< מלכים ב 13 >
בִּשְׁנַת עֶשְׂרִים וְשָׁלֹשׁ שָׁנָה לְיוֹאָשׁ בֶּן־אֲחַזְיָהוּ מֶלֶךְ יְהוּדָה מָלַךְ יְהוֹאָחָז בֶּן־יֵהוּא עַל־יִשְׂרָאֵל בְּשֹׁמְרוֹן שְׁבַע עֶשְׂרֵה שָׁנָֽה׃ | 1 |
ಯೆಹೂದದ ಅರಸನಾದ ಅಹಜ್ಯನ ಮಗ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನೇಳು ವರ್ಷ ಆಳಿದನು.
וַיַּעַשׂ הָרַע בְּעֵינֵי יְהוָה וַיֵּלֶךְ אַחַר חַטֹּאת יָרָבְעָם בֶּן־נְבָט אֲשֶׁר־הֶחֱטִיא אֶת־יִשְׂרָאֵל לֹא־סָר מִמֶּֽנָּה׃ | 2 |
ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ, ಅವುಗಳನ್ನು ಹಿಂಬಾಲಿಸಿದನು.
וַיִּֽחַר־אַף יְהוָה בְּיִשְׂרָאֵל וַֽיִּתְּנֵם בְּיַד ׀ חֲזָאֵל מֶֽלֶךְ־אֲרָם וּבְיַד בֶּן־הֲדַד בֶּן־חֲזָאֵל כָּל־הַיָּמִֽים׃ | 3 |
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.
וַיְחַל יְהוֹאָחָז אֶת־פְּנֵי יְהוָה וַיִּשְׁמַע אֵלָיו יְהוָה כִּי רָאָה אֶת־לַחַץ יִשְׂרָאֵל כִּֽי־לָחַץ אֹתָם מֶלֶךְ אֲרָֽם׃ | 4 |
ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,
וַיִּתֵּן יְהוָה לְיִשְׂרָאֵל מוֹשִׁיעַ וַיֵּצְאוּ מִתַּחַת יַד־אֲרָם וַיֵּשְׁבוּ בְנֵֽי־יִשְׂרָאֵל בְּאָהֳלֵיהֶם כִּתְמוֹל שִׁלְשֽׁוֹם׃ | 5 |
ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.
אַךְ לֹֽא־סָרוּ מֵחַטֹּאות בֵּית־יָרָבְעָם אֲשֶׁר־החטי הֶחֱטִיא אֶת־יִשְׂרָאֵל בָּהּ הָלָךְ וְגַם הָאֲשֵׁרָה עָמְדָה בְּשֹׁמְרֽוֹן׃ | 6 |
ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.
כִּי לֹא הִשְׁאִיר לִיהוֹאָחָז עָם כִּי אִם־חֲמִשִּׁים פָּֽרָשִׁים וַעֲשָׂרָה רֶכֶב וַעֲשֶׂרֶת אֲלָפִים רַגְלִי כִּי אִבְּדָם מֶלֶךְ אֲרָם וַיְשִׂמֵם כֶּֽעָפָר לָדֻֽשׁ׃ | 7 |
ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.
וְיֶתֶר דִּבְרֵי יְהוֹאָחָז וְכָל־אֲשֶׁר עָשָׂה וּגְבוּרָתוֹ הֲלוֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 8 |
ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וַיִּשְׁכַּב יְהֽוֹאָחָז עִם־אֲבֹתָיו וַֽיִּקְבְּרֻהוּ בְּשֹׁמְרוֹן וַיִּמְלֹךְ יוֹאָשׁ בְּנוֹ תַּחְתָּֽיו׃ | 9 |
ಯೆಹೋವಾಹಾಜನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೋವಾಷನು ಅವನಿಗೆ ಬದಲಾಗಿ ಅರಸನಾದನು.
