< דניאל 12 >

וּבָעֵת הַהִיא יַעֲמֹד מִֽיכָאֵל הַשַּׂר הַגָּדוֹל הָעֹמֵד עַל־בְּנֵי עַמֶּךָ וְהָיְתָה עֵת צָרָה אֲשֶׁר לֹֽא־נִהְיְתָה מִֽהְיוֹת גּוֹי עַד הָעֵת הַהִיא וּבָעֵת הַהִיא יִמָּלֵט עַמְּךָ כָּל־הַנִּמְצָא כָּתוּב בַּסֵּֽפֶר׃ 1
“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.
וְרַבִּים מִיְּשֵׁנֵי אַדְמַת־עָפָר יָקִיצוּ אֵלֶּה לְחַיֵּי עוֹלָם וְאֵלֶּה לַחֲרָפוֹת לְדִרְאוֹן עוֹלָֽם׃ 2
ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.
וְהַמַּשְׂכִּלִים יַזְהִרוּ כְּזֹהַר הָרָקִיעַ וּמַצְדִּיקֵי הָֽרַבִּים כַּכּוֹכָבִים לְעוֹלָם וָעֶֽד׃ 3
ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
וְאַתָּה דָֽנִיֵּאל סְתֹם הַדְּבָרִים וַחֲתֹם הַסֵּפֶר עַד־עֵת קֵץ יְשֹׁטְטוּ רַבִּים וְתִרְבֶּה הַדָּֽעַת׃ 4
ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.
וְרָאִיתִי אֲנִי דָנִיֵּאל וְהִנֵּה שְׁנַיִם אֲחֵרִים עֹמְדִים אֶחָד הֵנָּה לִשְׂפַת הַיְאֹר וְאֶחָד הֵנָּה לִשְׂפַת הַיְאֹֽר׃ 5
ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
וַיֹּאמֶר לָאִישׁ לְבוּשׁ הַבַּדִּים אֲשֶׁר מִמַּעַל לְמֵימֵי הַיְאֹר עַד־מָתַי קֵץ הַפְּלָאֽוֹת׃ 6
ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.
וָאֶשְׁמַע אֶת־הָאִישׁ ׀ לְבוּשׁ הַבַּדִּים אֲשֶׁר מִמַּעַל לְמֵימֵי הַיְאֹר וַיָּרֶם יְמִינוֹ וּשְׂמֹאלוֹ אֶל־הַשָּׁמַיִם וַיִּשָּׁבַע בְּחֵי הָעוֹלָם כִּי לְמוֹעֵד מֽוֹעֲדִים וָחֵצִי וּכְכַלּוֹת נַפֵּץ יַד־עַם־קֹדֶשׁ תִּכְלֶינָה כָל־אֵֽלֶּה׃ 7
ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
וַאֲנִי שָׁמַעְתִּי וְלֹא אָבִין וָאֹמְרָה אֲדֹנִי מָה אַחֲרִית אֵֽלֶּה׃ 8
ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.
וַיֹּאמֶר לֵךְ דָּנִיֵּאל כִּֽי־סְתֻמִים וַחֲתֻמִים הַדְּבָרִים עַד־עֵת קֵֽץ׃ 9
ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.
יִתְבָּֽרֲרוּ וְיִֽתְלַבְּנוּ וְיִצָּֽרְפוּ רַבִּים וְהִרְשִׁיעוּ רְשָׁעִים וְלֹא יָבִינוּ כָּל־רְשָׁעִים וְהַמַּשְׂכִּלִים יָבִֽינוּ׃ 10
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.
וּמֵעֵת הוּסַר הַתָּמִיד וְלָתֵת שִׁקּוּץ שֹׁמֵם יָמִים אֶלֶף מָאתַיִם וְתִשְׁעִֽים׃ 11
“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.
אַשְׁרֵי הַֽמְחַכֶּה וְיַגִּיעַ לְיָמִים אֶלֶף שְׁלֹשׁ מֵאוֹת שְׁלֹשִׁים וַחֲמִשָּֽׁה׃ 12
1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.
וְאַתָּה לֵךְ לַקֵּץ וְתָנוּחַ וְתַעֲמֹד לְגֹרָלְךָ לְקֵץ הַיָּמִֽין׃ 357 12 4 4 13
“ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.

< דניאל 12 >