< יחזקאל 43 >

וַיּוֹלִכֵנִי אֶל־הַשָּׁעַר שַׁעַר אֲשֶׁר פֹּנֶה דֶּרֶךְ הַקָּדִֽים׃ 1
ಆಮೇಲೆ ಆತನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿಗೆ ಕರೆದುಕೊಂಡು ಹೋದನು.
וְהִנֵּה כְּבוֹד אֱלֹהֵי יִשְׂרָאֵל בָּא מִדֶּרֶךְ הַקָּדִים וְקוֹלוֹ כְּקוֹל מַיִם רַבִּים וְהָאָרֶץ הֵאִירָה מִכְּבֹדֽוֹ׃ 2
ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.
וּכְמַרְאֵה הַמַּרְאֶה אֲשֶׁר רָאִיתִי כַּמַּרְאֶה אֲשֶׁר־רָאִיתִי בְּבֹאִי לְשַׁחֵת אֶת־הָעִיר וּמַרְאוֹת כַּמַּרְאֶה אֲשֶׁר רָאִיתִי אֶל־נְהַר־כְּבָר וָאֶפֹּל אֶל־פָּנָֽי׃ 3
ನಾನು ಕಂಡು ದರ್ಶನವೂ, ಆತನು ಪಟ್ಟಣವನ್ನು ಹಾಳುಮಾಡಲು ಬಂದಾಗ ನೋಡಿದ ದರ್ಶನದ ಹಾಗೂ, ಕೆಬಾರ್ ನದಿಯ ಹತ್ತಿರ ನನಗಾದ ದರ್ಶನದ ಹಾಗೂ ಇತ್ತು. ಆಗ ನಾನು ಬೋರಲು ಬಿದ್ದೆನು.
וּכְבוֹד יְהוָה בָּא אֶל־הַבָּיִת דֶּרֶךְ שַׁעַר אֲשֶׁר פָּנָיו דֶּרֶךְ הַקָּדִֽים׃ 4
ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.
וַתִּשָּׂאֵנִי רוּחַ וַתְּבִיאֵנִי אֶל־הֶֽחָצֵר הַפְּנִימִי וְהִנֵּה מָלֵא כְבוֹד־יְהוָה הַבָּֽיִת׃ 5
ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.
וָאֶשְׁמַע מִדַּבֵּר אֵלַי מֵהַבָּיִת וְאִישׁ הָיָה עֹמֵד אֶצְלִֽי׃ 6
ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.
וַיֹּאמֶר אֵלַי בֶּן־אָדָם אֶת־מְקוֹם כִּסְאִי וְאֶת־מְקוֹם כַּפּוֹת רַגְלַי אֲשֶׁר אֶשְׁכָּן־שָׁם בְּתוֹךְ בְּנֵֽי־יִשְׂרָאֵל לְעוֹלָם וְלֹא יְטַמְּאוּ עוֹד בֵּֽית־יִשְׂרָאֵל שֵׁם קָדְשִׁי הֵמָּה וּמַלְכֵיהֶם בִּזְנוּתָם וּבְפִגְרֵי מַלְכֵיהֶם בָּמוֹתָֽם׃ 7
ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.
בְּתִתָּם סִפָּם אֶת־סִפִּי וּמְזֽוּזָתָם אֵצֶל מְזוּזָתִי וְהַקִּיר בֵּינִי וּבֵֽינֵיהֶם וְטִמְּאוּ ׀ אֶת־שֵׁם קָדְשִׁי בְּתֽוֹעֲבוֹתָם אֲשֶׁר עָשׂוּ וָאֲכַל אֹתָם בְּאַפִּֽי׃ 8
ನನ್ನ ಹೊಸ್ತಿಲುಗಳ ಪಕ್ಕದಲ್ಲಿ ತಮ್ಮ ಹೊಸ್ತಿಲುಗಳನ್ನು ಹಾಕಿಕೊಂಡು ನನ್ನ ಮನೆಗೂ, ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ಮೇಲೆ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡುವುದಿಲ್ಲ. ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರ ನಾಮವನ್ನು ಅಪವಿತ್ರ ಮಾಡಿದರು. ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.
עַתָּה יְרַחֲקוּ אֶת־זְנוּתָם וּפִגְרֵי מַלְכֵיהֶם מִמֶּנִּי וְשָׁכַנְתִּי בְתוֹכָם לְעוֹלָֽם׃ 9
ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”
אַתָּה בֶן־אָדָם הַגֵּד אֶת־בֵּֽית־יִשְׂרָאֵל אֶת־הַבַּיִת וְיִכָּלְמוּ מֵעֲוֺנֽוֹתֵיהֶם וּמָדְדוּ אֶת־תָּכְנִֽית׃ 10
೧೦“ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ.
