< דברי הימים ב 32 >

אַחֲרֵי הַדְּבָרִים וְהָאֱמֶת הָאֵלֶּה בָּא סַנְחֵרִיב מֶֽלֶךְ־אַשּׁוּר וַיָּבֹא בִֽיהוּדָה וַיִּחַן עַל־הֶעָרִים הַבְּצֻרוֹת וַיֹּאמֶר לְבִקְעָם אֵלָֽיו׃ 1
ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.
וַיַּרְא יְחִזְקִיָּהוּ כִּי־בָא סַנְחֵרִיב וּפָנָיו לַמִּלְחָמָה עַל־יְרוּשָׁלָֽ͏ִם׃ 2
ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,
וַיִּוָּעַץ עִם־שָׂרָיו וְגִבֹּרָיו לִסְתּוֹם אֶת־מֵימֵי הָעֲיָנוֹת אֲשֶׁר מִחוּץ לָעִיר וַֽיַּעְזְרֽוּהוּ׃ 3
ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.
וַיִּקָּבְצוּ עַם־רָב וַֽיִּסְתְּמוּ אֶת־כָּל־הַמַּעְיָנוֹת וְאֶת־הַנַּחַל הַשּׁוֹטֵף בְּתוֹךְ־הָאָרֶץ לֵאמֹר לָמָּה יָבוֹאוּ מַלְכֵי אַשּׁוּר וּמָצְאוּ מַיִם רַבִּֽים׃ 4
ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.
וַיִּתְחַזַּק וַיִּבֶן אֶת־כָּל־הַחוֹמָה הַפְּרוּצָה וַיַּעַל עַל־הַמִּגְדָּלוֹת וְלַחוּצָה הַחוֹמָה אַחֶרֶת וַיְחַזֵּק אֶת־הַמִּלּוֹא עִיר דָּוִיד וַיַּעַשׂ שֶׁלַח לָרֹב וּמָגִנִּֽים׃ 5
ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.
וַיִּתֵּן שָׂרֵי מִלְחָמוֹת עַל־הָעָם וַיִּקְבְּצֵם אֵלָיו אֶל־רְחוֹב שַׁעַר הָעִיר וַיְדַבֵּר עַל־לְבָבָם לֵאמֹֽר׃ 6
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:
חִזְקוּ וְאִמְצוּ אַל־תִּֽירְאוּ וְאַל־תֵּחַתּוּ מִפְּנֵי מֶלֶךְ אַשּׁוּר וּמִלִּפְנֵי כָּל־הֶהָמוֹן אֲשֶׁר־עִמּוֹ כִּֽי־עִמָּנוּ רַב מֵעִמּֽוֹ׃ 7
“ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.
עִמּוֹ זְרוֹעַ בָּשָׂר וְעִמָּנוּ יְהוָה אֱלֹהֵינוּ לְעָזְרֵנוּ וּלְהִלָּחֵם מִלְחֲמֹתֵנוּ וַיִּסָּמְכוּ הָעָם עַל־דִּבְרֵי יְחִזְקִיָּהוּ מֶֽלֶךְ־יְהוּדָֽה׃ 8
ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.
אַחַר זֶה שָׁלַח סַנְחֵרִיב מֶֽלֶךְ־אַשּׁוּר עֲבָדָיו יְרוּשָׁלַיְמָה וְהוּא עַל־לָכִישׁ וְכָל־מֶמְשַׁלְתּוֹ עִמּוֹ עַל־יְחִזְקִיָּהוּ מֶלֶךְ יְהוּדָה וְעַל־כָּל־יְהוּדָה אֲשֶׁר בִּירוּשָׁלַ͏ִם לֵאמֹֽר׃ 9
ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.
כֹּה אָמַר סַנְחֵרִיב מֶלֶךְ אַשּׁוּר עַל־מָה אַתֶּם בֹּטְחִים וְיֹשְׁבִים בְּמָצוֹר בִּירוּשָׁלָֽ͏ִם׃ 10
“ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?
הֲלֹא יְחִזְקִיָּהוּ מַסִּית אֶתְכֶם לָתֵת אֶתְכֶם לָמוּת בְּרָעָב וּבְצָמָא לֵאמֹר יְהוָה אֱלֹהֵינוּ יַצִּילֵנוּ מִכַּף מֶלֶךְ אַשּֽׁוּר׃ 11
‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
הֲלֹא־הוּא יְחִזְקִיָּהוּ הֵסִיר אֶת־בָּמֹתָיו וְאֶת־מִזְבְּחֹתָיו וַיֹּאמֶר לִֽיהוּדָה וְלִֽירוּשָׁלִַם לֵאמֹר לִפְנֵי מִזְבֵּחַ אֶחָד תִּֽשְׁתַּחֲווּ וְעָלָיו תַּקְטִֽירוּ׃ 12
ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?
