< דניאל 7 >

בִּשְׁנַת חֲדָה לְבֵלְאשַׁצַּר מֶלֶךְ בָּבֶל דָּנִיֵּאל חֵלֶם חֲזָה וְחֶזְוֵי רֵאשֵׁהּ עַֽל־מִשְׁכְּבֵהּ בֵּאדַיִן חֶלְמָא כְתַב רֵאשׁ מִלִּין אֲמַֽר׃ 1
ಬಾಬೆಲಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಮಲಗಿದ್ದಾಗ ಒಂದು ಸ್ವಪ್ನವಾಯಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದು ಇಟ್ಟನು.
עָנֵה דָנִיֵּאל וְאָמַר חָזֵה הֲוֵית בְּחֶזְוִי עִם־לֵֽילְיָא וַאֲרוּ אַרְבַּע רוּחֵי שְׁמַיָּא מְגִיחָן לְיַמָּא רַבָּֽא׃ 2
ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
וְאַרְבַּע חֵיוָן רַבְרְבָן סָלְקָן מִן־יַמָּא שָׁנְיָן דָּא מִן־דָּֽא׃ 3
ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.
קַדְמָיְתָא כְאַרְיֵה וְגַפִּין דִּֽי־נְשַׁר לַהּ חָזֵה הֲוֵית עַד דִּי־מְּרִיטוּ גַפַּיהּ וּנְטִילַת מִן־אַרְעָא וְעַל־רַגְלַיִן כֶּאֱנָשׁ הֳקִימַת וּלְבַב אֱנָשׁ יְהִיב לַֽהּ׃ 4
ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
וַאֲרוּ חֵיוָה אָחֳרִי תִנְיָנָה דָּמְיָה לְדֹב וְלִשְׂטַר־חַד הֳקִמַת וּתְלָת עִלְעִין בְּפֻמַּהּ בֵּין שניה שִׁנַּהּ וְכֵן אָמְרִין לַהּ קוּמִֽי אֲכֻלִי בְּשַׂר שַׂגִּֽיא׃ 5
ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
בָּאתַר דְּנָה חָזֵה הֲוֵית וַאֲרוּ אָֽחֳרִי כִּנְמַר וְלַהּ גַּפִּין אַרְבַּע דִּי־עוֹף עַל־גביה גַּבַּהּ וְאַרְבְּעָה רֵאשִׁין לְחֵיוְתָא וְשָׁלְטָן יְהִיב לַֽהּ׃ 6
ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.
בָּאתַר דְּנָה חָזֵה הֲוֵית בְּחֶזְוֵי לֵֽילְיָא וַאֲרוּ חֵיוָה רביעיה רְֽבִיעָאָה דְּחִילָה וְאֵֽימְתָנִי וְתַקִּיפָא יַתִּירָא וְשִׁנַּיִן דִּֽי־פַרְזֶל לַהּ רַבְרְבָן אָֽכְלָה וּמַדֱּקָה וּשְׁאָרָא ברגליה בְּרַגְלַהּ רָפְסָה וְהִיא מְשַׁנְּיָה מִן־כָּל־חֵֽיוָתָא דִּי קֽ͏ָדָמַיהּ וְקַרְנַיִן עֲשַׂר לַֽהּ׃ 7
ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.
מִשְׂתַּכַּל הֲוֵית בְּקַרְנַיָּא וַאֲלוּ קֶרֶן אָחֳרִי זְעֵירָה סִלְקָת ביניהון בֵּֽינֵיהֵן וּתְלָת מִן־קַרְנַיָּא קַדְמָיָתָא אתעקרו אֶתְעֲקַרָה מִן־קדמיה קֳדָמַהּ וַאֲלוּ עַיְנִין כְּעַיְנֵי אֲנָשָׁא בְּקַרְנָא־דָא וּפֻם מְמַלִּל רַבְרְבָֽן׃ 8
ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
חָזֵה הֲוֵית עַד דִּי כָרְסָוָן רְמִיו וְעַתִּיק יוֹמִין יְתִב לְבוּשֵׁהּ ׀ כִּתְלַג חִוָּר וּשְׂעַר רֵאשֵׁהּ כַּעֲמַר נְקֵא כָּרְסְיֵהּ שְׁבִיבִין דִּי־נוּר גַּלְגִּלּוֹהִי נוּר דָּלִֽק׃ 9
“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.
נְהַר דִּי־נוּר נָגֵד וְנָפֵק מִן־קֳדָמוֹהִי אֶלֶף אלפים אַלְפִין יְשַׁמְּשׁוּנֵּהּ וְרִבּוֹ רבון רִבְבָן קֽ͏ָדָמוֹהִי יְקוּמוּן דִּינָא יְתִב וְסִפְרִין פְּתִֽיחוּ׃ 10
೧೦ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
חָזֵה הֲוֵית בֵּאדַיִן מִן־קָל מִלַּיָּא רַבְרְבָתָא דִּי קַרְנָא מְמַלֱּלָה חָזֵה הֲוֵית עַד דִּי קְטִילַת חֵֽיוְתָא וְהוּבַד גִּשְׁמַהּ וִיהִיבַת לִיקֵדַת אֶשָּֽׁא׃ 11
೧೧ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿ ಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು, ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.
וּשְׁאָר חֵֽיוָתָא הֶעְדִּיו שָׁלְטָנְהוֹן וְאַרְכָה בְחַיִּין יְהִיבַת לְהוֹן עַד־זְמַן וְעִדָּֽן׃ 12
೧೨ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.
חָזֵה הֲוֵית בְּחֶזְוֵי לֵֽילְיָא וַאֲרוּ עִם־עֲנָנֵי שְׁמַיָּא כְּבַר אֱנָשׁ אָתֵה הֲוָה וְעַד־עַתִּיק יֽוֹמַיָּא מְטָה וּקְדָמוֹהִי הַקְרְבֽוּהִי׃ 13
೧೩ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
וְלֵהּ יְהִיב שָׁלְטָן וִיקָר וּמַלְכוּ וְכֹל עַֽמְמַיָּא אֻמַיָּא וְלִשָּׁנַיָּא לֵהּ יִפְלְחוּן שָׁלְטָנֵהּ שָׁלְטָן עָלַם דִּֽי־לָא יֶעְדֵּה וּמַלְכוּתֵהּ דִּי־לָא תִתְחַבַּֽל׃ 14
೧೪ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
אֶתְכְּרִיַּת רוּחִי אֲנָה דָנִיֵּאל בְּגוֹא נִדְנֶה וְחֶזְוֵי רֵאשִׁי יְבַהֲלֻנַּֽנִי׃ 15
೧೫“ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
קִרְבֵת עַל־חַד מִן־קָאֲמַיָּא וְיַצִּיבָא אֶבְעֵֽא־מִנֵּהּ עַֽל־כָּל־דְּנָה וַאֲמַר־לִי וּפְשַׁר מִלַּיָּא יְהוֹדְעִנַּֽנִי׃ 16
೧೬ನಾನು ಹತ್ತಿರ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸತ್ಯಾರ್ಥವೇನೆಂದು ವಿಚಾರಿಸಲು ಅವನು ನನಗೆ,
אִלֵּין חֵיוָתָא רַבְרְבָתָא דִּי אִנִּין אַרְבַּע אַרְבְּעָה מַלְכִין יְקוּמוּן מִן־אַרְעָֽא׃ 17
೧೭‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.
וִֽיקַבְּלוּן מַלְכוּתָא קַדִּישֵׁי עֶלְיוֹנִין וְיַחְסְנוּן מַלְכוּתָא עֽ͏ַד־עָלְמָא וְעַד עָלַם עָלְמַיָּֽא׃ 18
೧೮ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.