וְאִֽם־נִכְלְמוּ מִכֹּל אֲשֶׁר־עָשׂוּ צוּרַת הַבַּיִת וּתְכוּנָתוֹ וּמוֹצָאָיו וּמוֹבָאָיו וְֽכָל־צֽוּרֹתָו וְאֵת כָּל־חֻקֹּתָיו וְכָל־צורתי צוּרֹתָיו וְכָל־תורתו תּוֹרֹתָיו הוֹדַע אוֹתָם וּכְתֹב לְעֵֽינֵיהֶם וְיִשְׁמְרוּ אֶת־כָּל־צוּרָתוֹ וְאֶת־כָּל־חֻקֹּתָיו וְעָשׂוּ אוֹתָֽם׃ 11
೧೧ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.
זֹאת תּוֹרַת הַבָּיִת עַל־רֹאשׁ הָהָר כָּל־גְּבֻלוֹ סָבִיב ׀ סָבִיב קֹדֶשׁ קָדָשִׁים הִנֵּה־זֹאת תּוֹרַת הַבָּֽיִת׃ 12
೧೨“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.
וְאֵלֶּה מִדּוֹת הַמִּזְבֵּחַ בָּֽאַמּוֹת אַמָּה אַמָּה וָטֹפַח וְחֵיק הָאַמָּה וְאַמָּה־רֹחַב וּגְבוּלָהּ אֶל־שְׂפָתָהּ סָבִיב זֶרֶת הָאֶחָד וְזֶה גַּב הַמִּזְבֵּֽחַ׃ 13
೧೩“ಯಜ್ಞವೇದಿಯ ಅಳತೆಗಳು ಮೊಳದ ಪ್ರಕಾರ ಹೀಗಿರಬೇಕು. (ಉದ್ದ ಮೊಳ ಅಂದರೆ ಮೊಳದ ಮೇಲೆ ಒಂದು ಹಿಡಿ ಉದ್ದ) ಕೆಳಭಾಗದ ಎತ್ತರ ಒಂದು ಮೊಳ, ಮೇಲಿನ ಅಂಚಿನ ಅಗಲ ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಒಂದು ಗೇಣು; ಇದೇ ಯಜ್ಞವೇದಿಯ ಪೀಠ.
וּמֵחֵיק הָאָרֶץ עַד־הָעֲזָרָה הַתַּחְתּוֹנָה שְׁתַּיִם אַמּוֹת וְרֹחַב אַמָּה אֶחָת וּמֵהֳעֲזָרָה הַקְּטַנָּה עַד־הָעֲזָרָה הַגְּדוֹלָה אַרְבַּע אַמּוֹת וְרֹחַב הָאַמָּֽה׃ 14
೧೪ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.
וְהַֽהַרְאֵל אַרְבַּע אַמּוֹת וּמֵהָאֲרִאֵיל וּלְמַעְלָה הַקְּרָנוֹת אַרְבַּֽע׃ 15
೧೫ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
והאראיל וְהָאֲרִיאֵל שְׁתֵּים עֶשְׂרֵה אֹרֶךְ בִּשְׁתֵּים עֶשְׂרֵה רֹחַב רָבוּעַ אֶל אַרְבַּעַת רְבָעָֽיו׃ 16
೧೬ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.
וְהָעֲזָרָה אַרְבַּע עֶשְׂרֵה אֹרֶךְ בְּאַרְבַּע עֶשְׂרֵה רֹחַב אֶל אַרְבַּעַת רְבָעֶיהָ וְהַגְּבוּל סָבִיב אוֹתָהּ חֲצִי הָאַמָּה וְהַֽחֵיק־לָהּ אַמָּה סָבִיב וּמַעֲלֹתֵהוּ פְּנוֹת קָדִֽים׃ 17
೧೭ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”
וַיֹּאמֶר אֵלַי בֶּן־אָדָם כֹּה אָמַר אֲדֹנָי יְהוִה אֵלֶּה חֻקּוֹת הַמִּזְבֵּחַ בְּיוֹם הֵעָֽשׂוֹתוֹ לְהַעֲלוֹת עָלָיו עוֹלָה וְלִזְרֹק עָלָיו דָּֽם׃ 18
೧೮ಆಗ ಆ ಪುರುಷನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಸರ್ವಾಂಗಹೋಮಕ್ಕೂ, ರಕ್ತವೆರಚುವ ಸಂಸ್ಕಾರಕ್ಕೂ ಯಜ್ಞವೇದಿಯನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.
