< צְפַנְיָה 1 >
דְּבַר־יְהוָ֣ה ׀ אֲשֶׁ֣ר הָיָ֗ה אֶל־צְפַנְיָה֙ בֶּן־כּוּשִׁ֣י בֶן־גְּדַלְיָ֔ה בֶּן־אֲמַרְיָ֖ה בֶּן־חִזְקִיָּ֑ה בִּימֵ֛י יֹאשִׁיָּ֥הוּ בֶן־אָמ֖וֹן מֶ֥לֶךְ יְהוּדָֽה׃ | 1 |
೧ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.
אָסֹ֨ף אָסֵ֜ף כֹּ֗ל מֵעַ֛ל פְּנֵ֥י הָאֲדָמָ֖ה נְאֻם־יְהוָֽה׃ | 2 |
೨ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.
אָסֵ֨ף אָדָ֜ם וּבְהֵמָ֗ה אָסֵ֤ף עוֹף־הַשָּׁמַ֙יִם֙ וּדְגֵ֣י הַיָּ֔ם וְהַמַּכְשֵׁל֖וֹת אֶת־הָרְשָׁעִ֑ים וְהִכְרַתִּ֣י אֶת־הָאָדָ֗ם מֵעַ֛ל פְּנֵ֥י הָאֲדָמָ֖ה נְאֻם־יְהוָֽה׃ | 3 |
೩ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.
וְנָטִ֤יתִי יָדִי֙ עַל־יְהוּדָ֔ה וְעַ֖ל כָּל־יוֹשְׁבֵ֣י יְרוּשָׁלִָ֑ם וְהִכְרַתִּ֞י מִן־הַמָּק֤וֹם הַזֶּה֙ אֶת־שְׁאָ֣ר הַבַּ֔עַל אֶת־שֵׁ֥ם הַכְּמָרִ֖ים עִם־הַכֹּהֲנִֽים׃ | 4 |
೪“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,
וְאֶת־הַמִּשְׁתַּחֲוִ֥ים עַל־הַגַּגּ֖וֹת לִצְבָ֣א הַשָּׁמָ֑יִם וְאֶת־הַמִּֽשְׁתַּחֲוִים֙ הַנִּשְׁבָּעִ֣ים לַֽיהוָ֔ה וְהַנִּשְׁבָּעִ֖ים בְּמַלְכָּֽם׃ | 5 |
೫ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,
וְאֶת־הַנְּסוֹגִ֖ים מֵאַחֲרֵ֣י יְהוָ֑ה וַאֲשֶׁ֛ר לֹֽא־בִקְשׁ֥וּ אֶת־יְהוָ֖ה וְלֹ֥א דְרָשֻֽׁהוּ׃ | 6 |
೬ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
הַ֕ס מִפְּנֵ֖י אֲדֹנָ֣י יְהוִ֑ה כִּ֤י קָרוֹב֙ י֣וֹם יְהוָ֔ה כִּֽי־הֵכִ֧ין יְהוָ֛ה זֶ֖בַח הִקְדִּ֥ישׁ קְרֻאָֽיו׃ | 7 |
೭ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.
וְהָיָ֗ה בְּיוֹם֙ זֶ֣בַח יְהוָ֔ה וּפָקַדְתִּ֥י עַל־הַשָּׂרִ֖ים וְעַל־בְּנֵ֣י הַמֶּ֑לֶךְ וְעַ֥ל כָּל־הַלֹּבְשִׁ֖ים מַלְבּ֥וּשׁ נָכְרִֽי׃ | 8 |
೮“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.
וּפָקַדְתִּ֗י עַ֧ל כָּל־הַדּוֹלֵ֛ג עַל־הַמִּפְתָּ֖ן בַּיּ֣וֹם הַה֑וּא הַֽמְמַלְאִ֛ים בֵּ֥ית אֲדֹנֵיהֶ֖ם חָמָ֥ס וּמִרְמָֽה׃ ס | 9 |
೯ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.
