< יחזקאל 24 >

וַיְהִי דְבַר־יְהוָה אֵלַי בַּשָּׁנָה הַתְּשִׁיעִית בַּחֹדֶשׁ הָעֲשִׂירִי בֶּעָשׂוֹר לַחֹדֶשׁ לֵאמֹֽר׃ 1
ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
בֶּן־אָדָם כתוב־כְּתָב־לְךָ אֶת־שֵׁם הַיּוֹם אֶת־עֶצֶם הַיּוֹם הַזֶּה סָמַךְ מֶֽלֶךְ־בָּבֶל אֶל־יְרוּשָׁלִַם בְּעֶצֶם הַיּוֹם הַזֶּֽה׃ 2
“ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
וּמְשֹׁל אֶל־בֵּית־הַמֶּרִי מָשָׁל וְאָמַרְתָּ אֲלֵיהֶם כֹּה אָמַר אֲדֹנָי יְהוִה שְׁפֹת הַסִּיר שְׁפֹת וְגַם־יְצֹק בּוֹ מָֽיִם׃ 3
ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.
אֱסֹף נְתָחֶיהָ אֵלֶיהָ כָּל־נֵתַח טוֹב יָרֵךְ וְכָתֵף מִבְחַר עֲצָמִים מַלֵּֽא׃ 4
ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು.
מִבְחַר הַצֹּאן לָקוֹחַ וְגַם דּוּר הָעֲצָמִים תַּחְתֶּיהָ רַתַּח רְתָחֶיהָ גַּם־בָּשְׁלוּ עֲצָמֶיהָ בְּתוֹכָֽהּ׃ 5
ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.
לָכֵן כֹּה־אָמַר ׀ אֲדֹנָי יְהֹוִה אוֹי עִיר הַדָּמִים סִיר אֲשֶׁר חֶלְאָתָה בָהּ וְחֶלְאָתָהּ לֹא יָצְאָה מִמֶּנָּה לִנְתָחֶיהָ לִנְתָחֶיהָ הוֹצִיאָהּ לֹא־נָפַל עָלֶיהָ גּוֹרָֽל׃ 6
“‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.
כִּי דָמָהּ בְּתוֹכָהּ הָיָה עַל־צְחִיחַ סֶלַע שָׂמָתְהוּ לֹא שְׁפָכַתְהוּ עַל־הָאָרֶץ לְכַסּוֹת עָלָיו עָפָֽר׃ 7
“‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
לְהַעֲלוֹת חֵמָה לִנְקֹם נָקָם נָתַתִּי אֶת־דָּמָהּ עַל־צְחִיחַ סָלַע לְבִלְתִּי הִכָּסֽוֹת׃ 8
ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.
לָכֵן כֹּה אָמַר אֲדֹנָי יְהוִה אוֹי עִיר הַדָּמִים גַּם־אֲנִי אַגְדִּיל הַמְּדוּרָֽה׃ 9
“‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
הַרְבֵּה הָעֵצִים הַדְלֵק הָאֵשׁ הָתֵם הַבָּשָׂר וְהַרְקַח הַמֶּרְקָחָה וְהָעֲצָמוֹת יֵחָֽרוּ׃ 10
ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ.
וְהַעֲמִידֶהָ עַל־גֶּחָלֶיהָ רֵקָה לְמַעַן תֵּחַם וְחָרָה נְחֻשְׁתָּהּ וְנִתְּכָה בְתוֹכָהּ טֻמְאָתָהּ תִּתֻּם חֶלְאָתָֽהּ׃ 11
ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.
תְּאֻנִים הֶלְאָת וְלֹֽא־תֵצֵא מִמֶּנָּה רַבַּת חֶלְאָתָהּ בְּאֵשׁ חֶלְאָתָֽהּ׃ 12
ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.
בְּטֻמְאָתֵךְ זִמָּה יַעַן טִֽהַרְתִּיךְ וְלֹא טָהַרְתְּ מִטֻּמְאָתֵךְ לֹא תִטְהֲרִי־עוֹד עַד־הֲנִיחִי אֶת־חֲמָתִי בָּֽךְ׃ 13
“‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.
אֲנִי יְהוָה דִּבַּרְתִּי בָּאָה וְעָשִׂיתִי לֹֽא־אֶפְרַע וְלֹא־אָחוּס וְלֹא אֶנָּחֵם כִּדְרָכַיִךְ וְכַעֲלִילוֹתַיִךְ שְׁפָטוּךְ נְאֻם אֲדֹנָי יְהֹוִֽה׃ 14
“‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”
וַיְהִי דְבַר־יְהוָה אֵלַי לֵאמֹֽר׃ 15
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
בֶּן־אָדָם הִנְנִי לֹקֵחַ מִמְּךָ אֶת־מַחְמַד עֵינֶיךָ בְּמַגֵּפָה וְלֹא תִסְפֹּד וְלֹא תִבְכֶּה וְלוֹא תָבוֹא דִּמְעָתֶֽךָ׃ 16
“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.
הֵאָנֵק ׀ דֹּם מֵתִים אֵבֶל לֹֽא־תַֽעֲשֶׂה פְאֵֽרְךָ חֲבוֹשׁ עָלֶיךָ וּנְעָלֶיךָ תָּשִׂים בְּרַגְלֶיךָ וְלֹא תַעְטֶה עַל־שָׂפָם וְלֶחֶם אֲנָשִׁים לֹא תֹאכֵֽל׃ 17
ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”
וָאֲדַבֵּר אֶל־הָעָם בַּבֹּקֶר וַתָּמָת אִשְׁתִּי בָּעָרֶב וָאַעַשׂ בַּבֹּקֶר כַּאֲשֶׁר צֻוֵּֽיתִי׃ 18
ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.
וַיֹּאמְרוּ אֵלַי הָעָם הֲלֹֽא־תַגִּיד לָנוּ מָה־אֵלֶּה לָּנוּ כִּי אַתָּה עֹשֶֽׂה׃ 19
ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು.
וָאֹמַר אֲלֵיהֶם דְּבַר־יְהוָה הָיָה אֵלַי לֵאמֹֽר׃ 20
ಆದ್ದರಿಂದ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವ ದೇವರ ವಾಕ್ಯವು ನನಗೆ ಬಂದಿತು,
אֱמֹר ׀ לְבֵית יִשְׂרָאֵל כֹּֽה־אָמַר אֲדֹנָי יְהוִה הִנְנִי מְחַלֵּל אֶת־מִקְדָּשִׁי גְּאוֹן עֻזְּכֶם מַחְמַד עֵֽינֵיכֶם וּמַחְמַל נַפְשְׁכֶם וּבְנֵיכֶם וּבְנֽוֹתֵיכֶם אֲשֶׁר עֲזַבְתֶּם בַּחֶרֶב יִפֹּֽלוּ׃ 21
ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.
וַעֲשִׂיתֶם כַּאֲשֶׁר עָשִׂיתִי עַל־שָׂפָם לֹא תַעְטוּ וְלֶחֶם אֲנָשִׁים לֹא תֹאכֵֽלוּ׃ 22
ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.
וּפְאֵרֵכֶם עַל־רָאשֵׁיכֶם וְנַֽעֲלֵיכֶם בְּרַגְלֵיכֶם לֹא תִסְפְּדוּ וְלֹא תִבְכּוּ וּנְמַקֹּתֶם בַּעֲוֺנֹתֵיכֶם וּנְהַמְתֶּם אִישׁ אֶל־אָחִֽיו׃ 23
ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.
וְהָיָה יְחֶזְקֵאל לָכֶם לְמוֹפֵת כְּכֹל אֲשֶׁר־עָשָׂה תַּעֲשׂוּ בְּבֹאָהּ וִֽידַעְתֶּם כִּי אֲנִי אֲדֹנָי יְהוִֽה׃ 24
ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’
וְאַתָּה בֶן־אָדָם הֲלוֹא בְּיוֹם קַחְתִּי מֵהֶם אֶת־מָעוּזָּם מְשׂוֹשׂ תִּפְאַרְתָּם אֶת־מַחְמַד עֵֽינֵיהֶם וְאֶת־מַשָּׂא נַפְשָׁם בְּנֵיהֶם וּבְנוֹתֵיהֶֽם׃ 25
“ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,
בַּיּוֹם הַהוּא יָבוֹא הַפָּלִיט אֵלֶיךָ לְהַשְׁמָעוּת אָזְנָֽיִם׃ 26
ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?
בַּיּוֹם הַהוּא יִפָּתַח פִּיךָ אֶת־הַפָּלִיט וּתְדַבֵּר וְלֹא תֵֽאָלֵם עוֹד וְהָיִיתָ לָהֶם לְמוֹפֵת וְיָדְעוּ כִּֽי־אֲנִי יְהוָֽה׃ 27
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”

< יחזקאל 24 >