הֲלֹא תֵדְעוּ מֶה עָשִׂיתִי אֲנִי וַאֲבוֹתַי לְכֹל עַמֵּי הָאֲרָצוֹת הֲיָכוֹל יָֽכְלוּ אֱלֹהֵי גּוֹיֵ הָאֲרָצוֹת לְהַצִּיל אֶת־אַרְצָם מִיָּדִֽי׃ 13
“ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?
מִי בְּֽכָל־אֱלֹהֵי הַגּוֹיִם הָאֵלֶּה אֲשֶׁר הֶחֱרִימוּ אֲבוֹתַי אֲשֶׁר יָכוֹל לְהַצִּיל אֶת־עַמּוֹ מִיָּדִי כִּי יוּכַל אֱלֹהֵיכֶם לְהַצִּיל אֶתְכֶם מִיָּדִֽי׃ 14
ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?
וְעַתָּה אַל־יַשִּׁיא אֶתְכֶם חִזְקִיָּהוּ וְאַל־יַסִּית אֶתְכֶם כָּזֹאת וְאַל־תַּאֲמִינוּ לוֹ כִּי־לֹא יוּכַל כָּל־אֱלוֹהַ כָּל־גּוֹי וּמַמְלָכָה לְהַצִּיל עַמּוֹ מִיָּדִי וּמִיַּד אֲבוֹתָי אַף כִּי אֱ‍ֽלֹהֵיכֶם לֹא־יַצִּילוּ אֶתְכֶם מִיָּדִֽי׃ 15
ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.
וְעוֹד דִּבְּרוּ עֲבָדָיו עַל־יְהוָה הָאֱלֹהִים וְעַל יְחִזְקִיָּהוּ עַבְדּֽוֹ׃ 16
ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.
וּסְפָרִים כָּתַב לְחָרֵף לַיהוָה אֱלֹהֵי יִשְׂרָאֵל וְלֵֽאמֹר עָלָיו לֵאמֹר כֵּֽאלֹהֵי גּוֹיֵ הָאֲרָצוֹת אֲשֶׁר לֹא־הִצִּילוּ עַמָּם מִיָּדִי כֵּן לֹֽא־יַצִּיל אֱלֹהֵי יְחִזְקִיָּהוּ עַמּוֹ מִיָּדִֽי׃ 17
ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.
וַיִּקְרְאוּ בְקוֹל־גָּדוֹל יְהוּדִית עַל־עַם יְרוּשָׁלִַם אֲשֶׁר עַל־הַֽחוֹמָה לְיָֽרְאָם וּֽלְבַהֲלָם לְמַעַן יִלְכְּדוּ אֶת־הָעִֽיר׃ 18
ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.
וַֽיְדַבְּרוּ אֶל־אֱלֹהֵי יְרוּשָׁלָ͏ִם כְּעַל אֱלֹהֵי עַמֵּי הָאָרֶץ מַעֲשֵׂה יְדֵי הָאָדָֽם׃ 19
ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
וַיִּתְפַּלֵּל יְחִזְקִיָּהוּ הַמֶּלֶךְ וִֽישַֽׁעְיָהוּ בֶן־אָמוֹץ הַנָּבִיא עַל־זֹאת וַֽיִּזְעֲקוּ הַשָּׁמָֽיִם׃ 20
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
וַיִּשְׁלַח יְהוָה מַלְאָךְ וַיַּכְחֵד כָּל־גִּבּוֹר חַיִל וְנָגִיד וְשָׂר בְּמַחֲנֵה מֶלֶךְ אַשּׁוּר וַיָּשָׁב בְּבֹשֶׁת פָּנִים לְאַרְצוֹ וַיָּבֹא בֵּית אֱלֹהָיו ומיציאו וּמִֽיצִיאֵי מֵעָיו שָׁם הִפִּילֻהוּ בֶחָֽרֶב׃ 21
ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.
וַיּוֹשַׁע יְהוָה אֶת־יְחִזְקִיָּהוּ וְאֵת ׀ יֹשְׁבֵי יְרוּשָׁלִַם מִיַּד סַנְחֵרִיב מֶֽלֶךְ־אַשּׁוּר וּמִיַּד־כֹּל וַֽיְנַהֲלֵם מִסָּבִֽיב׃ 22
ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.
