< דברי הימים ב 10 >
וַיֵּלֶךְ רְחַבְעָם שְׁכֶמָה כִּי שְׁכֶם בָּאוּ כָל־יִשְׂרָאֵל לְהַמְלִיךְ אֹתֽוֹ׃ | 1 |
ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.
וַיְהִי כִּשְׁמֹעַ יָרָבְעָם בֶּן־נְבָט וְהוּא בְמִצְרַיִם אֲשֶׁר בָּרַח מִפְּנֵי שְׁלֹמֹה הַמֶּלֶךְ וַיָּשָׁב יָרָבְעָם מִמִּצְרָֽיִם׃ | 2 |
ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.
וַֽיִּשְׁלְחוּ וַיִּקְרְאוּ־לוֹ וַיָּבֹא יָרָבְעָם וְכָל־יִשְׂרָאֵל וַֽיְדַבְּרוּ אֶל־רְחַבְעָם לֵאמֹֽר׃ | 3 |
ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ,
אָבִיךָ הִקְשָׁה אֶת־עֻלֵּנוּ וְעַתָּה הָקֵל מֵעֲבֹדַת אָבִיךָ הַקָּשָׁה וּמֵעֻלּוֹ הַכָּבֵד אֲשֶׁר־נָתַן עָלֵינוּ וְנַֽעַבְדֶֽךָּ׃ | 4 |
“ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.
וַיֹּאמֶר אֲלֵהֶם עוֹד שְׁלֹשֶׁת יָמִים וְשׁוּבוּ אֵלָי וַיֵּלֶךְ הָעָֽם׃ | 5 |
ಅದಕ್ಕೆ ರೆಹಬ್ಬಾಮನು ಅವರಿಗೆ, “ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.
וַיִּוָּעַץ הַמֶּלֶךְ רְחַבְעָם אֶת־הַזְּקֵנִים אֲשֶׁר־הָיוּ עֹֽמְדִים לִפְנֵי שְׁלֹמֹה אָבִיו בִּֽהְיֹתוֹ חַי לֵאמֹר אֵיךְ אַתֶּם נֽוֹעָצִים לְהָשִׁיב לָֽעָם־הַזֶּה דָּבָֽר׃ | 6 |
ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
וַיְדַבְּרוּ אֵלָיו לֵאמֹר אִם־תִּֽהְיֶה לְטוֹב לְהָעָם הַזֶּה וּרְצִיתָם וְדִבַּרְתָּ אֲלֵהֶם דְּבָרִים טוֹבִים וְהָיוּ לְךָ עֲבָדִים כָּל־הַיָּמִֽים׃ | 7 |
ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.
וַֽיַּעֲזֹב אֶת־עֲצַת הַזְּקֵנִים אֲשֶׁר יְעָצֻהוּ וַיִּוָּעַץ אֶת־הַיְלָדִים אֲשֶׁר גָּדְלוּ אִתּוֹ הָעֹמְדִים לְפָנָֽיו׃ | 8 |
ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,
וַיֹּאמֶר אֲלֵהֶם מָה אַתֶּם נֽוֹעָצִים וְנָשִׁיב דָּבָר אֶת־הָעָם הַזֶּה אֲשֶׁר דִּבְּרוּ אֵלַי לֵאמֹר הָקֵל מִן־הָעֹל אֲשֶׁר־נָתַן אָבִיךָ עָלֵֽינוּ׃ | 9 |
ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
וַיְדַבְּרוּ אִתּוֹ הַיְלָדִים אֲשֶׁר גָּדְלוּ אִתּוֹ לֵאמֹר כֹּֽה־תֹאמַר לָעָם אֲשֶׁר־דִּבְּרוּ אֵלֶיךָ לֵאמֹר אָבִיךָ הִכְבִּיד אֶת־עֻלֵּנוּ וְאַתָּה הָקֵל מֵעָלֵינוּ כֹּה תֹּאמַר אֲלֵהֶם קָֽטָנִּי עָבָה מִמָּתְנֵי אָבִֽי׃ | 10 |
ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.
וְעַתָּה אָבִי הֶעְמִיס עֲלֵיכֶם עֹל כָּבֵד וַאֲנִי אֹסִיף עַֽל־עֻלְּכֶם אָבִי יִסַּר אֶתְכֶם בַּשּׁוֹטִים וַאֲנִי בָּֽעֲקְרַבִּֽים׃ | 11 |
ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.
וַיָּבֹא יָרָבְעָם וְכָל־הָעָם אֶל־רְחַבְעָם בַּיּוֹם הַשְּׁלִשִׁי כַּאֲשֶׁר דִּבֶּר הַמֶּלֶךְ לֵאמֹר שׁוּבוּ אֵלַי בַּיּוֹם הַשְּׁלִשִֽׁי׃ | 12 |
ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ” ಎಂದು ಅರಸನು ಹೇಳಿದ ಪ್ರಕಾರ ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.
וַיַּעֲנֵם הַמֶּלֶךְ קָשָׁה וַֽיַּעֲזֹב הַמֶּלֶךְ רְחַבְעָם אֵת עֲצַת הַזְּקֵנִֽים׃ | 13 |
ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,
וַיְדַבֵּר אֲלֵהֶם כַּעֲצַת הַיְלָדִים לֵאמֹר אַכְבִּיד אֶֽת־עֻלְּכֶם וַאֲנִי אֹסִיף עָלָיו אָבִי יִסַּר אֶתְכֶם בַּשּׁוֹטִים וַאֲנִי בָּעֲקְרַבִּֽים׃ | 14 |
ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.
וְלֹֽא־שָׁמַע הַמֶּלֶךְ אֶל־הָעָם כִּֽי־הָיְתָה נְסִבָּה מֵעִם הֽ͏ָאֱלֹהִים לְמַעַן הָקִים יְהוָה אֶת־דְּבָרוֹ אֲשֶׁר דִּבֶּר בְּיַד אֲחִיָּהוּ הַשִּֽׁלוֹנִי אֶל־יָרָבְעָם בֶּן־נְבָֽט׃ | 15 |
ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.
וְכָל־יִשְׂרָאֵל כִּי לֹא־שָׁמַע הַמֶּלֶךְ לָהֶם וַיָּשִׁיבוּ הָעָם אֶת־הַמֶּלֶךְ ׀ לֵאמֹר מַה־לָּנוּ חֵלֶק בְּדָוִיד וְלֹֽא־נַחֲלָה בְּבֶן־יִשַׁי אִישׁ לְאֹהָלֶיךָ יִשְׂרָאֵל עַתָּה רְאֵה בֵיתְךָ דָּוִיד וַיֵּלֶךְ כָּל־יִשְׂרָאֵל לְאֹהָלָֽיו׃ | 16 |
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.
וּבְנֵי יִשְׂרָאֵל הַיֹּֽשְׁבִים בְּעָרֵי יְהוּדָה וַיִּמְלֹךְ עֲלֵיהֶם רְחַבְעָֽם׃ | 17 |
ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.
וַיִּשְׁלַח הַמֶּלֶךְ רְחַבְעָם אֶת־הֲדֹרָם אֲשֶׁר עַל־הַמַּס וַיִּרְגְּמוּ־בוֹ בְנֵֽי־יִשְׂרָאֵל אֶבֶן וַיָּמֹת וְהַמֶּלֶךְ רְחַבְעָם הִתְאַמֵּץ לַֽעֲלוֹת בַּמֶּרְכָּבָה לָנוּס יְרוּשָׁלָֽ͏ִם׃ | 18 |
ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
וַיִּפְשְׁעוּ יִשְׂרָאֵל בְּבֵית דָּוִיד עַד הַיּוֹם הַזֶּֽה׃ | 19 |
ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.