< שמואל א 24 >
וַיְהִי כַּֽאֲשֶׁר שָׁב שָׁאוּל מֵאַחֲרֵי פְּלִשְׁתִּים וַיַּגִּדוּ לוֹ לֵאמֹר הִנֵּה דָוִד בְּמִדְבַּר עֵין גֶּֽדִי׃ | 1 |
ಆಗ ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರುಗಿ ಬಂದಾಗ, “ದಾವೀದನು ಏನ್ಗೆದಿ ಮರುಭೂಮಿಯಲ್ಲಿ ಇದ್ದಾನೆ,” ಎಂದು ಅವನಿಗೆ ತಿಳಿದುಬಂದಿತು.
וַיִּקַּח שָׁאוּל שְׁלֹשֶׁת אֲלָפִים אִישׁ בָּחוּר מִכָּל־יִשְׂרָאֵל וַיֵּלֶךְ לְבַקֵּשׁ אֶת־דָּוִד וַֽאֲנָשָׁיו עַל־פְּנֵי צוּרֵי הַיְּעֵלִֽים׃ | 2 |
ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.
וַיָּבֹא אֶל־גִּדְרוֹת הַצֹּאן עַל־הַדֶּרֶךְ וְשָׁם מְעָרָה וַיָּבֹא שָׁאוּל לְהָסֵךְ אֶת־רַגְלָיו וְדָוִד וַאֲנָשָׁיו בְּיַרְכְּתֵי הַמְּעָרָה יֹשְׁבִֽים׃ | 3 |
ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.
וַיֹּאמְרוּ אַנְשֵׁי דָוִד אֵלָיו הִנֵּה הַיּוֹם אֲֽשֶׁר־אָמַר יְהוָה אֵלֶיךָ הִנֵּה אָנֹכִי נֹתֵן אֶת־איביך אֹֽיִבְךָ בְּיָדֶךָ וְעָשִׂיתָ לּוֹ כַּאֲשֶׁר יִטַב בְּעֵינֶיךָ וַיָּקָם דָּוִד וַיִּכְרֹת אֶת־כְּנַֽף־הַמְּעִיל אֲשֶׁר־לְשָׁאוּל בַּלָּֽט׃ | 4 |
ಆಗ ದಾವೀದನ ಜನರು ಅವನಿಗೆ, “‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.
וַֽיְהִי אַֽחֲרֵי־כֵן וַיַּךְ לֵב־דָּוִד אֹתוֹ עַל אֲשֶׁר כָּרַת אֶת־כָּנָף אֲשֶׁר לְשָׁאֽוּל׃ | 5 |
ಆದರೆ ಹಾಗೆ ಮಾಡಿದ ಮೇಲೆ, ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ದಾವೀದನ ಮನಃಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು.
וַיֹּאמֶר לַאֲנָשָׁיו חָלִילָה לִּי מֵֽיהוָה אִם־אֶעֱשֶׂה אֶת־הַדָּבָר הַזֶּה לַֽאדֹנִי לִמְשִׁיחַ יְהוָה לִשְׁלֹחַ יָדִי בּוֹ כִּֽי־מְשִׁיחַ יְהוָה הֽוּא׃ | 6 |
ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.
וַיְשַׁסַּע דָּוִד אֶת־אֲנָשָׁיו בַּדְּבָרִים וְלֹא נְתָנָם לָקוּם אֶל־שָׁאוּל וְשָׁאוּל קָם מֵהַמְּעָרָה וַיֵּלֶךְ בַּדָּֽרֶךְ׃ | 7 |
ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು.
וַיָּקָם דָּוִד אַחֲרֵי־כֵן וַיֵּצֵא מן־המערה מֵֽהַמְּעָרָה וַיִּקְרָא אַֽחֲרֵי־שָׁאוּל לֵאמֹר אֲדֹנִי הַמֶּלֶךְ וַיַּבֵּט שָׁאוּל אַֽחֲרָיו וַיִּקֹּד דָּוִד אַפַּיִם אַרְצָה וַיִּשְׁתָּֽחוּ׃ | 8 |
ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.
וַיֹּאמֶר דָּוִד לְשָׁאוּל לָמָּה תִשְׁמַע אֶת־דִּבְרֵי אָדָם לֵאמֹר הִנֵּה דָוִד מְבַקֵּשׁ רָעָתֶֽךָ׃ | 9 |
ಸೌಲನಿಗೆ ದಾವೀದನು, “ಇಗೋ, ದಾವೀದನು ನಿನಗೆ ಕೇಡು ಮಾಡಲು ಹುಡುಕುತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಏಕೆ ಕೇಳುತ್ತಿದ್ದೀ?
