< דברים 2 >
וַנֵּפֶן וַנִּסַּע הַמִּדְבָּרָה דֶּרֶךְ יַם־סוּף כַּאֲשֶׁר דִּבֶּר יְהוָה אֵלָי וַנָּסָב אֶת־הַר־שֵׂעִיר יָמִים רַבִּֽים׃ | 1 |
ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.
וַיֹּאמֶר יְהוָה אֵלַי לֵאמֹֽר׃ | 2 |
ಆಮೇಲೆ ಯೆಹೋವ ದೇವರು ನನಗೆ,
רַב־לָכֶם סֹב אֶת־הָהָר הַזֶּה פְּנוּ לָכֶם צָפֹֽנָה׃ | 3 |
“ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.
וְאֶת־הָעָם צַו לֵאמֹר אַתֶּם עֹֽבְרִים בִּגְבוּל אֲחֵיכֶם בְּנֵי־עֵשָׂו הַיֹּשְׁבִים בְּשֵׂעִיר וְיִֽירְאוּ מִכֶּם וְנִשְׁמַרְתֶּם מְאֹֽד׃ | 4 |
ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.
אַל־תִּתְגָּרוּ בָם כִּי לֹֽא־אֶתֵּן לָכֶם מֵֽאַרְצָם עַד מִדְרַךְ כַּף־רָגֶל כִּֽי־יְרֻשָּׁה לְעֵשָׂו נָתַתִּי אֶת־הַר שֵׂעִֽיר׃ | 5 |
ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.
אֹכֶל תִּשְׁבְּרוּ מֵֽאִתָּם בַּכֶּסֶף וַאֲכַלְתֶּם וְגַם־מַיִם תִּכְרוּ מֵאִתָּם בַּכֶּסֶף וּשְׁתִיתֶֽם׃ | 6 |
ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’”
כִּי יְהוָה אֱלֹהֶיךָ בֵּֽרַכְךָ בְּכֹל מַעֲשֵׂה יָדֶךָ יָדַע לֶכְתְּךָ אֶת־הַמִּדְבָּר הַגָּדֹל הַזֶּה זֶה ׀ אַרְבָּעִים שָׁנָה יְהוָה אֱלֹהֶיךָ עִמָּךְ לֹא חָסַרְתָּ דָּבָֽר׃ | 7 |
ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.
וַֽנַּעֲבֹר מֵאֵת אַחֵינוּ בְנֵי־עֵשָׂו הַיֹּֽשְׁבִים בְּשֵׂעִיר מִדֶּרֶךְ הָֽעֲרָבָה מֵאֵילַת וּמֵעֶצְיֹן גָּבֶר וַנֵּפֶן וַֽנַּעֲבֹר דֶּרֶךְ מִדְבַּר מוֹאָֽב׃ | 8 |
ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.
וַיֹּאמֶר יְהוָה אֵלַי אֶל־תָּצַר אֶת־מוֹאָב וְאַל־תִּתְגָּר בָּם מִלְחָמָה כִּי לֹֽא־אֶתֵּן לְךָ מֵֽאַרְצוֹ יְרֻשָּׁה כִּי לִבְנֵי־לוֹט נָתַתִּי אֶת־עָר יְרֻשָּֽׁה׃ | 9 |
ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.
הָאֵמִים לְפָנִים יָשְׁבוּ בָהּ עַם גָּדוֹל וְרַב וָרָם כָּעֲנָקִֽים׃ | 10 |
ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.
רְפָאִים יֵחָשְׁבוּ אַף־הֵם כָּעֲנָקִים וְהַמֹּאָבִים יִקְרְאוּ לָהֶם אֵמִֽים׃ | 11 |
ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
וּבְשֵׂעִיר יָשְׁבוּ הַחֹרִים לְפָנִים וּבְנֵי עֵשָׂו יִֽירָשׁוּם וַיַּשְׁמִידוּם מִפְּנֵיהֶם וַיֵּשְׁבוּ תַּחְתָּם כַּאֲשֶׁר עָשָׂה יִשְׂרָאֵל לְאֶרֶץ יְרֻשָּׁתוֹ אֲשֶׁר־נָתַן יְהוָה לָהֶֽם׃ | 12 |
ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.
עַתָּה קֻמוּ וְעִבְרוּ לָכֶם אֶת־נַחַל זָרֶד וַֽנַּעֲבֹר אֶת־נַחַל זָֽרֶד׃ | 13 |
“ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
וְהַיָּמִים אֲשֶׁר־הָלַכְנוּ ׀ מִקָּדֵשׁ בַּרְנֵעַ עַד אֲשֶׁר־עָבַרְנוּ אֶת־נַחַל זֶרֶד שְׁלֹשִׁים וּשְׁמֹנֶה שָׁנָה עַד־תֹּם כָּל־הַדּוֹר אַנְשֵׁי הַמִּלְחָמָה מִקֶּרֶב הַֽמַּחֲנֶה כַּאֲשֶׁר נִשְׁבַּע יְהוָה לָהֶֽם׃ | 14 |
ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.
וְגַם יַד־יְהוָה הָיְתָה בָּם לְהֻמָּם מִקֶּרֶב הַֽמַּחֲנֶה עַד תֻּמָּֽם׃ | 15 |
ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.
וַיְהִי כַאֲשֶׁר־תַּמּוּ כָּל־אַנְשֵׁי הַמִּלְחָמָה לָמוּת מִקֶּרֶב הָעָֽם׃ | 16 |
ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,
וַיְדַבֵּר יְהוָה אֵלַי לֵאמֹֽר׃ | 17 |
ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,
אַתָּה עֹבֵר הַיּוֹם אֶת־גְּבוּל מוֹאָב אֶת־עָֽר׃ | 18 |
“ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.
וְקָרַבְתָּ מוּל בְּנֵי עַמּוֹן אַל־תְּצֻרֵם וְאַל־תִּתְגָּר בָּם כִּי לֹֽא־אֶתֵּן מֵאֶרֶץ בְּנֵי־עַמּוֹן לְךָ יְרֻשָּׁה כִּי לִבְנֵי־לוֹט נְתַתִּיהָ יְרֻשָּֽׁה׃ | 19 |
ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.
אֶֽרֶץ־רְפָאִים תֵּחָשֵׁב אַף־הִוא רְפָאִים יָֽשְׁבוּ־בָהּ לְפָנִים וְהָֽעַמֹּנִים יִקְרְאוּ לָהֶם זַמְזֻמִּֽים׃ | 20 |
ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
עַם גָּדוֹל וְרַב וָרָם כָּעֲנָקִים וַיַּשְׁמִידֵם יְהוָה מִפְּנֵיהֶם וַיִּירָשֻׁם וַיֵּשְׁבוּ תַחְתָּֽם׃ | 21 |
ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.
כַּאֲשֶׁר עָשָׂה לִבְנֵי עֵשָׂו הַיֹּשְׁבִים בְּשֵׂעִיר אֲשֶׁר הִשְׁמִיד אֶת־הַחֹרִי מִפְּנֵיהֶם וַיִּֽירָשֻׁם וַיֵּשְׁבוּ תַחְתָּם עַד הַיּוֹם הַזֶּֽה׃ | 22 |
ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.
וְהָֽעַוִּים הַיֹּשְׁבִים בַּחֲצֵרִים עַד־עַזָּה כַּפְתֹּרִים הַיֹּצְאִים מִכַּפְתּוֹר הִשְׁמִידֻם וַיֵּשְׁבוּ תַחְתָּֽם׃ | 23 |
ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.
קוּמוּ סְּעוּ וְעִבְרוּ אֶת־נַחַל אַרְנֹן רְאֵה נָתַתִּי בְיָדְךָ אֶת־סִיחֹן מֶֽלֶךְ־חֶשְׁבּוֹן הֽ͏ָאֱמֹרִי וְאֶת־אַרְצוֹ הָחֵל רָשׁ וְהִתְגָּר בּוֹ מִלְחָמָֽה׃ | 24 |
“ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.
הַיּוֹם הַזֶּה אָחֵל תֵּת פַּחְדְּךָ וְיִרְאָתְךָ עַל־פְּנֵי הָֽעַמִּים תַּחַת כָּל־הַשָּׁמָיִם אֲשֶׁר יִשְׁמְעוּן שִׁמְעֲךָ וְרָגְזוּ וְחָלוּ מִפָּנֶֽיךָ׃ | 25 |
ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.
וָאֶשְׁלַח מַלְאָכִים מִמִּדְבַּר קְדֵמוֹת אֶל־סִיחוֹן מֶלֶךְ חֶשְׁבּוֹן דִּבְרֵי שָׁלוֹם לֵאמֹֽר׃ | 26 |
ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,
אֶעְבְּרָה בְאַרְצֶךָ בַּדֶּרֶךְ בַּדֶּרֶךְ אֵלֵךְ לֹא אָסוּר יָמִין וּשְׂמֹֽאול׃ | 27 |
“ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.
אֹכֶל בַּכֶּסֶף תַּשְׁבִּרֵנִי וְאָכַלְתִּי וּמַיִם בַּכֶּסֶף תִּתֶּן־לִי וְשָׁתִיתִי רַק אֶעְבְּרָה בְרַגְלָֽי׃ | 28 |
ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.
כַּאֲשֶׁר עֽ͏ָשׂוּ־לִי בְּנֵי עֵשָׂו הַיֹּֽשְׁבִים בְּשֵׂעִיר וְהַמּוֹאָבִים הַיֹּשְׁבִים בְּעָר עַד אֲשֶֽׁר־אֶֽעֱבֹר אֶת־הַיַּרְדֵּן אֶל־הָאָרֶץ אֲשֶׁר־יְהוָה אֱלֹהֵינוּ נֹתֵן לָֽנוּ׃ | 29 |
ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.
וְלֹא אָבָה סִיחֹן מֶלֶךְ חֶשְׁבּוֹן הַעֲבִרֵנוּ בּוֹ כִּֽי־הִקְשָׁה יְהוָה אֱלֹהֶיךָ אֶת־רוּחוֹ וְאִמֵּץ אֶת־לְבָבוֹ לְמַעַן תִּתּוֹ בְיָדְךָ כַּיּוֹם הַזֶּֽה׃ | 30 |
ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.
וַיֹּאמֶר יְהוָה אֵלַי רְאֵה הַֽחִלֹּתִי תֵּת לְפָנֶיךָ אֶת־סִיחֹן וְאֶת־אַרְצוֹ הָחֵל רָשׁ לָרֶשֶׁת אֶת־אַרְצֽוֹ׃ | 31 |
ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು.
וַיֵּצֵא סִיחֹן לִקְרָאתֵנוּ הוּא וְכָל־עַמּוֹ לַמִּלְחָמָה יָֽהְצָה׃ | 32 |
ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.
וַֽיִּתְּנֵהוּ יְהוָה אֱלֹהֵינוּ לְפָנֵינוּ וַנַּךְ אֹתוֹ וְאֶת־בנו בָּנָיו וְאֶת־כָּל־עַמּֽוֹ׃ | 33 |
ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.
וַנִּלְכֹּד אֶת־כָּל־עָרָיו בָּעֵת הַהִוא וַֽנַּחֲרֵם אֶת־כָּל־עִיר מְתִם וְהַנָּשִׁים וְהַטָּף לֹא הִשְׁאַרְנוּ שָׂרִֽיד׃ | 34 |
ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.
רַק הַבְּהֵמָה בָּזַזְנוּ לָנוּ וּשְׁלַל הֶעָרִים אֲשֶׁר לָכָֽדְנוּ׃ | 35 |
ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.
מֵֽעֲרֹעֵר אֲשֶׁר עַל־שְׂפַת־נַחַל אַרְנֹן וְהָעִיר אֲשֶׁר בַּנַּחַל וְעַד־הַגִּלְעָד לֹא הָֽיְתָה קִרְיָה אֲשֶׁר שָׂגְבָה מִמֶּנּוּ אֶת־הַכֹּל נָתַן יְהוָה אֱלֹהֵינוּ לְפָנֵֽינוּ׃ | 36 |
ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.
רַק אֶל־אֶרֶץ בְּנֵי־עַמּוֹן לֹא קָרָבְתָּ כָּל־יַד נַחַל יַבֹּק וְעָרֵי הָהָר וְכֹל אֲשֶׁר־צִוָּה יְהוָה אֱלֹהֵֽינוּ׃ | 37 |
ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.