< מלכים ב 15 >
בִּשְׁנַת עֶשְׂרִים וָשֶׁבַע שָׁנָה לְיָרָבְעָם מֶלֶךְ יִשְׂרָאֵל מָלַךְ עֲזַרְיָה בֶן־אֲמַצְיָה מֶלֶךְ יְהוּדָֽה׃ | 1 |
ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು.
בֶּן־שֵׁשׁ עֶשְׂרֵה שָׁנָה הָיָה בְמָלְכוֹ וַחֲמִשִּׁים וּשְׁתַּיִם שָׁנָה מָלַךְ בִּירוּשָׁלָ͏ִם וְשֵׁם אִמּוֹ יְכָלְיָהוּ מִירוּשָׁלָֽ͏ִם׃ | 2 |
ಅವನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.
וַיַּעַשׂ הַיָּשָׁר בְּעֵינֵי יְהוָה כְּכֹל אֲשֶׁר־עָשָׂה אֲמַצְיָהוּ אָבִֽיו׃ | 3 |
ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
רַק הַבָּמוֹת לֹא־סָרוּ עוֹד הָעָם מְזַבְּחִים וּֽמְקַטְּרִים בַּבָּמֽוֹת׃ | 4 |
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.
וַיְנַגַּע יְהוָה אֶת־הַמֶּלֶךְ וַיְהִי מְצֹרָע עַד־יוֹם מֹתוֹ וַיֵּשֶׁב בְּבֵית הַחָפְשִׁית וְיוֹתָם בֶּן־הַמֶּלֶךְ עַל־הַבַּיִת שֹׁפֵט אֶת־עַם הָאָֽרֶץ׃ | 5 |
ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.
וְיֶתֶר דִּבְרֵי עֲזַרְיָהוּ וְכָל־אֲשֶׁר עָשָׂה הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָֽה׃ | 6 |
ಅಜರ್ಯನ ಇತರ ಕ್ರಿಯೆಗಳನ್ನು ಅವನು ಮಾಡಿದ ಸಮಸ್ತವನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וַיִּשְׁכַּב עֲזַרְיָה עִם־אֲבֹתָיו וַיִּקְבְּרוּ אֹתוֹ עִם־אֲבֹתָיו בְּעִיר דָּוִד וַיִּמְלֹךְ יוֹתָם בְּנוֹ תַּחְתָּֽיו׃ | 7 |
ಅಜರ್ಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
בִּשְׁנַת שְׁלֹשִׁים וּשְׁמֹנֶה שָׁנָה לַעֲזַרְיָהוּ מֶלֶךְ יְהוּדָה מָלַךְ זְכַרְיָהוּ בֶן־יָרָבְעָם עַל־יִשְׂרָאֵל בְּשֹׁמְרוֹן שִׁשָּׁה חֳדָשִֽׁים׃ | 8 |
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.
וַיַּעַשׂ הָרַע בְּעֵינֵי יְהוָה כַּאֲשֶׁר עָשׂוּ אֲבֹתָיו לֹא סָר מֵֽחַטֹּאות יָרָבְעָם בֶּן־נְבָט אֲשֶׁר הֶחֱטִיא אֶת־יִשְׂרָאֵֽל׃ | 9 |
ಅವನು ತನ್ನ ಪಿತೃಗಳು ಮಾಡಿದ ಪ್ರಕಾರ, ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
וַיִּקְשֹׁר עָלָיו שַׁלֻּם בֶּן־יָבֵשׁ וַיַּכֵּהוּ קָֽבָלְ־עָם וַיְמִיתֵהוּ וַיִּמְלֹךְ תַּחְתָּֽיו׃ | 10 |
ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.
וְיֶתֶר דִּבְרֵי זְכַרְיָה הִנָּם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 11 |
ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
הוּא דְבַר־יְהוָה אֲשֶׁר דִּבֶּר אֶל־יֵהוּא לֵאמֹר בְּנֵי רְבִיעִים יֵשְׁבוּ לְךָ עַל־כִּסֵּא יִשְׂרָאֵל וֽ͏ַיְהִי־כֵֽן׃ | 12 |
“ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು.
שַׁלּוּם בֶּן־יָבֵישׁ מָלַךְ בִּשְׁנַת שְׁלֹשִׁים וָתֵשַׁע שָׁנָה לְעֻזִיָּה מֶלֶךְ יְהוּדָה וַיִּמְלֹךְ יֶֽרַח־יָמִים בְּשֹׁמְרֽוֹן׃ | 13 |
ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಅರಸನಾಗಿ, ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
וַיַּעַל מְנַחֵם בֶּן־גָּדִי מִתִּרְצָה וַיָּבֹא שֹׁמְרוֹן וַיַּךְ אֶת־שַׁלּוּם בֶּן־יָבֵישׁ בְּשֹׁמְרוֹן וַיְמִיתֵהוּ וַיִּמְלֹךְ תַּחְתָּֽיו׃ | 14 |
ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.
וְיֶתֶר דִּבְרֵי שַׁלּוּם וְקִשְׁרוֹ אֲשֶׁר קָשָׁר הִנָּם כְּתֻבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 15 |
ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
אָז יַכֶּֽה־מְנַחֵם אֶת־תִּפְסַח וְאֶת־כָּל־אֲשֶׁר־בָּהּ וְאֶת־גְּבוּלֶיהָ מִתִּרְצָה כִּי לֹא פָתַח וַיַּךְ אֵת כָּל־הֶהָרוֹתֶיהָ בִּקֵּֽעַ׃ | 16 |
ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.
בִּשְׁנַת שְׁלֹשִׁים וָתֵשַׁע שָׁנָה לַעֲזַרְיָה מֶלֶךְ יְהוּדָה מָלַךְ מְנַחֵם בֶּן־גָּדִי עַל־יִשְׂרָאֵל עֶשֶׂר שָׁנִים בְּשֹׁמְרֽוֹן׃ | 17 |
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
וַיַּעַשׂ הָרַע בְּעֵינֵי יְהוָה לֹא סָר מֵעַל חַטֹּאות יָרָבְעָם בֶּן־נְבָט אֲשֶׁר־הֶחֱטִיא אֶת־יִשְׂרָאֵל כָּל־יָמָֽיו׃ | 18 |
ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
בָּא פוּל מֶֽלֶךְ־אַשּׁוּר עַל־הָאָרֶץ וַיִּתֵּן מְנַחֵם לְפוּל אֶלֶף כִּכַּר־כָּסֶף לִהְיוֹת יָדָיו אִתּוֹ לְהַחֲזִיק הַמַּמְלָכָה בְּיָדֽוֹ׃ | 19 |
ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.
וַיֹּצֵא מְנַחֵם אֶת־הַכֶּסֶף עַל־יִשְׂרָאֵל עַל כָּל־גִּבּוֹרֵי הַחַיִל לָתֵת לְמֶלֶךְ אַשּׁוּר חֲמִשִּׁים שְׁקָלִים כֶּסֶף לְאִישׁ אֶחָד וַיָּשָׁב מֶלֶךְ אַשּׁוּר וְלֹא־עָמַד שָׁם בָּאָֽרֶץ׃ | 20 |
ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು.
וְיֶתֶר דִּבְרֵי מְנַחֵם וְכָל־אֲשֶׁר עָשָׂה הֲלוֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 21 |
ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
וַיִּשְׁכַּב מְנַחֵם עִם־אֲבֹתָיו וַיִּמְלֹךְ פְּקַחְיָה בְנוֹ תַּחְתָּֽיו׃ | 22 |
ಮೆನಹೇಮನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಪೆಕಹ್ಯನು ಅವನಿಗೆ ಬದಲಾಗಿ ಅರಸನಾದನು.
בִּשְׁנַת חֲמִשִּׁים שָׁנָה לַעֲזַרְיָה מֶלֶךְ יְהוּדָה מָלַךְ פְּקַֽחְיָה בֶן־מְנַחֵם עַל־יִשְׂרָאֵל בְּשֹׁמְרוֹן שְׁנָתָֽיִם׃ | 23 |
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗ ಪೆಕಹ್ಯನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾಗಿ, ಎರಡು ವರ್ಷ ಆಳಿದನು.
וַיַּעַשׂ הָרַע בְּעֵינֵי יְהוָה לֹא סָר מֵֽחַטֹּאות יָרָבְעָם בֶּן־נְבָט אֲשֶׁר הֶחֱטִיא אֶת־יִשְׂרָאֵֽל׃ | 24 |
ಪೆಕಹ್ಯನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.
וַיִּקְשֹׁר עָלָיו פֶּקַח בֶּן־רְמַלְיָהוּ שָׁלִישׁוֹ וַיַּכֵּהוּ בְשֹׁמְרוֹן בְּאַרְמוֹן בֵּית־מלך הַמֶּלֶךְ אֶת־אַרְגֹּב וְאֶת־הָאַרְיֵה וְעִמּוֹ חֲמִשִּׁים אִישׁ מִבְּנֵי גִלְעָדִים וַיְמִיתֵהוּ וַיִּמְלֹךְ תַּחְתָּֽיו׃ | 25 |
ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.
וְיֶתֶר דִּבְרֵי פְקַחְיָה וְכָל־אֲשֶׁר עָשָׂה הִנָּם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 26 |
ಪೆಕಹ್ಯನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
בִּשְׁנַת חֲמִשִּׁים וּשְׁתַּיִם שָׁנָה לַעֲזַרְיָה מֶלֶךְ יְהוּדָה מָלַךְ פֶּקַח בֶּן־רְמַלְיָהוּ עַל־יִשְׂרָאֵל בְּשֹׁמְרוֹן עֶשְׂרִים שָׁנָֽה׃ | 27 |
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.
וַיַּעַשׂ הָרַע בְּעֵינֵי יְהוָה לֹא סָר מִן־חַטֹּאות יָרָבְעָם בֶּן־נְבָט אֲשֶׁר הֶחֱטִיא אֶת־יִשְׂרָאֵֽל׃ | 28 |
ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.
בִּימֵי פֶּקַח מֶֽלֶךְ־יִשְׂרָאֵל בָּא תִּגְלַת פִּלְאֶסֶר מֶלֶךְ אַשּׁוּר וַיִּקַּח אֶת־עִיּוֹן וְאֶת־אָבֵל בֵּֽית־מַעֲכָה וְאֶת־יָנוֹחַ וְאֶת־קֶדֶשׁ וְאֶת־חָצוֹר וְאֶת־הַגִּלְעָד וְאֶת־הַגָּלִילָה כֹּל אֶרֶץ נַפְתָּלִי וַיַּגְלֵם אַשּֽׁוּרָה׃ | 29 |
ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.
וַיִּקְשָׁר־קֶשֶׁר הוֹשֵׁעַ בֶּן־אֵלָה עַל־פֶּקַח בֶּן־רְמַלְיָהוּ וַיַּכֵּהוּ וַיְמִיתֵהוּ וַיִּמְלֹךְ תַּחְתָּיו בִּשְׁנַת עֶשְׂרִים לְיוֹתָם בֶּן־עֻזִיָּֽה׃ | 30 |
ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.
וְיֶתֶר דִּבְרֵי־פֶקַח וְכָל־אֲשֶׁר עָשָׂה הִנָּם כְּתוּבִים עַל־סֵפֶר דִּבְרֵי הַיָּמִים לְמַלְכֵי יִשְׂרָאֵֽל׃ | 31 |
ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
בִּשְׁנַת שְׁתַּיִם לְפֶקַח בֶּן־רְמַלְיָהוּ מֶלֶךְ יִשְׂרָאֵל מָלַךְ יוֹתָם בֶּן־עֻזִיָּהוּ מֶלֶךְ יְהוּדָֽה׃ | 32 |
ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು.
בֶּן־עֶשְׂרִים וְחָמֵשׁ שָׁנָה הָיָה בְמָלְכוֹ וְשֵׁשׁ־עֶשְׂרֵה שָׁנָה מָלַךְ בִּירוּשָׁלָ͏ִם וְשֵׁם אִמּוֹ יְרוּשָׁא בַּת־צָדֽוֹק׃ | 33 |
ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.
וַיַּעַשׂ הַיָּשָׁר בְּעֵינֵי יְהוָה כְּכֹל אֲשֶׁר־עָשָׂה עֻזִיָּהוּ אָבִיו עָשָֽׂה׃ | 34 |
ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
רַק הַבָּמוֹת לֹא סָרוּ עוֹד הָעָם מְזַבְּחִים וּֽמְקַטְּרִים בַּבָּמוֹת הוּא בָּנָה אֶת־שַׁעַר בֵּית־יְהוָה הָעֶלְיֽוֹן׃ | 35 |
ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.
וְיֶתֶר דִּבְרֵי יוֹתָם אֲשֶׁר עָשָׂה הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָֽה׃ | 36 |
ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
בַּיָּמִים הָהֵם הֵחֵל יְהוָה לְהַשְׁלִיחַ בִּֽיהוּדָה רְצִין מֶלֶךְ אֲרָם וְאֵת פֶּקַח בֶּן־רְמַלְיָֽהוּ׃ | 37 |
ಆ ದಿವಸಗಳಲ್ಲಿ ಯೆಹೋವ ದೇವರು ಅರಾಮಿನ ಅರಸನಾದ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದದ ವಿರೋಧವಾಗಿ ಕಳುಹಿಸಲು ಆರಂಭಿಸಿದರು.
וַיִּשְׁכַּב יוֹתָם עִם־אֲבֹתָיו וַיִּקָּבֵר עִם־אֲבֹתָיו בְּעִיר דָּוִד אָבִיו וַיִּמְלֹךְ אָחָז בְּנוֹ תַּחְתָּֽיו׃ | 38 |
ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.