וְרַבִּים מְבִיאִים מִנְחָה לַיהוָה לִירוּשָׁלִַם וּמִגְדָּנוֹת לִֽיחִזְקִיָּהוּ מֶלֶךְ יְהוּדָה וַיִּנַּשֵּׂא לְעֵינֵי כָל־הַגּוֹיִם מֵאַֽחֲרֵי־כֵֽן׃ 23
ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.
בַּיָּמִים הָהֵם חָלָה יְחִזְקִיָּהוּ עַד־לָמוּת וַיִּתְפַּלֵּל אֶל־יְהוָה וַיֹּאמֶר לוֹ וּמוֹפֵת נָתַן לֽוֹ׃ 24
ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.
וְלֹא־כִגְמֻל עָלָיו הֵשִׁיב יְחִזְקִיָּהוּ כִּי גָבַהּ לִבּוֹ וַיְהִי עָלָיו קֶצֶף וְעַל־יְהוּדָה וִירוּשָׁלָֽ͏ִם׃ 25
ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.
וַיִּכָּנַע יְחִזְקִיָּהוּ בְּגֹבַהּ לִבּוֹ הוּא וְיֹשְׁבֵי יְרוּשָׁלָ͏ִם וְלֹא־בָא עֲלֵיהֶם קֶצֶף יְהוָה בִּימֵי יְחִזְקִיָּֽהוּ׃ 26
ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.
וַיְהִי לִֽיחִזְקִיָּהוּ עֹשֶׁר וְכָבוֹד הַרְבֵּה מְאֹד וְאֹֽצָרוֹת עָֽשָׂה־לוֹ לְכֶסֶף וּלְזָהָב וּלְאֶבֶן יְקָרָה וְלִבְשָׂמִים וּלְמָגִנִּים וּלְכֹל כְּלֵי חֶמְדָּֽה׃ 27
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.
וּמִסְכְּנוֹת לִתְבוּאַת דָּגָן וְתִירוֹשׁ וְיִצְהָר וְאֻֽרָוֺת לְכָל־בְּהֵמָה וּבְהֵמָה וַעֲדָרִים לָאֲוֵרֽוֹת׃ 28
ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.
וְעָרִים עָשָׂה לוֹ וּמִקְנֵה־צֹאן וּבָקָר לָרֹב כִּי נָֽתַן־לוֹ אֱלֹהִים רְכוּשׁ רַב מְאֹֽד׃ 29
ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.
וְהוּא יְחִזְקִיָּהוּ סָתַם אֶת־מוֹצָא מֵימֵי גִיחוֹן הָֽעֶלְיוֹן וַֽיַּישְּׁרֵם לְמַֽטָּה־מַּעְרָבָה לְעִיר דָּוִיד וַיַּצְלַח יְחִזְקִיָּהוּ בְּכָֽל־מַעֲשֵֽׂהוּ׃ 30
ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.
וְכֵן בִּמְלִיצֵי ׀ שָׂרֵי בָּבֶל הַֽמְשַׁלְּחִים עָלָיו לִדְרֹשׁ הַמּוֹפֵת אֲשֶׁר הָיָה בָאָרֶץ עֲזָבוֹ הֽ͏ָאֱלֹהִים לְנַסּוֹתוֹ לָדַעַת כָּל־בִּלְבָבֽוֹ׃ 31
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.
וְיֶתֶר דִּבְרֵי יְחִזְקִיָּהוּ וַחֲסָדָיו הִנָּם כְּתוּבִים בַּחֲזוֹן יְשַֽׁעְיָהוּ בֶן־אָמוֹץ הַנָּבִיא עַל־סֵפֶר מַלְכֵי־יְהוּדָה וְיִשְׂרָאֵֽל׃ 32
ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וַיִּשְׁכַּב יְחִזְקִיָּהוּ עִם־אֲבֹתָיו וַֽיִּקְבְּרֻהוּ בְּֽמַעֲלֵה קִבְרֵי בְנֵי־דָוִיד וְכָבוֹד עָֽשׂוּ־לוֹ בְמוֹתוֹ כָּל־יְהוּדָה וְיֹשְׁבֵי יְרוּשָׁלָ͏ִם וַיִּמְלֹךְ מְנַשֶּׁה בְנוֹ תַּחְתָּֽיו׃ 33
ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.

< דברי הימים ב 32 >