< יחזקאל 44 >
וַיָּשֶׁב אֹתִי דֶּרֶךְ שַׁעַר הַמִּקְדָּשׁ הַֽחִיצוֹן הַפֹּנֶה קָדִים וְהוּא סָגֽוּר׃ | 1 |
೧ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.
וַיֹּאמֶר אֵלַי יְהוָה הַשַּׁעַר הַזֶּה סָגוּר יִהְיֶה לֹא יִפָּתֵחַ וְאִישׁ לֹא־יָבֹא בוֹ כִּי יְהוָה אֱלֹהֵֽי־יִשְׂרָאֵל בָּא בוֹ וְהָיָה סָגֽוּר׃ | 2 |
೨ಆಗ ಯೆಹೋವನು ನನಗೆ, “ಈ ಬಾಗಿಲು ಮುಚ್ಚಲ್ಪಟ್ಟಿರಬೇಕು, ಇದನ್ನು ತೆರೆಯಬಾರದು, ಇದರಿಂದ ಯಾರೂ ಪ್ರವೇಶಿಸಬಾರದು. ಇಸ್ರಾಯೇಲಿನ ದೇವರಾದ ಯೆಹೋವನು ಇದರಿಂದ ಪ್ರವೇಶಿಸಿದ್ದಾನೆ. ಆದುದರಿಂದ ಇದು ಮುಚ್ಚಿರಬೇಕು.
אֶֽת־הַנָּשִׂיא נָשִׂיא הוּא יֵֽשֶׁב־בּוֹ לֶאֱכָול־לֶחֶם לִפְנֵי יְהוָה מִדֶּרֶךְ אֻלָם הַשַּׁעַר יָבוֹא וּמִדַּרְכּוֹ יֵצֵֽא׃ | 3 |
೩ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.
וַיְבִיאֵנִי דֶּֽרֶךְ־שַׁעַר הַצָּפוֹן אֶל־פְּנֵי הַבַּיִת וָאֵרֶא וְהִנֵּה מָלֵא כְבוֹד־יְהוָה אֶת־בֵּית יְהוָה וָאֶפֹּל אֶל־פָּנָֽי׃ | 4 |
೪ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.
וַיֹּאמֶר אֵלַי יְהֹוָה בֶּן־אָדָם שִׂים לִבְּךָ וּרְאֵה בְעֵינֶיךָ וּבְאָזְנֶיךָ שְּׁמָע אֵת כָּל־אֲשֶׁר אֲנִי מְדַבֵּר אֹתָךְ לְכָל־חֻקּוֹת בֵּית־יְהוָה וּלְכָל־תורתו תּֽוֹרֹתָיו וְשַׂמְתָּ לִבְּךָ לִמְבוֹא הַבַּיִת בְּכֹל מוֹצָאֵי הַמִּקְדָּֽשׁ׃ | 5 |
೫ಆಗ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಯೆಹೋವನ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ ಮತ್ತು ಪವಿತ್ರಾಲಯದ ಪ್ರವೇಶವನ್ನೂ, ಪರಿಶುದ್ಧ ಸ್ಥಳದ ಪ್ರತಿಯೊಂದು ಹಾಗುಹೋಗುಗಳನ್ನೂ ಗಮನಿಸು.
וְאָמַרְתָּ אֶל־מֶרִי אֶל־בֵּית יִשְׂרָאֵל כֹּה אָמַר אֲדֹנָי יְהוִה רַב־לָכֶם מִֽכָּל־תּוֹעֲבֽוֹתֵיכֶם בֵּית יִשְׂרָאֵֽל׃ | 6 |
೬ಇದಲ್ಲದೆ, ನೀನು ಆ ದ್ರೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
בַּהֲבִיאֲכֶם בְּנֵֽי־נֵכָר עַרְלֵי־לֵב וְעַרְלֵי בָשָׂר לִהְיוֹת בְּמִקְדָּשִׁי לְחַלְּלוֹ אֶת־בֵּיתִי בְּהַקְרִֽיבְכֶם אֶת־לַחְמִי חֵלֶב וָדָם וַיָּפֵרוּ אֶת־בְּרִיתִי אֶל כָּל־תּוֹעֲבוֹתֵיכֶֽם׃ | 7 |
೭‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
וְלֹא שְׁמַרְתֶּם מִשְׁמֶרֶת קָדָשָׁי וַתְּשִׂימוּן לְשֹׁמְרֵי מִשְׁמַרְתִּי בְּמִקְדָּשִׁי לָכֶֽם׃ | 8 |
೮ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’
כֹּה־אָמַר אֲדֹנָי יְהוִה כָּל־בֶּן־נֵכָר עֶרֶל לֵב וְעֶרֶל בָּשָׂר לֹא יָבוֹא אֶל־מִקְדָּשִׁי לְכָל־בֶּן־נֵכָר אֲשֶׁר בְּתוֹךְ בְּנֵי יִשְׂרָאֵֽל׃ | 9 |
೯ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.