הִנֵּה הַיּוֹם הַזֶּה רָאוּ עֵינֶיךָ אֵת אֲשֶׁר־נְתָנְךָ יְהוָה ׀ הַיּוֹם ׀ בְּיָדִי בַּמְּעָרָה וְאָמַר לַהֲרָגֲךָ וַתָּחָס עָלֶיךָ וָאֹמַר לֹא־אֶשְׁלַח יָדִי בַּֽאדֹנִי כִּי־מְשִׁיחַ יְהוָה הֽוּא׃ | 10 |
ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.
וְאָבִי רְאֵה גַּם רְאֵה אֶת־כְּנַף מְעִילְךָ בְּיָדִי כִּי בְּכָרְתִי אֶת־כְּנַף מְעִֽילְךָ וְלֹא הֲרַגְתִּיךָ דַּע וּרְאֵה כִּי אֵין בְּיָדִי רָעָה וָפֶשַׁע וְלֹא־חָטָאתִי לָךְ וְאַתָּה צֹדֶה אֶת־נַפְשִׁי לְקַחְתָּֽהּ׃ | 11 |
ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
יִשְׁפֹּט יְהוָה בֵּינִי וּבֵינֶךָ וּנְקָמַנִי יְהוָה מִמֶּךָּ וְיָדִי לֹא תִֽהְיֶה־בָּֽךְ׃ | 12 |
ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.
כַּאֲשֶׁר יֹאמַר מְשַׁל הַקַּדְמֹנִי מֵרְשָׁעִים יֵצֵא רֶשַׁע וְיָדִי לֹא תִֽהְיֶה־בָּֽךְ׃ | 13 |
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.
אַחֲרֵי מִי יָצָא מֶלֶךְ יִשְׂרָאֵל אַחֲרֵי מִי אַתָּה רֹדֵף אַֽחֲרֵי כֶּלֶב מֵת אַחֲרֵי פַּרְעֹשׁ אֶחָֽד׃ | 14 |
“ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?
וְהָיָה יְהוָה לְדַיָּן וְשָׁפַט בֵּינִי וּבֵינֶךָ וְיֵרֶא וְיָרֵב אֶת־רִיבִי וְיִשְׁפְּטֵנִי מִיָּדֶֽךָ׃ | 15 |
ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.
וַיְהִי ׀ כְּכַלּוֹת דָּוִד לְדַבֵּר אֶת־הַדְּבָרִים הָאֵלֶּה אֶל־שָׁאוּל וַיֹּאמֶר שָׁאוּל הֲקֹלְךָ זֶה בְּנִי דָוִד וַיִּשָּׂא שָׁאוּל קֹלוֹ וַיֵּֽבְךְּ׃ | 16 |
ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.
וַיֹּאמֶר אֶל־דָּוִד צַדִּיק אַתָּה מִמֶּנִּי כִּי אַתָּה גְּמַלְתַּנִי הַטּוֹבָה וַאֲנִי גְּמַלְתִּיךָ הָרָעָֽה׃ | 17 |
ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.
ואת וְאַתָּה הִגַּדְתָּ הַיּוֹם אֵת אֲשֶׁר־עָשִׂיתָה אִתִּי טוֹבָה אֵת אֲשֶׁר סִגְּרַנִי יְהוָה בְּיָדְךָ וְלֹא הֲרַגְתָּֽנִי׃ | 18 |
ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.
וְכִֽי־יִמְצָא אִישׁ אֶת־אֹיְבוֹ וְשִׁלְּחוֹ בְּדֶרֶךְ טוֹבָה וַֽיהוָה יְשַׁלֶּמְךָ טוֹבָה תַּחַת הַיּוֹם הַזֶּה אֲשֶׁר עָשִׂיתָה לִֽי׃ | 19 |
ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.
וְעַתָּה הִנֵּה יָדַעְתִּי כִּי מָלֹךְ תִּמְלוֹךְ וְקָמָה בְּיָדְךָ מַמְלֶכֶת יִשְׂרָאֵֽל׃ | 20 |
ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.
וְעַתָּה הִשָּׁבְעָה לִּי בַּֽיהוָה אִם־תַּכְרִית אֶת־זַרְעִי אַֽחֲרָי וְאִם־תַּשְׁמִיד אֶת־שְׁמִי מִבֵּית אָבִֽי׃ | 21 |
ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು.
וַיִּשָּׁבַע דָּוִד לְשָׁאוּל וַיֵּלֶךְ שָׁאוּל אֶל־בֵּיתוֹ וְדָוִד וַֽאֲנָשָׁיו עָלוּ עַל־הַמְּצוּדָֽה׃ | 22 |
ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು.