< אסתר 7 >
וַיָּבֹא הַמֶּלֶךְ וְהָמָן לִשְׁתּוֹת עִם־אֶסְתֵּר הַמַּלְכָּֽה׃ | 1 |
೧ಅರಸನು ಹಾಮಾನನೊಡನೆ ಎಸ್ತೇರಳ ಮನೆಗೆ ಔತಣಕ್ಕಾಗಿ ಬಂದನು.
וַיֹּאמֶר הַמֶּלֶךְ לְאֶסְתֵּר גַּם בַּיּוֹם הַשֵּׁנִי בְּמִשְׁתֵּה הַיַּיִן מַה־שְּׁאֵלָתֵךְ אֶסְתֵּר הַמַּלְכָּה וְתִנָּתֵֽן לָךְ וּמַה־בַּקָּשָׁתֵךְ עַד־חֲצִי הַמַּלְכוּת וְתֵעָֽשׂ׃ | 2 |
೨ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
וַתַּעַן אֶסְתֵּר הַמַּלְכָּה וַתֹּאמַר אִם־מָצָאתִי חֵן בְּעֵינֶיךָ הַמֶּלֶךְ וְאִם־עַל־הַמֶּלֶךְ טוֹב תִּנָּֽתֶן־לִי נַפְשִׁי בִּשְׁאֵלָתִי וְעַמִּי בְּבַקָּשָׁתִֽי׃ | 3 |
೩ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.
כִּי נִמְכַּרְנוּ אֲנִי וְעַמִּי לְהַשְׁמִיד לַהֲרוֹג וּלְאַבֵּד וְאִלּוּ לַעֲבָדִים וְלִשְׁפָחוֹת נִמְכַּרְנוּ הֶחֱרַשְׁתִּי כִּי אֵין הַצָּר שֹׁוֶה בְּנֵזֶק הַמֶּֽלֶךְ׃ | 4 |
೪ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.
וַיֹּאמֶר הַמֶּלֶךְ אֲחַשְׁוֵרוֹשׁ וַיֹּאמֶר לְאֶסְתֵּר הַמַּלְכָּה מִי הוּא זֶה וְאֵֽי־זֶה הוּא אֲשֶׁר־מְלָאוֹ לִבּוֹ לַעֲשׂוֹת כֵּֽן׃ | 5 |
೫ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.
וַתֹּאמֶר־אֶסְתֵּר אִישׁ צַר וְאוֹיֵב הָמָן הָרָע הַזֶּה וְהָמָן נִבְעַת מִלִּפְנֵי הַמֶּלֶךְ וְהַמַּלְכָּֽה׃ | 6 |
೬ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
וְהַמֶּלֶךְ קָם בַּחֲמָתוֹ מִמִּשְׁתֵּה הַיַּיִן אֶל־גִּנַּת הַבִּיתָן וְהָמָן עָמַד לְבַקֵּשׁ עַל־נַפְשׁוֹ מֵֽאֶסְתֵּר הַמַּלְכָּה כִּי רָאָה כִּֽי־כָלְתָה אֵלָיו הָרָעָה מֵאֵת הַמֶּֽלֶךְ׃ | 7 |
೭ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.
וְהַמֶּלֶךְ שָׁב מִגִּנַּת הַבִּיתָן אֶל־בֵּית ׀ מִשְׁתֵּה הַיַּיִן וְהָמָן נֹפֵל עַל־הַמִּטָּה אֲשֶׁר אֶסְתֵּר עָלֶיהָ וַיֹּאמֶר הַמֶּלֶךְ הֲגַם לִכְבּוֹשׁ אֶת־הַמַּלְכָּה עִמִּי בַּבָּיִת הַדָּבָר יָצָא מִפִּי הַמֶּלֶךְ וּפְנֵי הָמָן חָפֽוּ׃ | 8 |
೮ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.
וַיֹּאמֶר חַרְבוֹנָה אֶחָד מִן־הַסָּרִיסִים לִפְנֵי הַמֶּלֶךְ גַּם הִנֵּה־הָעֵץ אֲשֶׁר־עָשָׂה הָמָן לְֽמָרְדֳּכַי אֲשֶׁר דִּבֶּר־טוֹב עַל־הַמֶּלֶךְ עֹמֵד בְּבֵית הָמָן גָּבֹהַּ חֲמִשִּׁים אַמָּה וַיֹּאמֶר הַמֶּלֶךְ תְּלֻהוּ עָלָֽיו׃ | 9 |
೯ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.
וַיִּתְלוּ אֶת־הָמָן עַל־הָעֵץ אֲשֶׁר־הֵכִין לְמָרְדֳּכָי וַחֲמַת הַמֶּלֶךְ שָׁכָֽכָה׃ | 10 |
೧೦ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.