< שמואל א 9 >
וֽ͏ַיְהִי־אִישׁ מבן־ימין מִבִּנְיָמִין וּשְׁמוֹ קִישׁ בֶּן־אֲבִיאֵל בֶּן־צְרוֹר בֶּן־בְּכוֹרַת בֶּן־אֲפִיחַ בֶּן־אִישׁ יְמִינִי גִּבּוֹר חָֽיִל׃ | 1 |
ಬೆನ್ಯಾಮೀನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಬೆನ್ಯಾಮೀನ್ಯನಾದ ಅಫೀಹನ ಮಗನು. ಇವನು ಐಶ್ವರ್ಯವಂತನಾಗಿದ್ದನು.
וְלוֹ־הָיָה בֵן וּשְׁמוֹ שָׁאוּל בָּחוּר וָטוֹב וְאֵין אִישׁ מִבְּנֵי יִשְׂרָאֵל טוֹב מִמֶּנּוּ מִשִּׁכְמוֹ וָמַעְלָה גָּבֹהַּ מִכָּל־הָעָֽם׃ | 2 |
ಅವನಿಗೆ ಒಳ್ಳೆಯ ಪ್ರಾಯಸ್ಥನಾದ ಸೌಲನೆಂಬ ಹೆಸರುಳ್ಳ ಒಬ್ಬ ಒಳ್ಳೆಯ ಮಗನಿದ್ದನು. ಇಸ್ರಾಯೇಲರಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನಾದರೂ ಇರಲಿಲ್ಲ. ಅವನ ಭುಜವು ಜನರ ಮಧ್ಯೆ ಕಾಣುವಷ್ಟು ಎತ್ತರವಾಗಿದ್ದನು.
וַתֹּאבַדְנָה הָאֲתֹנוֹת לְקִישׁ אֲבִי שָׁאוּל וַיֹּאמֶר קִישׁ אֶל־שָׁאוּל בְּנוֹ קַח־נָא אִתְּךָ אֶת־אַחַד מֵֽהַנְּעָרִים וְקוּם לֵךְ בַּקֵּשׁ אֶת־הָאֲתֹנֹֽת׃ | 3 |
ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು.
וַיַּעֲבֹר בְּהַר־אֶפְרַיִם וַיַּעֲבֹר בְּאֶֽרֶץ־שָׁלִשָׁה וְלֹא מָצָאוּ וַיַּעַבְרוּ בְאֶֽרֶץ־שַׁעֲלִים וָאַיִן וַיַּעֲבֹר בְּאֶֽרֶץ־יְמִינִי וְלֹא מָצָֽאוּ׃ | 4 |
ಹಾಗೆಯೇ ಅವನು ಎಫ್ರಾಯೀಮ್ ಬೆಟ್ಟವನ್ನು ಶಾಲಿಷಾ ದೇಶವನ್ನೂ ದಾಟಿಹೋದನು, ಆದರೆ ಅವು ಸಿಕ್ಕಲಿಲ್ಲ. ಶಾಲೀಮ್ ದೇಶವನ್ನು ಹಾದುಹೋದನು, ಅಲ್ಲಿಯೂ ಅವುಗಳು ಕಾಣದೆ ಹೋದವು. ಅವನು ಬೆನ್ಯಾಮೀನನ ದೇಶವನ್ನು ದಾಟಿ, ಅವುಗಳನ್ನು ಕಾಣದೆ ಹೋದನು.
הֵמָּה בָּאוּ בְּאֶרֶץ צוּף וְשָׁאוּל אָמַר לְנַעֲרוֹ אֲשֶׁר־עִמּוֹ לְכָה וְנָשׁוּבָה פֶּן־יֶחְדַּל אָבִי מִן־הָאֲתֹנוֹת וְדָאַג לָֽנוּ׃ | 5 |
ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು.