כִּי אִם־הַלְוִיִּם אֲשֶׁר רָֽחֲקוּ מֵֽעָלַי בִּתְעוֹת יִשְׂרָאֵל אֲשֶׁר תָּעוּ מֵֽעָלַי אַחֲרֵי גִּלּֽוּלֵיהֶם וְנָשְׂאוּ עֲוֺנָֽם׃ | 10 |
೧೦“‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.
וְהָיוּ בְמִקְדָּשִׁי מְשָׁרְתִים פְּקֻדּוֹת אֶל־שַׁעֲרֵי הַבַּיִת וּֽמְשָׁרְתִים אֶת־הַבָּיִת הֵמָּה יִשְׁחֲטוּ אֶת־הָעֹלָה וְאֶת־הַזֶּבַח לָעָם וְהֵמָּה יַעַמְדוּ לִפְנֵיהֶם לְשָֽׁרְתָֽם׃ | 11 |
೧೧ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.
יַעַן אֲשֶׁר יְשָׁרְתוּ אוֹתָם לִפְנֵי גִלּֽוּלֵיהֶם וְהָיוּ לְבֵֽית־יִשְׂרָאֵל לְמִכְשׁוֹל עָוֺן עַל־כֵּן נָשָׂאתִי יָדִי עֲלֵיהֶם נְאֻם אֲדֹנָי יְהוִה וְנָשְׂאוּ עֲוֺנָֽם׃ | 12 |
೧೨ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.
וְלֹֽא־יִגְּשׁוּ אֵלַי לְכַהֵן לִי וְלָגֶשֶׁת עַל־כָּל־קָדָשַׁי אֶל־קָדְשֵׁי הַקְּדָשִׁים וְנָֽשְׂאוּ כְּלִמָּתָם וְתוֹעֲבוֹתָם אֲשֶׁר עָשֽׂוּ׃ | 13 |
೧೩‘ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.
וְנָתַתִּי אוֹתָם שֹׁמְרֵי מִשְׁמֶרֶת הַבָּיִת לְכֹל עֲבֹדָתוֹ וּלְכֹל אֲשֶׁר יֵעָשֶׂה בּֽוֹ׃ | 14 |
೧೪ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.
וְהַכֹּהֲנִים הַלְוִיִּם בְּנֵי צָדוֹק אֲשֶׁר שָׁמְרוּ אֶת־מִשְׁמֶרֶת מִקְדָּשִׁי בִּתְעוֹת בְּנֵֽי־יִשְׂרָאֵל מֵֽעָלַי הֵמָּה יִקְרְבוּ אֵלַי לְשָֽׁרְתֵנִי וְעָמְדוּ לְפָנַי לְהַקְרִיב לִי חֵלֶב וָדָם נְאֻם אֲדֹנָי יְהוִֽה׃ | 15 |
೧೫“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.
הֵמָּה יָבֹאוּ אֶל־מִקְדָּשִׁי וְהֵמָּה יִקְרְבוּ אֶל־שֻׁלְחָנִי לְשָׁרְתֵנִי וְשָׁמְרוּ אֶת־מִשְׁמַרְתִּֽי׃ | 16 |
೧೬ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.
וְהָיָה בְּבוֹאָם אֶֽל־שַׁעֲרֵי הֶחָצֵר הַפְּנִימִית בִּגְדֵי פִשְׁתִּים יִלְבָּשׁוּ וְלֹֽא־יַעֲלֶה עֲלֵיהֶם צֶמֶר בְּשָֽׁרְתָם בְּשַׁעֲרֵי הֶחָצֵר הַפְּנִימִית וָבָֽיְתָה׃ | 17 |
೧೭“ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು.
פַּאֲרֵי פִשְׁתִּים יִהְיוּ עַל־רֹאשָׁם וּמִכְנְסֵי פִשְׁתִּים יִהְיוּ עַל־מָתְנֵיהֶם לֹא יַחְגְּרוּ בַּיָּֽזַע׃ | 18 |
೧೮ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.
