< קֹהֶלֶת 6 >
יֵשׁ רָעָה אֲשֶׁר רָאִיתִי תַּחַת הַשָּׁמֶשׁ וְרַבָּה הִיא עַל־הָאָדָֽם׃ | 1 |
೧ಈ ಲೋಕದಲ್ಲಿ ಮನುಷ್ಯರಿಗೆ ವಿಪರೀತವಾಗಿ ಉಂಟಾಗಿರುವ ದುರಾವಸ್ಥೆಯನ್ನು ಕಂಡೆನು.
אִישׁ אֲשֶׁר יִתֶּן־לוֹ הָאֱלֹהִים עֹשֶׁר וּנְכָסִים וְכָבוֹד וְֽאֵינֶנּוּ חָסֵר לְנַפְשׁוֹ ׀ מִכֹּל אֲשֶׁר־יִתְאַוֶּה וְלֹֽא־יַשְׁלִיטֶנּוּ הָֽאֱלֹהִים לֶאֱכֹל מִמֶּנּוּ כִּי אִישׁ נָכְרִי יֹֽאכֲלֶנּוּ זֶה הֶבֶל וָחֳלִי רָע הֽוּא׃ | 2 |
೨ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.
אִם־יוֹלִיד אִישׁ מֵאָה וְשָׁנִים רַבּוֹת יִֽחְיֶה וְרַב ׀ שֶׁיִּהְיוּ יְמֵֽי־שָׁנָיו וְנַפְשׁוֹ לֹא־תִשְׂבַּע מִן־הַטּוֹבָה וְגַם־קְבוּרָה לֹא־הָיְתָה לּוֹ אָמַרְתִּי טוֹב מִמֶּנּוּ הַנָּֽפֶל׃ | 3 |
೩ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
כִּֽי־בַהֶבֶל בָּא וּבַחֹשֶׁךְ יֵלֵךְ וּבַחֹשֶׁךְ שְׁמוֹ יְכֻסֶּֽה׃ | 4 |
೪ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
גַּם־שֶׁמֶשׁ לֹא־רָאָה וְלֹא יָדָע נַחַת לָזֶה מִזֶּֽה׃ | 5 |
೫ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
וְאִלּוּ חָיָה אֶלֶף שָׁנִים פַּעֲמַיִם וְטוֹבָה לֹא רָאָה הֲלֹא אֶל־מָקוֹם אֶחָד הַכֹּל הוֹלֵֽךְ׃ | 6 |
೬ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
כָּל־עֲמַל הָאָדָם לְפִיהוּ וְגַם־הַנֶּפֶשׁ לֹא תִמָּלֵֽא׃ | 7 |
೭ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.
כִּי מַה־יּוֹתֵר לֶחָכָם מִֽן־הַכְּסִיל מַה־לֶּעָנִי יוֹדֵעַ לַהֲלֹךְ נֶגֶד הַחַיִּֽים׃ | 8 |
೮ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಜನರ ಮುಂದೆ ಸರಿಯಾಗಿ ನಡೆದುಕೊಳ್ಳಲು ತಿಳಿಯದೇ ಇರುವ ಬಡವನಿಗೆ ಲಾಭವೇನು?
טוֹב מַרְאֵה עֵינַיִם מֵֽהֲלָךְ־נָפֶשׁ גַּם־זֶה הֶבֶל וּרְעוּת רֽוּחַ׃ | 9 |
೯ಬಗೆಬಗೆಯಾಗಿ ಆಶಿಸುವುದಕ್ಕಿಂತ ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು. ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
מַה־שֶּֽׁהָיָה כְּבָר נִקְרָא שְׁמוֹ וְנוֹדָע אֲשֶׁר־הוּא אָדָם וְלֹא־יוּכַל לָדִין עִם שהתקיף שֶׁתַּקִּיף מִמֶּֽנּוּ׃ | 10 |
೧೦ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.
כִּי יֵשׁ־דְּבָרִים הַרְבֵּה מַרְבִּים הָבֶל מַה־יֹּתֵר לָאָדָֽם׃ | 11 |
೧೧ಮಾತು ಹೆಚ್ಚಿದಷ್ಟು ಪರಿಣಾಮ ಕಡಿಮೆ, ಅವುಗಳಿಂದ ಮನುಷ್ಯನಿಗೆ ಏನು ಪ್ರಯೋಜನ?
כִּי מִֽי־יוֹדֵעַ מַה־טּוֹב לָֽאָדָם בַּֽחַיִּים מִסְפַּר יְמֵי־חַיֵּי הֶבְלוֹ וְיַעֲשֵׂם כַּצֵּל אֲשֶׁר מִֽי־יַגִּיד לָֽאָדָם מַה־יִּהְיֶה אַחֲרָיו תַּחַת הַשָּֽׁמֶשׁ׃ | 12 |
೧೨ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು?