< מלכים ב 21 >
בֶּן־שְׁתֵּים עֶשְׂרֵה שָׁנָה מְנַשֶּׁה בְמָלְכוֹ וַחֲמִשִּׁים וְחָמֵשׁ שָׁנָה מָלַךְ בִּירוּשָׁלָ͏ִם וְשֵׁם אִמּוֹ חֶפְצִי־בָֽהּ׃ | 1 |
೧ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.
וַיַּעַשׂ הָרַע בְּעֵינֵי יְהוָה כְּתֽוֹעֲבֹת הַגּוֹיִם אֲשֶׁר הוֹרִישׁ יְהוָה מִפְּנֵי בְּנֵי יִשְׂרָאֵֽל׃ | 2 |
೨ಅವನು ಯೆಹೋವನು ಇಸ್ರಾಯೇಲರ ರಾಜ್ಯದಿಂದ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
וַיָּשָׁב וַיִּבֶן אֶת־הַבָּמוֹת אֲשֶׁר אִבַּד חִזְקִיָּהוּ אָבִיו וַיָּקֶם מִזְבְּחֹת לַבַּעַל וַיַּעַשׂ אֲשֵׁרָה כַּאֲשֶׁר עָשָׂה אַחְאָב מֶלֶךְ יִשְׂרָאֵל וַיִּשְׁתַּחוּ לְכָל־צְבָא הַשָּׁמַיִם וַֽיַּעֲבֹד אֹתָֽם׃ | 3 |
೩ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
וּבָנָה מִזְבְּחֹת בְּבֵית יְהוָה אֲשֶׁר אָמַר יְהוָה בִּירוּשָׁלַ͏ִם אָשִׂים אֶת־שְׁמִֽי׃ | 4 |
೪ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.
וַיִּבֶן מִזְבְּחוֹת לְכָל־צְבָא הַשָּׁמָיִם בִּשְׁתֵּי חַצְרוֹת בֵּית־יְהוָֽה׃ | 5 |
೫ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.
וְהֶעֱבִיר אֶת־בְּנוֹ בָּאֵשׁ וְעוֹנֵן וְנִחֵשׁ וְעָשָׂה אוֹב וְיִדְּעֹנִים הִרְבָּה לַעֲשׂוֹת הָרַע בְּעֵינֵי יְהוָה לְהַכְעִֽיס׃ | 6 |
೬ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
וַיָּשֶׂם אֶת־פֶּסֶל הָאֲשֵׁרָה אֲשֶׁר עָשָׂה בַּבַּיִת אֲשֶׁר אָמַר יְהוָה אֶל־דָּוִד וְאֶל־שְׁלֹמֹה בְנוֹ בַּבַּיִת הַזֶּה וּבִירוּשָׁלִַם אֲשֶׁר בָּחַרְתִּי מִכֹּל שִׁבְטֵי יִשְׂרָאֵל אָשִׂים אֶת־שְׁמִי לְעוֹלָֽם׃ | 7 |
೭ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು
וְלֹא אֹסִיף לְהָנִיד רֶגֶל יִשְׂרָאֵל מִן־הָאֲדָמָה אֲשֶׁר נָתַתִּי לַֽאֲבוֹתָם רַק ׀ אִם־יִשְׁמְרוּ לַעֲשׂוֹת כְּכֹל אֲשֶׁר צִוִּיתִים וּלְכָל־הַתּוֹרָה אֲשֶׁר־צִוָּה אֹתָם עַבְדִּי מֹשֶֽׁה׃ | 8 |
೮ಇಸ್ರಾಯೇಲರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಧರ್ಮಶಾಸ್ತ್ರದ ನಿಯಮ ನಿಬಂಧನೆಗಳನ್ನು ಅನುಸರಿಸಿ, ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ, ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ, ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲ ಇರುವಂತೆ ಮಾಡುವೆನು, ಇಸ್ರಾಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪೂರ್ವಿಕರಿಗೆ ಕೊಡಲಾದ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು” ಎಂದು ಹೇಳಿದನು.