וּבְצֵאתָם אֶל־הֶחָצֵר הַחִיצוֹנָה אֶל־הֶחָצֵר הַחִיצוֹנָה אֶל־הָעָם יִפְשְׁטוּ אֶת־בִּגְדֵיהֶם אֲשֶׁר־הֵמָּה מְשָׁרְתִם בָּם וְהִנִּיחוּ אוֹתָם בְּלִֽשְׁכֹת הַקֹּדֶשׁ וְלָֽבְשׁוּ בְּגָדִים אֲחֵרִים וְלֹֽא־יְקַדְּשׁוּ אֶת־הָעָם בְּבִגְדֵיהֶֽם׃ | 19 |
೧೯ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
וְרֹאשָׁם לֹא יְגַלֵּחוּ וּפֶרַע לֹא יְשַׁלֵּחוּ כָּסוֹם יִכְסְמוּ אֶת־רָאשֵׁיהֶֽם׃ | 20 |
೨೦“ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು.
וְיַיִן לֹֽא־יִשְׁתּוּ כָּל־כֹּהֵן בְּבוֹאָם אֶל־הֶחָצֵר הַפְּנִימִֽית׃ | 21 |
೨೧ಒಳಗಿನ ಅಂಗಳವನ್ನು ಪ್ರವೇಶಿಸುವಾಗ, ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿಯಬಾರದು.
וְאַלְמָנָה וּגְרוּשָׁה לֹֽא־יִקְחוּ לָהֶם לְנָשִׁים כִּי אִם־בְּתוּלֹת מִזֶּרַע בֵּית יִשְׂרָאֵל וְהָֽאַלְמָנָה אֲשֶׁר תִּֽהְיֶה אַלְמָנָה מִכֹּהֵן יִקָּֽחוּ׃ | 22 |
೨೨ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.
וְאֶת־עַמִּי יוֹרוּ בֵּין קֹדֶשׁ לְחֹל וּבֵין־טָמֵא לְטָהוֹר יוֹדִעֻֽם׃ | 23 |
೨೩ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.
וְעַל־רִיב הֵמָּה יַעַמְדוּ לשפט לְמִשְׁפָּט בְּמִשְׁפָּטַי ושפטהו יִשְׁפְּטוּהוּ וְאֶת־תּוֹרֹתַי וְאֶת־חֻקֹּתַי בְּכָל־מוֹעֲדַי יִשְׁמֹרוּ וְאֶת־שַׁבְּתוֹתַי יְקַדֵּֽשׁוּ׃ | 24 |
೨೪ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.
וְאֶל־מֵת אָדָם לֹא יָבוֹא לְטָמְאָה כִּי אִם־לְאָב וּלְאֵם וּלְבֵן וּלְבַת לְאָח וּלְאָחוֹת אֲשֶֽׁר־לֹא־הָיְתָה לְאִישׁ יִטַּמָּֽאוּ׃ | 25 |
೨೫“ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.
וְאַחֲרֵי טָֽהֳרָתוֹ שִׁבְעַת יָמִים יִסְפְּרוּ־לֽוֹ׃ | 26 |
೨೬ಅಂಥವನನ್ನು ಶುದ್ಧನಾದ ಮೇಲೂ, ಏಳು ದಿನಗಳವರೆಗೆ ಪ್ರತ್ಯೇಕಿಸಬೇಕು.
וּבְיוֹם בֹּאוֹ אֶל־הַקֹּדֶשׁ אֶל־הֶחָצֵר הַפְּנִימִית לְשָׁרֵת בַּקֹּדֶשׁ יַקְרִיב חַטָּאתוֹ נְאֻם אֲדֹנָי יְהוִֽה׃ | 27 |
೨೭ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.
וְהָיְתָה לָהֶם לְֽנַחֲלָה אֲנִי נַֽחֲלָתָם וַאֲחֻזָּה לֹֽא־תִתְּנוּ לָהֶם בְּיִשְׂרָאֵל אֲנִי אֲחֻזָּתָֽם׃ | 28 |
೨೮“ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.
הַמִּנְחָה וְהַחַטָּאת וְהָאָשָׁם הֵמָּה יֹֽאכְלוּם וְכָל־חֵרֶם בְּיִשְׂרָאֵל לָהֶם יִהְיֶֽה׃ | 29 |
೨೯ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.
וְרֵאשִׁית כָּל־בִּכּוּרֵי כֹל וְכָל־תְּרוּמַת כֹּל מִכֹּל תְּרוּמוֹתֵיכֶם לַכֹּהֲנִים יִֽהְיֶה וְרֵאשִׁית עֲרִסֽוֹתֵיכֶם תִּתְּנוּ לַכֹּהֵן לְהָנִיחַ בְּרָכָה אֶל־בֵּיתֶֽךָ׃ | 30 |
೩೦“ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.
כָּל־נְבֵלָה וּטְרֵפָה מִן־הָעוֹף וּמִן־הַבְּהֵמָה לֹא יֹאכְלוּ הַכֹּהֲנִֽים׃ | 31 |
೩೧ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”