וְהָיָה֩ בַיּ֨וֹם הַה֜וּא נְאֻם־יְהוָ֗ה ק֤וֹל צְעָקָה֙ מִשַּׁ֣עַר הַדָּגִ֔ים וִֽילָלָ֖ה מִן־הַמִּשְׁנֶ֑ה וְשֶׁ֥בֶר גָּד֖וֹל מֵהַגְּבָעֽוֹת׃ | 10 |
೧೦ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.
הֵילִ֖ילוּ יֹשְׁבֵ֣י הַמַּכְתֵּ֑שׁ כִּ֤י נִדְמָה֙ כָּל־עַ֣ם כְּנַ֔עַן נִכְרְת֖וּ כָּל־נְטִ֥ילֵי כָֽסֶף׃ | 11 |
೧೧ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
וְהָיָה֙ בָּעֵ֣ת הַהִ֔יא אֲחַפֵּ֥שׂ אֶת־יְרוּשָׁלִַ֖ם בַּנֵּר֑וֹת וּפָקַדְתִּ֣י עַל־הָאֲנָשִׁ֗ים הַקֹּֽפְאִים֙ עַל־שִׁמְרֵיהֶ֔ם הָאֹֽמְרִים֙ בִּלְבָבָ֔ם לֹֽא־יֵיטִ֥יב יְהוָ֖ה וְלֹ֥א יָרֵֽעַ׃ | 12 |
೧೨ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.
וְהָיָ֤ה חֵילָם֙ לִמְשִׁסָּ֔ה וּבָתֵּיהֶ֖ם לִשְׁמָמָ֑ה וּבָנ֤וּ בָתִּים֙ וְלֹ֣א יֵשֵׁ֔בוּ וְנָטְע֣וּ כְרָמִ֔ים וְלֹ֥א יִשְׁתּ֖וּ אֶת־יֵינָֽם׃ | 13 |
೧೩ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.
קָר֤וֹב יוֹם־יְהוָה֙ הַגָּד֔וֹל קָר֖וֹב וּמַהֵ֣ר מְאֹ֑ד ק֚וֹל י֣וֹם יְהוָ֔ה מַ֥ר צֹרֵ֖חַ שָׁ֥ם גִּבּֽוֹר׃ | 14 |
೧೪ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!
י֥וֹם עֶבְרָ֖ה הַיּ֣וֹם הַה֑וּא י֧וֹם צָרָ֣ה וּמְצוּקָ֗ה י֤וֹם שֹׁאָה֙ וּמְשׁוֹאָ֔ה י֥וֹם חֹ֙שֶׁךְ֙ וַאֲפֵלָ֔ה י֥וֹם עָנָ֖ן וַעֲרָפֶֽל׃ | 15 |
೧೫ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!
י֥וֹם שׁוֹפָ֖ר וּתְרוּעָ֑ה עַ֚ל הֶעָרִ֣ים הַבְּצֻר֔וֹת וְעַ֖ל הַפִּנּ֥וֹת הַגְּבֹהֽוֹת׃ | 16 |
೧೬ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.
וַהֲצֵרֹ֣תִי לָאָדָ֗ם וְהָֽלְכוּ֙ כַּֽעִוְרִ֔ים כִּ֥י לַֽיהוָ֖ה חָטָ֑אוּ וְשֻׁפַּ֤ךְ דָּמָם֙ כֶּֽעָפָ֔ר וּלְחֻמָ֖ם כַּגְּלָלִֽים׃ | 17 |
೧೭ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
גַּם־כַּסְפָּ֨ם גַּם־זְהָבָ֜ם לֹֽא־יוּכַ֣ל לְהַצִּילָ֗ם בְּיוֹם֙ עֶבְרַ֣ת יְהוָ֔ה וּבְאֵשׁ֙ קִנְאָת֔וֹ תֵּאָכֵ֖ל כָּל־הָאָ֑רֶץ כִּֽי־כָלָ֤ה אַךְ־נִבְהָלָה֙ יַֽעֲשֶׂ֔ה אֵ֥ת כָּל־יֹשְׁבֵ֖י הָאָֽרֶץ׃ ס | 18 |
೧೮ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!