< שמואל ב 5 >
וַיָּבֹאוּ כָּל־שִׁבְטֵי יִשְׂרָאֵל אֶל־דָּוִד חֶבְרוֹנָה וַיֹּאמְרוּ לֵאמֹר הִנְנוּ עַצְמְךָ וּֽבְשָׂרְךָ אֲנָֽחְנוּ׃ | 1 |
೧ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,
גַּם־אֶתְמוֹל גַּם־שִׁלְשׁוֹם בִּהְיוֹת שָׁאוּל מֶלֶךְ עָלֵינוּ אַתָּה הייתה הָיִיתָ מוציא הַמּוֹצִיא והמבי וְהַמֵּבִיא אֶת־יִשְׂרָאֵל וַיֹּאמֶר יְהוָה לְךָ אַתָּה תִרְעֶה אֶת־עַמִּי אֶת־יִשְׂרָאֵל וְאַתָּה תִּהְיֶה לְנָגִיד עַל־יִשְׂרָאֵֽל׃ | 2 |
೨ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
וַיָּבֹאוּ כָּל־זִקְנֵי יִשְׂרָאֵל אֶל־הַמֶּלֶךְ חֶבְרוֹנָה וַיִּכְרֹת לָהֶם הַמֶּלֶךְ דָּוִד בְּרִית בְּחֶבְרוֹן לִפְנֵי יְהוָה וַיִּמְשְׁחוּ אֶת־דָּוִד לְמֶלֶךְ עַל־יִשְׂרָאֵֽל׃ | 3 |
೩ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
בֶּן־שְׁלֹשִׁים שָׁנָה דָּוִד בְּמָלְכוֹ אַרְבָּעִים שָׁנָה מָלָֽךְ׃ | 4 |
೪ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.
בְּחֶבְרוֹן מָלַךְ עַל־יְהוּדָה שֶׁבַע שָׁנִים וְשִׁשָּׁה חֳדָשִׁים וּבִירוּשָׁלַ͏ִם מָלַךְ שְׁלֹשִׁים וְשָׁלֹשׁ שָׁנָה עַל כָּל־יִשְׂרָאֵל וִיהוּדָֽה׃ | 5 |
೫ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.
וַיֵּלֶךְ הַמֶּלֶךְ וַֽאֲנָשָׁיו יְרוּשָׁלִַם אֶל־הַיְבֻסִי יוֹשֵׁב הָאָרֶץ וַיֹּאמֶר לְדָוִד לֵאמֹר לֹא־תָבוֹא הֵנָּה כִּי אִם־הֱסִֽירְךָ הַעִוְרִים וְהַפִּסְחִים לֵאמֹר לֹֽא־יָבוֹא דָוִד הֵֽנָּה׃ | 6 |
೬ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.
וַיִּלְכֹּד דָּוִד אֵת מְצֻדַת צִיּוֹן הִיא עִיר דָּוִֽד׃ | 7 |
೭ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.
וַיֹּאמֶר דָּוִד בַּיּוֹם הַהוּא כָּל־מַכֵּה יְבֻסִי וְיִגַּע בַּצִּנּוֹר וְאֶת־הַפִּסְחִים וְאֶת־הַעִוְרִים שנאו שְׂנֻאֵי נֶפֶשׁ דָּוִד עַל־כֵּן יֹֽאמְרוּ עִוֵּר וּפִסֵּחַ לֹא יָבוֹא אֶל־הַבָּֽיִת׃ | 8 |
೮ಆ ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು.
וַיֵּשֶׁב דָּוִד בַּמְּצֻדָה וַיִּקְרָא־לָהּ עִיר דָּוִד וַיִּבֶן דָּוִד סָבִיב מִן־הַמִּלּוֹא וָבָֽיְתָה׃ | 9 |
೯ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
וַיֵּלֶךְ דָּוִד הָלוֹךְ וְגָדוֹל וַיהוָה אֱלֹהֵי צְבָאוֹת עִמּֽוֹ׃ | 10 |
೧೦ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.
וַיִּשְׁלַח חִירָם מֶֽלֶךְ־צֹר מַלְאָכִים אֶל־דָּוִד וַעֲצֵי אֲרָזִים וְחָרָשֵׁי עֵץ וְחָֽרָשֵׁי אֶבֶן קִיר וַיִּבְנֽוּ־בַיִת לְדָוִֽד׃ | 11 |
೧೧ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
וַיֵּדַע דָּוִד כִּֽי־הֱכִינוֹ יְהוָה לְמֶלֶךְ עַל־יִשְׂרָאֵל וְכִי נִשֵּׂא מַמְלַכְתּוֹ בַּעֲבוּר עַמּוֹ יִשְׂרָאֵֽל׃ | 12 |
೧೨ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.