וַיֹּאמֶר לוֹ הִנֵּה־נָא אִישׁ־אֱלֹהִים בָּעִיר הַזֹּאת וְהָאִישׁ נִכְבָּד כֹּל אֲשֶׁר־יְדַבֵּר בּוֹא יָבוֹא עַתָּה נֵלֲכָה שָּׁם אוּלַי יַגִּיד לָנוּ אֶת־דַּרְכֵּנוּ אֲשֶׁר־הָלַכְנוּ עָלֶֽיהָ׃ | 6 |
ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.
וַיֹּאמֶר שָׁאוּל לְנַעֲרוֹ וְהִנֵּה נֵלֵךְ וּמַה־נָּבִיא לָאִישׁ כִּי הַלֶּחֶם אָזַל מִכֵּלֵינוּ וּתְשׁוּרָה אֵין־לְהָבִיא לְאִישׁ הָאֱלֹהִים מָה אִתָּֽנוּ׃ | 7 |
ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು.
וַיֹּסֶף הַנַּעַר לַעֲנוֹת אֶת־שָׁאוּל וַיֹּאמֶר הִנֵּה נִמְצָא בְיָדִי רֶבַע שֶׁקֶל כָּסֶף וְנָֽתַתִּי לְאִישׁ הָאֱלֹהִים וְהִגִּיד לָנוּ אֶת־דַּרְכֵּֽנוּ׃ | 8 |
ಅದಕ್ಕೆ ಆ ಸೇವಕನು ಸೌಲನಿಗೆ ಉತ್ತರವಾಗಿ, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯ ಇದೆ, ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು,” ಎಂದನು.
לְפָנִים ׀ בְּיִשְׂרָאֵל כֹּֽה־אָמַר הָאִישׁ בְּלֶכְתּוֹ לִדְרוֹשׁ אֱלֹהִים לְכוּ וְנֵלְכָה עַד־הָרֹאֶה כִּי לַנָּבִיא הַיּוֹם יִקָּרֵא לְפָנִים הָרֹאֶֽה׃ | 9 |
ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.
וַיֹּאמֶר שָׁאוּל לְנַעֲרוֹ טוֹב דְּבָרְךָ לְכָה ׀ נֵלֵכָה וַיֵּֽלְכוּ אֶל־הָעִיר אֲשֶׁר־שָׁם אִישׁ הָאֱלֹהִֽים׃ | 10 |
ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
הֵמָּה עֹלִים בְּמַעֲלֵה הָעִיר וְהֵמָּה מָצְאוּ נְעָרוֹת יֹצְאוֹת לִשְׁאֹב מָיִם וַיֹּאמְרוּ לָהֶן הֲיֵשׁ בָּזֶה הָרֹאֶֽה׃ | 11 |
ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.
וַתַּעֲנֶינָה אוֹתָם וַתֹּאמַרְנָה יֵּשׁ הִנֵּה לְפָנֶיךָ מַהֵר ׀ עַתָּה כִּי הַיּוֹם בָּא לָעִיר כִּי זֶבַח הַיּוֹם לָעָם בַּבָּמָֽה׃ | 12 |
ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.
כְּבֹאֲכֶם הָעִיר כֵּן תִּמְצְאוּן אֹתוֹ בְּטֶרֶם יַעֲלֶה הַבָּמָתָה לֶאֱכֹל כִּי לֹֽא־יֹאכַל הָעָם עַד־בֹּאוֹ כִּֽי־הוּא יְבָרֵךְ הַזֶּבַח אַחֲרֵי־כֵן יֹאכְלוּ הַקְּרֻאִים וְעַתָּה עֲלוּ כִּֽי־אֹתוֹ כְהַיּוֹם תִּמְצְאוּן אֹתֽוֹ׃ | 13 |
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.
וַֽיַּעֲלוּ הָעִיר הֵמָּה בָּאִים בְּתוֹךְ הָעִיר וְהִנֵּה שְׁמוּאֵל יֹצֵא לִקְרָאתָם לַעֲלוֹת הַבָּמָֽה׃ | 14 |
ಅವರು ಪಟ್ಟಣಕ್ಕೆ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ, ಸಮುಯೇಲನು ಗುಡ್ಡದ ಮೇಲಕ್ಕೆ ಏರಿ ಹೋಗುವುದಕ್ಕೆ ಅವರಿಗೆದುರಾಗಿ ಹೊರಟುಬಂದನು.
וַֽיהוָה גָּלָה אֶת־אֹזֶן שְׁמוּאֵל יוֹם אֶחָד לִפְנֵי בֽוֹא־שָׁאוּל לֵאמֹֽר׃ | 15 |
ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,
כָּעֵת ׀ מָחָר אֶשְׁלַח אֵלֶיךָ אִישׁ מֵאֶרֶץ בִּנְיָמִן וּמְשַׁחְתּוֹ לְנָגִיד עַל־עַמִּי יִשְׂרָאֵל וְהוֹשִׁיעַ אֶת־עַמִּי מִיַּד פְּלִשְׁתִּים כִּי רָאִיתִי אֶת־עַמִּי כִּי בָּאָה צַעֲקָתוֹ אֵלָֽי׃ | 16 |
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.
וּשְׁמוּאֵל רָאָה אֶת־שָׁאוּל וַיהוָה עָנָהוּ הִנֵּה הָאִישׁ אֲשֶׁר אָמַרְתִּי אֵלֶיךָ זֶה יַעְצֹר בְּעַמִּֽי׃ | 17 |
ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು.
וַיִּגַּשׁ שָׁאוּל אֶת־שְׁמוּאֵל בְּתוֹךְ הַשָּׁעַר וַיֹּאמֶר הַגִּֽידָה־נָּא לִי אֵי־זֶה בֵּית הָרֹאֶֽה׃ | 18 |
ಸೌಲನು ಊರಿನ ಬಾಗಿಲಲ್ಲಿ ಇರುವ ಸಮುಯೇಲನ ಸಮೀಪಕ್ಕೆ ಬಂದು, ಅವನಿಗೆ, “ದರ್ಶಿಯ ಮನೆಯು ಎಲ್ಲಿ ಇದೆ? ದಯಮಾಡಿ ನೀನು ನನಗೆ ತಿಳಿಸು,” ಎಂದನು.
וַיַּעַן שְׁמוּאֵל אֶת־שָׁאוּל וַיֹּאמֶר אָנֹכִי הָרֹאֶה עֲלֵה לְפָנַי הַבָּמָה וַאֲכַלְתֶּם עִמִּי הַיּוֹם וְשִׁלַּחְתִּיךָ בַבֹּקֶר וְכֹל אֲשֶׁר בִּֽלְבָבְךָ אַגִּיד לָֽךְ׃ | 19 |
ಸಮುಯೇಲನು ಸೌಲನಿಗೆ ಉತ್ತರವಾಗಿ, “ದರ್ಶಿಯು ನಾನೇ, ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು. ಈ ಹೊತ್ತು ನೀನು ನನ್ನ ಸಂಗಡ ಊಟಮಾಡಬೇಕು, ನಾಳೆ ಹೊತ್ತಾರೆ ನಿನ್ನನ್ನು ಕಳುಹಿಸುವೆನು. ನಿನ್ನ ಹೃದಯದಲ್ಲಿರುವುದನ್ನೆಲ್ಲಾ ನಿನಗೆ ತಿಳಿಯಪಡಿಸುವೆನು.
וְלָאֲתֹנוֹת הָאֹבְדוֹת לְךָ הַיּוֹם שְׁלֹשֶׁת הַיָּמִים אַל־תָּשֶׂם אֶֽת־לִבְּךָ לָהֶם כִּי נִמְצָאוּ וּלְמִי כָּל־חֶמְדַּת יִשְׂרָאֵל הֲלוֹא לְךָ וּלְכֹל בֵּית אָבִֽיךָ׃ | 20 |
ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು.
וַיַּעַן שָׁאוּל וַיֹּאמֶר הֲלוֹא בֶן־יְמִינִי אָנֹכִי מִקַּטַנֵּי שִׁבְטֵי יִשְׂרָאֵל וּמִשְׁפַּחְתִּי הַצְּעִרָה מִכָּֽל־מִשְׁפְּחוֹת שִׁבְטֵי בִנְיָמִן וְלָמָּה דִּבַּרְתָּ אֵלַי כַּדָּבָר הַזֶּֽה׃ | 21 |
ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.