בִּשְׁנַת שְׁלֹשִׁים וָשֶׁבַע שָׁנָה לְיוֹאָשׁ מֶלֶךְ יְהוּדָה מָלַךְ יְהוֹאָשׁ בֶּן־יְהוֹאָחָז עַל־יִשְׂרָאֵל בְּשֹׁמְרוֹן שֵׁשׁ עֶשְׂרֵה שָׁנָֽה׃ | 10 |
ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗ ಯೋವಾಷನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನಾರು ವರ್ಷ ಆಳಿದನು.
וַיַּֽעֲשֶׂה הָרַע בְּעֵינֵי יְהוָה לֹא סָר מִכָּל־חַטֹּאות יָרָבְעָם בֶּן־נְבָט אֲשֶׁר־הֶחֱטִיא אֶת־יִשְׂרָאֵל בָּהּ הָלָֽךְ׃ | 11 |
ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಸಮಸ್ತ ಪಾಪಗಳನ್ನು ತೊರೆದುಬಿಡದೆ, ಅವುಗಳಲ್ಲಿ ಮುಂದುವರೆದನು.
וְיֶתֶר דִּבְרֵי יוֹאָשׁ וְכָל־אֲשֶׁר עָשָׂה וּגְבוּרָתוֹ אֲשֶׁר נִלְחַם עִם אֲמַצְיָה מֶֽלֶךְ־יְהוּדָה הֲלֽוֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 12 |
ಯೋವಾಷನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וַיִּשְׁכַּב יוֹאָשׁ עִם־אֲבֹתָיו וְיָרָבְעָם יָשַׁב עַל־כִּסְאוֹ וַיִּקָּבֵר יוֹאָשׁ בְּשֹׁמְרוֹן עִם מַלְכֵי יִשְׂרָאֵֽל׃ | 13 |
ಯೋವಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು, ಇವನ ಶವವನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸರ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನು ಅವನ ಸಿಂಹಾಸನ ಮೇಲೆ ಕುಳಿತುಕೊಂಡನು.
וֶֽאֱלִישָׁע חָלָה אֶת־חָלְיוֹ אֲשֶׁר יָמוּת בּוֹ וַיֵּרֶד אֵלָיו יוֹאָשׁ מֶֽלֶךְ־יִשְׂרָאֵל וַיֵּבְךְּ עַל־פָּנָיו וַיֹּאמַר אָבִי ׀ אָבִי רֶכֶב יִשְׂרָאֵל וּפָרָשָֽׁיו׃ | 14 |
ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.
וַיֹּאמֶר לוֹ אֱלִישָׁע קַח קֶשֶׁת וְחִצִּים וַיִּקַּח אֵלָיו קֶשֶׁת וְחִצִּֽים׃ | 15 |
ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು.
וַיֹּאמֶר ׀ לְמֶלֶךְ יִשְׂרָאֵל הַרְכֵּב יָֽדְךָ עַל־הַקֶּשֶׁת וַיַּרְכֵּב יָדוֹ וַיָּשֶׂם אֱלִישָׁע יָדָיו עַל־יְדֵי הַמֶּֽלֶךְ׃ | 16 |
ಅವನು ಇಸ್ರಾಯೇಲಿನ ಅರಸನಿಗೆ, “ನಿನ್ನ ಕೈಯಲ್ಲಿ ಬಿಲ್ಲನ್ನು ತೆಗೆದುಕೋ,” ಅವನು ಅದನ್ನು ತೆಗೆದುಕೊಂಡಾಗ ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು.
וַיֹּאמֶר פְּתַח הַחַלּוֹן קֵדְמָה וַיִּפְתָּח וַיֹּאמֶר אֱלִישָׁע יְרֵה וַיּוֹר וַיֹּאמֶר חֵץ־תְּשׁוּעָה לַֽיהוָה וְחֵץ תְּשׁוּעָה בַֽאֲרָם וְהִכִּיתָ אֶת־אֲרָם בַּאֲפֵק עַד־כַּלֵּֽה׃ | 17 |
“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.
וַיֹּאמֶר קַח הַחִצִּים וַיִּקָּח וַיֹּאמֶר לְמֶֽלֶךְ־יִשְׂרָאֵל הַךְ־אַרְצָה וַיַּךְ שָֽׁלֹשׁ־פְּעָמִים וַֽיַּעֲמֹֽד׃ | 18 |
ಅವನು, “ಬಾಣಗಳನ್ನು ತೆಗೆದುಕೋ,” ಎಂದನು. ಅರಸನು ತೆಗೆದುಕೊಂಡನು. ಎಲೀಷನು ಇಸ್ರಾಯೇಲಿನ ಅರಸನಿಗೆ, “ನೆಲದ ಮೇಲೆ ಹೊಡೆ,” ಎಂದನು. ಆಗ ಅವನು ಮೂರು ಸಾರಿ ಮಾತ್ರ ಹೊಡೆದು ನಿಂತನು.
וַיִּקְצֹף עָלָיו אִישׁ הָאֱלֹהִים וַיֹּאמֶר לְהַכּוֹת חָמֵשׁ אוֹ־שֵׁשׁ פְּעָמִים אָז הִכִּיתָ אֶת־אֲרָם עַד־כַּלֵּה וְעַתָּה שָׁלֹשׁ פְּעָמִים תַּכֶּה אֶת־אֲרָֽם׃ | 19 |
ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು.
וַיָּמָת אֱלִישָׁע וַֽיִּקְבְּרֻהוּ וּגְדוּדֵי מוֹאָב יָבֹאוּ בָאָרֶץ בָּא שָׁנָֽה׃ | 20 |
ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.
וַיְהִי הֵם ׀ קֹבְרִים אִישׁ וְהִנֵּה רָאוּ אֶֽת־הַגְּדוּד וַיַּשְׁלִיכוּ אֶת־הָאִישׁ בְּקֶבֶר אֱלִישָׁע וַיֵּלֶךְ וַיִּגַּע הָאִישׁ בְּעַצְמוֹת אֱלִישָׁע וַיְחִי וַיָּקָם עַל־רַגְלָֽיו׃ | 21 |
ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.
וַֽחֲזָאֵל מֶלֶךְ אֲרָם לָחַץ אֶת־יִשְׂרָאֵל כֹּל יְמֵי יְהוֹאָחָֽז׃ | 22 |
ಯೆಹೋವಾಹಾಜನ ದಿವಸಗಳೆಲ್ಲಾ ಅರಾಮಿನ ಅರಸನಾದ ಹಜಾಯೇಲನು ಇಸ್ರಾಯೇಲರನ್ನು ಬಾಧೆಪಡಿಸಿದನು.
וַיָּחָן יְהוָה אֹתָם וַֽיְרַחֲמֵם וַיִּפֶן אֲלֵיהֶם לְמַעַן בְּרִיתוֹ אֶת־אַבְרָהָם יִצְחָק וְיַֽעֲקֹב וְלֹא אָבָה הַשְׁחִיתָם וְלֹֽא־הִשְׁלִיכָם מֵֽעַל־פָּנָיו עַד־עָֽתָּה׃ | 23 |
ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.
וַיָּמָת חֲזָאֵל מֶֽלֶךְ־אֲרָם וַיִּמְלֹךְ בֶּן־הֲדַד בְּנוֹ תַּחְתָּֽיו׃ | 24 |
ಅರಾಮಿನ ಅರಸನಾದ ಹಜಾಯೇಲನು ಮರಣಹೊಂದಿದನು. ಅವನ ಮಗ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.
וַיָּשָׁב יְהוֹאָשׁ בֶּן־יְהוֹאָחָז וַיִּקַּח אֶת־הֶֽעָרִים מִיַּד בֶּן־הֲדַד בֶּן־חֲזָאֵל אֲשֶׁר לָקַח מִיַּד יְהוֹאָחָז אָבִיו בַּמִּלְחָמָה שָׁלֹשׁ פְּעָמִים הִכָּהוּ יוֹאָשׁ וַיָּשֶׁב אֶת־עָרֵי יִשְׂרָאֵֽל׃ | 25 |
ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.