אֱדַיִן צְבִית לְיַצָּבָא עַל־חֵֽיוְתָא רְבִיעָיְתָא דִּֽי־הֲוָת שָֽׁנְיָה מִן־כלהון כָּלְּהֵין דְּחִילָה יַתִּירָה שניה שִׁנַּהּ דִּֽי־פַרְזֶל וְטִפְרַיהּ דִּֽי־נְחָשׁ אָֽכְלָה מַדֲּקָה וּשְׁאָרָא בְּרַגְלַיהּ רָֽפְסָֽה׃ 19
೧೯ಆ ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
וְעַל־קַרְנַיָּא עֲשַׂר דִּי בְרֵאשַׁהּ וְאָחֳרִי דִּי סִלְקַת ונפלו וּנְפַלָה מִן־קדמיה קֳדָמַהּ תְּלָת וְקַרְנָא דִכֵּן וְעַיְנִין לַהּ וְפֻם מְמַלִּל רַבְרְבָן וְחֶזְוַהּ רַב מִן־חַבְרָתַֽהּ׃ 20
೨೦ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
חָזֵה הֲוֵית וְקַרְנָא דִכֵּן עָבְדָה קְרָב עִם־קַדִּישִׁין וְיָכְלָה לְהֽוֹן׃ 21
೨೧ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,
עַד דִּֽי־אֲתָה עַתִּיק יֽוֹמַיָּא וְדִינָא יְהִב לְקַדִּישֵׁי עֶלְיוֹנִין וְזִמְנָא מְטָה וּמַלְכוּתָא הֶחֱסִנוּ קַדִּישִֽׁין׃ 22
೨೨ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
כֵּן אֲמַר חֵֽיוְתָא רְבִיעָיְתָא מַלְכוּ רביעיא רְבִיעָאָה תֶּהֱוֵא בְאַרְעָא דִּי תִשְׁנֵא מִן־כָּל־מַלְכְוָתָא וְתֵאכֻל כָּל־אַרְעָא וּתְדוּשִׁנַּהּ וְתַדְּקִנַּֽהּ׃ 23
೨೩ಆಗ ಅವನು ನನಗೆ, “ಆ ನಾಲ್ಕನೆಯ ಮೃಗವು ಲೋಕದಲ್ಲಿ ಉಂಟಾಗುವ ನಾಲ್ಕನೆಯ ರಾಜ್ಯ; ಅದು ಉಳಿದ ರಾಜ್ಯಗಳಿಗಿಂತ ವಿಲಕ್ಷಣವಾಗಿ ಲೋಕವನ್ನೆಲ್ಲಾ ನುಂಗಿ ತುಳಿದು ಚೂರುಚೂರು ಮಾಡುವುದು.
וְקַרְנַיָּא עֲשַׂר מִנַּהּ מַלְכוּתָה עַשְׂרָה מַלְכִין יְקֻמוּן וְאָחֳרָן יְקוּם אַחֲרֵיהוֹן וְהוּא יִשְׁנֵא מִן־קַדְמָיֵא וּתְלָתָה מַלְכִין יְהַשְׁפִּֽל׃ 24
೨೪ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.
וּמִלִּין לְצַד עליא עִלָּאָה יְמַלִּל וּלְקַדִּישֵׁי עֶלְיוֹנִין יְבַלֵּא וְיִסְבַּר לְהַשְׁנָיָה זִמְנִין וְדָת וְיִתְיַהֲבוּן בִּידֵהּ עַד־עִדָּן וְעִדָּנִין וּפְלַג עִדָּֽן׃ 25
೨೫ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
וְדִינָא יִתִּב וְשָׁלְטָנֵהּ יְהַעְדּוֹן לְהַשְׁמָדָה וּלְהוֹבָדָה עַד־סוֹפָֽא׃ 26
೨೬ಆ ಮೇಲೆ ನ್ಯಾಯಸಭೆಯು ಕುಳಿತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿ ಬಿಡುವುದು.
וּמַלְכוּתָה וְשָׁלְטָנָא וּרְבוּתָא דִּי מַלְכְוָת תְּחוֹת כָּל־שְׁמַיָּא יְהִיבַת לְעַם קַדִּישֵׁי עֶלְיוֹנִין מַלְכוּתֵהּ מַלְכוּת עָלַם וְכֹל שָׁלְטָנַיָּא לֵהּ יִפְלְחוּן וְיִֽשְׁתַּמְּעֽוּן׃ 27
೨೭ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
עַד־כָּה סוֹפָא דִֽי־מִלְּתָא אֲנָה דָֽנִיֵּאל שַׂגִּיא ׀ רַעְיוֹנַי יְבַהֲלֻנַּנִי וְזִיוַי יִשְׁתַּנּוֹן עֲלַי וּמִלְּתָא בְּלִבִּי נִטְרֵֽת׃ 28
೨೮ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

< דניאל 7 >