וַיִּקַּח שְׁמוּאֵל אֶת־שָׁאוּל וְאֶֽת־נַעֲרוֹ וַיְבִיאֵם לִשְׁכָּתָה וַיִּתֵּן לָהֶם מָקוֹם בְּרֹאשׁ הַקְּרוּאִים וְהֵמָּה כִּשְׁלֹשִׁים אִֽישׁ׃ | 22 |
ಆಗ ಸಮುಯೇಲನು ಸೌಲನನ್ನೂ, ಅವನ ಸೇವಕನನ್ನೂ ಕರೆತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳಕ್ಕೆ ಕರಕೊಂಡು ಬಂದನು.
וַיֹּאמֶר שְׁמוּאֵל לַטַּבָּח תְּנָה אֶת־הַמָּנָה אֲשֶׁר נָתַתִּי לָךְ אֲשֶׁר אָמַרְתִּי אֵלֶיךָ שִׂים אֹתָהּ עִמָּֽךְ׃ | 23 |
ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುಯೇಲನು ಅಡಿಗೆಯವನಿಗೆ, “ನಾನು ನಿನ್ನ ಕೈಯಲ್ಲಿ ಕೊಟ್ಟು ಇಡಬೇಕೆಂದು ಹೇಳಿದ ಪಾಲನ್ನು ತಂದಿಡು,” ಎಂದನು.
וַיָּרֶם הַטַּבָּח אֶת־הַשּׁוֹק וְהֶעָלֶיהָ וַיָּשֶׂם ׀ לִפְנֵי שָׁאוּל וַיֹּאמֶר הִנֵּה הַנִּשְׁאָר שִׂים־לְפָנֶיךָ אֱכֹל כִּי לַמּוֹעֵד שָֽׁמוּר־לְךָ לֵאמֹר הָעָם ׀ קָרָאתִי וַיֹּאכַל שָׁאוּל עִם־שְׁמוּאֵל בַּיּוֹם הַהֽוּא׃ | 24 |
ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು.
וַיֵּרְדוּ מֵהַבָּמָה הָעִיר וַיְדַבֵּר עִם־שָׁאוּל עַל־הַגָּֽג׃ | 25 |
ಅವರು ಗುಡ್ಡದಿಂದ ಪಟ್ಟಣಕ್ಕೆ ಇಳಿದು ಬಂದಾಗ ಸಮುಯೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
וַיַּשְׁכִּמוּ וַיְהִי כַּעֲלוֹת הַשַּׁחַר וַיִּקְרָא שְׁמוּאֵל אֶל־שָׁאוּל הגג הַגָּגָה לֵאמֹר קוּמָה וַאֲשַׁלְּחֶךָּ וַיָּקָם שָׁאוּל וַיֵּצְאוּ שְׁנֵיהֶם הוּא וּשְׁמוּאֵל הַחֽוּצָה׃ | 26 |
ಅವರು ಉದಯಕಾಲದಲ್ಲಿ ಸೂರ್ಯೋದಯದಲ್ಲಿ ಎದ್ದಾಗ, ಸಮುಯೇಲನು ಸೌಲನನ್ನು ಮಾಳಿಗೆಗೆ ಕರೆದು, “ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಸೌಲನು ಎದ್ದನು, ಆಗ ಸೌಲನೂ, ಸಮುಯೇಲನೂ ಇಬ್ಬರೂ ಹೊರಗೆ ಹೊರಟರು.
הֵמָּה יֽוֹרְדִים בִּקְצֵה הָעִיר וּשְׁמוּאֵל אָמַר אֶל־שָׁאוּל אֱמֹר לַנַּעַר וְיַעֲבֹר לְפָנֵינוּ וַֽיַּעֲבֹר וְאַתָּה עֲמֹד כַּיּוֹם וְאַשְׁמִיעֲךָ אֶת־דְּבַר אֱלֹהִֽים׃ | 27 |
ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು.