< יחזקאל 33 >

וַיְהִי דְבַר־יְהוָה אֵלַי לֵאמֹֽר׃ 1
ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בֶּן־אָדָם דַּבֵּר אֶל־בְּנֵֽי־עַמְּךָ וְאָמַרְתָּ אֲלֵיהֶם אֶרֶץ כִּֽי־אָבִיא עָלֶיהָ חָרֶב וְלָקְחוּ עַם־הָאָרֶץ אִישׁ אֶחָד מִקְצֵיהֶם וְנָתְנוּ אֹתוֹ לָהֶם לְצֹפֶֽה׃ 2
“ನರಪುತ್ರನೇ, ನಿನ್ನ ಜನರನ್ನು ಸಂಬೋಧಿಸಿ, ಅವರಿಗೆ ಹೀಗೆ ನುಡಿ, ‘ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಒಬ್ಬ ಮನುಷ್ಯನನ್ನು ಆರಿಸಿ, ತಮಗೆ ಕಾವಲುಗಾರನನ್ನಾಗಿ ನೇಮಿಸಿಕೊಳ್ಳಲಿ.
וְרָאָה אֶת־הַחֶרֶב בָּאָה עַל־הָאָרֶץ וְתָקַע בַּשּׁוֹפָר וְהִזְהִיר אֶת־הָעָֽם׃ 3
ಅವರು ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ, ಕೊಂಬನ್ನು ಊದಿ ಸ್ವಜನರನ್ನು ಎಚ್ಚರಿಸಲಿ.
וְשָׁמַע הַשֹּׁמֵעַ אֶת־קוֹל הַשּׁוֹפָר וְלֹא נִזְהָר וַתָּבוֹא חֶרֶב וַתִּקָּחֵהוּ דָּמוֹ בְרֹאשׁוֹ יִֽהְיֶֽה׃ 4
ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
אֵת קוֹל הַשּׁוֹפָר שָׁמַע וְלֹא נִזְהָר דָּמוֹ בּוֹ יִֽהְיֶה וְהוּא נִזְהָר נַפְשׁוֹ מִלֵּֽט׃ 5
ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
וְהַצֹּפֶה כִּֽי־יִרְאֶה אֶת־הַחֶרֶב בָּאָה וְלֹֽא־תָקַע בַּשּׁוֹפָר וְהָעָם לֹֽא־נִזְהָר וַתָּבוֹא חֶרֶב וַתִּקַּח מֵהֶם נָפֶשׁ הוּא בַּעֲוֺנוֹ נִלְקָח וְדָמוֹ מִיַּֽד־הַצֹּפֶה אֶדְרֹֽשׁ׃ 6
ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
וְאַתָּה בֶן־אָדָם צֹפֶה נְתַתִּיךָ לְבֵית יִשְׂרָאֵל וְשָׁמַעְתָּ מִפִּי דָּבָר וְהִזְהַרְתָּ אֹתָם מִמֶּֽנִּי׃ 7
“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
בְּאָמְרִי לָרָשָׁע רָשָׁע מוֹת תָּמוּת וְלֹא דִבַּרְתָּ לְהַזְהִיר רָשָׁע מִדַּרְכּוֹ הוּא רָשָׁע בַּעֲוֺנוֹ יָמוּת וְדָמוֹ מִיָּדְךָ אֲבַקֵּֽשׁ׃ 8
ನಾನು ದುಷ್ಟನಿಗೆ ದುಷ್ಟನೇ, ‘ನೀನು ಖಂಡಿತವಾಗಿ ಸಾಯುವೆ’ ಎಂದು ಹೇಳುವಾಗ, ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಿ, ಅವನನ್ನು ಎಚ್ಚರಗೊಳಿಸದೆ ಹೋದರೆ, ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.
וְאַתָּה כִּֽי־הִזְהַרְתָּ רָשָׁע מִדַּרְכּוֹ לָשׁוּב מִמֶּנָּה וְלֹא־שָׁב מִדַּרְכּוֹ הוּא בַּעֲוֺנוֹ יָמוּת וְאַתָּה נַפְשְׁךָ הִצַּֽלְתָּ׃ 9
ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
וְאַתָּה בֶן־אָדָם אֱמֹר אֶל־בֵּית יִשְׂרָאֵל כֵּן אֲמַרְתֶּם לֵאמֹר כִּֽי־פְשָׁעֵינוּ וְחַטֹּאתֵינוּ עָלֵינוּ וּבָם אֲנַחְנוּ נְמַקִּים וְאֵיךְ נִֽחְיֶֽה׃ 10
೧೦“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.
אֱמֹר אֲלֵיהֶם חַי־אָנִי ׀ נְאֻם ׀ אֲדֹנָי יְהוִה אִם־אֶחְפֹּץ בְּמוֹת הָרָשָׁע כִּי אִם־בְּשׁוּב רָשָׁע מִדַּרְכּוֹ וְחָיָה שׁוּבוּ שׁוּבוּ מִדַּרְכֵיכֶם הָרָעִים וְלָמָּה תָמוּתוּ בֵּית יִשְׂרָאֵֽל׃ 11
೧೧ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
וְאַתָּה בֶן־אָדָם אֱמֹר אֶל־בְּנֵֽי־עַמְּךָ צִדְקַת הַצַּדִּיק לֹא תַצִּילֶנּוּ בְּיוֹם פִּשְׁעוֹ וְרִשְׁעַת הָֽרָשָׁע לֹֽא־יִכָּשֶׁל בָּהּ בְּיוֹם שׁוּבוֹ מֵֽרִשְׁעוֹ וְצַדִּיק לֹא יוּכַל לִֽחְיוֹת בָּהּ בְּיוֹם חֲטֹאתֽוֹ׃ 12
೧೨ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
בְּאָמְרִי לַצַּדִּיק חָיֹה יִֽחְיֶה וְהֽוּא־בָטַח עַל־צִדְקָתוֹ וְעָשָׂה עָוֶל כָּל־צדקתו צִדְקֹתָיו לֹא תִזָּכַרְנָה וּבְעַוְלוֹ אֲשֶׁר־עָשָׂה בּוֹ יָמֽוּת׃ 13
೧೩ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
וּבְאָמְרִי לָֽרָשָׁע מוֹת תָּמוּת וְשָׁב מֵֽחַטָּאתוֹ וְעָשָׂה מִשְׁפָּט וּצְדָקָֽה׃ 14
೧೪ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವಿ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ,
חֲבֹל יָשִׁיב רָשָׁע גְּזֵלָה יְשַׁלֵּם בְּחֻקּוֹת הַֽחַיִּים הָלַךְ לְבִלְתִּי עֲשׂוֹת עָוֶל חָיוֹ יִֽחְיֶה לֹא יָמֽוּת׃ 15
೧೫ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.
כָּל־חטאתו חַטֹּאתָיו אֲשֶׁר חָטָא לֹא תִזָּכַרְנָה לוֹ מִשְׁפָּט וּצְדָקָה עָשָׂה חָיוֹ יִֽחְיֶֽה׃ 16
೧೬ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.
וְאָמְרוּ בְּנֵי עַמְּךָ לֹא יִתָּכֵן דֶּרֶךְ אֲדֹנָי וְהֵמָּה דַּרְכָּם לֹֽא־יִתָּכֵֽן׃ 17
೧೭ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
בְּשׁוּב־צַדִּיק מִצִּדְקָתוֹ וְעָשָׂה עָוֶל וּמֵת בָּהֶֽם׃ 18
೧೮ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.
וּבְשׁוּב רָשָׁע מֵֽרִשְׁעָתוֹ וְעָשָׂה מִשְׁפָּט וּצְדָקָה עֲלֵיהֶם הוּא יִֽחְיֶֽה׃ 19
೧೯ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ಅವುಗಳಿಂದ ಬದುಕುವನು.
וַאֲמַרְתֶּם לֹא יִתָּכֵן דֶּרֶךְ אֲדֹנָי אִישׁ כִּדְרָכָיו אֶשְׁפּוֹט אֶתְכֶם בֵּית יִשְׂרָאֵֽל 20
೨೦ಆದರೆ ನೀವು, ‘ಯೆಹೋವನ ಮಾರ್ಗವು ಸಮವಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.”
וַיְהִי בִּשְׁתֵּי עֶשְׂרֵה שָׁנָה בָּעֲשִׂרִי בַּחֲמִשָּׁה לַחֹדֶשׁ לְגָלוּתֵנוּ בָּא־אֵלַי הַפָּלִיט מִירוּשָׁלַ͏ִם לֵאמֹר הֻכְּתָה הָעִֽיר׃ 21
೨೧ನಾವು ಸೆರೆಯಾದ ಹನ್ನೆರಡನೆಯ ವರ್ಷದ, ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ಶತ್ರುವಶವಾಯಿತು” ಎಂದು ಹೇಳಿದನು.
וְיַד־יְהוָה הָיְתָה אֵלַי בָּעֶרֶב לִפְנֵי בּוֹא הַפָּלִיט וַיִּפְתַּח אֶת־פִּי עַד־בּוֹא אֵלַי בַּבֹּקֶר וַיִּפָּתַח פִּי וְלֹא נֶאֱלַמְתִּי עֽוֹד׃ 22
೨೨ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.
וַיְהִי דְבַר־יְהֹוָה אֵלַי לֵאמֹֽר׃ 23
೨೩ಆಗ ಯೆಹೋವನು ನನಗೆ ಈ ವಾಕ್ಯವನ್ನು ದಯಪಾಲಿಸಿದನು,
בֶּן־אָדָם יֹשְׁבֵי הֶחֳרָבוֹת הָאֵלֶּה עַל־אַדְמַת יִשְׂרָאֵל אֹמְרִים לֵאמֹר אֶחָד הָיָה אַבְרָהָם וַיִּירַשׁ אֶת־הָאָרֶץ וַאֲנַחְנוּ רַבִּים לָנוּ נִתְּנָה הָאָרֶץ לְמוֹרָשָֽׁה׃ 24
೨೪“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
לָכֵן אֱמֹר אֲלֵיהֶם כֹּֽה־אָמַר ׀ אֲדֹנָי יְהֹוִה עַל־הַדָּם ׀ תֹּאכֵלוּ וְעֵינֵכֶם תִּשְׂאוּ אֶל־גִּלּוּלֵיכֶם וְדָם תִּשְׁפֹּכוּ וְהָאָרֶץ תִּירָֽשׁוּ׃ 25
೨೫ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
עֲמַדְתֶּם עַֽל־חַרְבְּכֶם עֲשִׂיתֶן תּוֹעֵבָה וְאִישׁ אֶת־אֵשֶׁת רֵעֵהוּ טִמֵּאתֶם וְהָאָרֶץ תִּירָֽשׁוּ׃ 26
೨೬ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳಲ್ಲಿ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ಮಾನಭಂಗ ಪಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?”
כֹּֽה־תֹאמַר אֲלֵהֶם כֹּה־אָמַר אֲדֹנָי יְהוִה חַי־אָנִי אִם־לֹא אֲשֶׁר בֶּֽחֳרָבוֹת בַּחֶרֶב יִפֹּלוּ וַֽאֲשֶׁר עַל־פְּנֵי הַשָּׂדֶה לַחַיָּה נְתַתִּיו לְאָכְלוֹ וַאֲשֶׁר בַּמְּצָדוֹת וּבַמְּעָרוֹת בַּדֶּבֶר יָמֽוּתוּ׃ 27
೨೭ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವುದು.
וְנָתַתִּי אֶת־הָאָרֶץ שְׁמָמָה וּמְשַׁמָּה וְנִשְׁבַּת גְּאוֹן עֻזָּהּ וְשָֽׁמְמוּ הָרֵי יִשְׂרָאֵל מֵאֵין עוֹבֵֽר׃ 28
೨೮ನಾನು ದೇಶವನ್ನು ಹಾಳುಮಾಡುವೆನು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅಲ್ಲಿ ಹಾದು ಹೋಗುವುದಿಲ್ಲ.
וְיָדְעוּ כִּֽי־אֲנִי יְהוָה בְּתִתִּי אֶת־הָאָרֶץ שְׁמָמָה וּמְשַׁמָּה עַל כָּל־תּוֹעֲבֹתָם אֲשֶׁר עָשֽׂוּ׃ 29
೨೯ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು.
וְאַתָּה בֶן־אָדָם בְּנֵי עַמְּךָ הַנִּדְבָּרִים בְּךָ אֵצֶל הַקִּירוֹת וּבְפִתְחֵי הַבָּתִּים וְדִבֶּר־חַד אֶת־אַחַד אִישׁ אֶת־אָחִיו לֵאמֹר בֹּֽאוּ־נָא וְשִׁמְעוּ מָה הַדָּבָר הַיּוֹצֵא מֵאֵת יְהוָֽה׃ 30
೩೦ನರಪುತ್ರನೇ, “ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ, ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು, ‘ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
וְיָבוֹאוּ אֵלֶיךָ כִּמְבוֹא־עָם וְיֵשְׁבוּ לְפָנֶיךָ עַמִּי וְשָֽׁמְעוּ אֶת־דְּבָרֶיךָ וְאוֹתָם לֹא יַֽעֲשׂוּ כִּֽי־עֲגָבִים בְּפִיהֶם הֵמָּה עֹשִׂים אַחֲרֵי בִצְעָם לִבָּם הֹלֵֽךְ׃ 31
೩೧ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
וְהִנְּךָ לָהֶם כְּשִׁיר עֲגָבִים יְפֵה קוֹל וּמֵטִב נַגֵּן וְשָֽׁמְעוּ אֶת־דְּבָרֶיךָ וְעֹשִׂים אֵינָם אוֹתָֽם׃ 32
೩೨ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ, ಮಧುರ ಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
וּבְבֹאָהּ הִנֵּה בָאָה וְיָדְעוּ כִּי נָבִיא הָיָה בְתוֹכָֽם׃ 33
೩೩ನೀನು ಮುಂತಿಳಿಸಿದ್ದು ಸಂಭವಿಸುವಾಗ, ತಮ್ಮ ಮಧ್ಯದಲ್ಲಿ ಪ್ರವಾದಿಯು ಇದ್ದಾನೆ ಎಂದು ಅವರಿಗೆ ತಿಳಿಯುವುದು.”

< יחזקאל 33 >