וְנָתַתָּה אֶל־הַכֹּהֲנִים הַלְוִיִּם אֲשֶׁר הֵם מִזֶּרַע צָדוֹק הַקְּרֹבִים אֵלַי נְאֻם אֲדֹנָי יְהוִה לְשָֽׁרְתֵנִי פַּר בֶּן־בָּקָר לְחַטָּֽאת׃ 19
೧೯ಲೇವಿಯರೂ, ಚಾದೋಕನ ಸಂತಾನದವರೂ, ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷ ಪರಿಹಾರಕಯಜ್ಞಕ್ಕಾಗಿ ಕೊಡು ಇದು ಕರ್ತನಾದ ಯೆಹೋವನ ನುಡಿ.
וְלָקַחְתָּ מִדָּמוֹ וְנָתַתָּה עַל־אַרְבַּע קַרְנֹתָיו וְאֶל־אַרְבַּע פִּנּוֹת הָעֲזָרָה וְאֶֽל־הַגְּבוּל סָבִיב וְחִטֵּאתָ אוֹתוֹ וְכִפַּרְתָּֽהוּ׃ 20
೨೦ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.
וְלָקַחְתָּ אֵת הַפָּר הַֽחַטָּאת וּשְׂרָפוֹ בְּמִפְקַד הַבַּיִת מִחוּץ לַמִּקְדָּֽשׁ׃ 21
೨೧ಮತ್ತು ದೋಷ ಪರಿಹಾರಕಯಜ್ಞಕ್ಕಾಗಿ ವಧಿಸಲ್ಪಟ್ಟ ಹೋರಿಯನ್ನು ನೀನು ಒಪ್ಪಿಸಲು ನೇಮಿಸಲ್ಪಟ್ಟವನು, ಪವಿತ್ರಾಲಯದ ಹೊರಗೆ ಆಲಯಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ ಅದನ್ನು ಸುಡಬೇಕು.
וּבַיּוֹם הַשֵּׁנִי תַּקְרִיב שְׂעִיר־עִזִּים תָּמִים לְחַטָּאת וְחִטְּאוּ אֶת־הַמִּזְבֵּחַ כַּאֲשֶׁר חִטְּאוּ בַּפָּֽר׃ 22
೨೨“ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷ ಪರಿಹಾರಕಯಜ್ಞಕ್ಕಾಗಿ ಅರ್ಪಿಸು. ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡಬೇಕು
בְּכַלּוֹתְךָ מֵֽחַטֵּא תַּקְרִיב פַּר בֶּן־בָּקָר תָּמִים וְאַיִל מִן־הַצֹּאן תָּמִֽים׃ 23
೨೩ನೀನು ಯಜ್ಞವೇದಿಯ ಶುದ್ಧೀಕರಣದ ಕಾರ್ಯವನ್ನು ಮುಗಿಸಿದ ಮೇಲೆ, ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ತಂದು ಅರ್ಪಿಸಬೇಕು.
וְהִקְרַבְתָּם לִפְנֵי יְהוָה וְהִשְׁלִיכוּ הַכֹּהֲנִים עֲלֵיהֶם מֶלַח וְהֶעֱלוּ אוֹתָם עֹלָה לַֽיהוָֽה׃ 24
೨೪ನೀನು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು, ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ, ಯೆಹೋವನಿಗಾಗಿ ಸರ್ವಾಂಗಹೋಮವನ್ನು ಅರ್ಪಿಸಬೇಕು.
שִׁבְעַת יָמִים תַּעֲשֶׂה שְׂעִיר־חַטָּאת לַיּוֹם וּפַר בֶּן־בָּקָר וְאַיִל מִן־הַצֹּאן תְּמִימִים יַעֲשֽׂוּ׃ 25
೨೫“ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.
שִׁבְעַת יָמִים יְכַפְּרוּ אֶת־הַמִּזְבֵּחַ וְטִֽהֲרוּ אֹתוֹ וּמִלְאוּ ידו יָדָֽיו׃ 26
೨೬ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.
וִֽיכַלּוּ אֶת־הַיָּמִים וְהָיָה בַיּוֹם הַשְּׁמִינִי וָהָלְאָה יַעֲשׂוּ הַכֹּהֲנִים עַל־הַמִּזְבֵּחַ אֶת־עוֹלֽוֹתֵיכֶם וְאֶת־שַׁלְמֵיכֶם וְרָצִאתִי אֶתְכֶם נְאֻם אֲדֹנָי יְהֹוִֽה׃ 27
೨೭ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ.

< יחזקאל 43 >