< שִׁיר הַשִּׁירִים 5 >
בָּ֣אתִי לְגַנִּי֮ אֲחֹתִ֣י כַלָּה֒ אָרִ֤יתִי מוֹרִי֙ עִם־בְּשָׂמִ֔י אָכַ֤לְתִּי יַעְרִי֙ עִם־דִּבְשִׁ֔י שָׁתִ֥יתִי יֵינִ֖י עִם־חֲלָבִ֑י אִכְל֣וּ רֵעִ֔ים שְׁת֥וּ וְשִׁכְר֖וּ דּוֹדִֽים׃ ס | 1 |
ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರು ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.
אֲנִ֥י יְשֵׁנָ֖ה וְלִבִּ֣י עֵ֑ר ק֣וֹל ׀ דּוֹדִ֣י דוֹפֵ֗ק פִּתְחִי־לִ֞י אֲחֹתִ֤י רַעְיָתִי֙ יוֹנָתִ֣י תַמָּתִ֔י שֶׁרֹּאשִׁי֙ נִמְלָא־טָ֔ל קְוֻּצּוֹתַ֖י רְסִ֥יסֵי לָֽיְלָה׃ | 2 |
ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”
פָּשַׁ֙טְתִּי֙ אֶת־כֻּתָּנְתִּ֔י אֵיכָ֖כָה אֶלְבָּשֶׁ֑נָּה רָחַ֥צְתִּי אֶת־רַגְלַ֖י אֵיכָ֥כָה אֲטַנְּפֵֽם׃ | 3 |
ನಾನು ನನ್ನ ಅಂಗಿಯನ್ನು ತೆಗೆದು ಹಾಕಿರಲು, ಅದನ್ನು ಮತ್ತೆ ಹಾಕಿಕೊಳ್ಳುವುದು ಹೇಗೆ? ನಾನು ನನ್ನ ಕಾಲುಗಳನ್ನು ತೊಳೆದುಕೊಂಡಿರಲು, ನಾನು ಮತ್ತೆ ಅವುಗಳನ್ನು ಕೊಳೆ ಮಾಡುವುದು ಹೇಗೆ?
דּוֹדִ֗י שָׁלַ֤ח יָדוֹ֙ מִן־הַחֹ֔ר וּמֵעַ֖י הָמ֥וּ עָלָֽיו׃ | 4 |
ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.
קַ֥מְתִּֽי אֲנִ֖י לִפְתֹּ֣חַ לְדוֹדִ֑י וְיָדַ֣י נָֽטְפוּ־מ֗וֹר וְאֶצְבְּעֹתַי֙ מ֣וֹר עֹבֵ֔ר עַ֖ל כַּפּ֥וֹת הַמַּנְעֽוּל׃ | 5 |
ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ಎದ್ದಾಗ, ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವು ತೊಟ್ಟಿಕ್ಕಿತು. ನನ್ನ ಬೆರಳುಗಳಿಂದಲೂ ರಕ್ತಬೋಳವು ಸುರಿಯಿತು.
פָּתַ֤חְתִּֽי אֲנִי֙ לְדוֹדִ֔י וְדוֹדִ֖י חָמַ֣ק עָבָ֑ר נַפְשִׁי֙ יָֽצְאָ֣ה בְדַבְּר֔וֹ בִּקַּשְׁתִּ֙יהוּ֙ וְלֹ֣א מְצָאתִ֔יהוּ קְרָאתִ֖יו וְלֹ֥א עָנָֽנִי׃ | 6 |
ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.
מְצָאֻ֧נִי הַשֹּׁמְרִ֛ים הַסֹּבְבִ֥ים בָּעִ֖יר הִכּ֣וּנִי פְצָע֑וּנִי נָשְׂא֤וּ אֶת־רְדִידִי֙ מֵֽעָלַ֔י שֹׁמְרֵ֖י הַחֹמֽוֹת׃ | 7 |
ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.
הִשְׁבַּ֥עְתִּי אֶתְכֶ֖ם בְּנ֣וֹת יְרוּשָׁלִָ֑ם אִֽם־תִּמְצְאוּ֙ אֶת־דּוֹדִ֔י מַה־תַּגִּ֣ידוּ ל֔וֹ שֶׁחוֹלַ֥ת אַהֲבָ֖ה אָֽנִי׃ | 8 |
ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
מַה־דּוֹדֵ֣ךְ מִדּ֔וֹד הַיָּפָ֖ה בַּנָּשִׁ֑ים מַה־דּוֹדֵ֣ךְ מִדּ֔וֹד שֶׁכָּ֖כָה הִשְׁבַּעְתָּֽנוּ׃ | 9 |
ಸ್ತ್ರೀಯರಲ್ಲಿ ಅತಿ ಸುಂದರಿಯೇ, ಬೇರೆಯವರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? ನೀನು ನಮಗೆ ಹೀಗೆ ಆಣೆ ಇಡುವುದಕ್ಕೆ ಬೇರೆಯವರ ಪ್ರಿಯರಿಗಿಂತ ನಿನ್ನ ಪ್ರಿಯನ ವಿಶೇಷವೇನು?
דּוֹדִ֥י צַח֙ וְאָד֔וֹם דָּג֖וּל מֵרְבָבָֽה׃ | 10 |
ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.
רֹאשׁ֖וֹ כֶּ֣תֶם פָּ֑ז קְוּצּוֹתָיו֙ תַּלְתַּלִּ֔ים שְׁחֹר֖וֹת כָּעוֹרֵֽב׃ | 11 |
ಅವನ ತಲೆಯು ಚೊಕ್ಕ ಬಂಗಾರದಂತಿದೆ. ಅವನ ಗುಂಗುರು ಕೂದಲು ಕಾಗೆಯಂತೆ ಕಪ್ಪಾಗಿದೆ.
עֵינָ֕יו כְּיוֹנִ֖ים עַל־אֲפִ֣יקֵי מָ֑יִם רֹֽחֲצוֹת֙ בֶּֽחָלָ֔ב יֹשְׁב֖וֹת עַל־מִלֵּֽאת׃ | 12 |
ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ, ಹಾಲಿನಿಂದ ತೊಳೆದಿರುವ, ಪಾರಿವಾಳಗಳ ಕಣ್ಣುಗಳಂತಿವೆ.
לְחָיָו֙ כַּעֲרוּגַ֣ת הַבֹּ֔שֶׂם מִגְדְּל֖וֹת מֶרְקָחִ֑ים שִׂפְתוֹתָיו֙ שֽׁוֹשַׁנִּ֔ים נֹטְפ֖וֹת מ֥וֹר עֹבֵֽר׃ | 13 |
ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು.
יָדָיו֙ גְּלִילֵ֣י זָהָ֔ב מְמֻלָּאִ֖ים בַּתַּרְשִׁ֑ישׁ מֵעָיו֙ עֶ֣שֶׁת שֵׁ֔ן מְעֻלֶּ֖פֶת סַפִּירִֽים׃ | 14 |
ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.
שׁוֹקָיו֙ עַמּ֣וּדֵי שֵׁ֔שׁ מְיֻסָּדִ֖ים עַל־אַדְנֵי־פָ֑ז מַרְאֵ֙הוּ֙ כַּלְּבָנ֔וֹן בָּח֖וּר כָּאֲרָזִֽים׃ | 15 |
ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.
חִכּוֹ֙ מַֽמְתַקִּ֔ים וְכֻלּ֖וֹ מַחֲמַדִּ֑ים זֶ֤ה דוֹדִי֙ וְזֶ֣ה רֵעִ֔י בְּנ֖וֹת יְרוּשָׁלִָֽם׃ | 16 |
ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.