< שמואל א 7 >
וַיָּבֹאוּ אַנְשֵׁי ׀ קִרְיַת יְעָרִים וֽ͏ַיַּעֲלוּ אֶת־אֲרוֹן יְהוָה וַיָּבִאוּ אֹתוֹ אֶל־בֵּית אֲבִינָדָב בַּגִּבְעָה וְאֶת־אֶלְעָזָר בְּנוֹ קִדְּשׁוּ לִשְׁמֹר אֶת־אֲרוֹן יְהוָֽה׃ | 1 |
೧ಆಗ ಕಿರ್ಯತ್ಯಾರೀಮಿನವರು ಬಂದು ಯೆಹೋವನ ಮಂಜೂಷವನ್ನು ತೆಗೆದುಕೊಂಡು ಹೋಗಿ, ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿಟ್ಟು, ಅವನ ಮಗನಾದ ಎಲ್ಲಾಜಾರನನ್ನು ಅದರ ಸೇವೆಗೋಸ್ಕರ ಪ್ರತಿಷ್ಠಿಸಿದರು.
וַיְהִי מִיּוֹם שֶׁבֶת הָֽאָרוֹן בְּקִרְיַת יְעָרִים וַיִּרְבּוּ הַיָּמִים וַיִּֽהְיוּ עֶשְׂרִים שָׁנָה וַיִּנָּהוּ כָּל־בֵּית יִשְׂרָאֵל אַחֲרֵי יְהוָֽה׃ | 2 |
೨ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.
וַיֹּאמֶר שְׁמוּאֵל אֶל־כָּל־בֵּית יִשְׂרָאֵל לֵאמֹר אִם־בְּכָל־לְבַבְכֶם אַתֶּם שָׁבִים אֶל־יְהוָה הָסִירוּ אֶת־אֱלֹהֵי הַנֵּכָר מִתּוֹכְכֶם וְהָעַשְׁתָּרוֹת וְהָכִינוּ לְבַבְכֶם אֶל־יְהוָה וְעִבְדֻהוּ לְבַדּוֹ וְיַצֵּל אֶתְכֶם מִיַּד פְּלִשְׁתִּֽים׃ | 3 |
೩ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
וַיָּסִירוּ בְּנֵי יִשְׂרָאֵל אֶת־הַבְּעָלִים וְאֶת־הָעַשְׁתָּרֹת וַיַּעַבְדוּ אֶת־יְהוָה לְבַדּֽוֹ׃ | 4 |
೪ಹಾಗೆಯೇ ಇಸ್ರಾಯೇಲ್ಯರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಯೆಹೋವನೊಬ್ಬನನ್ನೇ ಆರಾಧಿಸತೊಡಗಿದರು.
וַיֹּאמֶר שְׁמוּאֵל קִבְצוּ אֶת־כָּל־יִשְׂרָאֵל הַמִּצְפָּתָה וְאֶתְפַּלֵּל בַּעַדְכֶם אֶל־יְהוָֽה׃ | 5 |
೫ಸಮುವೇಲನು ತಿರುಗಿ ಅವರಿಗೆ, “ಇಸ್ರಾಯೇಲ್ಯರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಯೆಹೋವನನ್ನು ಪ್ರಾರ್ಥಿಸುವೆನು” ಅಂದನು.
וַיִּקָּבְצוּ הַמִּצְפָּתָה וַיִּֽשְׁאֲבוּ־מַיִם וֽ͏ַיִּשְׁפְּכוּ ׀ לִפְנֵי יְהוָה וַיָּצוּמוּ בַּיּוֹם הַהוּא וַיֹּאמְרוּ שָׁם חָטָאנוּ לַיהוָה וַיִּשְׁפֹּט שְׁמוּאֵל אֶת־בְּנֵי יִשְׂרָאֵל בַּמִּצְפָּֽה׃ | 6 |
೬ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
וַיִּשְׁמְעוּ פְלִשְׁתִּים כִּֽי־הִתְקַבְּצוּ בְנֵֽי־יִשְׂרָאֵל הַמִּצְפָּתָה וַיַּעֲלוּ סַרְנֵֽי־פְלִשְׁתִּים אֶל־יִשְׂרָאֵל וַֽיִּשְׁמְעוּ בְּנֵי יִשְׂרָאֵל וַיִּֽרְאוּ מִפְּנֵי פְלִשְׁתִּֽים׃ | 7 |
೭ಇಸ್ರಾಯೇಲ್ಯರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆ ಎಂದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟರು. ಇದನ್ನು ತಿಳಿದ ಇಸ್ರಾಯೇಲರು ಬಹಳವಾಗಿ ಭಯಪಟ್ಟು ಸಮುವೇಲನಿಗೆ,
וַיֹּאמְרוּ בְנֵֽי־יִשְׂרָאֵל אֶל־שְׁמוּאֵל אַל־תַּחֲרֵשׁ מִמֶּנּוּ מִזְּעֹק אֶל־יְהוָה אֱלֹהֵינוּ וְיֹשִׁעֵנוּ מִיַּד פְּלִשְׁתִּֽים׃ | 8 |
೮“ನಮ್ಮ ದೇವರಾದ ಯೆಹೋವನು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀನು ನಮಗೋಸ್ಕರ ಆತನಿಗೆ ಮೊರೆಯಿಡು, ಸುಮ್ಮನಿರಬೇಡ” ಅಂದರು.
וַיִּקַּח שְׁמוּאֵל טְלֵה חָלָב אֶחָד ויעלה וַיַּעֲלֵהוּ עוֹלָה כָּלִיל לַֽיהוָה וַיִּזְעַק שְׁמוּאֵל אֶל־יְהוָה בְּעַד יִשְׂרָאֵל וַֽיַּעֲנֵהוּ יְהוָֽה׃ | 9 |
೯ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.
וַיְהִי שְׁמוּאֵל מַעֲלֶה הָעוֹלָה וּפְלִשְׁתִּים נִגְּשׁוּ לַמִּלְחָמָה בְּיִשְׂרָאֵל וַיַּרְעֵם יְהוָה ׀ בְּקוֹל־גָּדוֹל בַּיּוֹם הַהוּא עַל־פְּלִשְׁתִּים וַיְהֻמֵּם וַיִּנָּגְפוּ לִפְנֵי יִשְׂרָאֵֽל׃ | 10 |
೧೦ಹೇಗೆಂದರೆ, ಸಮುವೇಲನು ಯಜ್ಞವನ್ನು ಅರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಕ್ಕೋಸ್ಕರ ಸಮೀಪಿಸಲಾಗಿ, ಯೆಹೋವನು ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ ಇಸ್ರಾಯೇಲರಿಗೆ ಸೋತು ಓಡಿ ಹೋಗುವಂತೆ ಮಾಡಿದನು.
וַיֵּצְאוּ אַנְשֵׁי יִשְׂרָאֵל מִן־הַמִּצְפָּה וַֽיִּרְדְּפוּ אֶת־פְּלִשְׁתִּים וַיַּכּוּם עַד־מִתַּחַת לְבֵית כָּֽר׃ | 11 |
೧೧ಇಸ್ರಾಯೇಲ್ಯರಾದರೋ ಮಿಚ್ಪೆಯಿಂದ ಹೊರಟು ಫಿಲಿಷ್ಟಿಯರನ್ನು ಹಿಂದಟ್ಟಿ ಬೇತ್ಕರಿನ ತಗ್ಗಿನವರೆಗೆ ಅವರನ್ನು ಹತಮಾಡಿದರು.
וַיִּקַּח שְׁמוּאֵל אֶבֶן אַחַת וַיָּשֶׂם בֵּֽין־הַמִּצְפָּה וּבֵין הַשֵּׁן וַיִּקְרָא אֶת־שְׁמָהּ אֶבֶן הָעָזֶר וַיֹּאמַר עַד־הֵנָּה עֲזָרָנוּ יְהוָֽה׃ | 12 |
೧೨ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದ್ದಾನೆ” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.
וַיִּכָּֽנְעוּ הַפְּלִשְׁתִּים וְלֹא־יָסְפוּ עוֹד לָבוֹא בִּגְבוּל יִשְׂרָאֵל וַתְּהִי יַד־יְהוָה בַּפְּלִשְׁתִּים כֹּל יְמֵי שְׁמוּאֵֽל׃ | 13 |
೧೩ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರುಗಿ ಇಸ್ರಾಯೇಲ್ಯರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.
וַתָּשֹׁבְנָה הֶעָרִים אֲשֶׁר לָֽקְחוּ־פְלִשְׁתִּים מֵאֵת יִשְׂרָאֵל ׀ לְיִשְׂרָאֵל מֵעֶקְרוֹן וְעַד־גַּת וְאֶת־גְּבוּלָן הִצִּיל יִשְׂרָאֵל מִיַּד פְּלִשְׁתִּים וַיְהִי שָׁלוֹם בֵּין יִשְׂרָאֵל וּבֵין הָאֱמֹרִֽי׃ | 14 |
೧೪ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನ ವರೆಗೆ ಇಸ್ರಾಯೇಲರಿಂದ ಕಿತ್ತುಕೊಂಡಿದ್ದ ಎಲ್ಲಾ ಪಟ್ಟಣಗಳು ಇಸ್ರಾಯೇಲರಿಗೇ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಾಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಾಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.
וַיִּשְׁפֹּט שְׁמוּאֵל אֶת־יִשְׂרָאֵל כֹּל יְמֵי חַיָּֽיו׃ | 15 |
೧೫ಸಮುವೇಲನು ಜೀವದಿಂದ ಇರುವವರೆಗೆ ಇಸ್ರಾಯೇಲರಿಗೆ ನ್ಯಾಯತೀರಿಸುತ್ತಿದ್ದನು.
וְהָלַךְ מִדֵּי שָׁנָה בְּשָׁנָה וְסָבַב בֵּֽית־אֵל וְהַגִּלְגָּל וְהַמִּצְפָּה וְשָׁפַט אֶת־יִשְׂרָאֵל אֵת כָּל־הַמְּקוֹמוֹת הָאֵֽלֶּה׃ | 16 |
೧೬ಅವನು ಇಸ್ರಾಯೇಲರ ನ್ಯಾಯಗಳನ್ನು ತೀರಿಸುವುದಕ್ಕೋಸ್ಕರ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಕ್ಕೆ ತಿರುಗಿ ಬರುತ್ತಿದ್ದನು.
וּתְשֻׁבָתוֹ הָרָמָתָה כִּֽי־שָׁם בֵּיתוֹ וְשָׁם שָׁפָט אֶת־יִשְׂרָאֵל וַיִּֽבֶן־שָׁם מִזְבֵּחַ לַֽיהוָֽה׃ | 17 |
೧೭ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.