< דברים 25 >
כִּֽי־יִהְיֶה רִיב בֵּין אֲנָשִׁים וְנִגְּשׁוּ אֶל־הַמִּשְׁפָּט וּשְׁפָטוּם וְהִצְדִּיקוּ אֶת־הַצַּדִּיק וְהִרְשִׁיעוּ אֶת־הָרָשָֽׁע׃ | 1 |
ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.
וְהָיָה אִם־בִּן הַכּוֹת הָרָשָׁע וְהִפִּילוֹ הַשֹּׁפֵט וְהִכָּהוּ לְפָנָיו כְּדֵי רִשְׁעָתוֹ בְּמִסְפָּֽר׃ | 2 |
ಅಪರಾಧಿಗೆ ಪೆಟ್ಟಿನ ಶಿಕ್ಷೆ ತಿರ್ಮಾನವಾದರೆ, ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.
אַרְבָּעִים יַכֶּנּוּ לֹא יֹסִיף פֶּן־יֹסִיף לְהַכֹּתוֹ עַל־אֵלֶּה מַכָּה רַבָּה וְנִקְלָה אָחִיךָ לְעֵינֶֽיךָ׃ | 3 |
ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.
לֹא־תַחְסֹם שׁוֹר בְּדִישֽׁוֹ׃ | 4 |
ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.
כִּֽי־יֵשְׁבוּ אַחִים יַחְדָּו וּמֵת אַחַד מֵהֶם וּבֵן אֵֽין־לוֹ לֹֽא־תִהְיֶה אֵֽשֶׁת־הַמֵּת הַחוּצָה לְאִישׁ זָר יְבָמָהּ יָבֹא עָלֶיהָ וּלְקָחָהּ לוֹ לְאִשָּׁה וְיִבְּמָֽהּ׃ | 5 |
ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.
וְהָיָה הַבְּכוֹר אֲשֶׁר תֵּלֵד יָקוּם עַל־שֵׁם אָחִיו הַמֵּת וְלֹֽא־יִמָּחֶה שְׁמוֹ מִיִּשְׂרָאֵֽל׃ | 6 |
ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ.
וְאִם־לֹא יַחְפֹּץ הָאִישׁ לָקַחַת אֶת־יְבִמְתּוֹ וְעָלְתָה יְבִמְתּוֹ הַשַּׁעְרָה אֶל־הַזְּקֵנִים וְאָֽמְרָה מֵאֵין יְבָמִי לְהָקִים לְאָחִיו שֵׁם בְּיִשְׂרָאֵל לֹא אָבָה יַבְּמִֽי׃ | 7 |
ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು.
וְקָֽרְאוּ־לוֹ זִקְנֵי־עִירוֹ וְדִבְּרוּ אֵלָיו וְעָמַד וְאָמַר לֹא חָפַצְתִּי לְקַחְתָּֽהּ׃ | 8 |
ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ,
וְנִגְּשָׁה יְבִמְתּוֹ אֵלָיו לְעֵינֵי הַזְּקֵנִים וְחָלְצָה נַעֲלוֹ מֵעַל רַגְלוֹ וְיָרְקָה בְּפָנָיו וְעָֽנְתָה וְאָמְרָה כָּכָה יֵעָשֶׂה לָאִישׁ אֲשֶׁר לֹא־יִבְנֶה אֶת־בֵּית אָחִֽיו | 9 |
ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ.
וְנִקְרָא שְׁמוֹ בְּיִשְׂרָאֵל בֵּית חֲלוּץ הַנָּֽעַל׃ | 10 |
ಆಮೇಲೆ ಆ ಮನುಷ್ಯನ ಮನೆಯವರಿಗೆ ಇಸ್ರಾಯೇಲಿನಲ್ಲಿ ಕೆರಬಿಚ್ಚಿಸಿಕೊಂಡವನ ಮನೆಯವರು ಎಂದು ಹೆಸರಾಗುವುದು.