וַיִּקַּח דָּוִד עוֹד פִּֽלַגְשִׁים וְנָשִׁים מִירוּשָׁלִַם אַחֲרֵי בֹּאוֹ מֵחֶבְרוֹן וַיִּוָּלְדּוּ עוֹד לְדָוִד בָּנִים וּבָנֽוֹת׃ | 13 |
೧೩ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.
וְאֵלֶּה שְׁמוֹת הַיִּלֹּדִים לוֹ בִּירוּשָׁלָ͏ִם שַׁמּוּעַ וְשׁוֹבָב וְנָתָן וּשְׁלֹמֹֽה׃ | 14 |
೧೪ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
וְיִבְחָר וֶאֱלִישׁוּעַ וְנֶפֶג וְיָפִֽיעַ׃ | 15 |
೧೫ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
וֶאֱלִישָׁמָע וְאֶלְיָדָע וֶאֱלִיפָֽלֶט׃ | 16 |
೧೬ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.
וַיִּשְׁמְעוּ פְלִשְׁתִּים כִּי־מָשְׁחוּ אֶת־דָּוִד לְמֶלֶךְ עַל־יִשְׂרָאֵל וַיַּעֲלוּ כָל־פְּלִשְׁתִּים לְבַקֵּשׁ אֶת־דָּוִד וַיִּשְׁמַע דָּוִד וַיֵּרֶד אֶל־הַמְּצוּדָֽה׃ | 17 |
೧೭ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
וּפְלִשְׁתִּים בָּאוּ וַיִּנָּטְשׁוּ בְּעֵמֶק רְפָאִֽים׃ | 18 |
೧೮ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.
וַיִּשְׁאַל דָּוִד בַּֽיהוָה לֵאמֹר הַאֶֽעֱלֶה אֶל־פְּלִשְׁתִּים הֲתִתְּנֵם בְּיָדִי וַיֹּאמֶר יְהוָה אֶל־דָּוִד עֲלֵה כִּֽי־נָתֹן אֶתֵּן אֶת־הַפְּלִשְׁתִּים בְּיָדֶֽךָ׃ | 19 |
೧೯ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
וַיָּבֹא דָוִד בְּבַֽעַל־פְּרָצִים וַיַּכֵּם שָׁם דָּוִד וַיֹּאמֶר פָּרַץ יְהוָה אֶת־אֹיְבַי לְפָנַי כְּפֶרֶץ מָיִם עַל־כֵּן קָרָא שֵֽׁם־הַמָּקוֹם הַהוּא בַּעַל פְּרָצִֽים׃ | 20 |
೨೦ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.
וַיַּעַזְבוּ־שָׁם אֶת־עֲצַבֵּיהֶם וַיִּשָּׂאֵם דָּוִד וַאֲנָשָֽׁיו׃ | 21 |
೨೧ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.
וַיֹּסִפוּ עוֹד פְּלִשְׁתִּים לַֽעֲלוֹת וַיִּנָּֽטְשׁוּ בְּעֵמֶק רְפָאִֽים׃ | 22 |
೨೨ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.
וַיִּשְׁאַל דָּוִד בַּֽיהוָה וַיֹּאמֶר לֹא תַעֲלֶה הָסֵב אֶל־אַחֲרֵיהֶם וּבָאתָ לָהֶם מִמּוּל בְּכָאִֽים׃ | 23 |
೨೩ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
וִיהִי בשמעך כְּֽשָׁמְעֲךָ אֶת־קוֹל צְעָדָה בְּרָאשֵׁי הַבְּכָאִים אָז תֶּחֱרָץ כִּי אָז יָצָא יְהוָה לְפָנֶיךָ לְהַכּוֹת בְּמַחֲנֵה פְלִשְׁתִּֽים׃ | 24 |
೨೪ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.
וַיַּעַשׂ דָּוִד כֵּן כַּאֲשֶׁר צִוָּהוּ יְהוָה וַיַּךְ אֶת־פְּלִשְׁתִּים מִגֶּבַע עַד־בֹּאֲךָ גָֽזֶר׃ | 25 |
೨೫ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.