< שמואל א 18 >

וַיְהִי כְּכַלֹּתוֹ לְדַבֵּר אֶל־שָׁאוּל וְנֶפֶשׁ יְהוֹנָתָן נִקְשְׁרָה בְּנֶפֶשׁ דָּוִד ויאהבו וַיֶּאֱהָבֵהוּ יְהוֹנָתָן כְּנַפְשֽׁוֹ׃ 1
ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.
וַיִּקָּחֵהוּ שָׁאוּל בַּיּוֹם הַהוּא וְלֹא נְתָנוֹ לָשׁוּב בֵּית אָבִֽיו׃ 2
ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.
וַיִּכְרֹת יְהוֹנָתָן וְדָוִד בְּרִית בְּאַהֲבָתוֹ אֹתוֹ כְּנַפְשֽׁוֹ׃ 3
ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.
וַיִּתְפַּשֵּׁט יְהוֹנָתָן אֶֽת־הַמְּעִיל אֲשֶׁר עָלָיו וַֽיִּתְּנֵהוּ לְדָוִד וּמַדָּיו וְעַד־חַרְבּוֹ וְעַד־קַשְׁתּוֹ וְעַד־חֲגֹרֽוֹ׃ 4
ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
וַיֵּצֵא דָוִד בְּכֹל אֲשֶׁר יִשְׁלָחֶנּוּ שָׁאוּל יַשְׂכִּיל וַיְשִׂמֵהוּ שָׁאוּל עַל אַנְשֵׁי הַמִּלְחָמָה וַיִּיטַב בְּעֵינֵי כָל־הָעָם וְגַם בְּעֵינֵי עַבְדֵי שָׁאֽוּל׃ 5
ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಹೋಗಿ ಎಲ್ಲವನ್ನು ವಿವೇಕದಿಂದ ನಡೆಸುತ್ತಿದ್ದನು. ಸೌಲನು ಇವನನ್ನು ಸೇನಾಧಿಪತಿಯನ್ನಾಗಿ ನೇಮಿಸಿದನು. ಇದು ಅವನ ಸೇವಕರಿಗೂ, ಎಲ್ಲಾ ಜನರಿಗೂ ಮೆಚ್ಚಿಗೆಯಾಯಿತು.
וַיְהִי בְּבוֹאָם בְּשׁוּב דָּוִד מֵהַכּוֹת אֶת־הַפְּלִשְׁתִּי וַתֵּצֶאנָה הַנָּשִׁים מִכָּל־עָרֵי יִשְׂרָאֵל לשור לָשִׁיר וְהַמְּחֹלוֹת לִקְרַאת שָׁאוּל הַמֶּלֶךְ בְּתֻפִּים בְּשִׂמְחָה וּבְשָׁלִשִֽׁים׃ 6
ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ, ಸರ್ವಜನರೊಡನೆ ಹಿಂದಿರುಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರೂ ಹೊರಗೆ ಬಂದು ದಮ್ಮಡಿತಾಳಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸನಾದ ಸೌಲನನ್ನು ಎದುರುಗೊಂಡರು.
וַֽתַּעֲנֶינָה הַנָּשִׁים הַֽמְשַׂחֲקוֹת וַתֹּאמַרְןָ הִכָּה שָׁאוּל באלפו בַּאֲלָפָיו וְדָוִד בְּרִבְבֹתָֽיו׃ 7
ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು.
וַיִּחַר לְשָׁאוּל מְאֹד וַיֵּרַע בְּעֵינָיו הַדָּבָר הַזֶּה וַיֹּאמֶר נָתְנוּ לְדָוִד רְבָבוֹת וְלִי נָתְנוּ הָאֲלָפִים וְעוֹד לוֹ אַךְ הַמְּלוּכָֽה׃ 8
ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು
וַיְהִי שָׁאוּל עון עוֹיֵן אֶת־דָּוִד מֵהַיּוֹם הַהוּא וָהָֽלְאָה׃ 9
ಅಂದಿನಿಂದ ಅವನು ದಾವೀದನನ್ನು ಸಂಶಯದಿಂದ ನೋಡುತ್ತಿದ್ದನು.
וַיְהִי מִֽמָּחֳרָת וַתִּצְלַח רוּחַ אֱלֹהִים ׀ רָעָה ׀ אֶל־שָׁאוּל וַיִּתְנַבֵּא בְתוֹךְ־הַבַּיִת וְדָוִד מְנַגֵּן בְּיָדוֹ כְּיוֹם ׀ בְּיוֹם וְהַחֲנִית בְּיַד־שָׁאֽוּל׃ 10
೧೦ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.
וַיָּטֶל שָׁאוּל אֶֽת־הַחֲנִית וַיֹּאמֶר אַכֶּה בְדָוִד וּבַקִּיר וַיִּסֹּב דָּוִד מִפָּנָיו פַּעֲמָֽיִם׃ 11
೧೧ಆಗ ಸೌಲನು ದಾವೀದನನ್ನು ಗೋಡೆಗೆ ಸೇರಿಕೊಳ್ಳುವ ಹಾಗೆ ತಿವಿಯುವೆನು ಎಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.
וַיִּרָא שָׁאוּל מִלִּפְנֵי דָוִד כִּֽי־הָיָה יְהוָה עִמּוֹ וּמֵעִם שָׁאוּל סָֽר׃ 12
೧೨ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,
וַיְסִרֵהוּ שָׁאוּל מֵֽעִמּוֹ וַיְשִׂמֵהוּ לוֹ שַׂר־אָלֶף וַיֵּצֵא וַיָּבֹא לִפְנֵי הָעָֽם׃ 13
೧೩ಅವನನ್ನು ತನ್ನ ಸಾನ್ನಿಧ್ಯಸೇವೆಯಿಂದ ತಪ್ಪಿಸಿ, ಸೈನ್ಯದಲ್ಲಿ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ಹೀಗೆ ದಾವೀದನು ಜನರ ಸಂಗಡ ಹೋಗುತ್ತಾ ಬರುತ್ತಾ ಇದ್ದನು.
וַיְהִי דָוִד לְכָל־דָּרְכָו מַשְׂכִּיל וַֽיהוָה עִמּֽוֹ׃ 14
೧೪ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.
וַיַּרְא שָׁאוּל אֲשֶׁר־הוּא מַשְׂכִּיל מְאֹד וַיָּגָר מִפָּנָֽיו׃ 15
೧೫ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.
וְכָל־יִשְׂרָאֵל וִיהוּדָה אֹהֵב אֶת־דָּוִד כִּֽי־הוּא יוֹצֵא וָבָא לִפְנֵיהֶֽם׃ 16
೧೬ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.
וַיֹּאמֶר שָׁאוּל אֶל־דָּוִד הִנֵּה בִתִּי הַגְּדוֹלָה מֵרַב אֹתָהּ אֶתֶּן־לְךָ לְאִשָּׁה אַךְ הֱיֵה־לִּי לְבֶן־חַיִל וְהִלָּחֵם מִלְחֲמוֹת יְהוָה וְשָׁאוּל אָמַר אַל־תְּהִי יָדִי בּוֹ וּתְהִי־בוֹ יַד־פְּלִשְׁתִּֽים׃ 17
೧೭ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.
וַיֹּאמֶר דָּוִד אֶל־שָׁאוּל מִי אָֽנֹכִי וּמִי חַיַּי מִשְׁפַּחַת אָבִי בְּיִשְׂרָאֵל כִּֽי־אֶהְיֶה חָתָן לַמֶּֽלֶךְ׃ 18
೧೮ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.
וַיְהִי בְּעֵת תֵּת אֶת־מֵרַב בַּת־שָׁאוּל לְדָוִד וְהִיא נִתְּנָה לְעַדְרִיאֵל הַמְּחֹלָתִי לְאִשָּֽׁה׃ 19
೧೯ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.
וַתֶּאֱהַב מִיכַל בַּת־שָׁאוּל אֶת־דָּוִד וַיַּגִּדוּ לְשָׁאוּל וַיִּשַׁר הַדָּבָר בְּעֵינָֽיו׃ 20
೨೦ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಇದು ಸೌಲನಿಗೆ ತಿಳಿದಾಗ ಅವನಿಗೆ ಸಂತೋಷವಾಯಿತು.
וַיֹּאמֶר שָׁאוּל אֶתְּנֶנָּה לּוֹ וּתְהִי־לוֹ לְמוֹקֵשׁ וּתְהִי־בוֹ יַד־פְּלִשְׁתִּים וַיֹּאמֶר שָׁאוּל אֶל־דָּוִד בִּשְׁתַּיִם תִּתְחַתֵּן בִּי הַיּֽוֹם׃ 21
೨೧ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.
וַיְצַו שָׁאוּל אֶת־עֲבָדָו דַּבְּרוּ אֶל־דָּוִד בַּלָּט לֵאמֹר הִנֵּה חָפֵץ בְּךָ הַמֶּלֶךְ וְכָל־עֲבָדָיו אֲהֵבוּךָ וְעַתָּה הִתְחַתֵּן בַּמֶּֽלֶךְ׃ 22
೨೨ಅವನು ತನ್ನ ಸೇವಕರಿಗೆ, “ನೀವು ದಾವೀದನಿಗೆ ಗುಪ್ತವಾಗಿ, ‘ಅರಸನಿಗೆ ನಿನ್ನನ್ನು ಒಲಿಯುತ್ತಾನೆ, ಅವನ ಸೇವಕರು ನಿನ್ನನ್ನು ಪ್ರೀತಿಸುತ್ತಾರೆ. ನೀನು ಅರಸನ ಅಳಿಯನಾಗು’ ಎಂದು ಹೇಳಿರಿ” ಅಂದನು.
וַֽיְדַבְּרוּ עַבְדֵי שָׁאוּל בְּאָזְנֵי דָוִד אֶת־הַדְּבָרִים הָאֵלֶּה וַיֹּאמֶר דָּוִד הַֽנְקַלָּה בְעֵֽינֵיכֶם הִתְחַתֵּן בַּמֶּלֶךְ וְאָנֹכִי אִֽישׁ־רָשׁ וְנִקְלֶֽה׃ 23
೨೩ಆ ಸೇವಕರು ದಾವೀದನಿಗೆ ಹಾಗೆಯೇ ಹೇಳಿದಾಗ ಅವನು, “ಅರಸನ ಅಳಿಯನಾಗುವುದು ಸಾಧಾರಣವಾದ ಸಂಗತಿಯೆಂದು ನೆನಸುತ್ತೀರೋ? ನಾನು ದರಿದ್ರನೂ, ಅಲ್ಪನೂ ಆಗಿರುತ್ತೆನಲ್ಲಾ” ಎಂದು ಉತ್ತರ ಕೊಟ್ಟನು.
וַיַּגִּדוּ עַבְדֵי שָׁאוּל לוֹ לֵאמֹר כַּדְּבָרִים הָאֵלֶּה דִּבֶּר דָּוִֽד׃ 24
೨೪ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು.
וַיֹּאמֶר שָׁאוּל כֹּֽה־תֹאמְרוּ לְדָוִד אֵֽין־חֵפֶץ לַמֶּלֶךְ בְּמֹהַר כִּי בְּמֵאָה עָרְלוֹת פְּלִשְׁתִּים לְהִנָּקֵם בְּאֹיְבֵי הַמֶּלֶךְ וְשָׁאוּל חָשַׁב לְהַפִּיל אֶת־דָּוִד בְּיַד־פְּלִשְׁתִּֽים׃ 25
೨೫ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.
וַיַּגִּדוּ עֲבָדָיו לְדָוִד אֶת־הַדְּבָרִים הָאֵלֶּה וַיִּשַׁר הַדָּבָר בְּעֵינֵי דָוִד לְהִתְחַתֵּן בַּמֶּלֶךְ וְלֹא מָלְאוּ הַיָּמִֽים׃ 26
೨೬ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ,
וַיָּקָם דָּוִד וַיֵּלֶךְ ׀ הוּא וַאֲנָשָׁיו וַיַּךְ בַּפְּלִשְׁתִּים מָאתַיִם אִישׁ וַיָּבֵא דָוִד אֶת־עָרְלֹתֵיהֶם וַיְמַלְאוּם לַמֶּלֶךְ לְהִתְחַתֵּן בַּמֶּלֶךְ וַיִּתֶּן־לוֹ שָׁאוּל אֶת־מִיכַל בִּתּוֹ לְאִשָּֽׁה׃ 27
೨೭ದಾವೀದನು ತನ್ನ ಸೇವಕರೊಡನೆ ಹೊರಟು, ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಜನರನ್ನು ಕೊಂದು, ಮುಂದೊಗಲುಗಳನ್ನು ತಂದು, ಅರಸನ ಅಳಿಯನಾಗುವುದಕ್ಕೋಸ್ಕರ ಅವುಗಳನ್ನು ಪೂರ್ಣವಾಗಿ ಅವನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಮಗಳಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.
וַיַּרְא שָׁאוּל וַיֵּדַע כִּי יְהוָה עִם־דָּוִד וּמִיכַל בַּת־שָׁאוּל אֲהֵבַֽתְהוּ׃ 28
೨೮ಮೀಕಲಳು ಅವನನ್ನು ಬಹಳವಾಗಿ ಪ್ರೀತಿಸುವವಳಾದಳು. ಯೆಹೋವನು ದಾವೀದನ ಸಂಗಡ ಇದ್ದಾನೆಂದು,
וַיֹּאסֶף שָׁאוּל לֵרֹא מִפְּנֵי דָוִד עוֹד וַיְהִי שָׁאוּל אֹיֵב אֶת־דָּוִד כָּל־הַיָּמִֽים׃ 29
೨೯ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
וַיֵּצְאוּ שָׂרֵי פְלִשְׁתִּים וַיְהִי ׀ מִדֵּי צֵאתָם שָׂכַל דָּוִד מִכֹּל עַבְדֵי שָׁאוּל וַיִּיקַר שְׁמוֹ מְאֹֽד׃ 30
೩೦ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು.

< שמואל א 18 >