< שמואל ב 19 >
וַיֻּגַּד לְיוֹאָב הִנֵּה הַמֶּלֶךְ בֹּכֶה וַיִּתְאַבֵּל עַל־אַבְשָׁלֹֽם׃ | 1 |
“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.
וַתְּהִי הַתְּשֻׁעָה בַּיּוֹם הַהוּא לְאֵבֶל לְכָל־הָעָם כִּֽי־שָׁמַע הָעָם בַּיּוֹם הַהוּא לֵאמֹר נֶעֱצַב הַמֶּלֶךְ עַל־בְּנֽוֹ׃ | 2 |
“ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.
וַיִּתְגַּנֵּב הָעָם בַּיּוֹם הַהוּא לָבוֹא הָעִיר כַּאֲשֶׁר יִתְגַּנֵּב הָעָם הַנִּכְלָמִים בְּנוּסָם בַּמִּלְחָמָֽה׃ | 3 |
ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು.
וְהַמֶּלֶךְ לָאַט אֶת־פָּנָיו וַיִּזְעַק הַמֶּלֶךְ קוֹל גָּדוֹל בְּנִי אַבְשָׁלוֹם אַבְשָׁלוֹם בְּנִי בְנִֽי׃ | 4 |
ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.
וַיָּבֹא יוֹאָב אֶל־הַמֶּלֶךְ הַבָּיִת וַיֹּאמֶר הֹבַשְׁתָּ הַיּוֹם אֶת־פְּנֵי כָל־עֲבָדֶיךָ הַֽמְמַלְּטִים אֶֽת־נַפְשְׁךָ הַיּוֹם וְאֵת נֶפֶשׁ בָּנֶיךָ וּבְנֹתֶיךָ וְנֶפֶשׁ נָשֶׁיךָ וְנֶפֶשׁ פִּלַגְשֶֽׁיךָ׃ | 5 |
ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.
לְאַֽהֲבָה אֶת־שֹׂנְאֶיךָ וְלִשְׂנֹא אֶת־אֹהֲבֶיךָ כִּי ׀ הִגַּדְתָּ הַיּוֹם כִּי אֵין לְךָ שָׂרִים וַעֲבָדִים כִּי ׀ יָדַעְתִּי הַיּוֹם כִּי לא לוּ אַבְשָׁלוֹם חַי וְכֻלָּנוּ הַיּוֹם מֵתִים כִּי־אָז יָשָׁר בְּעֵינֶֽיךָ׃ | 6 |
ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.
וְעַתָּה קוּם צֵא וְדַבֵּר עַל־לֵב עֲבָדֶיךָ כִּי בַיהוָה נִשְׁבַּעְתִּי כִּי־אֵינְךָ יוֹצֵא אִם־יָלִין אִישׁ אִתְּךָ הַלַּיְלָה וְרָעָה לְךָ זֹאת מִכָּל־הָרָעָה אֲשֶׁר־בָּאָה עָלֶיךָ מִנְּעֻרֶיךָ עַד־עָֽתָּה׃ | 7 |
ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.
וַיָּקָם הַמֶּלֶךְ וַיֵּשֶׁב בַּשָּׁעַר וּֽלְכָל־הָעָם הִגִּידוּ לֵאמֹר הִנֵּה הַמֶּלֶךְ יוֹשֵׁב בַּשַּׁעַר וַיָּבֹא כָל־הָעָם לִפְנֵי הַמֶּלֶךְ וְיִשְׂרָאֵל נָס אִישׁ לְאֹהָלָֽיו׃ | 8 |
ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.
וַיְהִי כָל־הָעָם נָדוֹן בְּכָל־שִׁבְטֵי יִשְׂרָאֵל לֵאמֹר הַמֶּלֶךְ הִצִּילָנוּ ׀ מִכַּף אֹיְבֵינוּ וְהוּא מִלְּטָנוּ מִכַּף פְּלִשְׁתִּים וְעַתָּה בָּרַח מִן־הָאָרֶץ מֵעַל אַבְשָׁלֽוֹם׃ | 9 |
ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.
וְאַבְשָׁלוֹם אֲשֶׁר מָשַׁחְנוּ עָלֵינוּ מֵת בַּמִּלְחָמָה וְעַתָּה לָמָה אַתֶּם מַחֲרִשִׁים לְהָשִׁיב אֶת־הַמֶּֽלֶךְ׃ | 10 |
ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.
וְהַמֶּלֶךְ דָּוִד שָׁלַח אֶל־צָדוֹק וְאֶל־אֶבְיָתָר הַכֹּהֲנִים לֵאמֹר דַּבְּרוּ אֶל־זִקְנֵי יְהוּדָה לֵאמֹר לָמָּה תִֽהְיוּ אַֽחֲרֹנִים לְהָשִׁיב אֶת־הַמֶּלֶךְ אֶל־בֵּיתוֹ וּדְבַר כָּל־יִשְׂרָאֵל בָּא אֶל־הַמֶּלֶךְ אֶל־בֵּיתֽוֹ׃ | 11 |
ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?
אַחַי אַתֶּם עַצְמִי וּבְשָׂרִי אַתֶּם וְלָמָּה תִהְיוּ אַחֲרֹנִים לְהָשִׁיב אֶת־הַמֶּֽלֶךְ׃ | 12 |
ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.
וְלַֽעֲמָשָׂא תֹּֽמְרוּ הֲלוֹא עַצְמִי וּבְשָׂרִי אָתָּה כֹּה יַֽעֲשֶׂה־לִּי אֱלֹהִים וְכֹה יוֹסִיף אִם־לֹא שַׂר־צָבָא תִּהְיֶה לְפָנַי כָּל־הַיָּמִים תַּחַת יוֹאָֽב׃ | 13 |
ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.
וַיַּט אֶת־לְבַב כָּל־אִישׁ־יְהוּדָה כְּאִישׁ אֶחָד וַֽיִּשְׁלְחוּ אֶל־הַמֶּלֶךְ שׁוּב אַתָּה וְכָל־עֲבָדֶֽיךָ׃ | 14 |
ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.
וַיָּשָׁב הַמֶּלֶךְ וַיָּבֹא עַד־הַיַּרְדֵּן וִיהוּדָה בָּא הַגִּלְגָּלָה לָלֶכֶת לִקְרַאת הַמֶּלֶךְ לְהַעֲבִיר אֶת־הַמֶּלֶךְ אֶת־הַיַּרְדֵּֽן׃ | 15 |
ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.
וַיְמַהֵר שִׁמְעִי בֶן־גֵּרָא בֶּן־הַיְמִינִי אֲשֶׁר מִבַּֽחוּרִים וַיֵּרֶד עִם־אִישׁ יְהוּדָה לִקְרַאת הַמֶּלֶךְ דָּוִֽד׃ | 16 |
ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು.
וְאֶלֶף אִישׁ עִמּוֹ מִבִּנְיָמִן וְצִיבָא נַעַר בֵּית שָׁאוּל וַחֲמֵשֶׁת עָשָׂר בָּנָיו וְעֶשְׂרִים עֲבָדָיו אִתּוֹ וְצָלְחוּ הַיַּרְדֵּן לִפְנֵי הַמֶּֽלֶךְ׃ | 17 |
ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.
וְעָבְרָה הָעֲבָרָה לַֽעֲבִיר אֶת־בֵּית הַמֶּלֶךְ וְלַעֲשׂוֹת הַטּוֹב בעינו בְּעֵינָיו וְשִׁמְעִי בֶן־גֵּרָא נָפַל לִפְנֵי הַמֶּלֶךְ בְּעָבְרוֹ בַּיַּרְדֵּֽן׃ | 18 |
ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,
וַיֹּאמֶר אֶל־הַמֶּלֶךְ אַל־יַחֲשָׁב־לִי אֲדֹנִי עָוֺן וְאַל־תִּזְכֹּר אֵת אֲשֶׁר הֶעֱוָה עַבְדְּךָ בַּיּוֹם אֲשֶׁר־יָצָא אֲדֹנִֽי־הַמֶּלֶךְ מִירֽוּשָׁלָ͏ִם לָשׂוּם הַמֶּלֶךְ אֶל־לִבּֽוֹ׃ | 19 |
“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.
כִּי יָדַע עַבְדְּךָ כִּי אֲנִי חָטָאתִי וְהִנֵּֽה־בָאתִי הַיּוֹם רִאשׁוֹן לְכָל־בֵּית יוֹסֵף לָרֶדֶת לִקְרַאת אֲדֹנִי הַמֶּֽלֶךְ׃ | 20 |
ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.
וַיַּעַן אֲבִישַׁי בֶּן־צְרוּיָה וַיֹּאמֶר הֲתַחַת זֹאת לֹא יוּמַת שִׁמְעִי כִּי קִלֵּל אֶת־מְשִׁיחַ יְהוָֽה׃ | 21 |
ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.
וַיֹּאמֶר דָּוִד מַה־לִּי וְלָכֶם בְּנֵי צְרוּיָה כִּי־תִֽהְיוּ־לִי הַיּוֹם לְשָׂטָן הַיּוֹם יוּמַת אִישׁ בְּיִשְׂרָאֵל כִּי הֲלוֹא יָדַעְתִּי כִּי הַיּוֹם אֲנִי־מֶלֶךְ עַל־יִשְׂרָאֵֽל׃ | 22 |
ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.
וַיֹּאמֶר הַמֶּלֶךְ אֶל־שִׁמְעִי לֹא תָמוּת וַיִּשָּׁבַֽע לוֹ הַמֶּֽלֶךְ׃ | 23 |
ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.
וּמְפִבֹשֶׁת בֶּן־שָׁאוּל יָרַד לִקְרַאת הַמֶּלֶךְ וְלֹא־עָשָׂה רַגְלָיו וְלֹא־עָשָׂה שְׂפָמוֹ וְאֶת־בְּגָדָיו לֹא כִבֵּס לְמִן־הַיּוֹם לֶכֶת הַמֶּלֶךְ עַד־הַיּוֹם אֲשֶׁר־בָּא בְשָׁלֽוֹם׃ | 24 |
ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
וַיְהִי כִּי־בָא יְרוּשָׁלַ͏ִם לִקְרַאת הַמֶּלֶךְ וַיֹּאמֶר לוֹ הַמֶּלֶךְ לָמָּה לֹא־הָלַכְתָּ עִמִּי מְפִיבֹֽשֶׁת׃ | 25 |
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.
וַיֹּאמַר אֲדֹנִי הַמֶּלֶךְ עַבְדִּי רִמָּנִי כִּֽי־אָמַר עַבְדְּךָ אֶחְבְּשָׁה־לִּי הַחֲמוֹר וְאֶרְכַּב עָלֶיהָ וְאֵלֵךְ אֶת־הַמֶּלֶךְ כִּי פִסֵּחַ עַבְדֶּֽךָ׃ | 26 |
ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
וַיְרַגֵּל בְּעַבְדְּךָ אֶל־אֲדֹנִי הַמֶּלֶךְ וַאדֹנִי הַמֶּלֶךְ כְּמַלְאַךְ הָאֱלֹהִים וַעֲשֵׂה הַטּוֹב בְּעֵינֶֽיךָ׃ | 27 |
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.
כִּי לֹא הָיָה כָּל־בֵּית אָבִי כִּי אִם־אַנְשֵׁי־מָוֶת לַאדֹנִי הַמֶּלֶךְ וַתָּשֶׁת אֶֽת־עַבְדְּךָ בְּאֹכְלֵי שֻׁלְחָנֶךָ וּמַה־יֶּשׁ־לִי עוֹד צְדָקָה וְלִזְעֹק עוֹד אֶל־הַמֶּֽלֶךְ׃ | 28 |
ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.
וַיֹּאמֶר לוֹ הַמֶּלֶךְ לָמָּה תְּדַבֵּר עוֹד דְּבָרֶיךָ אָמַרְתִּי אַתָּה וְצִיבָא תַּחְלְקוּ אֶת־הַשָּׂדֶֽה׃ | 29 |
ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.
וַיֹּאמֶר מְפִיבֹשֶׁת אֶל־הַמֶּלֶךְ גַּם אֶת־הַכֹּל יִקָּח אַחֲרֵי אֲשֶׁר־בָּא אֲדֹנִי הַמֶּלֶך בְּשָׁלוֹם אֶל־בֵּיתֽוֹ׃ | 30 |
ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.
וּבַרְזִלַּי הַגִּלְעָדִי יָרַד מֵרֹגְלִים וַיַּעֲבֹר אֶת־הַמֶּלֶךְ הַיַּרְדֵּן לְשַׁלְּחוֹ אֶת־בירדן הַיַּרְדֵּֽן׃ | 31 |
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.
וּבַרְזִלַּי זָקֵן מְאֹד בֶּן־שְׁמֹנִים שָׁנָה וְהֽוּא־כִלְכַּל אֶת־הַמֶּלֶךְ בְּשִׁיבָתוֹ בְמַחֲנַיִם כִּֽי־אִישׁ גָּדוֹל הוּא מְאֹֽד׃ | 32 |
ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.
וַיֹּאמֶר הַמֶּלֶךְ אֶל־בַּרְזִלָּי אַתָּה עֲבֹר אִתִּי וְכִלְכַּלְתִּי אֹתְךָ עִמָּדִי בִּירוּשָׁלָֽ͏ִם׃ | 33 |
ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.
וַיֹּאמֶר בַּרְזִלַּי אֶל־הַמֶּלֶךְ כַּמָּה יְמֵי שְׁנֵי חַיַּי כִּי־אֶעֱלֶה אֶת־הַמֶּלֶךְ יְרוּשָׁלָֽ͏ִם׃ | 34 |
ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
בֶּן־שְׁמֹנִים שָׁנָה אָנֹכִי הַיּוֹם הַאֵדַע ׀ בֵּין־טוֹב לְרָע אִם־יִטְעַם עַבְדְּךָ אֶת־אֲשֶׁר אֹכַל וְאֶת־אֲשֶׁר אֶשְׁתֶּה אִם־אֶשְׁמַע עוֹד בְּקוֹל שָׁרִים וְשָׁרוֹת וְלָמָּה יִֽהְיֶה עַבְדְּךָ עוֹד לְמַשָּׂא אֶל־אֲדֹנִי הַמֶּֽלֶךְ׃ | 35 |
ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?
כִּמְעַט יַעֲבֹר עַבְדְּךָ אֶת־הַיַּרְדֵּן אֶת־הַמֶּלֶךְ וְלָמָּה יִגְמְלֵנִי הַמֶּלֶךְ הַגְּמוּלָה הַזֹּֽאת׃ | 36 |
ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?
יָֽשָׁב־נָא עַבְדְּךָ וְאָמֻת בְּעִירִי עִם קֶבֶר אָבִי וְאִמִּי וְהִנֵּה ׀ עַבְדְּךָ כִמְהָם יַֽעֲבֹר עִם־אֲדֹנִי הַמֶּלֶךְ וַעֲשֵׂה־לוֹ אֵת אֲשֶׁר־טוֹב בְּעֵינֶֽיךָ׃ | 37 |
ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.
וַיֹּאמֶר הַמֶּלֶךְ אִתִּי יַעֲבֹר כִּמְהָם וַאֲנִי אֶעֱשֶׂה־לּוֹ אֶת־הַטּוֹב בְּעֵינֶיךָ וְכֹל אֲשֶׁר־תִּבְחַר עָלַי אֶֽעֱשֶׂה־לָּֽךְ׃ | 38 |
ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.
וַיַּעֲבֹר כָּל־הָעָם אֶת־הַיַּרְדֵּן וְהַמֶּלֶךְ עָבָר וַיִּשַּׁק הַמֶּלֶךְ לְבַרְזִלַּי וַיְבָרֲכֵהוּ וַיָּשָׁב לִמְקֹמֽוֹ׃ | 39 |
ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.
וַיַּעֲבֹר הַמֶּלֶךְ הַגִּלְגָּלָה וְכִמְהָן עָבַר עִמּוֹ וְכָל־עַם יְהוּדָה ויעברו הֶעֱבִירוּ אֶת־הַמֶּלֶךְ וְגַם חֲצִי עַם יִשְׂרָאֵֽל׃ | 40 |
ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.
וְהִנֵּה כָּל־אִישׁ יִשְׂרָאֵל בָּאִים אֶל־הַמֶּלֶךְ וַיֹּאמְרוּ אֶל־הַמֶּלֶךְ מַדּוּעַ גְּנָבוּךָ אַחֵינוּ אִישׁ יְהוּדָה וַיַּעֲבִרוּ אֶת־הַמֶּלֶךְ וְאֶת־בֵּיתוֹ אֶת־הַיַּרְדֵּן וְכָל־אַנְשֵׁי דָוִד עִמּֽוֹ׃ | 41 |
ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.
וַיַּעַן כָּל־אִישׁ יְהוּדָה עַל־אִישׁ יִשְׂרָאֵל כִּֽי־קָרוֹב הַמֶּלֶךְ אֵלַי וְלָמָּה זֶּה חָרָה לְךָ עַל־הַדָּבָר הַזֶּה הֶאָכוֹל אָכַלְנוּ מִן־הַמֶּלֶךְ אִם־נִשֵּׂאת נִשָּׂא לָֽנוּ׃ | 42 |
ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.
וַיַּעַן אִֽישׁ־יִשְׂרָאֵל אֶת־אִישׁ יְהוּדָה וַיֹּאמֶר עֶֽשֶׂר־יָדוֹת לִי בַמֶּלֶךְ וְגַם־בְּדָוִד אֲנִי מִמְּךָ וּמַדּוּעַ הֱקִלֹּתַנִי וְלֹא־הָיָה דְבָרִי רִאשׁוֹן לִי לְהָשִׁיב אֶת־מַלְכִּי וַיִּקֶשׁ דְּבַר־אִישׁ יְהוּדָה מִדְּבַר אִישׁ יִשְׂרָאֵֽל׃ | 43 |
ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.