< קֹהֶלֶת 10 >
זְבוּבֵי מָוֶת יַבְאִישׁ יַבִּיעַ שֶׁמֶן רוֹקֵחַ יָקָר מֵחָכְמָה מִכָּבוֹד סִכְלוּת מְעָֽט׃ | 1 |
೧ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
לֵב חָכָם לִֽימִינוֹ וְלֵב כְּסִיל לִשְׂמֹאלֽוֹ׃ | 2 |
೨ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.
וְגַם־בַּדֶּרֶךְ כשהסכל כְּשֶׁסָּכָל הֹלֵךְ לִבּוֹ חָסֵר וְאָמַר לַכֹּל סָכָל הֽוּא׃ | 3 |
೩ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.
אִם־רוּחַ הַמּוֹשֵׁל תַּעֲלֶה עָלֶיךָ מְקוֹמְךָ אַל־תַּנַּח כִּי מַרְפֵּא יַנִּיחַ חֲטָאִים גְּדוֹלִֽים׃ | 4 |
೪ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.
יֵשׁ רָעָה רָאִיתִי תַּחַת הַשָּׁמֶשׁ כִּשְׁגָגָה שֶׁיֹּצָא מִלִּפְנֵי הַשַּׁלִּֽיט׃ | 5 |
೫ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.
נִתַּן הַסֶּכֶל בַּמְּרוֹמִים רַבִּים וַעֲשִׁירִים בַּשֵּׁפֶל יֵשֵֽׁבוּ׃ | 6 |
೬ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.
רָאִיתִי עֲבָדִים עַל־סוּסִים וְשָׂרִים הֹלְכִים כַּעֲבָדִים עַל־הָאָֽרֶץ׃ | 7 |
೭ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.
חֹפֵר גּוּמָּץ בּוֹ יִפּוֹל וּפֹרֵץ גָּדֵר יִשְּׁכֶנּוּ נָחָֽשׁ׃ | 8 |
೮ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.
מַסִּיעַ אֲבָנִים יֵעָצֵב בָּהֶם בּוֹקֵעַ עֵצִים יִסָּכֶן בָּֽם׃ | 9 |
೯ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.
אִם־קֵהָה הַבַּרְזֶל וְהוּא לֹא־פָנִים קִלְקַל וַחֲיָלִים יְגַבֵּר וְיִתְרוֹן הכשיר הַכְשֵׁר חָכְמָֽה׃ | 10 |
೧೦ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.
אִם־יִשֹּׁךְ הַנָּחָשׁ בְּלוֹא־לָחַשׁ וְאֵין יִתְרוֹן לְבַעַל הַלָּשֽׁוֹן׃ | 11 |
೧೧ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.
דִּבְרֵי פִי־חָכָם חֵן וְשִׂפְתוֹת כְּסִיל תְּבַלְּעֶֽנּוּ׃ | 12 |
೧೨ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
תְּחִלַּת דִּבְרֵי־פִיהוּ סִכְלוּת וְאַחֲרִית פִּיהוּ הוֹלֵלוּת רָעָֽה׃ | 13 |
೧೩ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.
וְהַסָּכָל יַרְבֶּה דְבָרִים לֹא־יֵדַע הָאָדָם מַה־שֶׁיִּֽהְיֶה וַאֲשֶׁר יִֽהְיֶה מֵֽאַחֲרָיו מִי יַגִּיד לֽוֹ׃ | 14 |
೧೪ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.
עֲמַל הַכְּסִילִים תְּיַגְּעֶנּוּ אֲשֶׁר לֹֽא־יָדַע לָלֶכֶת אֶל־עִֽיר׃ | 15 |
೧೫ಪಟ್ಟಣದ ದಾರಿ ತಿಳಿಯದವನಿಗೆ ಮೂಢರು ತಿಳಿಸಲು, ಪಡುವ ಪ್ರಯಾಸದಿಂದ ಆಯಾಸವೇ.
אִֽי־לָךְ אֶרֶץ שֶׁמַּלְכֵּךְ נָעַר וְשָׂרַיִךְ בַּבֹּקֶר יֹאכֵֽלוּ׃ | 16 |
೧೬ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
אַשְׁרֵיךְ אֶרֶץ שֶׁמַּלְכֵּךְ בֶּן־חוֹרִים וְשָׂרַיִךְ בָּעֵת יֹאכֵלוּ בִּגְבוּרָה וְלֹא בַשְּׁתִֽי׃ | 17 |
೧೭ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!
בַּעֲצַלְתַּיִם יִמַּךְ הַמְּקָרֶה וּבְשִׁפְלוּת יָדַיִם יִדְלֹף הַבָּֽיִת׃ | 18 |
೧೮ಸೋಮಾರಿತನದಿಂದ ತೊಲೆಗಳು ಬೊಗ್ಗುವವು. ಜೋಲುಗೈಯಿಂದ ಮನೆ ಸೋರುವುದು.
לִשְׂחוֹק עֹשִׂים לֶחֶם וְיַיִן יְשַׂמַּח חַיִּים וְהַכֶּסֶף יַעֲנֶה אֶת־הַכֹּֽל׃ | 19 |
೧೯ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.
גַּם בְּמַדָּֽעֲךָ מֶלֶךְ אַל־תְּקַלֵּל וּבְחַדְרֵי מִשְׁכָּבְךָ אַל־תְּקַלֵּל עָשִׁיר כִּי עוֹף הַשָּׁמַיִם יוֹלִיךְ אֶת־הַקּוֹל וּבַעַל הכנפים כְּנָפַיִם יַגֵּיד דָּבָֽר׃ | 20 |
೨೦ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.