< מלכים ב 5 >

וְנַעֲמָן שַׂר־צְבָא מֶֽלֶךְ־אֲרָם הָיָה אִישׁ גָּדוֹל לִפְנֵי אֲדֹנָיו וּנְשֻׂא פָנִים כִּֽי־בוֹ נָֽתַן־יְהוָה תְּשׁוּעָה לַאֲרָם וְהָאִישׁ הָיָה גִּבּוֹר חַיִל מְצֹרָֽע׃ 1
ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.
וַאֲרָם יָצְאוּ גְדוּדִים וַיִּשְׁבּוּ מֵאֶרֶץ יִשְׂרָאֵל נַעֲרָה קְטַנָּה וַתְּהִי לִפְנֵי אֵשֶׁת נַעֲמָֽן׃ 2
ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.
וַתֹּאמֶר אֶל־גְּבִרְתָּהּ אַחֲלֵי אֲדֹנִי לִפְנֵי הַנָּבִיא אֲשֶׁר בְּשֹׁמְרוֹן אָז יֶאֱסֹף אֹתוֹ מִצָּרַעְתּֽוֹ׃ 3
ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.
וַיָּבֹא וַיַּגֵּד לַאדֹנָיו לֵאמֹר כָּזֹאת וְכָזֹאת דִּבְּרָה הַֽנַּעֲרָה אֲשֶׁר מֵאֶרֶץ יִשְׂרָאֵֽל׃ 4
ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.
וַיֹּאמֶר מֶֽלֶךְ־אֲרָם לֶךְ־בֹּא וְאֶשְׁלְחָה סֵפֶר אֶל־מֶלֶךְ יִשְׂרָאֵל וַיֵּלֶךְ וַיִּקַּח בְּיָדוֹ עֶשֶׂר כִּכְּרֵי־כֶסֶף וְשֵׁשֶׁת אֲלָפִים זָהָב וְעֶשֶׂר חֲלִיפוֹת בְּגָדִֽים׃ 5
ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,
וַיָּבֵא הַסֵּפֶר אֶל־מֶלֶךְ יִשְׂרָאֵל לֵאמֹר וְעַתָּה כְּבוֹא הַסֵּפֶר הַזֶּה אֵלֶיךָ הִנֵּה שָׁלַחְתִּי אֵלֶיךָ אֶת־נַעֲמָן עַבְדִּי וַאֲסַפְתּוֹ מִצָּרַעְתּֽוֹ׃ 6
ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು.
וַיְהִי כִּקְרֹא מֶֽלֶךְ־יִשְׂרָאֵל אֶת־הַסֵּפֶר וַיִּקְרַע בְּגָדָיו וַיֹּאמֶר הַאֱלֹהִים אָנִי לְהָמִית וּֽלְהַחֲיוֹת כִּֽי־זֶה שֹׁלֵחַ אֵלַי לֶאֱסֹף אִישׁ מִצָּֽרַעְתּוֹ כִּי אַךְ־דְּעֽוּ־נָא וּרְאוּ כִּֽי־מִתְאַנֶּה הוּא לִֽי׃ 7
ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.
וַיְהִי כִּשְׁמֹעַ ׀ אֱלִישָׁע אִישׁ־הָאֱלֹהִים כִּֽי־קָרַע מֶֽלֶךְ־יִשְׂרָאֵל אֶת־בְּגָדָיו וַיִּשְׁלַח אֶל־הַמֶּלֶךְ לֵאמֹר לָמָּה קָרַעְתָּ בְּגָדֶיךָ יָבֹֽא־נָא אֵלַי וְיֵדַע כִּי יֵשׁ נָבִיא בְּיִשְׂרָאֵֽל׃ 8
ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.
וַיָּבֹא נַעֲמָן בסוסו בְּסוּסָיו וּבְרִכְבּוֹ וַיַּעֲמֹד פֶּֽתַח־הַבַּיִת לֶאֱלִישָֽׁע׃ 9
ನಾಮಾನನು ರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.
וַיִּשְׁלַח אֵלָיו אֱלִישָׁע מַלְאָךְ לֵאמֹר הָלוֹךְ וְרָחַצְתָּ שֶֽׁבַע־פְּעָמִים בַּיַּרְדֵּן וְיָשֹׁב בְּשָׂרְךָ לְךָ וּטְהָֽר׃ 10
೧೦ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.
וַיִּקְצֹף נַעֲמָן וַיֵּלַךְ וַיֹּאמֶר הִנֵּה אָמַרְתִּי אֵלַי ׀ יֵצֵא יָצוֹא וְעָמַד וְקָרָא בְּשֵׁם־יְהוָה אֱלֹהָיו וְהֵנִיף יָדוֹ אֶל־הַמָּקוֹם וְאָסַף הַמְּצֹרָֽע׃ 11
೧೧ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.