וְלֹא שָׁמֵעוּ וַיַּתְעֵם מְנַשֶּׁה לַעֲשׂוֹת אֶת־הָרָע מִן־הַגּוֹיִם אֲשֶׁר הִשְׁמִיד יְהוָה מִפְּנֵי בְּנֵי יִשְׂרָאֵֽל׃ | 9 |
೯ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
וַיְדַבֵּר יְהוָה בְּיַד־עֲבָדָיו הַנְּבִיאִים לֵאמֹֽר׃ | 10 |
೧೦ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,
יַעַן אֲשֶׁר עָשָׂה מְנַשֶּׁה מֶֽלֶךְ־יְהוּדָה הַתֹּעֵבוֹת הָאֵלֶּה הֵרַע מִכֹּל אֲשֶׁר־עָשׂוּ הָאֱמֹרִי אֲשֶׁר לְפָנָיו וַיַּחֲטִא גַֽם־אֶת־יְהוּדָה בְּגִלּוּלָֽיו׃ | 11 |
೧೧“ಯೆಹೂದ್ಯರ ಅರಸನಾದ ಮನಸ್ಸೆಯು ಮೊದಲು ಇದ್ದ ಅಮೋರಿಯರ ಕೃತ್ಯಗಳಿಗಿಂತಲೂ ಅಸಹ್ಯವಾದ ಕೃತ್ಯಗಳನ್ನು ನಡಿಸಿದ್ದರಿಂದಲೂ, ವಿಗ್ರಹಗಳನ್ನು ಪೂಜಿಸಲು ಯೆಹೂದ್ಯರನ್ನು ಪ್ರೇರೇಪಿಸಿದ್ದರಿಂದಲೂ,
לָכֵן כֹּֽה־אָמַר יְהוָה אֱלֹהֵי יִשְׂרָאֵל הִנְנִי מֵבִיא רָעָה עַל־יְרוּשָׁלַ͏ִם וִֽיהוּדָה אֲשֶׁר כָּל־שמעיו שֹׁמְעָהּ תִּצַּלְנָה שְׁתֵּי אָזְנָֽיו׃ | 12 |
೧೨ಇಸ್ರಾಯೇಲಿನ ದೇವರಾದ ಯೆಹೋವನೆಂಬ ನಾನು ಯೆರೂಸಲೇಮಿನವರ ಮೇಲೆಯೂ, ಯೆಹೂದದವರ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವರ ಎರಡು ಕಿವಿಗಳು ಬಿರಿದು ಹೋಗುವವು.
וְנָטִיתִי עַל־יְרוּשָׁלִַם אֵת קָו שֹֽׁמְרוֹן וְאֶת־מִשְׁקֹלֶת בֵּית אַחְאָב וּמָחִיתִי אֶת־יְרוּשָׁלִַם כַּֽאֲשֶׁר־יִמְחֶה אֶת־הַצַּלַּחַת מָחָה וְהָפַךְ עַל־פָּנֶֽיהָ׃ | 13 |
೧೩ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.
וְנָטַשְׁתִּי אֵת שְׁאֵרִית נַחֲלָתִי וּנְתַתִּים בְּיַד אֹֽיְבֵיהֶם וְהָיוּ לְבַז וְלִמְשִׁסָּה לְכָל־אֹיְבֵיהֶֽם׃ | 14 |
೧೪ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಎಲ್ಲಾ ಶತ್ರುಗಳು ಬಂದು ಅವರ ಸ್ವತ್ತನ್ನು ಸುಲಿದು ಸೂರೆಮಾಡುವರು.
יַעַן אֲשֶׁר עָשׂוּ אֶת־הָרַע בְּעֵינַי וַיִּהְיוּ מַכְעִסִים אֹתִי מִן־הַיּוֹם אֲשֶׁר יָצְאוּ אֲבוֹתָם מִמִּצְרַיִם וְעַד הַיּוֹם הַזֶּֽה׃ | 15 |
೧೫ಅವರು ತಮ್ಮ ಪೂರ್ವಿಕರ ಕಾಲದಲ್ಲಿ ಐಗುಪ್ತದೇಶವನ್ನು ಬಿಟ್ಟುಬಂದರೂ ತಮ್ಮ ಪಾಪಗಳನ್ನು ಬಿಡದೆ ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ” ಎಂದು ಹೇಳಿಸಿದನು.
וְגַם דָּם נָקִי שָׁפַךְ מְנַשֶּׁה הַרְבֵּה מְאֹד עַד אֲשֶׁר־מִלֵּא אֶת־יְרוּשָׁלַ͏ִם פֶּה לָפֶה לְבַד מֵֽחַטָּאתוֹ אֲשֶׁר הֶחֱטִיא אֶת־יְהוּדָה לַעֲשׂוֹת הָרַע בְּעֵינֵי יְהוָֽה׃ | 16 |
೧೬ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.
