוָ֗ה כָּל־הָאָֽרֶץ׃ | 1 |
೧ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
שִׁ֣ירוּ לַ֭יהוָה בָּרֲכ֣וּ שְׁמ֑וֹ בַּשְּׂר֥וּ מִיּֽוֹם־לְ֝י֗וֹם יְשׁוּעָתֽוֹ׃ | 2 |
೨ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
סַפְּר֣וּ בַגּוֹיִ֣ם כְּבוֹד֑וֹ בְּכָל־הָֽ֝עַמִּ֗ים נִפְלְאוֹתָֽיו׃ | 3 |
೩ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
כִּ֥י גָ֘ד֤וֹל יְהוָ֣ה וּמְהֻלָּ֣ל מְאֹ֑ד נוֹרָ֥א ה֝֗וּא עַל־כָּל־אֱלֹהִֽים׃ | 4 |
೪ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
כִּ֤י ׀ כָּל־אֱלֹהֵ֣י הָעַמִּ֣ים אֱלִילִ֑ים וַֽ֝יהוָ֗ה שָׁמַ֥יִם עָשָֽׂה׃ | 5 |
೫ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
הוֹד־וְהָדָ֥ר לְפָנָ֑יו עֹ֥ז וְ֝תִפְאֶ֗רֶת בְּמִקְדָּשֽׁוֹ׃ | 6 |
೬ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
הָב֣וּ לַ֭יהוָה מִשְׁפְּח֣וֹת עַמִּ֑ים הָב֥וּ לַ֝יהוָ֗ה כָּב֥וֹד וָעֹֽז׃ | 7 |
೭ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
הָב֣וּ לַ֭יהוָה כְּב֣וֹד שְׁמ֑וֹ שְׂאֽוּ־מִ֝נְחָ֗ה וּבֹ֥אוּ לְחַצְרוֹתָֽיו׃ | 8 |
೮ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
הִשְׁתַּחֲו֣וּ לַ֭יהוָה בְּהַדְרַת־קֹ֑דֶשׁ חִ֥ילוּ מִ֝פָּנָ֗יו כָּל־הָאָֽרֶץ׃ | 9 |
೯ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
אִמְר֤וּ בַגּוֹיִ֨ם ׀ יְה֘וָ֤ה מָלָ֗ךְ אַף־תִּכּ֣וֹן תֵּ֭בֵל בַּל־תִּמּ֑וֹט יָדִ֥ין עַ֝מִּ֗ים בְּמֵישָׁרִֽים׃ | 10 |
೧೦ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
יִשְׂמְח֣וּ הַ֭שָּׁמַיִם וְתָגֵ֣ל הָאָ֑רֶץ יִֽרְעַ֥ם הַ֝יָּ֗ם וּמְלֹאֽוֹ׃ | 11 |
೧೧ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
יַעֲלֹ֣ז שָׂ֭דַי וְכָל־אֲשֶׁר־בּ֑וֹ אָ֥ז יְ֝רַנְּנ֗וּ כָּל־עֲצֵי־יָֽעַר׃ | 12 |
೧೨ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
לִפְנֵ֤י יְהוָ֨ה ׀ כִּ֬י בָ֗א כִּ֥י בָא֮ לִשְׁפֹּ֪ט הָ֫אָ֥רֶץ יִשְׁפֹּֽט־תֵּבֵ֥ל בְּצֶ֑דֶק וְ֝עַמִּ֗ים בֶּאֱמוּנָתֽוֹ׃ | 13 |
೧೩ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.