הֲלֹא טוֹב אבנה אֲמָנָה וּפַרְפַּר נַהֲרוֹת דַּמֶּשֶׂק מִכֹּל מֵימֵי יִשְׂרָאֵל הֲלֹֽא־אֶרְחַץ בָּהֶם וְטָהָרְתִּי וַיִּפֶן וַיֵּלֶךְ בְּחֵמָֽה׃ 12
೧೨ದಮಸ್ಕದ ಅಬಾನಾ ಮತ್ತು ಪರ್ಪರ್ ಎಂಬ ನದಿಗಳು ಇಸ್ರಾಯೇಲರ ಎಲ್ಲಾ ನದಿ ಹೊಳೆಹಳ್ಳಗಳಿಗಿಂತ ಉತ್ತಮವಾಗಿವೆಯಲ್ಲವೋ? ಸ್ನಾನದಿಂದ ಶುದ್ಧನಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಲ್ಲವೇ?” ಎಂದು ಹೇಳಿ, ಬಲು ಸಿಟ್ಟಿನಿಂದ ಹೊರಟುಹೋದನು.
וַיִּגְּשׁוּ עֲבָדָיו וַיְדַבְּרוּ אֵלָיו וַיֹּאמְרוּ אָבִי דָּבָר גָּדוֹל הַנָּבִיא דִּבֶּר אֵלֶיךָ הֲלוֹא תַעֲשֶׂה וְאַף כִּֽי־אָמַר אֵלֶיךָ רְחַץ וּטְהָֽר׃ 13
೧೩ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.
וַיֵּרֶד וַיִּטְבֹּל בַּיַּרְדֵּן שֶׁבַע פְּעָמִים כִּדְבַר אִישׁ הָאֱלֹהִים וַיָּשָׁב בְּשָׂרוֹ כִּבְשַׂר נַעַר קָטֹן וַיִּטְהָֽר׃ 14
೧೪ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
וַיָּשָׁב אֶל־אִישׁ הָאֱלֹהִים הוּא וְכָֽל־מַחֲנֵהוּ וַיָּבֹא וַיַּעֲמֹד לְפָנָיו וַיֹּאמֶר הִנֵּה־נָא יָדַעְתִּי כִּי אֵין אֱלֹהִים בְּכָל־הָאָרֶץ כִּי אִם־בְּיִשְׂרָאֵל וְעַתָּה קַח־נָא בְרָכָה מֵאֵת עַבְדֶּֽךָ׃ 15
೧೫ಅನಂತರ, ನಾಮಾನನು ತನ್ನ ಪರಿವಾರದವರೊಡನೆ, ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ, ಅವನ ಮುಂದೆ ನಿಂತು, “ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವುದೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು. ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು” ಎಂದು ಹೇಳಿದನು.
וַיֹּאמֶר חַי־יְהוָה אֲשֶׁר־עָמַדְתִּי לְפָנָיו אִם־אֶקָּח וַיִּפְצַר־בּוֹ לָקַחַת וַיְמָאֵֽן׃ 16
೧೬ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ.
וַיֹּאמֶר נַעֲמָן וָלֹא יֻתַּן־נָא לְעַבְדְּךָ מַשָּׂא צֶֽמֶד־פְּרָדִים אֲדָמָה כִּי לֽוֹא־יַעֲשֶׂה עוֹד עַבְדְּךָ עֹלָה וָזֶבַח לֵאלֹהִים אֲחֵרִים כִּי אִם־לַיהוָֽה׃ 17
೧೭ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ.
לַדָּבָר הַזֶּה יִסְלַח יְהוָה לְעַבְדֶּךָ בְּבוֹא אֲדֹנִי בֵית־רִמּוֹן לְהִשְׁתַּחֲוֺת שָׁמָּה וְהוּא ׀ נִשְׁעָן עַל־יָדִי וְהִֽשְׁתַּחֲוֵיתִי בֵּית רִמֹּן בְּהִשְׁתַּחֲוָיָתִי בֵּית רִמֹּן יִסְלַח־נא יְהוָה לְעַבְדְּךָ בַּדָּבָר הַזֶּֽה׃ 18
೧೮ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು.
וַיֹּאמֶר לוֹ לֵךְ לְשָׁלוֹם וַיֵּלֶךְ מֵאִתּוֹ כִּבְרַת־אָֽרֶץ׃ 19
೧೯ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.
וַיֹּאמֶר גֵּיחֲזִי נַעַר אֱלִישָׁע אִישׁ־הָאֱלֹהִים הִנֵּה ׀ חָשַׂךְ אֲדֹנִי אֶֽת־נַעֲמָן הָֽאֲרַמִּי הַזֶּה מִקַּחַת מִיָּדוֹ אֵת אֲשֶׁר־הֵבִיא חַי־יְהוָה כִּֽי־אִם־רַצְתִּי אַחֲרָיו וְלָקַחְתִּי מֵאִתּוֹ מְאֽוּמָה׃ 20
೨೦ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
וַיִּרְדֹּף גֵּיחֲזִי אַחֲרֵי נַֽעֲמָן וַיִּרְאֶה נַֽעֲמָן רָץ אַחֲרָיו וַיִּפֹּל מֵעַל הַמֶּרְכָּבָה לִקְרָאתוֹ וַיֹּאמֶר הֲשָׁלֽוֹם׃ 21
೨೧ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.
וַיֹּאמֶר ׀ שָׁלוֹם אֲדֹנִי שְׁלָחַנִי לֵאמֹר הִנֵּה עַתָּה זֶה בָּאוּ אֵלַי שְׁנֵֽי־נְעָרִים מֵהַר אֶפְרַיִם מִבְּנֵי הַנְּבִיאִים תְּנָה־נָּא לָהֶם כִּכַּר־כֶּסֶף וּשְׁתֵּי חֲלִפוֹת בְּגָדִֽים׃ 22
೨೨ಅದಕ್ಕೆ ಗೇಹಜಿಯು, “ಕ್ಷೇಮ, ಎಫ್ರಾಯೀಮ್ ಪರ್ವತ ಪ್ರದೇಶದಿಂದ ಪ್ರವಾದಿಮಂಡಳಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗೋಸ್ಕರ ಬೇಗನೇ ಒಂದು ತಲಾಂತು ಬೆಳ್ಳಿಯನ್ನೂ, ಎರಡು ಜೋಡಿ ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂದು ನನ್ನ ಯಜಮಾನನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು” ಎಂದು ಉತ್ತರ ಕೊಟ್ಟನು.
וַיֹּאמֶר נַעֲמָן הוֹאֵל קַח כִּכָּרָיִם וַיִּפְרָץ־בּוֹ וַיָּצַר כִּכְּרַיִם כֶּסֶף בִּשְׁנֵי חֲרִטִים וּשְׁתֵּי חֲלִפוֹת בְּגָדִים וַיִּתֵּן אֶל־שְׁנֵי נְעָרָיו וַיִּשְׂאוּ לְפָנָֽיו׃ 23
೨೩ನಾಮಾನನು, “ಎರಡು ತಲಾಂತನ್ನಾದರೂ ತೆಗೆದುಕೊಳ್ಳಬಾರದೆ?” ಎಂದು ಅವನನ್ನು ಒತ್ತಾಯಪಡಿಸಿ ಎರಡು ಚೀಲಗಳಲ್ಲಿ ಬೆಳ್ಳಿ ನಾಣ್ಯಗಳನ್ನು ತುಂಬಿಸಿ, ಆ ಚೀಲಗಳಲ್ಲಿ ಎರಡು ಜೋಡಿ ಬಟ್ಟೆಗಳನ್ನೂ ಇಟ್ಟು ಇಬ್ಬರು ಸೇವಕರ ಮೇಲೆ ಹೊರಿಸಿ ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಅವನ ಮುಂದೆ ನಡೆದರು.
וַיָּבֹא אֶל־הָעֹפֶל וַיִּקַּח מִיָּדָם וַיִּפְקֹד בַּבָּיִת וַיְשַׁלַּח אֶת־הָאֲנָשִׁים וַיֵּלֵֽכוּ׃ 24
೨೪ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.
וְהוּא־בָא וַיַּעֲמֹד אֶל־אֲדֹנָיו וַיֹּאמֶר אֵלָיו אֱלִישָׁע מאן מֵאַיִן גֵּחֲזִי וַיֹּאמֶר לֹֽא־הָלַךְ עַבְדְּךָ אָנֶה וָאָֽנָה׃ 25
೨೫ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು.
וַיֹּאמֶר אֵלָיו לֹא־לִבִּי הָלַךְ כַּאֲשֶׁר הָֽפַךְ־אִישׁ מֵעַל מֶרְכַּבְתּוֹ לִקְרָאתֶךָ הַעֵת לָקַחַת אֶת־הַכֶּסֶף וְלָקַחַת בְּגָדִים וְזֵיתִים וּכְרָמִים וְצֹאן וּבָקָר וַעֲבָדִים וּשְׁפָחֽוֹת׃ 26
೨೬ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?
וְצָרַעַת נַֽעֲמָן תִּֽדְבַּק־בְּךָ וּֽבְזַרְעֲךָ לְעוֹלָם וַיֵּצֵא מִלְּפָנָיו מְצֹרָע כַּשָּֽׁלֶג׃ 27
೨೭ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

< מלכים ב 5 >