וְיֶתֶר דִּבְרֵי מְנַשֶּׁה וְכָל־אֲשֶׁר עָשָׂה וְחַטָּאתוֹ אֲשֶׁר חָטָא הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָֽה׃ | 17 |
೧೭ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
וַיִּשְׁכַּב מְנַשֶּׁה עִם־אֲבֹתָיו וַיִּקָּבֵר בְּגַן־בֵּיתוֹ בְּגַן־עֻזָּא וַיִּמְלֹךְ אָמוֹן בְּנוֹ תַּחְתָּֽיו׃ | 18 |
೧೮ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ನಂತರ ಅವನ ಮಗನಾದ ಆಮೋನನು ಅರಸನಾದನು.
בֶּן־עֶשְׂרִים וּשְׁתַּיִם שָׁנָה אָמוֹן בְּמָלְכוֹ וּשְׁתַּיִם שָׁנִים מָלַךְ בִּירוּשָׁלָ͏ִם וְשֵׁם אִמּוֹ מְשֻׁלֶּמֶת בַּת־חָרוּץ מִן־יָטְבָֽה׃ | 19 |
೧೯ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
וַיַּעַשׂ הָרַע בְּעֵינֵי יְהוָה כַּאֲשֶׁר עָשָׂה מְנַשֶּׁה אָבִֽיו׃ | 20 |
೨೦ಅವನು ತನ್ನ ತಂದೆಯಾದ ಮನಸ್ಸೆಯ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
וַיֵּלֶךְ בְּכָל־הַדֶּרֶךְ אֲשֶׁר־הָלַךְ אָבִיו וַֽיַּעֲבֹד אֶת־הַגִּלֻּלִים אֲשֶׁר עָבַד אָבִיו וַיִּשְׁתַּחוּ לָהֶֽם׃ | 21 |
೨೧ತನ್ನ ತಂದೆಯ ಮಾರ್ಗದಲ್ಲಿ ನಡೆದು ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.
וַיַּעֲזֹב אֶת־יְהוָה אֱלֹהֵי אֲבֹתָיו וְלֹא הָלַךְ בְּדֶרֶךְ יְהוָֽה׃ | 22 |
೨೨ತನ್ನ ಪೂರ್ವಿಕರ ದೇವರಾದ ಯೆಹೋವನನ್ನೂ ಆರಾಧಿಸದೆ, ಆತನಿಗೆ ಮೆಚ್ಚಿಗೆಯಾಗುವಂತೆ ನಡೆಯುವ ಮಾರ್ಗವನ್ನೂ ಬಿಟ್ಟುಬಿಟ್ಟನು.
וַיִּקְשְׁרוּ עַבְדֵֽי־אָמוֹן עָלָיו וַיָּמִיתוּ אֶת־הַמֶּלֶךְ בְּבֵיתֽוֹ׃ | 23 |
೨೩ಮನಸ್ಸೆಯ ಸೇವಕರು ಆಮೋನನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಅರಸನ ಅರಮನೆಯಲ್ಲಿಯೇ ಕೊಂದುಹಾಕಿದರು.
וַיַּךְ עַם־הָאָרֶץ אֵת כָּל־הַקֹּשְׁרִים עַל־הַמֶּלֶךְ אָמוֹן וַיַּמְלִיכוּ עַם־הָאָרֶץ אֶת־יֹאשִׁיָּהוּ בְנוֹ תַּחְתָּֽיו׃ | 24 |
೨೪ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.
וְיֶתֶר דִּבְרֵי אָמוֹן אֲשֶׁר עָשָׂה הֲלֹא־הֵם כְּתוּבִים עַל־סֵפֶר דִּבְרֵי הַיָּמִים לְמַלְכֵי יְהוּדָֽה׃ | 25 |
೨೫ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
וַיִּקְבְֹּר אֹתוֹ בִּקְבֻרָתוֹ בְּגַן־עֻזָּא וַיִּמְלֹךְ יֹאשִׁיָּהוּ בְנוֹ תַּחְתָּֽיו׃ | 26 |
೨೬ಆಮೋನನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗೋಸ್ಕರ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು.