< יחזקאל 3 >
וַיֹּאמֶר אֵלַי בֶּן־אָדָם אֵת אֲשֶׁר־תִּמְצָא אֱכוֹל אֱכוֹל אֶת־הַמְּגִלָּה הַזֹּאת וְלֵךְ דַּבֵּר אֶל־בֵּית יִשְׂרָאֵֽל׃ | 1 |
೧ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.
וָאֶפְתַּח אֶת־פִּי וַיַּאֲכִלֵנִי אֵת הַמְּגִלָּה הַזֹּֽאת׃ | 2 |
೨ನಾನು ಬಾಯಿ ತೆರೆದೆ, ಆತನು ಆ ಸುರುಳಿಯನ್ನು ನನಗೆ ತಿನ್ನಿಸಿದನು.
וַיֹּאמֶר אֵלַי בֶּן־אָדָם בִּטְנְךָ תַֽאֲכֵל וּמֵעֶיךָ תְמַלֵּא אֵת הַמְּגִלָּה הַזֹּאת אֲשֶׁר אֲנִי נֹתֵן אֵלֶיךָ וָאֹכְלָה וַתְּהִי בְּפִי כִּדְבַשׁ לְמָתֽוֹק׃ | 3 |
೩ಆಗ ಆತನು ನನಗೆ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ” ಎಂದು ಹೇಳಲು ಅದನ್ನು ತಿಂದುಬಿಟ್ಟೆನು; ಅದು ನನ್ನ ಬಾಯಿಯಲ್ಲಿ ಜೇನಿನಂತೆ ಸಿಹಿಯಾಗಿತ್ತು.
וַיֹּאמֶר אֵלָי בֶּן־אָדָם לֶךְ־בֹּא אֶל־בֵּית יִשְׂרָאֵל וְדִבַּרְתָּ בִדְבָרַי אֲלֵיהֶֽם׃ | 4 |
೪ಆಮೇಲೆ ಆತನು ನನಗೆ ಹೀಗೆಂದನು, “ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.
כִּי לֹא אֶל־עַם עִמְקֵי שָׂפָה וְכִבְדֵי לָשׁוֹן אַתָּה שָׁלוּחַ אֶל־בֵּית יִשְׂרָאֵֽל׃ | 5 |
೫ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.
לֹא ׀ אֶל־עַמִּים רַבִּים עִמְקֵי שָׂפָה וְכִבְדֵי לָשׁוֹן אֲשֶׁר לֹֽא־תִשְׁמַע דִּבְרֵיהֶם אִם־לֹא אֲלֵיהֶם שְׁלַחְתִּיךָ הֵמָּה יִשְׁמְעוּ אֵלֶֽיךָ׃ | 6 |
೬ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
וּבֵית יִשְׂרָאֵל לֹא יֹאבוּ לִשְׁמֹעַ אֵלֶיךָ כִּֽי־אֵינָם אֹבִים לִשְׁמֹעַ אֵלָי כִּי כָּל־בֵּית יִשְׂרָאֵל חִזְקֵי־מֵצַח וּקְשֵׁי־לֵב הֵֽמָּה׃ | 7 |
೭ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.
הִנֵּה נָתַתִּי אֶת־פָּנֶיךָ חֲזָקִים לְעֻמַּת פְּנֵיהֶם וְאֶֽת־מִצְחֲךָ חָזָק לְעֻמַּת מִצְחָֽם׃ | 8 |
೮ಇಗೋ, ನಾನು ಅವರ ಕಠಿಣ ಹೃದಯಕ್ಕೆ ವಿರುದ್ಧವಾಗಿ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಣೆಗೆ ಪ್ರತಿಯಾಗಿ ನಿನ್ನ ಹಣೆಯನ್ನು ಗಟ್ಟಿಮಾಡಿದ್ದೇನೆ.
כְּשָׁמִיר חָזָק מִצֹּר נָתַתִּי מִצְחֶךָ לֹֽא־תִירָא אוֹתָם וְלֹא־תֵחַת מִפְּנֵיהֶם כִּי בֵּֽית־מְרִי הֵֽמָּה׃ | 9 |
೯ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು.”
וַיֹּאמֶר אֵלָי בֶּן־אָדָם אֶת־כָּל־דְּבָרַי אֲשֶׁר אֲדַבֵּר אֵלֶיךָ קַח בִּֽלְבָבְךָ וּבְאָזְנֶיךָ שְׁמָֽע׃ | 10 |
೧೦ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.
וְלֵךְ בֹּא אֶל־הַגּוֹלָה אֶל־בְּנֵי עַמֶּךָ וְדִבַּרְתָּ אֲלֵיהֶם וְאָמַרְתָּ אֲלֵיהֶם כֹּה אָמַר אֲדֹנָי יְהֹוִה אִֽם־יִשְׁמְעוּ וְאִם־יֶחְדָּֽלוּ׃ | 11 |
೧೧ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”
וַתִּשָּׂאֵנִי רוּחַ וָאֶשְׁמַע אַחֲרַי קוֹל רַעַשׁ גָּדוֹל בָּרוּךְ כְּבוֹד־יְהוָה מִמְּקוֹמֽוֹ׃ | 12 |
೧೨ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.
וְקוֹל ׀ כַּנְפֵי הַחַיּוֹת מַשִּׁיקוֹת אִשָּׁה אֶל־אֲחוֹתָהּ וְקוֹל הָאוֹפַנִּים לְעֻמָּתָם וְקוֹל רַעַשׁ גָּדֽוֹל׃ | 13 |
೧೩ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.
וְרוּחַ נְשָׂאַתְנִי וַתִּקָּחֵנִי וָאֵלֵךְ מַר בַּחֲמַת רוּחִי וְיַד־יְהוָה עָלַי חָזָֽקָה׃ | 14 |
೧೪ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.
וָאָבוֹא אֶל־הַגּוֹלָה תֵּל אָבִיב הַיֹּשְׁבִים אֶֽל־נְהַר־כְּבָר ואשר וָֽאֵשֵׁב הֵמָּה יוֹשְׁבִים שָׁם וָאֵשֵׁב שָׁם שִׁבְעַת יָמִים מַשְׁמִים בְּתוֹכָֽם׃ | 15 |
೧೫ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.
וַיְהִי מִקְצֵה שִׁבְעַת יָמִים וַיְהִי דְבַר־יְהוָה אֵלַי לֵאמֹֽר׃ | 16 |
೧೬ಏಳು ದಿನಗಳಾದ ಮೇಲೆ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
בֶּן־אָדָם צֹפֶה נְתַתִּיךָ לְבֵית יִשְׂרָאֵל וְשָׁמַעְתָּ מִפִּי דָּבָר וְהִזְהַרְתָּ אוֹתָם מִמֶּֽנִּי׃ | 17 |
೧೭“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.
בְּאָמְרִי לָֽרָשָׁע מוֹת תָּמוּת וְלֹא הִזְהַרְתּוֹ וְלֹא דִבַּרְתָּ לְהַזְהִיר רָשָׁע מִדַּרְכּוֹ הָרְשָׁעָה לְחַיֹּתוֹ הוּא רָשָׁע בַּעֲוֺנוֹ יָמוּת וְדָמוֹ מִיָּדְךָ אֲבַקֵּֽשׁ׃ | 18 |
೧೮ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.
וְאַתָּה כִּֽי־הִזְהַרְתָּ רָשָׁע וְלֹא־שָׁב מֵֽרִשְׁעוֹ וּמִדַּרְכּוֹ הָרְשָׁעָה הוּא בַּעֲוֺנוֹ יָמוּת וְאַתָּה אֶֽת־נַפְשְׁךָ הִצַּֽלְתָּ׃ | 19 |
೧೯ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
וּבְשׁוּב צַדִּיק מִצִּדְקוֹ וְעָשָׂה עָוֶל וְנָתַתִּי מִכְשׁוֹל לְפָנָיו הוּא יָמוּת כִּי לֹא הִזְהַרְתּוֹ בְּחַטָּאתוֹ יָמוּת וְלֹא תִזָּכַרְןָ צִדְקֹתָו אֲשֶׁר עָשָׂה וְדָמוֹ מִיָּדְךָ אֲבַקֵּֽשׁ׃ | 20 |
೨೦ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.
וְאַתָּה כִּי הִזְהַרְתּוֹ צַדִּיק לְבִלְתִּי חֲטֹא צַדִּיק וְהוּא לֹא־חָטָא חָיוֹ יִֽחְיֶה כִּי נִזְהָר וְאַתָּה אֶֽת־נַפְשְׁךָ הִצַּֽלְתָּ׃ | 21 |
೨೧ನೀನು ನೀತಿವಂತನನ್ನು ಪಾಪ ಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”
וַתְּהִי עָלַי שָׁם יַד־יְהוָה וַיֹּאמֶר אֵלַי קוּם צֵא אֶל־הַבִּקְעָה וְשָׁם אֲדַבֵּר אוֹתָֽךְ׃ | 22 |
೨೨ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.
וָאָקוּם וָאֵצֵא אֶל־הַבִּקְעָה וְהִנֵּה־שָׁם כְּבוֹד־יְהוָה עֹמֵד כַּכָּבוֹד אֲשֶׁר רָאִיתִי עַל־נְהַר־כְּבָר וָאֶפֹּל עַל־פָּנָֽי׃ | 23 |
೨೩ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.
וַתָּבֹא־בִי רוּחַ וַתַּעֲמִדֵנִי עַל־רַגְלָי וַיְדַבֵּר אֹתִי וַיֹּאמֶר אֵלַי בֹּא הִסָּגֵר בְּתוֹךְ בֵּיתֶֽךָ׃ | 24 |
೨೪ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.
וְאַתָּה בֶן־אָדָם הִנֵּה נָתְנוּ עָלֶיךָ עֲבוֹתִים וַאֲסָרוּךָ בָּהֶם וְלֹא תֵצֵא בְּתוֹכָֽם׃ | 25 |
೨೫ನರಪುತ್ರನೇ, ಇಗೋ, ನಿನ್ನ ಸ್ವಜನರು ನಿನ್ನನ್ನು ಬಂಧಿಸಿ ಕಟ್ಟುವರು, ನೀನು ಹೊರಗೆ ಸಂಚರಿಸಲು ಆಗುವುದಿಲ್ಲ.
וּלְשֽׁוֹנְךָ אַדְבִּיק אֶל־חִכֶּךָ וְנֶֽאֱלַמְתָּ וְלֹא־תִֽהְיֶה לָהֶם לְאִישׁ מוֹכִיחַ כִּי בֵּית מְרִי הֵֽמָּה׃ | 26 |
೨೬ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ.
וּֽבְדַבְּרִי אֽוֹתְךָ אֶפְתַּח אֶת־פִּיךָ וְאָמַרְתָּ אֲלֵיהֶם כֹּה אָמַר אֲדֹנָי יְהֹוִה הַשֹּׁמֵעַ ׀ יִשְׁמָע וְהֶחָדֵל ׀ יֶחְדָּל כִּי בֵּית מְרִי הֵֽמָּה׃ | 27 |
೨೭ನಾನು ನಿನ್ನೊಡನೆ ಮತ್ತೆ ಮಾತನಾಡುವಾಗ ನಾನು ನಿನ್ನ ಬಾಯಿಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಹೇಳಬೇಕು; ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ; ಅವರು ತಿರುಗಿ ಬೀಳುವ ವಂಶದವರೇ.”