כִּֽי־יִנָּצוּ אֲנָשִׁים יַחְדָּו אִישׁ וְאָחִיו וְקֽ͏ָרְבָה אֵשֶׁת הָֽאֶחָד לְהַצִּיל אֶת־אִישָׁהּ מִיַּד מַכֵּהוּ וְשָׁלְחָה יָדָהּ וְהֶחֱזִיקָה בִּמְבֻשָֽׁיו׃ | 11 |
ಇಬ್ಬರು ಮನುಷ್ಯರು, ಒಬ್ಬನ ಸಂಗಡ ಒಬ್ಬನು ಜಗಳವಾಡುತ್ತಿರುವಾಗ, ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವುದಕ್ಕೆ ಸಮೀಪ ಬಂದು ಕೈಚಾಚಿ, ಅವನ ಜನನೇಂದ್ರಿಯವನ್ನು ಹಿಡಿದರೆ,
וְקַצֹּתָה אֶת־כַּפָּהּ לֹא תָחוֹס עֵינֶֽךָ׃ | 12 |
ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು.
לֹֽא־יִהְיֶה לְךָ בְּכִֽיסְךָ אֶבֶן וָאָבֶן גְּדוֹלָה וּקְטַנָּֽה׃ | 13 |
ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು.
לֹא־יִהְיֶה לְךָ בְּבֵיתְךָ אֵיפָה וְאֵיפָה גְּדוֹלָה וּקְטַנָּֽה׃ | 14 |
ಹೆಚ್ಚು ಕಡಿಮೆಯಾದ ಎರಡು ವಿಧವಾದ ಕಳ್ಳ ಸೇರುಗಳು ನಿಮ್ಮ ಮನೆಯಲ್ಲಿರಬಾರದು.
אֶבֶן שְׁלֵמָה וָצֶדֶק יִֽהְיֶה־לָּךְ אֵיפָה שְׁלֵמָה וָצֶדֶק יִֽהְיֶה־לָּךְ לְמַעַן יַאֲרִיכוּ יָמֶיךָ עַל הֽ͏ָאֲדָמָה אֲשֶׁר־יְהוָה אֱלֹהֶיךָ נֹתֵן לָֽךְ׃ | 15 |
ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.
כִּי תוֹעֲבַת יְהוָה אֱלֹהֶיךָ כָּל־עֹשֵׂה אֵלֶּה כֹּל עֹשֵׂה עָֽוֶל׃ | 16 |
ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ.
זָכוֹר אֵת אֲשֶׁר־עָשָׂה לְךָ עֲמָלֵק בַּדֶּרֶךְ בְּצֵאתְכֶם מִמִּצְרָֽיִם׃ | 17 |
ನೀವು ಈಜಿಪ್ಟನ್ನು ಬಿಟ್ಟು ಬರುವ ಮಾರ್ಗದಲ್ಲಿ ಅಮಾಲೇಕ್ಯರು ನಿನಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.
אֲשֶׁר קָֽרְךָ בַּדֶּרֶךְ וַיְזַנֵּב בְּךָ כָּל־הַנֶּחֱשָׁלִים אַֽחַרֶיךָ וְאַתָּה עָיֵף וְיָגֵעַ וְלֹא יָרֵא אֱלֹהִֽים׃ | 18 |
ಅವರು ಮಾರ್ಗದಲ್ಲಿ ನಿಮಗೆ ಎದುರುಗೊಂಡು, ನೀವು ಆಯಾಸವುಳ್ಳವರಾಗಿಯೂ, ದಣಿದವರಾಗಿಯೂ ಇದ್ದ ಸಮಯದಲ್ಲಿ ನಿಮ್ಮ ಹಿಂದೆ ಇದ್ದ ಬಲಹೀನರೆಲ್ಲರನ್ನು ಹಿಂಭಾಗದಲ್ಲಿ ಸಂಹಾರ ಮಾಡಿದರು. ಅವರಿಗೆ ದೇವರ ಬಗ್ಗೆ ಯಾವ ಭಯವೂ ಇರಲಿಲ್ಲ.
וְהָיָה בְּהָנִיחַ יְהוָה אֱלֹהֶיךָ ׀ לְךָ מִכָּל־אֹיְבֶיךָ מִסָּבִיב בָּאָרֶץ אֲשֶׁר יְהוָֽה־אֱלֹהֶיךָ נֹתֵן לְךָ נַחֲלָה לְרִשְׁתָּהּ תִּמְחֶה אֶת־זֵכֶר עֲמָלֵק מִתַּחַת הַשָּׁמָיִם לֹא תִּשְׁכָּֽח׃ | 19 |
ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.